Tel: 7676775624 | Mail: info@yellowandred.in

Language: EN KAN

    Follow us :


ಪೋಲೀಸರು ಕಿರುಕುಳ ನೀಡುತ್ತಾರೆ ಎಂದು ಕೆಲಕಾಲ ಹರಾಜು ಸ್ಥಗಿತಗೊಳಿಸಿದ ರೀಲರ್ ಗಳು

Posted date: 10 May, 2021

Powered by:     Yellow and Red

ಪೋಲೀಸರು ಕಿರುಕುಳ ನೀಡುತ್ತಾರೆ ಎಂದು ಕೆಲಕಾಲ ಹರಾಜು ಸ್ಥಗಿತಗೊಳಿಸಿದ ರೀಲರ್ ಗಳು

ಪೊಲೀಸರು ರೇಷ್ಮೆ ಗೂಡು ಸಾಗಣೆ ಮಾಡಲು ಕಿರುಕುಳ ನೀಡುತ್ತಾರೆ ಎಂದು ಆರೋಪಿಸಿ ಇಲ್ಲಿನ ರೇಷ್ಮೆ ಮಾರುಕಟ್ಟೆಯಲ್ಲಿ ನೆನ್ನೆ ರೀಲರ್ಸ್ಗಳು ಹರಾಜು ಸ್ಥಗಿತಗೊಳಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು.


ಮಾರುಕಟ್ಟೆಯಲ್ಲಿ ಎಂದಿನಂತೆ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಬಿಡ್ ಸಲ್ಲಿಸಬೇಕಿದ್ದ ರೀಲರ್ಸ್ಗಳು ಹರಾಜು ಪ್ರಕ್ರಿಯೆಯಿಂದ ದೂರ ಉಳಿದರು. ದಿಢೀರ್ ಬೆಳವಣಿಗೆಯಿಂದ ಮಾರುಕಟ್ಟೆ ಅಧಿಕಾರಿಗಳು ಕಕ್ಕಾಬಿಕ್ಕಿಯಾದರು. ಅಲ್ಲದೆ, ಮಾರುಕಟ್ಟೆಗೆ ರೇಷ್ಮೆಗೂಡು ತಂದು ಹಾಕಿದ್ದ ರೈತರು ಕೂಡ ಇದರಿಂದ ಆತಂಕಗೊಂಡರು.

ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ದೂರ ಉಳಿದಿದ್ದ ರೀಲರ್ಸ್ ಬಳಿಗೆ ತೆರಳಿದ ಮಾರುಕಟ್ಟೆ ಸಹಾಯಕ ನಿರ್ದೇಶಕ ಹೊಂಬಾಳೇಗೌಡ ಮತ್ತು ಅಧಿಕಾರಿ ಸಿದ್ದರಾಜು, ದಿಢೀರ್ ಬೆಳವಣಿಗೆ ಕಾರಣ ಕೇಳಿದರು. ಇದಕ್ಕುತ್ತರಿಸಿದ ರೀಲರ್ಸ್ಗಳು ನಾವು ಮಾರುಕಟ್ಟೆಯಿಂದ ಗೂಡು ಸಾಗಿಸಲು ಸಾಧ್ಯ ವಾಗುತ್ತಿಲ್ಲ. ಪೊಲೀಸರು ನಮ್ಮನ್ನು ಅಡ್ಡಗಟ್ಟಿ ಕೋವಿಡ್ ನೆಪದಲ್ಲಿ ಕಿರುಕುಳ ನೀಡಿ, ದಂಡ ವಿಧಿಸುತ್ತಿದ್ದಾರೆ. ಇದರಿಂದಾಗಿ ನಾವು ಗೂಡನ್ನು ಖರೀದಿಸುವುದಿಲ್ಲವೆಂದು ಪಟ್ಟು ಹಿಡಿದರು.


ಈ ಮದ್ಯೆ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಶಾಸಕರೂ ಆದ ಮಾಜಿ ಸಿಎಂ ಕುಮಾರ ಸ್ವಾಮಿ ಅವರ ಆಪ್ತ ಸಹಾಯಕ ಕೆಂಚೇಗೌಡ, ತಾವು ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ರೀಲರ್ಸ್ಗಳ ಮನವೊಲಿಸಲು ಮುಂದಾದರು. ಇದಕ್ಕೆ ರೀಲರ್ಸ್ಗಳು ಸೊಪ್ಪು ಹಾಕಲಿಲ್ಲ.

ನಂತರ ಕೆಂಚೇಗೌಡ, ಮಾಜಿ ಸಿಎಂ ಕುಮಾರ ಸ್ವಾಮಿ ಅವರನ್ನು ದೂರ ವಾಣಿಯಲ್ಲಿ ಸಂಪರ್ಕಿಸಿ, ಮಾರುಕಟ್ಟೆಯಲ್ಲಿ ಉದ್ಭವಿಸಿರುವ ಸಮಸ್ಯೆಯ ಬಗ್ಗೆ ಗಮನ ಸೇಳೆದರು.

ಸ್ವಲ್ಪ ಸಮಯದ ತರುವಾಯ ಕರೆ ಮಾಡಿದ ಕುಮಾರಸ್ವಾಮಿ, ರೀಲರ್ಸ್ ಅಸೋಸಿಯೇಷನ್ ನ ಮುಖಂಡರೊಂದಿಗೆ, ತಾವು ದಿಢೀರ್ ಎಂದು ಹರಾಜು ಪ್ರಕ್ರಿಯಿಂದ ದೂರ ಉಳಿದರೆ ಮಾರುಕಟ್ಟೆಗೆ ರೇಷ್ಮೆ ಗೂಡು ತಂದಿರುವ ರೈತರಿಗೆ ಸಾಕಷ್ಟು ತೊಂದರೆಯಾಗಲಿದೆ ಪ್ರತಿಭಟನೆ ಕೈ ಬಿಟ್ಟು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದರು.


ಈ ವೇಳೆ ಮಾತನಾಡಿದ ರೀಲರ್ಸ್ಗಳು ಈಗ ನಾವು ಮತ್ತು ನಮ್ಮ ಕಾರ್ಮಿಕರು ರೇಷ್ಮೆ ಗೂಡನ್ನು ತಮ್ಮ ಫಿಲೇಚರ್‌ಗಳಿಗೆ ಸಾಗಿಸಲು ಮಧ್ಯಾಹ್ನವಾಗುತ್ತದೆ. ಈ ವೇಳೆ ನಮ್ಮನ್ನು ಅಡ್ಡ ಹಾಕುವ ಪೊಲೀಸರು ನಮ್ಮನ್ನು ನಿಂದಿಸಿ, ಹೊಡೆದು ದಂಡ ಹಾಕುತ್ತಿದ್ದಾರೆ. ಇನ್ನು ಸೋಮವಾರದಿಂದ ಮತ್ತಷ್ಟು ಸಮಸ್ಯೆ ಕಠಿಣವಾಗಲಿದೆ. ಇದರಿಂದ ನಾವು ಗೂಡು ಖರೀದಿ ಮಾಡುವುದಿಲ್ಲ ವೆಂದರು.


ಇದಕ್ಕುತ್ತರಿಸಿದ ಕುಮಾರಸ್ವಾಮಿ, ನಾನು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಟರ ಜೊತೆ ಮಾತನಾಡಿದ್ದೇನೆ. ಈ ಬಗ್ಗೆ ಅವರು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಹೇಳಿದ್ದಾರೆ. ನಿಮಗೆ ಮುಂದೆ ಸಮಸ್ಯೆ ಬಂದಲ್ಲಿ ನನ್ನ ಮತ್ತು ನನ್ನ ಕಚೇರಿಯನ್ನು ಸಂಪರ್ಕಿಸಿ, ತಕ್ಷಣವೇ ನಾನು ನಿಮ್ಮ ನೆರವಿಗೆ ಬರುತ್ತೇನೆ. ಯಾವುದಕ್ಕೂ ಭಯ ಪಡುವ ಅಗತ್ಯವಿಲ್ಲ. ನನ್ನ ಮೇಲೆ ವಿಶ್ವಾಸವಿರಿಸಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಲೊಳ್ಳುವಂತೆ ಮನವೊಲಿಸಿದರು. ನಂತರ ರೀಲರ್ಸ್ ಗಳು ಹರಾಜಿ ನಲ್ಲಿ ಪಾಲ್ಗೊಂಡರು. ಇದರಿಂದ ರೈತರು, ಮಾರುಕಟ್ಟೆ ಅಧಿಕಾರಿಗಳು ನಿಟ್ಟುಸಿರು ಬಿಟ್ಟರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑