Tel: 7676775624 | Mail: info@yellowandred.in

Language: EN KAN

    Follow us :


ಕೋವಿಡ್-೧೯ ಬಿಡುವಿನ ಸಮಯದಲ್ಲಿ ನರೇಗಾ ಕಾಮಗಾರಿಯನ್ನು ಸದುಪಯೋಗಪಡಿಸಿಕೊಳ್ಳಿ ಹರೂರು ರಾಜಣ್ಣ

Posted date: 18 Apr, 2020

Powered by:     Yellow and Red

ಕೋವಿಡ್-೧೯ ಬಿಡುವಿನ ಸಮಯದಲ್ಲಿ ನರೇಗಾ ಕಾಮಗಾರಿಯನ್ನು ಸದುಪಯೋಗಪಡಿಸಿಕೊಳ್ಳಿ ಹರೂರು ರಾಜಣ್ಣ

ಚನ್ನಪಟ್ಟಣ:ಏ/೧೮/೨೦/ಶನಿವಾರ. ಕೊರೊನಾ (ಕೋವಿಡ್-೧೯) ಈ ‌ಬಿಡುವಿನ ಸಮಯದಲ್ಲಿ ರೈತರಿಗೆ, ದಿನಗೂಲಿ ಕಾರ್ಮಿಕರಿಗೆ, ವಸತಿ ಯೋಜನೆಗಳಡಿಯಲ್ಲಿ, ಮನೆ ನಿರ್ಮಿಸಿಕೊಳ್ಳುವವರು ಐದು ಮಂದಿಗಿಂತ ಕಡಿಮೆ ಕೂಲಿ‌ ಕಾರ್ಮಿಕರಿಂದ ಕೆಲಸ ನಿರ್ವಹಣೆ ಮಾಡಿಕೊಂಡು ನರೇಗಾ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಲು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಕರೆ ನೀಡಿದರು.


ಅವರು ಇಂದು ತಾಲ್ಲೂಕು ಪಂಚಾಯತಿ ಆವರಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ನಮ್ಮ ಉದ್ಯೋಗ ನಮ್ಮ ಗ್ರಾಮದಲ್ಲೇ, ನಮ್ಮ ಗ್ರಾಮ ಅಭಿವೃದ್ಧಿ ನಮ್ಮ ಕೈಯಲ್ಲೇ ಎಂಬ ಕಾರ್ಯಕ್ರಮದಲ್ಲಿ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಸಂದೇಶ ರವಾನಿಸಲು ಆಟೋ ರಿಕ್ಷಾಗಳಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.


ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ, ಹದಿನೆಂಟು ವರ್ಷ ಮೇಲ್ಪಟ್ಟ ಅಕುಶಲ ಕಾರ್ಮಿಕರು ಉದ್ಯೋಗಕ್ಕಾಗಿ ಉದ್ಯೋಗ ಚೀಟಿ ಹೊಂದಿ ಬೇಡಿಕೆ ಸಲ್ಲಿಸುವ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ ೧೦೦ ದಿನಗಳ ಉದ್ಯೋಗ ಖಾತರಿ ನೀಡಬೇಕಾಗಿದೆ. ಮಹಿಳೆ ಮತ್ತು ಪುರುಷರಿಬ್ಬರಿಗೂ ಸಮಾನ ಕೂಲಿ ನಿಗದಿಪಡಿಸಿದ್ದು, ಸನಿಕೆಗಳನ್ನು ಅವರೇ ತಂದರೆ ಹೆಚ್ಚಿನದಾಗಿ ಹತ್ತು ರೂಪಾಯಿಗಳನ್ನು, ಹಾಗೂ ಕೂಲಿ ಕಾರ್ಮಿಕರನ್ನು ಪ್ರೇರೆಪಿಸಿ ಕರೆತರುವ ಕಾರ್ಮಿಕ ಬಂಧು ವಿಗೆ ಮೂರು ರೂಪಾಯಿಗಳನ್ನು ನೀಡಲಾಗುತ್ತದೆ.


ಸದ್ಯ ಐದು ಮಂದಿ ಮಾತ್ರ ಕೆಲಸ ನಿರ್ವಹಿಸುವಂತಹ ದನದ ಕೊಟ್ಟಿಗೆ, ಕುರಿ/ಮೇಕೆ ಶೆಡ್ಡು, ಕೋಳಿ ಶೆಡ್ಡು, ಕೊಳವೆ ಬಾವಿ ಮರುಪೂರಕ, ಹಂದಿ ಶೆಡ್ಡು, ಈರುಳ್ಳಿ ಉಗ್ರಾಣ ಕಟ್ಟಡ ನಿರ್ಮಾಣ, ಗದ್ದೆ ಮತ್ತು ತೋಟಗಳಲ್ಲಿ ಬದು ನಿರ್ಮಾಣ, ಸಸಿಗಳ ನಾಟಿ ಇನ್ನಿತರ ಕೆಲಸಗಳನ್ನು ಮಾಡುವ ಮೂಲಕ ನರೇಗಾ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಅವರು ಕರೆ ನೀಡಿದರು.


ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರ ಮಾತನಾಡಿ ರೇಷ್ಮೆ ಬೆಳೆ, ಕೃಷಿ ಇಲಾಖೆಯ ಕಾಮಗಾರಿ, ಅರಣ್ಯ ಇಲಾಖೆ, ವಸತಿ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣ ಸೇರಿದಂತೆ ನರೇಗಾ ಯೋಜನೆಗೆ ಒಳಪಡುವ ಕೆಲಸಗಳನ್ನು ಕಡಿಮೆ ಮಂದಿಯೊಟ್ಟಿಗೆ, ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಕೆಲಸ ನಿರ್ವಹಿಸುವಂತೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಇಲಾಖೆಯ ಸಿದ್ದರಾಜು, ಮತ್ತು ತಾಲ್ಲೂಕು ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

ಇದೇ ವೇಳೆ ಆರು ಆಟೋ ರಿಕ್ಷಾಗಳ ಮೂಲಕ ತಾಲ್ಲೂಕಿನಾದ್ಯಂತ ಕೊರೊನಾ ಮತ್ತು ನರೇಗಾ ದ ಬಗ್ಗೆ ಜನರಲ್ಲಿ ತಿಳುವಳಿಕೆ ನೀಡಲು ರಿಕ್ಷಾಗಳಿಗೆ ಚಾಲನೆ ನೀಡಲಾಯಿತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑