Tel: 7676775624 | Mail: info@yellowandred.in

Language: EN KAN

    Follow us :


ಕೇಂದ್ರ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

Posted date: 18 Jun, 2021

Powered by:     Yellow and Red

ಕೇಂದ್ರ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ರಾಮನಗರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ


*ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ*


ಕೊರೊನಾದ ಮೊದಲನೆಯ ಅಲೆಯು ಉಂಟು ಮಾಡಿದ್ದ ಸಂಕಷ್ಟಗಳಿಂದ ರೈತ ಸಮುದಾಯ ಇನ್ನೂ ಹೊರ ಬಂದಿಲ್ಲ. 2 ನೇ ಅಲೆಯು ಮತ್ತಷ್ಟು ಸಂಕಷ್ಟಗಳನ್ನು ತಂದೊಡ್ಡಿದೆ. ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಇಲ್ಲದೆ ಬೆಳೆದ ಉತ್ಪನ್ನಗಳನ್ನು ಬೀದಿಗೆ ಸುರಿಯುತ್ತಿದ್ದು, ಎರಡು ತಿಂಗಳ ಅವಧಿಯಲ್ಲಿ ಸುಮಾರು ಒಂದು ಲಕ್ಷ ಕೋಟಿಗಿಂತಲೂ ಹೆಚ್ಚು ನಷ್ಟ ಅನುಭವಿಸಿದ್ದಾರೆ. ರಸಗೊಬ್ಬರದ ಬೆಲೆ ದುಬಾರಿಯಾಗಿದೆ, ಕೃಷಿ ಪರಿಕರಗಳ ಮೇಲೂ ಜಿಎಸ್‌ಟಿ ವಿಧಿಸಲಾಗಿದೆ.


ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚಕ್ಕಿಂತಲೂ ಕಡಿಮೆ ಎಂಎಸ್‌ಪಿ ನಿಗದಿಪಡಿಸಲಾಗಿದ್ದು, ಶಾಸನಾತ್ಮಕ ರೂಪ ಇಲ್ಲದೇ ಇರುವುದರಿಂದ ನಿಗದಿತ ಎಂಎಸ್‌ಪಿಗಿಂತಲೂ ಕಡಿಮೆ ದರಕ್ಕೆ ಕೃಷಿ ಉತ್ಪನ್ನಗಳನ್ನು ಖರೀದಿಸಲಾಗುತ್ತಿದೆ.


ಖರೀದಿ ಕೇಂದ್ರ ಮೂಲಕ ಖರೀದಿಸಲಾದ ಭತ್ತ, ರಾಗಿ, ಜೋಳ ಇನ್ನಿತರ ಬೆಳೆಗಳಿಗೆ ಸರ್ಕಾರ ಇನ್ನು ಹಣ ಪಾವತಿಸಿಲ್ಲ. ಕಬ್ಬು ಕಾರ್ಖಾನೆಗಳೂ ಕೂಡ ರೈತರ ಬಾಕಿ ಉಳಿಸಿಕೊಂಡಿವೆ. ಪ್ರಧಾನ ಮಂತ್ರಿ ಫಸಲು ಬಿಮಾ ಯೋಜನೆ ಪರಿಹಾರದ

ಹಣ ಲಕ್ಷಾಂತರ ರೈತರಿಗೆ ಬರಬೇಕಿದೆ. ಬರ ಮತ್ತು ಅತೀವೃಷ್ಟಿಯಿಂದಾದ ನಷ್ಟಕ್ಕೆ ಪರಿಹಾರ ರೈತರ ಖಾತೆಗೆ ಇನ್ನೂ ಜಮಾ ಆಗಿಲ್ಲ. ರೈತರು ಹಾಗೂ ಕೃಷಿ ಕಾರ್ಮಿಕರು ಸಂಕಷ್ಟದ ಜೀವನ ನಡೆಸುವಂತಾಗಿದೆ ಎಂದು ಆರೋಪಿಸಿದರು.


ಇಂತಹ ಸಂಕಷ್ಟದ ಸಂದರ್ಭದಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸುವ ಮೂಲಕ ಸರ್ಕಾರವೇ ಜನರನ್ನು ಲೂಟಿ ಮಾಡುತ್ತಿದೆ. ತಾನೇನು ಕಮ್ಮಿ ಇಲ್ಲ ಎಂಬಂತೆ ರಾಜ್ಯ ಸರ್ಕಾರ ಕೂಡ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿದೆ ಎಂದು ದೂರಿದರು.


ಕೊರೊನಾದ ಒಂದು ಮತ್ತು ಎರಡನೇ ಅಲೆ ತಡೆಯಲು ಜಾರಿಗೊಳಿಸಿದ್ದ ಲಾಕ್‌ಡೌನ್‌ನಿಂದಾಗಿ 20 ಕೋಟಿಗೂ ಅಧಿಕ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. 30 ಕೋಟಿಗೂ ಹೆಚ್ಚು ಜನರು ಕಡು ಬಡತನಕ್ಕೆ ದೂಡಲ್ಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಅಂಬಾನಿ ಮತ್ತು ಅದಾನಿಗಳು ಸುಮಾರು ಮೂರು ಲಕ್ಷ ಕೋಟಿಗೂ ಹೆಚ್ಚು ತಮ್ಮ ಸಂಪತ್ತನ್ನು ವೃದ್ಧಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.


ಜನ ಸಾಮಾನ್ಯರ ಹಿತದೃಷ್ಟಿಯಿಂದ ಸರ್ಕಾರ ಭಿಕ್ಷಾ ರೂಪದ ಪ್ಯಾಕೇಜ್ ಘೋಷಿಸಿ ಹೊಣೆಗಾರಿಕೆಯಿಂದ  ನುಣುಚಿಕೊಂಡಿದೆ. ರೈತರನ್ನು ಉದ್ಧಾರ ಮಾಡುವುದಾಗಿ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಬಳಿಕ ರೈತರನ್ನೇ

ಶೋಷಿಸುವುದು ಇದುವರೆಗೂ ನಮ್ಮನ್ನಾಳಿದ ಎಲ್ಲಾ ರಾಜಕಾರಣಿಗಳ ಸಹಜ ಸ್ವಭಾವವಾಗಿದೆ. ಸರ್ಕಾರಗಳು ಕೂಡಲೇ ತಮ್ಮ ಧೋರಣೆಯನ್ನು ಬದಲಿಸಿಕೊಂಡು ಅನ್ನದಾತ ರೈತರ ನೆರವಿಗೆ ಮುಂದಾಗಬೇಕು. ತಪ್ಪಿದಲ್ಲಿ ಉಗ್ರ ಹೋರಾಟ

ಹಮ್ಮಿಕೊಳ್ಳಲಾಗುವುದು ಎಂದು ರೈತರು ಎಚ್ಚರಿಸಿದ್ದಾರೆ.


ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಎಂ.ರಾಮು, ಪದಾಧಿಕಾರಿಗಳಾದ ಕೆ.ಮಲ್ಲಯ್ಯ, ಮುನಿರಾಜು, ಡಾ.ಎಸ್.ಬಿ.ಚೌಕಿಮಠ, ಲೋಕೇಶ್, ಎಂ.ಪುಟ್ಟಸ್ವಾಮಿ, ರಾಮೇಗೌಡ, ನಾಗರಾಜು ಮುಂತಾದವರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑