Tel: 7676775624 | Mail: info@yellowandred.in

Language: EN KAN

    Follow us :


ಕೆರೆ ಮತ್ತು ಕಾಡಿನ ಅಭಿವೃದ್ಧಿ ಹೆಚ್ಚಿನ ಆದ್ಯತೆ ನೀಡಿ: ಅಶ್ವಥ್ ನಾರಾಯಣ*

Posted date: 22 May, 2020

Powered by:     Yellow and Red

ಕೆರೆ ಮತ್ತು ಕಾಡಿನ ಅಭಿವೃದ್ಧಿ ಹೆಚ್ಚಿನ ಆದ್ಯತೆ ನೀಡಿ: ಅಶ್ವಥ್ ನಾರಾಯಣ*

ರಾಮನಗರ:ಮೇ/೨೨/೨೦/ಶುಕ್ರವಾರ.

ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳುವ ಕೆಲಸಗಳಲ್ಲಿ ಕೆರೆ ಮತ್ತು ಕಾಡಿನ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ತಿಳಿಸಿದರು.


ಅವರು ಇಂದು ಮಾಗಡಿ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಕಂದಾಯ ಹಾಗೂ ಸಣ್ಣ ನೀರಾವರಿ ಇಲಾಖೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸಿ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ, ಅವುಗಳ ಸುತ್ತ ಬೇಲಿ ನಿರ್ಮಿಸಬೇಕು. ಕೆರೆಗಳಲ್ಲಿ ಹೂಳು ತೆಗೆಯುವ ಕೆಲಸ, ಕೆರೆಗಳ ಜೀರ್ಣೋದ್ಧಾರ ಮಾಡಿ ಮಳೆ ನೀರು ಮರುಪೂರಣಗೊಳ್ಳುವಂತೆ ಮಾಡಬೇಕು ಎಂದರು.


ನರೇಗಾ ಯೋಜನೆಯಲ್ಲಿ ರಾಮನಗರ ಜಿಲ್ಲೆ ಚಿಕ್ಕ ಜಿಲ್ಲೆಯಾದರು ಎರಡನೇ ಜಿಲ್ಲೆಯಾಗಿರುವುದು ಅಭಿನಂದನಾರ್ಹ ವಿಷಯವಾಗಿದೆ. ನರೇಗಾ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಟದ ಮೈದಾನ ನಿರ್ಮಿಸುವಂತೆ ತಿಳಿಸಿದರು.ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ನರೇಗಾ ಯೋಜನೆಯ ಉಳಿಕೆ ಅನುದಾನವನ್ನು ಬಿಡುಗಡೆ ಮಾಡುವಂತೆ ತಿಳಿಸಲಾಗುವುದು ಎಂದರು.


ಕೆರೆಗಳ ಅಭಿವೃದ್ಧಿ: ಮಳೆಗಾಲ ಪ್ರಾರಂಭವಾದ ನಂತರ ಕೆರೆಗಳ ಅಭಿವೃದ್ಧಿ ಕೆಲಸ ಕಷ್ಟವಾಗುತ್ತದೆ. ಜಿಲ್ಲೆಯಲ್ಲಿ ೨,೩೯೧ ಕೆರೆಗಳಿದ್ದು, ೨೮೩ ಕೆರೆಗಳು ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುತ್ತದೆ. ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಸಹ ಅರಣ್ಯ ಇಲಾಖೆ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಜೊತೆಯಲ್ಲಿ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿರುವ ಗ್ರಾಮಗಳಲ್ಲಿ ಬೋರ್ ವೆಲ್ ಕೊರೆಸಲು ಅವಕಾಶವಿದ್ದಲ್ಲಿ, ಬೋರ್ ವೆಲ್ ಕೊರೆಸುವಂತೆ ಜಿಲ್ಲಾ ಪಮಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.


ಜೂಮ್ ಆ್ಯಪ್ ಮೂಲಕ ನರೇಗಾ ಯೋಜನೆಯಡಿ ಉತ್ತಮ ಸಾಧನೆ ಮಾಡಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಚರ್ಚಿಸಿ, ಎಲ್ಲಾ ಗ್ರಾಮ ಪಂಚಾಯಿತಿಗಳು ಉತ್ತಮ ಸಾಧನೆ ಮಾಡಬೇಕು ಎಂದರು.

ಸಭೆಯಲ್ಲಿ ಶಾಸಕರಾದ ಎ.ಮಂಜುನಾಥ್, ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ ಉಲ್ಲಾ ಷರೀಫ್, ಉಪ ಕಾರ್ಯದರ್ಶಿ ಉಮೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑