Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯ ಎ.ಪಿ.ಎಂ.ಸಿಯಲ್ಲಿ ಮಾರಾಟಕ್ಕೆ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ: ಎಸ್.ಟಿ. ಸೋಮಶೇಖರ್

Posted date: 19 Apr, 2020

Powered by:     Yellow and Red

ಜಿಲ್ಲೆಯ ಎ.ಪಿ.ಎಂ.ಸಿಯಲ್ಲಿ ಮಾರಾಟಕ್ಕೆ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ: ಎಸ್.ಟಿ. ಸೋಮಶೇಖರ್

ರಾಮನಗರ:ಏ/೧೯/೨೦/ಭಾನುವಾರ. ರಾಮನಗರ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಯಾವುದೇ ತೊಂದರೆಯಾಗದಂತೆ ರೈತರು ಬೆಳೆದಂತಹ ಹಣ್ಣು ಮತ್ತು ತರಕಾರಿಯನ್ನು ಮಾರಾಟ ಮಾಡಲು ಯಾವುದೇ ತೊಂದರೆಯಿಲ್ಲದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು.


ಅವರು ಇಂದು ಜಿಲ್ಲೆಯ ಎ.ಪಿ.ಎಂ.ಸಿ ಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಪರಿಶೀಲನೆ ನಡೆಸಿ ನಂತರ ಮಾತನಾಡಿದರು. ರೈತರು ತಾವು ಬೆಳೆದ ತರಕಾರಿ ಹಾಗೂ ಹಣ್ಣುಗಳನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಸಾಗಾಣಿಕೆ ಮಾಡಲು ಚೆಕ್ ಪೋಸ್ಟ್ಗಳಲ್ಲಿ ತೊಂದರೆಯ ಬಗ್ಗೆ ಚರ್ಚಿಸಲಾಗಿದೆ. ಜಿಲ್ಲೆಯಲ್ಲಿ ರೈತರಿಗೆ ಸಾಗಾಣಿಕೆಯಲ್ಲಿ ಯಾವುದೇ ರೀತಿಯ ತೊಂದರೆಯಾಗುತ್ತಿಲ್ಲ ಎಂಬುದು ಕಂಡು ಬಂದಿರುತ್ತದೆ ಎಂದರು.


ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಎ.ಪಿ.ಎಂ.ಸಿ. ಅಧ್ಯಕ್ಷರು ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿರುತ್ತಾರೆ. ಬೆಳಿಗ್ಗೆ ೦೩:೦೦ ಗಂಟೆಯಿಂದ ಮಧ್ಯಾಹ್ನ ೦೧:೦೦ ಗಂಟೆಯವರೆಗೆ ರೈತರಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿರುತ್ತಾರೆ. ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಧ್ವನಿವರ್ಧಕದ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಪ್ರಚಾರ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಯೋಜಿತ ರೂಪದಲ್ಲಿ ವಹಿವಾಟು ನಡೆಯುತ್ತಿದೆ ಎಂದರು.


ರಾಜ್ಯದ ವಿವಿಧ ಎ.ಪಿ.ಎಂ.ಸಿಗಳಿಗೆ ಭೇಟಿ ನೀಡಿದಾಗ ರೈತರು ದಪ್ಪ ಮೆಣಸಿನಕಾಯಿ, ನಿಂಬೆಹಣ್ಣು ಸೇರಿದಂತೆ ಎರಡು ಮೂರು ರೀತಿಯ ತರಕಾರಿ ಮಾರಾಟವು ನಿರೀಕ್ಷೆಯಂತೆ ಆಗುತ್ತಿಲ್ಲ ಎಂದು ತಿಳಿಸಿರುತ್ತಾರೆ. ಅವುಗಳ ಮಾಹಿತಿಯನ್ನು ಪಡೆಯಲಾಗಿದೆ. ರೈತರಿಗೆ ಸಹಾಯಹಸ್ತ ನೀಡಲು ಮುಂದಾಗಿರುವ ರಾಜಕಾರಣಿಗಳು, ಶಾಸಕರು ಹಾಗೂ ಇನ್ನಿತರ ಸಮಾಜ ಸೇವಕರಿಗೆ ಮಾಹಿತಿ ನೀಡಿ ಅವುಗಳನ್ನು ರೈತರಿಂದ ಖರೀದಿಸುವ ಕೆಲಸ ಸಹ ಮಾಡಲಾಗುತ್ತಿದೆ ಎಂದರು.


ಕೆಲವು ಹಣ್ಣು ಮತ್ತು ತರಕಾರಿಗಳನ್ನು ಹೋಟೆಲ್‌ಗಳಿಗೆ ಮಾರಾಟ ಮಾಡಲು ರೈತರು ಬೆಳೆದಿರುತ್ತಾರೆ. ಅವುಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಾಧ್ಯವಾಗದ ಪ್ರಕರಣಗಳಿದ್ದರೆ, ಅವುಗಳಿಗೆ ಮಾನ್ಯ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಿ ಕೃಷಿ ಇಲಾಖೆಯಿಂದ ಸರ್ವೆ ಮಾಡಿಸಿ ಬೆಳೆ ಪರಿಹಾರ ಕೊಡಿಸಲಾಗುವುದು ಎಂದರು.

ಕಳೆದ ಸಾಲಿನಲ್ಲಿ ೧೩ ಸಾವಿರ ಕೋಟಿ ರೈತರಿಗೆ ಬೆಳೆ ಸಾಲ ನೀಡಲಾಗಿದೆ. ಈ ಸಾಲಿನಲ್ಲೂ ರೈತರಿಗೇ ೧೩ ಸಾವಿರ ಕೋಟಿ ಮೊತ್ತದಲ್ಲಿ ಸಾಲ ನೀಡಲು ಯೋಜನೆ ರೂಪಿಸುವಂತೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ರೈತರಿಗೆ ಸಾಲ ನೀಡುವ ಬಗ್ಗೆ ಗೈಡ್ ಲೈನ್ಸ್ ವಿಧಿಸಿ ಆದೇಶ ಹೊರಡಿಸಲಾಗುವುದು ಎಂದರು.


ಲಾಕ್ ಡೌನ್ ಸಡಿಲಿಕೆ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ನಾಳೆ ಕ್ಯಾಬಿನೆಟ್ ಮೀಟಿಂಗ್ ಕರೆದಿದ್ದಾರೆ. ಈಗಾಗಲೇ ಕೃಷಿ ಕ್ಷೇತ್ರಕ್ಕೆ ಸಂಪೂರ್ಣ ಸಡಿಲಿಕೆ ನೀಡಲಾಗಿದೆ. ಈಗ ರೈತರಿಗೆ ಯಾವುದೇ ಅಡೆತಡೆಗಳು ಇಲ್ಲದಿರುವುದರಿಂದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಅವಕಾಶ ಕಲ್ಪಿಸಲಾಗಿದೆ. ಆದರೆ ಇಡೀ ಹಣ್ಣುಗಳನ್ನು ಮಾತ್ರ ಮಾರಾಟ ಮಾಡಬೇಕು. ಕಟ್ ಪೀಸ್ ಮಾಡಿ ಮಾರುವಂತಿಲ್ಲ. ರೈತರಿಗೆ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಿಲ್ಲ. ಗ್ರೀನ್ ಪಾಸ್ ಪಡೆದು ಬೆಂಗಳೂರಿನಲ್ಲಿ ಮಾರಾಟ ಮಾಡಬಹುದು. ಬೆಂಗಳೂರಿನಲ್ಲಿ ೧,೪೦೦ ವಸತಿ ಸಮುಚ್ಚಯ (ಅಪಾಟ್೯ಮೆಂಟ್) ಗಳಲ್ಲಿ ಹಣ್ಣು ಮತ್ತು ತರಕಾರಿ ಮಾರಾಟ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಹಾಪ್ಳಿ‌ ಕಾಮ್ಸ್ ಗಳಿಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.


ಮಾರುಕಟ್ಟೆ ಭೇಟುಯ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑