Tel: 7676775624 | Mail: info@yellowandred.in

Language: EN KAN

    Follow us :


ಕಂದಚಾರ, ಮೂಢನಂಬಿಕೆ ವಿರುದ್ಧ ಅರಿವು

Posted date: 21 Feb, 2019

Powered by:     Yellow and Red

ಕಂದಚಾರ, ಮೂಢನಂಬಿಕೆ ವಿರುದ್ಧ ಅರಿವು

ಕಂದಚಾರ ಮತ್ತು ಮೂಢನಂಬಿಕೆ ವಿರುದ್ದ ಅರಿವು ಮೂಡಿಸುವ ಕಾರ್ಯಕ್ರಮವನ್ನು ೨೧/೦೨/೧೯ ರ ಗುರುವಾರ ಬೆಳಿಗ್ಗೆ ೦೯:೦೦ ಗಂಟೆಗೆ ಗೊಲ್ಲರದೊಡ್ಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದ ಬಳಿ ಇರುವ ಗೊಲ್ಲರದೊಡ್ಡಿ ಗ್ರಾಮದಲ್ಲಿ ಕಂದಚಾರ ಮತ್ತು ಮೂಢನಂಬಿಕೆ ಹೆಚ್ಚಾಗಿದ್ದು ವಿಶೇಷವಾಗಿ ಹೆಣ್ಣು ಮಕ್ಕಳ ಹೆರಿಗೆ ಹಾಗೂ ಮಾಸಿಕ ಋತುಚಕ್ರದ ಸಂದರ್ಭದಲ್ಲಿ ಮನೆಗಳಿಂದ ದೂರವಿಡುವ ಪದ್ದತಿಯ ವಿರುದ್ದ ಅರಿವು, ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಇಲಾಖೆಯಿಂದ ಸಿಗುವ ಸವಲತ್ತುಗಳು, ಹಾಗೂ ಗೊಲ್ಲ ಮತ್ತು ಇತರೆ ಅಲೆಮಾರಿ ಸಮುದಾಯಗಳಿಗೆ  ಮೂಲಭೂತ ಸೌಕರ್ಯ, ಸವಲತ್ತು ಮತ್ತು ಸಹಾಯಧನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ ಎಂದು ವಿಸ್ತರಣಾಧಿಕಾರಿ ಎಸ್ ಕುಮಾರ್ ಹಾಗೂ ಸಮನ್ವಯಾಧಿಕಾರಿಗಕಳಾದ ಎನ್ ಮೋಹನ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑