Tel: 7676775624 | Mail: info@yellowandred.in

Language: EN KAN

    Follow us :


ಹಾಲಿನ ಪೂರಕ ಉತ್ಪನ್ನಗಳಿಂದ ರೈತರಿಗೆ ಲಾಭ : ಎಸ್.ಟಿ. ಸೋಮಶೇಖರ್

Posted date: 12 Sep, 2020

Powered by:     Yellow and Red

ಹಾಲಿನ ಪೂರಕ ಉತ್ಪನ್ನಗಳಿಂದ ರೈತರಿಗೆ ಲಾಭ : ಎಸ್.ಟಿ. ಸೋಮಶೇಖರ್

ರಾಮನಗರ:ಸೆ/11/20/ಶುಕ್ರವಾರ. ಹಾಲಿನ ಜೊತೆಗೆ ಹಾಲಿನ ಪೂರಕ ಉತ್ಪನ್ನಗಳನ್ನು ಉತ್ಪಾದಿಸಲು ಹೆಚ್ಚಿನ ಒತ್ತು ನೀಡುವುದರಿಂದ ರೈತರಿಗೆ ಅಧಿಕ ಲಾಭ ದೊರೆತು ಅವರ ಏಳಿಗೆಗೆ ಸಹಾಯಕವಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು.


ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿರುವ ನೂತನ ಹಾಲು ಸಂಸ್ಕರಣಾ ಮತ್ತು ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹೈನುಗಾರಿಕೆ ಉತ್ಪನ್ನಗಳನ್ನು ಹೆಚ್ಚಾಗಿ ಉತ್ಪಾದಿಸುವುದರಿಂದ ರೈತರಿಗೆ ಅಧಿಕ ಆದಾಯ ಸಿಗುತ್ತದೆ. ಹಾಲಿನ ಜೊತೆಗೆ ಅದರ ಉಪ ಉತ್ಪನ್ನಗಳು ಹಾಲು ಉತ್ಪಾದಕರಿಗೆ ಅಧಿಕ ವರಮಾನ ತಂದುಕೊಡುವಲ್ಲಿ ನೆರವಾಗಲಿದೆ. ಇದು ರೈತರ ವೈಯಕ್ತಿಕ ಏಳಿಗೆಗೂ ಸಹಾಯಕ ಎಂದು ಅಭಿಪ್ರಾಯಪಟ್ಟರು.


*ನಂ. 1 ಘಟಕ :* ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲದಲ್ಲಿ ಒಟ್ಟು 125 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಹಾಲು, ಸಂಸ್ಕರಣಾ ಮತ್ತು ಹಾಲಿನ ಪುಡಿ ಉತ್ಪಾದಿಸುವ ಘಟಕ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಿದೆ. ಸದ್ಯಕ್ಕೆ ಇಡೀ ದೇಶದಲ್ಲೇ ಅತ್ಯುತ್ತಮ ಮತ್ತು ನಂಬರ್ ಒನ್ ಹಾಲಿನ ಪುಡಿ ಘಟಕ ಎನಿಸಿದೆ ಎಂದು ಸಹಕಾರ ಸಚಿವರು ತಿಳಿಸಿದರು.


*2ನೇ ಸ್ಥಾನ :* ದೇಶದಲ್ಲಿ ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿದೆ. ಇಲ್ಲಿರುವ ಘಟಕವು ಹಾಲನ್ನು ಪೌಡರ್ ಆಗಿ ಪರಿವರ್ತಿಸುವ ದೊಡ್ಡ ಘಟಕವಾಗಿದೆ. ರಾಜ್ಯದಲ್ಲೇ ಅಧಿಕ ಪ್ರಮಾಣದಲ್ಲಿ ಹಾಲಿನ ಪುಡಿಯನ್ನು ಇಲ್ಲಿ ಉತ್ಪಾದಿಸಲಾಗುತ್ತಿದೆ. ಈ ಘಟಕದಲ್ಲಿ ಉತ್ಪಾದನೆಯಾಗುವ ಹಾಲಿನ ಪುಡಿಗೆ ಪ್ರೀಮಿಯಂ ಬೆಲೆ ಇದೆ ಎಂದು ಸೋಮಶೇಖರ್ ಅವರು ಮಾಹಿತಿ ನೀಡಿದರು.


*ಹೊರ ರಾಜ್ಯಕ್ಕಿಲ್ಲ ಹಾಲು:* ಕೋವಿಡ್-19 ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಹಾಲಿನ ಸಬರಾಜು ಸ್ಥಗಿತಗೊಂಡಿದೆ. ಅಲ್ಲದೆ, ಸಣ್ಣ ಪುಟ್ಟ ಕಾಫಿ – ಟೀ ಅಂಗಡಿಗಳು ಸಹ ಮುಚ್ಚಿವೆ. ಹೀಗಾಗಿ ರಾಜ್ಯಲ್ಲಿ ಉತ್ಪಾದನೆಯಾಗುವ ಹಾಲನ್ನು ಪೌಡರ್ ಆಗಿ ಪರಿವರ್ತಿಸಿ ಶೇಖರಿಸಿ ಇಟ್ಟುಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಸಧ್ಯಕ್ಕೆ ಹಾಲಿನ ಪುಡಿ ದಾಸ್ತಾನಿನ ಪ್ರಮಾಣ ಅಧಿಕವಾಗಿದೆ. ಒಟ್ಟಾರೆಯಾಗಿ ಸುಮಾರು 28 ಲಕ್ಷ ಮೆಟ್ರಿಕ್ ಟನ್ ನಷ್ಟು ದಾಸ್ತಾನು ಇರುವುದಾಗಿ ಅವರು ತಿಳಿಸಿದರು.


*ಹಾಲು ಖರೀದಿ :* ಕೋವಿಡ್ ಸಂದರ್ಭದಲ್ಲಿ ರಾಜ್ಯದ 8.5 ಲಕ್ಷ ಹೈನುಗಾರರಿಂದ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಸುಮಾರು 79 ಕೋಟಿ ರೂ. ವೆಚ್ಚದಲ್ಲಿ ಅವರುಗಳಿಂದ ಹಾಲನ್ನು ಖರೀದಿಸಿದೆ. ಹೀಗೆ ಖರೀದಿಸಿರುವ ಹಾಲನ್ನು ರಾಜ್ಯದಲ್ಲಿ ನಗರಸಭೆ ಮತ್ತು ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉಚಿತವಾಗಿ ಹಂಚಲಾಗಿದೆ ಎಂದರು.


*ಸಹಾಯಧನ :* ಹಾಲು ಉತ್ಪಾದಕರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ 5 ರೂ.ಗಳ ಪ್ರೋತ್ಸಾಹಧನವನ್ನು ಕಡಿತ ಮಾಡುವ ಚಿಂತನೆ ಇಲ್ಲ. ಯಾವುದೇ ಕಾರಣಕ್ಕೂ ರೈತರಿಗೆ ನೀಡುವ ಸಹಾಯಧನದಲ್ಲಿ ಕಡಿತ ಮಾಡಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟ ಪಡಿಸಿದರು.


*ಇತರ ಒಕ್ಕೂಟಕ್ಕೂ ಪ್ರಯೋಜನ:* ಇತರ ಹಾಲು ಒಕ್ಕೂಟಗಳಲ್ಲಿ ಸಂಗ್ರಹವಾಗುವ ಅಧಿಕ ಹಾಲನ್ನು ಇಲ್ಲಿಗೆ ಕಳುಹಿಸಿಕೊಟ್ಟಲ್ಲಿ ಈ ಘಟಕದಲ್ಲಿ ಹಾಲಿನ ಪುಡಿಯನ್ನಾಗಿ ಪರಿವರ್ತಿಸಿಕೊಡಲಾಗುವುದು. ನಿಗದಿತ ದರದಂತೆ ಪುಡಿಯನ್ನಾಗಿ ಪರಿವರ್ತಿಸಿಕೊಡಲಾಗುತ್ತದೆ ಎಂದು ಸಹಕಾರ ಸಚಿವರು ತಿಳಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑