Tel: 7676775624 | Mail: info@yellowandred.in

Language: EN KAN

    Follow us :


ಕರ್ನಾಟಕ ರಾಜ್ಯ ರೈತ ಸಂಘದಿಂದ ರೈತ ಹುತಾತ್ಮ ದಿನಾಚರಣೆ

Posted date: 21 Jul, 2020

Powered by:     Yellow and Red

ಕರ್ನಾಟಕ ರಾಜ್ಯ ರೈತ ಸಂಘದಿಂದ ರೈತ ಹುತಾತ್ಮ ದಿನಾಚರಣೆ

ರಾಮನಗರ:ಜು/೨೧/೨೦/ಮಂಗಳವಾರ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ೪೦ ನೇ ವರ್ಷದ ರೈತ ಹುತಾತ್ಮ ದಿನಾಚರಣೆಯನ್ನು ಸಂಘದ ಕಛೇರಿಯಲ್ಲಿ ಆಚರಿಸಿದರು. ಸಂಘವು ಈ ದಿನವನ್ನು ರೈತ ಹೋರಾಟ ದಿನವನ್ನಾಗಿ ಆಚರಿಸಿ ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸಿದರು.


ಕೊರೊನಾ ಸಂಕಷ್ಟದ ಸನ್ನಿವೇಶದಲ್ಲಿ ರೈತರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು, ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಗೀಕಾರ ದೊರೆತಿರಬಹುದು, ಆದರೆ ರೈತರು ಅಂಗೀಕಾರ ನೀಡುವುದಿಲ್ಲ. ಹಾಗಾಗಿ ತಾವು ಪುನರ್ ಅವಲೋಕನ ಮಾಡಿ ಆತ್ಮ ಸಾಕ್ಷಿಗೆ ಅನುಗುಣವಾಗಿ ನಡೆಯಬೇಕು ಎಂದು ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದ ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.


ಎಪಿಎಂಸಿಯಲ್ಲಿರುವ ದೋಷಗಳನ್ನು ಸರಿಪಡಿಸುವುದನ್ನು ಬಿಟ್ಟು ಈ ಕಾಯ್ದೆಗೆ ತಿದ್ದುಪಡಿ ತಂದು, ಇಡೀ ಮಾರುಕಟ್ಟೆ ವ್ಯವಸ್ಥೆಯನ್ನು ಕಾರ್ಪೋರೇಟ್ ಕಂಪನಿಗಳ ವಶಕ್ಕೆ ಒಪ್ಪಿಸಿ ಇದರಿಂದ ರೈತರ ಸ್ವಾತಂತ್ರವನ್ನು ಕಿತ್ತುಕೊಳ್ಳಲಾಗುತ್ತಿದೆ. ಆಗ ಈಗಿರುವ ಎಪಿಎಂಸಿಗಳು ಖಾಯಂ ಆಗಿ ಮುಚ್ಚುತ್ತವೆ. ಈ ತಿದ್ದುಪಡಿ ಕಾಯ್ದೆಯನ್ನು ವಾಪಸ್ಸು ಪಡೆಯಬೇಕು.


ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತಂದು, ಸೇವೆಯನ್ನು ಖಾಸಗಿಯವರಿಗೆ ವಹಿಸಲು ನಿರ್ಧರಿಸಿರುವುದನ್ನು ಕೈಬಿಡಬೇಕು. ಕೊರೊನಾ ಸಂಕಷ್ಟದಲ್ಲಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಈಗ ಘೋಷಿಸಿರುವ ಪ್ಯಾಕೇಜ್ ಸಹ ಪೂರ್ಣ ಜಾರಿಯಾಗಿರುವುದಿಲ್ಲ.


ಪ್ರಧಾನ್‌ಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ ಬರಬೇಕಾದ ಪರಿಹಾರದ ಹಣ ೨೦೧೭ ನೇ ಸಾಲಿ ನಿಂದಲೂ ಸಂದಾಯವಾಗಿಲ್ಲ ಇದನ್ನು ಸರಿಪಡಿಸಬೇಕು. ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಸಾಲದ ಪಾವತಿಗೆ ಒಂದು ವರ್ಷ ವಿಸ್ತರಣೆಯಾಗಬೇಕು. ಬಿತ್ತನೆ ಬೀಜ ಮತ್ತು ಕೃಷಿ ಪರಿಕರಗಳಿಗೆ ನೀಡುತ್ತಿರುವ ಸಹಾಯ ಧನದ ಪ್ರಮಾಣ ಕಡಿಮೆಯಾಗುತ್ತಿದೆ. ಅದನ್ನು ಹೆಚ್ಚಿಸಬೇಕು. ಭತ್ತದ ಖರೀದಿ ಕೇಂದ್ರವನ್ನು ಕೂಡಲೇ ತೆರೆಯಬೇಕು ಎಂದು  ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿಯನ್ನು ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ  ಅವರ ಕಛೇರಿ ಸಹಾಯಕರಿಗೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ರಾಮು, ಚನ್ನಪಟ್ಟಣ ತಾ. ಅಧ್ಯಕ್ಷ ರಾಮೇಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ಮುನಿರಾಜು, ಕನಕಪುರ ತಾ. ಅಧ್ಯಕ್ಷ ಶಶಿಕುಮಾರ್ , ಚನ್ನಪಟ್ಟಣ ತಾ. ಗೌರವಾಧ್ಯಕ್ಷ ಹೆಚ್.ಸಿ ಕೃಷ್ಣಯ್ಯ, ಜಿಲ್ಲಾ ಗೌರವಾಧ್ಯಕ್ಷ ತಿಮ್ಮೇಗೌಡ ಪ್ರಮುಖರಾದ ಚಂದ್ರೇಗೌಡ, ವೆಂಕಟಪ್ಪ, ಕೆ.ಪಿ ತಮ್ಮಯ್ಯ ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑