Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲೆಗೆ ಎರಡು ರಾಜ್ಯೋತ್ಸವ ಪ್ರಶಸ್ತಿ ಗರಿ, ಲಾವಣಿಗೊಂದು ಸಹಕ್ಕಾರಕೊಂದು

Posted date: 28 Nov, 2018

Powered by:     Yellow and Red

ರಾಮನಗರ ಜಿಲ್ಲೆಗೆ ಎರಡು ರಾಜ್ಯೋತ್ಸವ ಪ್ರಶಸ್ತಿ ಗರಿ, ಲಾವಣಿಗೊಂದು ಸಹಕ್ಕಾರಕೊಂದು

ಅರವತ್ಮೂರನೇ ಕನ್ನಡ ರಾಜ್ಯೋತ್ಸವ ಸಾಲಿನಲ್ಲಿ ರಾಮನಗರ ಜಿಲ್ಲೆಗೆ ಎರಡು ರಾಜ್ಯೋತ್ಸವ ಪ್ರಶಸ್ತಿಗಳು ಬಂದಿವೆ. ಚನ್ನಪಟ್ಟಣ ತಾಲ್ಲೂಕಿನ ಲಾವಣಿ ಹಾಡುಗಾರ ಮತ್ತು ರಂಗಭೂಮಿ ನಟರಾದ ಮಳೂರು ಪುಟ್ಟಸ್ವಾಮಿಗೌಡರಿಗೆ ಸಂದರೆ ಸಹಕಾರಿ ಕ್ಷೇತ್ರದಲ್ಲಿ ಮಾಗಡಿ ತಾಲೂಕಿನ ಕುದೂರು ಹೋಬಳಿ ಯ ಕುಪ್ಪೇಪಾಳ್ಯದ ಸಿ ರಾಮು ರವರಿಗೆ ಸಂದಿದೆ.

ಮಳೂರು ಪುಟ್ಟಸ್ವಾಮಿಗೌಡ

ಹುಣಸೆ ಮರಕ್ಕೆ ಮುಪ್ಪಾದರೂ ಹುಳಿಗೆ ಮುಪ್ಪೆ ಎನ್ನುವ ಗಾದೆಯಂತೆ ಇಳಿ ವಯಸ್ಸಿನಲ್ಲೂ ತನ್ನ ಕಲೆಯನ್ನು ನಿರಂತರವಾಗಿ ರಾಜ್ಯಾದ್ಯಂತ ತನ್ನ ಲಾವಣಿ ಗಾಯನವನ್ನು ಪ್ರಚುರ ಪಡಿಸುತ್ತಿರುವ ಗಾಯಕ ಮಳೂರು ಪುಟ್ಟಸ್ವಾಮಿಗೌಡರು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಭಾಜನರಾಗಿದ್ದಾರೆ.

ಸುಮಾರು ೫೩ ವರ್ಷಗಳಿಂದಲೂ ತನ್ನೊಳಗಿರುವ ಕಲೆಯನ್ನು ರಾಜ್ಯದ ಮೂಲೆ, ಮೂಲೆಗೂ ಹೋಗಿ ಸಿಂಚನ ಮಾಡಿರುವ ಪುಟ್ಟಸ್ವಾಮಿಗೌಡರಿಗೆ ಸುಮಾರು ೮೪ ವರ್ಷ. ಈ ವಯಸ್ಸಿನಲ್ಲೂ ತನ್ನ ಗಾಯನವನ್ನು ಇಂದಿನ ಪೀಳಿಗೆಗೆ, ಮುಂದಿನ ಪೀಳಿಗೆಗೆ ಹೇಳಿ ಉಳಿಸಿಕೊಳ್ಳಬೇಕೆಂದು ತನ್ನ ಮನಸ್ಸಿನಲ್ಲಿರುವ ತುಮುಲವನ್ನು ಗಮನಿಸಿದರೆ ಅವರ ದೇಹಕ್ಕೆ ವಯಸ್ಸಾಗಿದೆಯೋ ಹೊರತು ಅವರ ಕಲೆಗಲ್ಲ ಅನಿಸುತ್ತದೆ.

ಲಾವಣಿ ಹಾಡುವುದರ ಮೂಲಕ ಎಲ್ಲರ ಮನೆ  ಮಾತಾಗಿರುವ ಪುಟ್ಟಸ್ವಾಮಿಗೌಡ ತಾವು ಹೋಗಿರುವ ಶಾಲಾ-ಕಾಲೇಜುಗಳಲ್ಲಿ ಅಲ್ಲಿನ ಶಿಕ್ಷಕರ, ಉಪನ್ಯಾಸಕರ ಸಹಿ ಮತ್ತು ಮೊಹರನ್ನು ದಾಖಲಿಸಿಕೊಂಡಿರುವುದು ಹೆಮ್ಮೆ ಪಡಬೇಕಾದ ವಿಚಾರ.

("ನಿಟ್ಟೂರ್ ನಿಂಗಕ್ಕನ್ಕೇಳು ಹೊಟ್ಟೇಲ್ ಹುಟ್ಟಿದ್ ಮಕ್ಳು ಬಿಟ್ಬಿಟ್ ರೊಟ್ಟಿ ತಿಂದೋಳ") ಎನ್ನುವ ಲಾವಣಿ ಬಹಳ ಜನಪ್ರಿಯವಾಗಿದ್ದು. ಈ ಲಾವಣಿಯನ್ನು ಹಾಡಿದರೆ ಶಾಲಾ-ಕಾಲೇಜಿನ ಮಕ್ಕಳುಗಳಿಗೆ ಉಲ್ಲಾಸವೋ ಉಲ್ಲಾಸ. ಈಗಾಗಲೇ ಇವರು ವಿಶ್ವ ಹಿರಿಯರ ನಾಗರಿಕ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ೨೦೧೬ರಲ್ಲಿ ಪ್ರಥಮ ಬಹುಮಾನ ಗಳಿಸಿ ಮೈಸೂರಿನಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಸಚಿವ ತನ್ವೀರ್‌ಸೇಠ್‌ರವರ ಹಸ್ತದಿಂದ ೩೦೦೦ ರೂ. ನಗದು ಮತ್ತು ಪ್ರಶಸ್ತಿ ಪತ್ರ ಪಡೆದು ಮತ್ತು ೨೦೧೭ನೇ ಸಾಲಿನಲ್ಲೂ ಸಹ ಪ್ರಥಮ ಬಹುಮಾನ ಗಳಿಸಿ ರಾಜಧಾನಿಯ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀರವರಿಂದ ೨೦೦೦ ರೂ. ನಗದು ಮತ್ತು ಪ್ರಶಸ್ತಿ ಪತ್ರ ಪಡೆದು ತಾಲೂಕಿಗೆ ಕೀರ್ತಿ ತಂದಿರುವುದು ಎಲ್ಲರೂ ಸಂತಸ ಪಡಬೇಕಾದ ವಿಚಾರವಾಗಿದೆ.

ಬರಿಗಾಲಲ್ಲಿ ರಾಜ್ಯವನ್ನೆಲ್ಲ ಸುತ್ತಿ, ಸೈಕಲ್ ತುಳಿದು, ಈಗ ಹೋಂಡ ಆಕ್ಟಿವಾದಲ್ಲಿ ರಾಜ್ಯವನ್ನು ಸುತ್ತುತ್ತಿರುವ ಈ ಲಾವಣಿ ಗಾಯಕನಿಗೆ ತಾಲೂಕು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ತನ್ನ ಮಡಿಲಿಗೆ ಹಾಕಿಕೊಂಡಿರುವುದು ಗಮನಾರ್ಹವಾಗಿದೆ.

ಇವರ ಕಲಾಸೇವೆಯನ್ನು ಹಾಗೂ ವಯಸ್ಸನ್ನು ಗಮನಿಸಿ ಈ ಬಾರಿ ರಾಜ್ಯ ಸರ್ಕಾರ ೬೩ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. ಇದು ನಮ್ಮ ಚನ್ನಪಟ್ಟಣ ತಾಲೂಕಿಗೆ ಸಂದ ಕೀರ್ತಿ ಎಂದರೆ ಅತಿಶಯೋಕ್ತಿಯೇನಲ್ಲ.

 

ಸಿ ರಾಮು

ಸತತ ಐವತ್ತು ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿ ರಾಮು ಅತ್ಯಂತ ಕುಗ್ರಾಮವಾದ ಮಾಗಡಿ ತಾಲೂಕು ಕುದೂರು ಹೋಬಳಿಯ ಕುಪ್ಪೆಪಾಳ್ಯದ ತಿಮ್ಮಕ್ಕ ಚಿಕ್ಕಣ್ಣ ನವರ ತೃತೀಯ ಪುತ್ರನಾಗಿ ಜನಿಸಿ ಹುಟ್ಟೂರಿನಲ್ಲೇ ಪ್ರಾಥಮಿಕ ಶಿಕ್ಷಣ ಮುಗಿಸಿ ಬೆಂಗಳೂರಿನಲ್ಲಿ ಐಟಿಐ ತರಬೇತಿ ಮುಗಿಸಿ ಎಚ್ ಎಂ ಟಿ ಕಂಪೆನಿಯಲ್ಲಿ ವೃತ್ತಿ ಜೀವನ ಆರಂಭಿಸಿ ಬದುಕು ಕಟ್ಡಿಕೊಂಡವರು.

ಜೊತೆ ಜೊತೆಯಲ್ಲಿಯೇ ಸಹಕಾರ ಕ್ಷೇತ್ರಕ್ಕೆ ಕಾಲಿಟ್ಟ ಸಿ ರಾಮು ರವರು ಆತ್ಮೀಯ ಗೆಳೆಯರ ಬಳಗ ಹೌಸಿಂಗ್ ಸೊಸೈಟಿ ಎಂಬ ಸಂಘದಲ್ಲಿ ಕಳೆದ ನಲವತ್ತು ವರ್ಷದಿಂದ ಅಧ್ಯಕ್ಷರಾಗಿದ್ದುಕೊಂಡು ಅನೇಕ ರೀತಿಯ ಹಾಗೂ ವರ್ಗದ ಜನರಿಗೆ ಕಂಪನಿಯ ಮತ್ತು ಸರ್ಕಾರಿ ನೌಕರರಿಗೆ ಕಿಂಚಿತ್ತೂ ಲೋಪದೋಷವಿಲ್ಲದೆ ಸರಿಸುಮಾರು ನಾಲ್ಕು ಸಾವಿರ ನಿವೇಶನಗಳನ್ನು ಹಂಚಿದ್ದಾರೆ.

ಜನಸೇವಾ ಕೋ ಆಪರೇಟಿವ್ ಬ್ಯಾಂಕ್ ನ್ನು ೧೯೯೦ ರಲ್ಲಿ ಖರೀದಿಸಿ ಕೇವಲ ೧,೨೫,೦೦೦ ರೂಪಾಯಿಗಳಿದ್ದ ಮೂಲ ವಹಿವಾಟನ್ನು ಇಂದು ೧,೨೭೦ ಕೋಟಿ ರೂಪಾಯಿಗಳಿಗೆ ತಂದು ನಿಲ್ಲಿಸಿದ್ದಾರೆ, ೭೩೦ ಕೋಟಿ ಸಾಲ ವಿತರಣೆ, ೩೦ ಕೋಟಿ ಷೇರು ಹಣ, ೮೦ ಕೋಟಿ ರಿಸವ್೯ ಫಂಡ್ ಜೊತೆಗೆ ನಾಲ್ಕು ಶಾಖೆಗಳನ್ನು ಮಾಡಿ ಸುಸಜ್ಜಿತ ಸ್ವಂತ ಕಟ್ಟಡಗಳನ್ನು ಹೊಂದಿ ಕಾರ್ಯನಿರ್ವಹಿಸುತ್ತಿವೆ. ಅಂದಿನಿಂದ ಇಂದಿನವರೆಗೂ ಅವರೇ ಅಧ್ಯಕ್ಷರಾಗಿ ಮುಂದುವರೆದಿರುವುದು ಸಹ ಇವರ ಹೆಗ್ಗಳಿಕೆಯೇ ಸರಿ.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಕ್ಷೇತ್ರದಲ್ಲಿ ಸಮಾಜ ಸಂಪರ್ಕ ವೇದಿಕೆ ಎಂಬ ಸಂಸ್ಥೆಯಲ್ಲಿ ಉಪಾಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಬಡ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪದವಿವರೆಗೂ ಸ್ಕಾಲರ್ ಶಿಪ್ ನೀಡುತ್ತಿದ್ದಾರೆ.
ಐಎಎಸ್‌, ಐಪಿಎಸ್ ಪರೀಕ್ಷಾರ್ಥಿಗಳನ್ನು ಸಜ್ಜುಗೊಳಿಸುವುದು, ಮೆಡಿಕಲ್ ಕ್ಯಾಂಪ್ ಆಯೋಜಿಸುವುದು ಮತ್ತು ವಧುವರರ ವೇದಿಕೆ ಮುಖಾಂತರ ಮದುವೆ ಮಾಡಿಸುವ ಕೆಲಸವನ್ನು ಈ ಸಂಸ್ಥೆ ಇಂದಿಗೂ ನಡೆಸಿಕೊಂಡು ಬರುತ್ತಿದೆ.

ಶ್ರೀಯುತರಿಗೆ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿಯೇ ಉತ್ತಮ ಅಧ್ಯಕ್ಷ, ಉತ್ತಮ ಸಹಾಕಾರ ಕ್ಷೇತ್ರ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಕುವೆಂಪು ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳ ಸಂದಿವೆ.

ಈ ಮಹನೀಯರಿಗೆ ಜಿಲ್ಲಾ ಮತ್ತು ತಾಲ್ಲೂಕು ಜಾನಪದ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಸಹಕಾರಿ ಕ್ಷೇತ್ರದ ಪದಾಧಿಕಾರಿಗಳು ಮತ್ತು ಅನೇಕ ಗಣ್ಯರು ಅಭಿನಂದನೆ ಸಲ್ಲಿಸಿ ಶುಭ ಕೋರಿದ್ದಾರೆ.


ಗೋ ರಾ ಶ್ರೀನಿವಾಸ...
ಮೊ:9845856139.



 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑