Tel: 7676775624 | Mail: info@yellowandred.in

Language: EN KAN

    Follow us :


ರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ, ಮಾವು ಸಂಸ್ಕರಣಾ ಘಟಕ ಸ್ಥಾಪನೆ: ಡಾ. ಅಶ್ವತ್ಥನಾರಾಯಣ

Posted date: 11 May, 2020

Powered by:     Yellow and Red

ರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ, ಮಾವು ಸಂಸ್ಕರಣಾ ಘಟಕ ಸ್ಥಾಪನೆ: ಡಾ. ಅಶ್ವತ್ಥನಾರಾಯಣ

ರಾಮನಗರ:ಮೇ/೧೧/೨೦/ಸೋಮವಾರ. ನಗರದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ಹಾಗೂ ಮಾವು ಸಂಸ್ಕರಣಾ ಘಟಕವನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. 


ರಾಮನಗರದಲ್ಲಿ ರೇಷ್ಮೆ ಸಚಿವ ನಾರಾಯಣಗೌಡ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.


"ರಾಮನಗರದಲ್ಲಿ ಹೊಸ ರೇಷ್ಮೆ ಗೂಡು ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ವಿಸ್ತರಣೆ ಮಾಡಿ ಹೈಟೆಕ್ ಮಾರುಕಟ್ಟೆಯಾಗಿ ರೂಪಿಸಲಾಗುವುದು. ಎರಡು ಎಕರೆಯಲ್ಲಿರುವ ಮಾರುಕಟ್ಟೆ ವಿಸ್ತರಣೆ ಆಗಿ, ಪಾರದರ್ಶಕ ಆಡಳಿತ ನಡೆಸುವಂತಾಗಬೇಕು. ಅದಕ್ಕಾಗಿ ಈ ಮಾರುಕಟ್ಟೆಗೆ ಹೊಂದಿಕೊಂಡಂತೆ ಇರುವ ಕೆಐಎಡಿಬಿಗೆ ಸೇರಿದ ಮೂರು ಎಕರೆ ಭೂಮಿಯನ್ನು ಪಡೆದುಕೊಳ್ಳಲಾಗುವುದು.  ಜಾಗದ ಸಂಬಂಧ ಕೋರ್ಟ್ ನಲ್ಲಿ ವಿವಾದ ಇದ್ದು ಅದನ್ನು ಬೇಗ ಬಗೆಹರಿಸಿ, ಭೂಮಿಯನ್ನು ವಶಕ್ಕೆ ಪಡೆಯಲಾಗುವುದು" ಎಂದರು.


"ರೇಷ್ಮೆಗೂಡಿನ ದರ ಕುಸಿದು ಬೆಳೆಗಾರರು ಕಂಗಾಲಾಗಿದ್ದ ಸಂದರ್ಭದಲ್ಲಿ ಸರ್ಕಾರ ಮಧ್ಯ ಪ್ರವೇಶಿಸಿ ದರ ಕುಸಿತವನ್ನು ತಡೆಯುವ ಪ್ರಯತ್ನ ಮಾಡಿದೆ. ಈ ನಿಟ್ಟಿನಲ್ಲಿ ತೋಟಗಾರಿಕೆ ಸಚಿವ ನಾರಾಯಣಗೌಡರು ಅಗತ್ಯ ಕ್ರಮ ವಹಿಸಿ, ರೈತರಿಗೆ ನೆರವಾಗಿದ್ದಾರೆ. ಆದ್ದರಿಂದ ರೈತರು ಆತಂಕಗೊಳ್ಳುವ ಅಗತ್ಯವಿಲ್ಲ" ಎಂದು ಉಪ ಮುಖ್ಯ ಮಂತ್ರಿಗಳು ತಿಳಿಸಿದರು. 


*ಮಾವು ಸಂಸ್ಕರಣಾ ಘಟಕ* : ಕೋಲಾರದ ನಂತರ ಅತಿ ಹೆಚ್ಚು ಮಾವು ಬೆಳೆಯುವ ಜಿಲ್ಲೆ ರಾಮನಗರ. ಇಲ್ಲಿ ಸುಮಾರು  ೯೭ ಸಾವಿರ ಟನ್‌ ಮಾವು ಉತ್ಪಾದನೆ ಆಗುತ್ತಿದ್ದು,  ಜಿಲ್ಲೆಯಲ್ಲಿ ಮಾವು ಸಂಸ್ಕರಣಾ ಘಟಕ ಆರಂಭಿಸಬೇಕು ಎಂಬ ಬಹುಕಾಲದ ಬೇಡಿಕೆ ಈಗ ಈಡೇರುತ್ತಿದೆ.  ರೇಷ್ಮೆ ಇಲಾಖೆಯ ೧೬ ಎಕರೆ ಜಾಗ ಪಡೆದು, ಮಾವು ಸಂಸ್ಕರಣಾ ಘಟಕ ನಿರ್ಮಾಣ ಮಾಡಲಾಗುವುದು ಎಂದು ಉಸ್ತುವಾರಿ ಸಚಿವರು ಹೇಳಿದರು. 


ಈ ಸಂದರ್ಭದಲ್ಲಿ ತೋಟಗಾರಿಕಾ ಸಚಿವ ಕೆ.ಸಿ.ನಾರಾಯಣಗೌಡ, ಮಾಗಡಿ ಶಾಸಕ ಎ.ಮಂಜುನಾಥ್,  ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ರಾಮನಗರ ಜಿಲ್ಲಾಧಿಕಾರಿ ಡಾ. ಎಂ.ಎಸ್. ಅರ್ಚನಾ, ರಾಮನಗರ ಜಿ.ಪಂ. ಸಿಇಒ ಇಕ್ರಂ ಹಾಗೂ  ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑