Tel: 7676775624 | Mail: info@yellowandred.in

Language: EN KAN

    Follow us :


ಕೃಷಿ ಭೂಮಿ ಕಿತ್ತುಕೊಂಡು ರೈತರನ್ನೂ ನಿರ್ಗತಿಕರಾಗಿ ಮಾಡಲೊರಟಿರುವ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ ಸಿ ಪುಟ್ಟಸ್ವಾಮಿ

Posted date: 16 Mar, 2020

Powered by:     Yellow and Red

ಕೃಷಿ ಭೂಮಿ ಕಿತ್ತುಕೊಂಡು ರೈತರನ್ನೂ ನಿರ್ಗತಿಕರಾಗಿ ಮಾಡಲೊರಟಿರುವ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ ಸಿ ಪುಟ್ಟಸ್ವಾಮಿ

ಚನ್ನಪಟ್ಟಣ: ರಾಜ್ಯ ಸರ್ಕಾರವು ಕೃಷಿ ಭೂಮಿಗೆ ಸಂಬಂಧಿಸಿದ ಸೆಕ್ಷನ್ ೭೯ ಎ ಮತ್ತು ಬಿ ಯನ್ನು ರದ್ದು ಪಡಿಸಿ ಅನ್ನದಾತನ ಬೆನ್ನಿಗೆ ಬರೆ ಎಳೆದು ಬಲಾಢ್ಯರು ಭೂಮಿಯನ್ನು ಕಬಳಿಸಲು ಅನುಕೂಲವಾಗುವಂತೆ ಕಾನೂನು ರೂಪಿಸುತ್ತಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು ತಕ್ಷಣ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ, ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಹಿಂದೆ ದೇವರಾಜ ಅರಸು ರವರು ದೇಶಕ್ಕೆ ಅನ್ನ ನೀಡುವ ಈ ಕೃಷಿ ಭೂಮಿಯು ರೈತನ ಬಳಿಯೇ ಇರಬೇಕು, ಇದು ಬಂಡವಾಳ ಶಾಹಿಗಳ ವಶವಾಗಬಾರದು ಎಂಬ ಸದುದ್ದೇಶದಿಂದ ೨ ಲಕ್ಷ ರೂಪಾಯಿ ಗಿಂತ ಹೆಚ್ಚಿನ ಆದಾಯ ಇರುವವರು ಕೃಷಿ ಭೂಮಿ ಖರೀದಿ ಮಾಡಬಾರದೆಂದು ಕಾನೂನು ರೂಪಿಸಿದ್ದರು.


ಅರಸು ರವರ ಮಾರ್ಗದರ್ಶನದಲ್ಲಿಯೇ ನಡೆಯುತ್ತೇನೆ ಎಂದು ಅಧಿಕಾರ ಸವಿದ ಸಿದ್ದರಾಮಯ್ಯ ವಿರೋಧಗಳ ನಡುವೆಯೂ ೨೫ ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಆದಾಯ ಇರುವವರು ಕೃಷಿ ಭೂಮಿ ಕೊಳ್ಳಬಾರದು ಎಂದು ತಿದ್ದುಪಡಿ ಮಾಡಿ ಕೆಲ ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಟ್ಟರು.


ಇವರೆಲ್ಲರನ್ನು ಹಿಂದಿಕ್ಕುವ ಭರದಲ್ಲಿ ಈಗಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಕೃಷಿ ಭೂಮಿ ಖರೀದಿಗೆ ಸಂಬಂಧಿಸಿದ ೭೯ಎ ಮತ್ತು ಬಿ ಸೆಕ್ಷನ್ ನ್ನೇ ರದ್ದು ಮಾಡಲು ದಾಪುಗಾಲಿಟ್ಟಿರುವುದು ದುರದೃಷ್ಟಕರ.

ಇದಕ್ಕೆ ಕೈ ಜೋಡಿಸುತ್ತಿರುವ ಕಂದಾಯ ಮಂತ್ರಿ ಆರ್ ಅಶೋಕ್ ಮತ್ತು ಅಧಿಕಾರಿಗಳು ಏನು ಸಾಧಿಸಲೊರಟಿದ್ದಾರೆ. ಇದರಿಂದ ಮುಂದಿನ ಕೃಷಿ ಸ್ವಾವಲಂಬನೆಗೆ ಸಾರುವ ಸಂದೇಶವಾದರೂ ಏನು ?


ಒಂದು ಎಕರೆ ಕೃಷಿ ಭೂಮಿಗೆ ನೀರು ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸಿದರೆ ನೂರಾರು ಮಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ದೊರಕುತ್ತದೆ. ಬಹಳ ಮುಖ್ಯವಾಗಿ ಇಂದಿನ ಪರಿಸರಕ್ಕೆ ಬೇಕಾದ ಎಲ್ಲಾ ಉತ್ಪನ್ನಗಳು ದೊರೆಯಲಿವೆ.

ಅದೇ ಒಂದು ಎಕರೆ ಭೂಮಿಯಲ್ಲಿ ಕೈಗಾರಿಕೆ ಬಂದರೇ ಹತ್ತು ಮಂದಿಗೆ ಕೆಲಸ ಸಿಗಬಹುದು ! ಇಂದಿನ ರೊಬೋಟ್ ಯುಗದಲ್ಲಿ ಅದೂ ಸಹ ಅಸಾಧ್ಯವಾದರೆ ಅಚ್ಚರಿ ಪಡಬೇಕಿಲ್ಲ. ರೈತರು ಕೇವಲ ಅನ್ನವನ್ನಷ್ಟೇ ಬೆಳೆದುಕೊಡುತ್ತಿಲ್ಲ ! ತಮ್ಮ ಶಕ್ತಿ ಮೀರಿ ಪ್ರಾಣವಾಯು (ಆಮ್ಲಜನಕ) ವನ್ನು ಪ್ರತಿಕ್ಷಣವೂ ತಮ್ಮ ಪರಿಶ್ರಮದಿಂದ ಪರಿಸರಕ್ಕೆ ತುಂಬುತ್ತಿರುವುದು ಗೌಣವಾಗಿಯೇ ಉಳಿದಿದೆ.

ಕೃಷಿ ಭೂಮಿಯನ್ನು ಹೊಂದಿರುವ ಬಂಡವಾಳ ಶಕ್ತಿಶಾಹಿಗಳು ವ್ಯವಸ್ಥೆಯ ಲಾಭ ಪಡೆಯಲು ಸ್ವತ: ಉಳುಮೆ ಮಾಡದ ಮಾಲೀಕತ್ವ ಹೊಂದಿರುತ್ತಾರೆ. ಉಳುಮೆ ಮಾಡದೇ ಬೀಳು ಬಿಟ್ಟಿರುವ ಬಂಡವಾಳ ಶಾಹಿಗಳ ಭೂಮಿಯನ್ನು ವಶಕ್ಕೆ ಪಡೆದು ಉಳುವ ರೈತರಿಗೆ ಕೊಡುವ ಅಥವಾ ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿ ಕಾರ್ಯಗಳಿಗೆ ಉಪಯೋಗಿಸಿಕೊಳ್ಳಬಹುದು.


೧,೦೦೦ ಎಕರೆ ಕೃಷಿ ಭೂಮಿಯಲ್ಲಿ ಕೈಗಾರಿಕೆ ತೆರೆದರೆ ೧೦,೦೦೦ ಮಂದಿಗೆ ಉದ್ಯೋಗ ಸೃಷ್ಟಿಯಾಗುತ್ತದೆ ಎಂಬ ಸುಳ್ಳನ್ನು ಮೊದಲು ಬಿಡಿ, ರೈತರ ಹಸಿರು ಶಾಲನ್ನು ಮೈಮೇಲೆ ಒದ್ದುಕೊಂಡು, ರೈತರಿಗಾಗಿಯೇ ಬಜೆಟ್ ಎಂದು ಘೋಷಿಸುವುದನ್ನು ಬಿಟ್ಟು ಒಬ್ಬ ರೈತನಿಗೆ ದೊರಕಬೇಕಾದ ಮೂಲಭೂತ ಸೌಕರ್ಯ ಅಂದರೆ, ನೀರು, ವಿದ್ಯುತ್ ಮತ್ತು ಮಾರುಕಟ್ಟೆಯನ್ನು ಸೃಷ್ಟಿಸಿಕೊಟ್ಟರೆ ಇಡೀ ಪ್ರಪಂಚಕ್ಕೆ ರೈತ ಮಾದರಿಯಾಗಬಲ್ಲ.


ನಾನು ರೈತಪರ, ನಾವು ರೈತರು, ನಾವು ಮಣ್ಣಿನ ಮಕ್ಕಳು ಎಂದು ಬಿಂಬಿಸಿಕೊಳ್ಳುತ್ತಿದ್ದ ಹೆಚ್ ಡಿ ದೇವೇಗೌಡರು ಸಹ ಭೂಮಿತಿ ಕಾಯ್ದೆಯನ್ನೇ ರದ್ದು ಮಾಡಿದ್ದು ನಂತರ ಅವರ ಸರ್ಕಾರ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯಸಂಗತಿ.

ವಿರೋಧ ಪಕ್ಷಗಳು ಎಚ್ಚೆತ್ತುಕೊಂಡು ಅಧಿವೇಶನದಲ್ಲಿ ಮಂಡಿಸುವ ಮುನ್ನವೇ ಈ ಕಾನೂನನ್ನು ಜಾರಿಗೆ ತರದಂತೆ ವಿರೋಧಿಸಬೇಕು. ಇಲ್ಲವಾದರೆ ರೈತರು ಮತ್ತು ವಿದ್ಯಾರ್ಥಿಗಳ ಸಮೂಹ ಬೀದಿಗಿಳಿಯಬೇಕಾಗುತ್ತದೆ ಎಚ್ಚರ.


ಉಚ್ಚ ನ್ಯಾಯಾಲಯಗಳ ಆದಿಯಾಗಿ ೭೯ಎ ಮತ್ತು ಬಿ ಕಾಯಿದೆಯ ಮಹತ್ವವನ್ನು ಎತ್ತಿ ಹಿಡಿದಿರುವ ಸಂಗತಿಗಳು ಜೀವಂತವಾಗಿವೆ.

ಈ ಪ್ರಸ್ತಾವನೆಯನ್ನು ಸಾರ್ವಜನಿಕರ ಚರ್ಚೆಗೆ ಅನುವು ಮಾಡಿಕೊಡಬೇಕಾದ್ದು ನಾಗರೀಕ ಸರ್ಕಾರದ ಕರ್ತವ್ಯ. 


ಸಿ ಪುಟ್ಟಸ್ವಾಮಿ. ಚನ್ನಪಟ್ಟಣ.

ಕ ರಾ ರೈ ಸಂಘ ಮತ್ತು ಹಸಿರು ಸೇನೆ ನಿ ಪೂ ಪ್ರಧಾನ ಕಾರ್ಯದರ್ಶಿ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑