ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ರಾಜಕೀಯ ಪ್ರೇರಿತ;

ರಾಮನಗರ:ಜ/25/21/ಸೋಮವಾರ. ರೈತರನ್ನು ಇನ್ನೂ ದುಃಸ್ಥಿತಿಗೆ ತಳ್ಳಲು ಷಡ್ಯಂತ್ರ ಎಂದು ದೂರಿದ ಡಿಸಿಎಂ*
*12 ಕೋಟಿ ರೂ. ವೆಚ್ಚದ ಟಯೋಟ-ಕಿರ್ಲೋಸ್ಕರ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ*
ರೈತರ ಕಲ್ಯಾಣಕ್ಕಾಗಿ ರೂಪಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಟುವಾಗಿ ಟೀಕಿಸಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಟಯೋಟ ಕಿರ್ಲೋಸ್ಕರ್ ಕಂಪನಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಮಾದರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ 73 ವರ್ಷಗಳಲ್ಲಿ ಮಾಡಲಾಗದ್ದನ್ನು ನರೇಂದ್ರ ಮೋದಿ ಅವರು ಮಾಡಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಅಪಪ್ರಚಾರ ನಡೆಸುತ್ತ ರೈತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.
*ಇದು ರೈತ ವಿರೋಧಿ ಷಡ್ಯಂತ್ರ:*
ರೈತ ವಿರೋಧಿ ಕೆಲಸಗಳಲ್ಲಿ ತೊಡಗಿರುವ ಕೆಲವರು ಈ ಎಲ್ಲಾ ಷಡ್ಯಂತ್ರಗಳ ಹಿಂದೆ ಇದ್ದಾರೆ. ದೇಶ ಮುನ್ನಡೆಯುವುದನ್ನು ವ್ಯವಸ್ಥಿತವಾಗಿ ತಡೆಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ರೈತರು ಆರ್ಥಿಕವಾಗಿ ಪ್ರಬಲರಾಗುವುದು ಅವರಿಗೆ ಇಷ್ಟವಿಲ್ಲ. ಯಾವತ್ತಿಗೂ ಅವರು ಮತಬ್ಯಾಂಕ್ನ ಬಲಿಪಶುಗಳಾಗಿಯೇ ಇರಬೇಕು ಎಂಬುದು ಅವರ ದುರದ್ದೇಶ ಎಂದು ಡಿಸಿಎಂ ದೂರಿದರು.
ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾತ್ರ ಸೀಮಿತವಾಗಿದ್ದ ರೈತರು ಬೆಳೆದ ಬೆಳೆಗಳನ್ನು ಈಗ ಎಲ್ಲಿ ಬೇಕಾದರೂ ಮಾರಿಕೊಳ್ಳಬಹುದು. ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕತೆ ಇದ್ದರೆ ಅನ್ನದಾತನಿಗೆ ಉತ್ತಮ ಬೆಲೆ ಸಿಗುತ್ತದೆ. ದಲ್ಲಾಳಿಗೆ ಇದನ್ನು ಸಹಿಸಲು ಆಗುತ್ತಿಲ್ಲ. ಹೀಗಾಗಿಯೇ ರೈತರನ್ನು ಎತ್ತಿಕಟ್ಟಲಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ಕೃಷಿ ಕಾಯ್ದೆಗಳಲ್ಲಿ ರೈತರಿಗೆ ಮಾರಕವಾದ ಒಂದು ಅಂಶವೂ ಇಲ್ಲ. ಸ್ವತಃ ಪ್ರಧಾನಮಂತ್ರಿಗಳೇ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲ ಅನುಮಾನಗಳನ್ನು ಬಗೆಹರಿಸಿದ್ದಾರೆ. ಇಷ್ಟಾದರೂ ಹಠಕ್ಕೆ ಬಿದ್ದು ರೈತರನ್ನು ಹಾದಿ ತಪ್ಪಿಸುತ್ತಾರೆಂದರೆ ಇದರ ಹಿಂದೆ ಯಾವುದೋ ದುರುದ್ದೇಶ ಅಡಗಿದೆ ಎಂಬ ಅನುಮಾನ ಬರುವುದು ಸಹಜ. ಇಂಥ ಜನಪರ ಕಾರ್ಯಕ್ರಮಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಡಿಸಿಎಂ ಸ್ಪಷ್ಟ ಮಾತುಗಳಲ್ಲಿ ಹೇಳಿದರು.
*ಕೃಷಿ ಕೇಂದ್ರಗಳ ಲೋಪ ಸರಿಮಾಡುತ್ತೇವೆ:*
ರಾಮನಗರ ಜಿಲ್ಲೆಯ ಕೃಷಿ ಸೇವಾ ಕೇಂದ್ರಗಳಲ್ಲಿ ಲೋಪಗಳಿವೆ ಎಂದು ಸುದ್ದಿಗಾರರು ಗಮನ ಸೆಳೆದಿದ್ದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ; ಲೋಪಗಳನ್ನು ಖಂಡಿತಾ ಸರಿಪಡಿಸಲಾಗುವುದು. ಯಾವ ಉದ್ದೇಶಕ್ಕೆ ಆ ಕೇಂದ್ರಗಳನ್ನು ಸ್ಥಾಪಿಸಲಾಗಿದೆಯೋ ಅದು ಈಡೇರಲೇಬೇಕು. ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಈ ಕೇಂದ್ರಗಳಲ್ಲಿನ ಯಂತ್ರೋಪಕರಣಗಳನ್ನು ಕೂಡಲೇ ಅರ್ಹ ಫಲಾನುಭವಿಗಳಿಗೆ ವಿತರಿಸುವಂತೆ ಆದೇಶ ನೀಡಲಾಗುವುದು ಎಂದರು.
*ಆರೋಗ್ಯ ಕೇಂದ್ರದಿಂದ ಅನುಕೂಲ:*
ಬಿಡದಿಯಲ್ಲಿ ಟಯೋಟ ಕಿರ್ಲೋಸ್ಕರ್ ಸಂಸ್ಥೆ ನಿರ್ಮಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರದಿಂದ ಜನರಿಗೆ ತುಂಬಾ ಅನುಕೂಲವಾಗಲಿದೆ. ಈ ಭಾಗದ ಜನರ ಆರೋಗ್ಯಕ್ಕೆ ವರದಾನವಾಗಲಿದೆ. ಅವರೇ ಇದನ್ನು ನಿರ್ವಹಣೆ ಮಾಡಬೇಕು ಎಂದು ಮನವಿ ಮಾಡಿದ್ದೇನೆ. ಅವರೂ ಒಪ್ಪಿದ್ದಾರೆ. ಇದಕ್ಕಾಗಿ ಕಂಪನಿಗೆ ಕೃತಜ್ಞನಾಗಿದ್ದೇನೆ ಎಂದು ಡಿಸಿಎಂ ಹೇಳಿದರು.
ಈ ಸಂದರ್ಭದಲ್ಲಿ ಮಾಗಡಿ ಶಾಸಕ ಮಂಜುನಾಥ, ಜಿಲ್ಲಾಧಿಕಾರಿ ಅರ್ಚನಾ, ಜಿಪಂ ಸಿಇಒ ಇಕ್ರಮ್, ಎಸ್ಪಿ ಗಿರೀಶ್, ಡಿಎಚ್ಒ ಡಾ.ನಿರಂಜನ ಇದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »

ರಾಮನಗರ ನೂತನ ರೇಷ್ಮೆ ಮಾರುಕಟ್ಟೆ ಬಗ್ಗೆ ವಿರೋಧ ಸರಿಯಲ್ಲ: ಹೆಚ್ಡಿಕೆ ಬೆನ್ನಿಗೆ ನಿಂತ ಉಪ ಮುಖ್ಯಮಂತ್ರಿ
ರಾಮನಗರ: ಜಿಲ್ಲಾ ಕೇಂದ್ರದಲ್ಲಿದ್ದ ರೇಷ್ಮೆ ಮಾರುಕಟ್ಟೆಯನ್ನು ಚನ್ನಪಟ್ಟಣಕ್ಕೆ ಸ್ಥಳಾಂತರ ಮಾಡುವುದಕ್ಕೆ ಯಾವುದೇ ರಾಜಕೀಯ ಕಾರಣವಿಲ್ಲ. ಅಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡುತ್ತಿರುವುದು ರೈತರಿಗಾಗ

ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ರಾಜಕೀಯ ಪ್ರೇರಿತ;
ರಾಮನಗರ:ಜ/25/21/ಸೋಮವಾರ. ರೈತರನ್ನು ಇನ್ನೂ ದುಃಸ್ಥಿತಿಗೆ ತಳ್ಳಲು ಷಡ್ಯಂತ್ರ ಎಂದು ದೂರಿದ ಡಿಸಿಎಂ*
*12 ಕೋಟಿ ರ

ಕಿಸಾನ್ ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ತಹಶಿಲ್ದಾರ್ ನಾಗೇಶ್ ಕರೆ.
ಚನ್ನಪಟ್ಟಣ:ಡಿ/28/20/ಸೋಮವಾರ. ಕಿಸಾನ್ ವತಿಯಿಂದ ಬಹಳಷ್ಟು ಯೋಜನೆಗಳಿದ್ದು ರೈತರು ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಲ್ಲೂಕಿನ ದಂಡಾ

ಇರುವ ಜಮೀನು ಬಿಟ್ಟು ಪರರ ಬಳಿ ಕೂಲಿ ಮಾಡುವ ಬದಲು ಸಾವಯವ ಕೃಷಿ ಮಾಡಿ ತಿಂಗಳಿಗೆ ಲಕ್ಷ ರೂಪಾಯಿ ಗಳಿಸಿ ಮಂಡ್ಯ ಆರ್ಗಾನಿಕ್ ಸಂಸ್ಥಾಪಕ ಮಧುಚಂದನ್
ಚನ್ನಪಟ್ಟಣ:ನ/07/20/ಶನಿವಾರ. ವ್ವವಸಾಯ ಮಾಡಲು ದೊಡ್ಡ ಮಟ್ಟದ ಭೂ ಒಡೆಯನೇ ಆಗಬೇಕೆಂದಿಲ್ಲ. ಕನಿಷ್ಠ ಅರ್ಧ ಎಕರೆ ಭೂಮಿ ಇದ್ದು ಪ್ರಾಮಾಣಿಕವಾಗಿ ಸ

ಮಹಾ ಮಳೆಗೆ ಮಕಾಡೆ ಮಲಗಿದ ರಾಗಿ ಬೆಳೆ
ಚನ್ನಪಟ್ಟಣ:ಅ/23/20/ಶುಕ್ರವಾರ. ಕಳೆದ ಮೂರು ತಿಂಗಳಿನಿಂದ ಕಷ್ಟಪಟ್ಟು ಬೆಳೆದ ರಾಗಿ ಬೆಳೆಯು ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ರಭ

ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಂಭತ್ತಕ್ಕೂ ಹೆಚ್ಚು ಕಾಡಾನೆಗಳಿಂದ ದಾಳಿ: ಬೆಳೆ ನಾಶ
ಚನ್ನಪಟ್ಟಣ:ಅ/10/20/ಶನಿವಾರ. ತಾಲ್ಲೂಕಿನ ಬಿವಿ ಹಳ್ಳಿ, ಅರಳಾಳುಸಂದ್ರ, ವಿಠಲೇನಹಳ್ಳಿ ಮೆಣಸಿಗನಹಳ್ಳಿ, ಭೂಹಳ್ಳಿ ಮತ್ತು ಸಿಂಗರಾಜಪುರ ಸೇರಿದಂತ

ರೈತ ಯುವಕರಿಗೆ ಮಾದರಿಯಾದ ಮಾಗಡಿಯ ಜೈನ ಸಮುದಾಯದ ಯುವಕ ಭರತ್ ಜೈನ್
ಮಾಗಡಿ:ಅ/05/20/ಸೋಮವಾರ. ಶೇಟು ಅಥವಾ ಮಾರ್ವಾಡಿ ಅಂದ್ರೆ ಅವರೊಬ್ಬ ಲಾಭ ಮಾಡುವ ವ್ಯಾಪಾರಸ್ಥ ಎಂದೇ ಎಲ್ಲರೂ ಬಣ್ಣಿಸುತ್ತಾರೆ. ಇದನ್ನೂ ಅಲ್ಲಗಳೆಯ

ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ. ರಾಮನಗರದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ರಾಮನಗರ:ಸೆ/28/20/ಸೋಮವಾರ. ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳಿಗೆ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ

ಯಶಸ್ವಿಯಾದ ಬಂದ್: ಸಂಪೂರ್ಣ ಸ್ತಬ್ದವಾದ ನಗರ
ಚನ್ನಪಟ್ಟಣ:ಸೆ/28/20/ಸೋಮವಾರ. ರೈತಸಂಘ ಸೇರಿದಂತೆ ಅನೇಕ ಸಂಘಟನೆಗಳು ಇಂದು ಬಂದ್ ಗೆ ಕರೆನೀಡಿದ್ದು ನಗರದಲ್ಲಿ ಯಶಸ್ವಿಗೊಂಡಿತು.

ಯೂರಿಯಾ, ಅಗತ್ಯಕ್ಕಿಂತಲೂ ಹೆಚ್ಚಿನ ಪೂರೈಕೆಯಾಗಿದ್ದರೂ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ರೈತ. ಕಾರಣವೇನು ?
ಚನ್ನಪಟ್ಟಣ: ಸೆ/26/20/ಶನಿವಾರ. ತಾಲ್ಲೂಕಿನಲ್ಲಿ ಮಳೆಗಾಲದ ತಿಂಗಳು ಅಂದರೆ ಸೆಪ್ಟೆಂಬರ್ ತಿಂಗಳಿಗೆ, ಈಗಾಗಲೇ ಬಿತ್ತನೆ ಮಾಡಿರುವ ತೋಟಗಾರಿಕೆ ಮತ
??????????????