Tel: 7676775624 | Mail: info@yellowandred.in

Language: EN KAN

    Follow us :

ರಾಮನಗರ ಮಾವು ಸಂಸ್ಕರಣಾ ಘಟಕ, ಹೈಟೆಕ್ ರೇಷ್ಮೆ ‌ಮಾರುಕಟ್ಟೆ ಯೋಜನೆಗೆ ಡಿಸೆಂಬರ್‌ನಲ್ಲಿ ಕಾರ್ಯಾದೇಶ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ

Posted date: 20 Jul, 2021

Powered by:     Yellow and Red

ರಾಮನಗರ ಮಾವು ಸಂಸ್ಕರಣಾ ಘಟಕ, ಹೈಟೆಕ್ ರೇಷ್ಮೆ ‌ಮಾರುಕಟ್ಟೆ ಯೋಜನೆಗೆ ಡಿಸೆಂಬರ್‌ನಲ್ಲಿ ಕಾರ್ಯಾದೇಶ  ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಮಾವು ಸಂಸ್ಕರಣಾ ಘಟಕ ಹಾಗೂ ಹೈಟೆಕ್ ರೇಷ್ಮೆ ‌ಮಾರುಕಟ್ಟೆ ನಿರ್ಮಾಣ ಯೋಜನೆಗಳಿಗೆ ಅಕ್ಟೋಬರ್‌ನಲ್ಲಿ ಸಮಗ್ರ ಯೋಜನಾ ವರದಿ (DPR)‌ ಅಂತಿಮಗೊಳಿಸಿ ಡಿಸೆಂಬರ್‌ನಲ್ಲಿ ಟೆಂಡರ್‌ ಕರೆದು ಕಾರ್ಯಾದೇಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. 

ಈ ಎರಡೂ ಯೋಜನೆಗಳಿಗೆ ಸಂಬಂಧಿಸಿದಂತೆ ರೇಷ್ಮೆ ಖಾತೆ ಸಚಿವ ಆರ್.‌ಶಂಕರ್‌, ಚನ್ನಪಟ್ಟಣ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಗಡಿ ಶಾಸಕ ಮಂಜುನಾಥ್‌ ಹಾಗೂ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ ನಂತರ ಮಾಧ್ಯಮಗಳ ಜತೆ ಡಿಸಿಎಂ ಮಾತನಾಡಿದರು. 

ರಾಮನಗರ ಜಿಲ್ಲೆಗೆ ಇವೆರಡೂ ಯೋಜನೆಗಳು ಬಹಳ ಉಪಯುಕ್ತವಾಗುತ್ತವೆ. ರೈತರಿಗೆ ಒಳ್ಳೆಯದಾಗಲಿದೆ ಎಂದ ಅವರು, ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಮುಗಿಸಲಾಗುವುದು ಎಂದರು. 

*ಮಾವು ಸಂಸ್ಕರಣಾ ಘಟಕ:*

ಬೈರಾಪಟ್ಟಣದಲ್ಲಿ ಗುರುತಿಸಲಾಗಿರುವ ಒಟ್ಟು 40 ಎಕರೆ ಪ್ರದೇಶವಿದ್ದು, ಮೊದಲ ಹಂತದಲ್ಲಿ 15 ಎಕರೆಯ 4 ಎಕರೆ ಪ್ರದೇಶದಲ್ಲಿ ಸಾಮಾನ್ಯ ಸೌಲಭ್ಯಗಳನ್ನು ಕಲ್ಪಿಸಿ ಉಳಿದ ಜಾಗದಲ್ಲಿ ಆಹಾರ ಸಂಸ್ಕರಣಾ ಕ್ಲಸ್ಟರ್‌ ಮಾಡಲಾಗುವುದು. ಇದರಲ್ಲಿಯೇ ಮಾವು ಸಂಸ್ಕರಣಾ ಘಟಕ ಕೂಡ ಬರುತ್ತದೆ. ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಐದು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು. 

ರಫ್ತಾರ್‌ ಯೋಜನೆ ಅಡಿಯಲ್ಲಿ 10 ಕೋಟಿ ರೂ. ಆರ್ಥಿಕ ನೆರವು ನೀಡುವಂತೆ ಕೇಂದ್ರವನ್ನು  ಕೋರಲಾಗಿದೆ. ಈಗಾಗಲೇ ಯೋಜನೆಗೆ ಪ್ರಾಥಮಿಕ ಒಪ್ಪಿಗೆ ಪಡೆಯಲಾಗಿದೆ. ಅಂತಿಮ ಒಪ್ಪಿಗೆಯ ಪ್ರಕ್ರಿಯೆಗಳಷ್ಟೇ ಬಾಕಿ. ಈ ಯೋಜನೆಗೆ ಖಾಸಗಿ ಕ್ಷೇತ್ರದಿಂದ 500 ಕೋಟಿ ರೂ. ಹೂಡಿಕೆ ಅಗತ್ಯವಿದ್ದು, ಹೂಡಿಕೆ ಮಾಡಿದವರಿಗೆ ಶೇ.40 ರಷ್ಟು ಸಬ್ಸಿಡಿ ದೊರೆಯುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು. 

*20 ಎಕರೆಯಲ್ಲಿ ಹೈಟೆಕ್‌ ರೇಷ್ಮೆ ಮಾರುಕಟ್ಟೆ:* 

ಚನ್ನಪಟ್ಟಣ ಸಮೀಪದ ರೇಷ್ಮೆ ತರಬೇತಿ ಕೇಂದ್ರದಲ್ಲಿರುವ 20 ಎಕರೆ ಜಾಗದಲ್ಲಿ ಹೈಟೆಕ್‌ ರೇಷ್ಮೆ ಮಾರುಕಟ್ಟೆ ನಿರ್ಮಾಣವಾಗಲಿದೆ. ನಬಾರ್ಡ್‌ನಿಂದ 75 ಕೋಟಿ ರೂ. ಆರ್ಥಿಕ ನೆರವು ಸಿಗುತ್ತಿದೆ. ಮುಂಗಡ ಪತ್ರದಲ್ಲಿ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಇವತ್ತಿನ ಸಭೆಯಲ್ಲಿ ನಾಲ್ವರು ಆರ್ಕಿಟೆಕ್ಟ್‌ಗಳು ಯೋಜನೆಯ ಪ್ರಾತ್ಯಕ್ಷಿಕೆ ನೀಡಿದ್ದಾರೆ ಎಂದು ಡಿಸಿಎಂ ಹೇಳಿದರು.  

ಈ ಸಭೆಯಲ್ಲಿ ಶಾಸಕ ಸಾ.ರಾ.ಮಹೇಶ್‌, ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮೂಲಸೌಕರ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್‌ ಮೋಹನ್‌, ಡಿಸಿಎಂ ಅವರ ಕಾರ್ಯದರ್ಶಿ ಪ್ರದೀಪ್‌, ರಾಮನಗರ ಜಿಲ್ಲಾಧಿಕಾರಿ ರಾಕೇಶ್‌ಕುಮಾರ, ಸಿಇಓ ಇಕ್ರಂ ಮುಂತಾದವರು ಭಾಗಿಯಾಗಿದ್ದರು.

ಗೋ ರಾ ಶ್ರೀನಿವಾಸ...

ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ಆನೆ ದಾಳಿಗೆ ನೀಡುವ ಬೆಳೆ ಪರಿಹಾರ ಪರಿಷ್ಕರಣೆಯಾಗಬೇಕು: ಹೆಚ್.ಡಿ.ಕುಮಾರಸ್ವಾಮಿ
ಆನೆ ದಾಳಿಗೆ ನೀಡುವ ಬೆಳೆ ಪರಿಹಾರ ಪರಿಷ್ಕರಣೆಯಾಗಬೇಕು: ಹೆಚ್.ಡಿ.ಕುಮಾರಸ್ವಾಮಿ

ರಾಮನಗರ ಜಿಲ್ಲಾ ಪ್ರದಾನ ಬೆಳೆಗಳಾದ ತೆಂಗು, ರಾಗಿ, ಭತ್ತ ಬೆಳೆಗಳು ಆನೆ ದಾಳಿಯಿಂದ ನಾಶವಾದಾಗ, ರಾಗಿ-1,200 ರೂ, ಭತ್ತ-1,320 ರೂ, ತೆಂಗು(10 ವರ್ಷ ಮೇಲ್ಪಟ್ಟ ಮರಗಳಿಗೆ) 2,000 ರೂ, 5  ವರ್ಷದ

ಕಾಡಾನೆ ದಾಳಿ, ವ್ಯಕ್ತಿ ಸಾವು. ರೊಚ್ಚಿಗೆದ್ದ ಗ್ರಾಮಸ್ಥರು. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು
ಕಾಡಾನೆ ದಾಳಿ, ವ್ಯಕ್ತಿ ಸಾವು. ರೊಚ್ಚಿಗೆದ್ದ ಗ್ರಾಮಸ್ಥರು. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು

ಚನ್ನಪಟ್ಟಣ: ಬೆಳೆಹಾನಿಗಷ್ಟೇ ಸೀಮಿತವಾಗಿದ್ದ ಆನೆಗಳು ಈಗ ಮನುಷ್ಯನ ಪ್ರಾಣ ತೆಗೆಯುವ ಹಂತಕ್ಕೆ ಹೋಗಿದ್ದು,  ತೋಟದಲ್ಲಿ ಕೆಲಸ ಮಾಡುತ್ತಿದ್ದ

ಟಿಎಪಿಸಿಎಂಎಸ್ ಗೆ ಭೇಟಿ ನೀಡಿದ ಉನ್ನತಾಧಿಕಾರಿಗಳು, ಹಳೆಯ ಗೋದಾಮಿನಲ್ಲೇ ಬಾಳೆಕಾಯಿ ಮಂಡಿ ಸ್ಥಾಪನೆ
ಟಿಎಪಿಸಿಎಂಎಸ್ ಗೆ ಭೇಟಿ ನೀಡಿದ ಉನ್ನತಾಧಿಕಾರಿಗಳು, ಹಳೆಯ ಗೋದಾಮಿನಲ್ಲೇ ಬಾಳೆಕಾಯಿ ಮಂಡಿ ಸ್ಥಾಪನೆ

ಚನ್ನಪಟ್ಟಣ: ನಗರದಲ್ಲಿನ ಟಿಎಪಿಸಿಎಂಸ್ ಗೆ ರಾಜ್ಯ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಮತ್ತು ಕಾರ್ಯಪಾಲಕ ಇಂಜಿನಿಯರ್ ಹಾಗೂ ಸ್ಥಳೀಯ ಹಾಪ್ ಕ

ರಾಮನಗರ ಮಾವು ಸಂಸ್ಕರಣಾ ಘಟಕ, ಹೈಟೆಕ್ ರೇಷ್ಮೆ ‌ಮಾರುಕಟ್ಟೆ ಯೋಜನೆಗೆ ಡಿಸೆಂಬರ್‌ನಲ್ಲಿ ಕಾರ್ಯಾದೇಶ  ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ
ರಾಮನಗರ ಮಾವು ಸಂಸ್ಕರಣಾ ಘಟಕ, ಹೈಟೆಕ್ ರೇಷ್ಮೆ ‌ಮಾರುಕಟ್ಟೆ ಯೋಜನೆಗೆ ಡಿಸೆಂಬರ್‌ನಲ್ಲಿ ಕಾರ್ಯಾದೇಶ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಮಾವು ಸಂಸ್ಕರಣಾ ಘಟಕ ಹಾಗೂ ಹೈಟೆಕ್ ರೇಷ್ಮೆ ‌ಮಾರುಕಟ್ಟೆ ನಿರ್ಮಾಣ ಯೋಜನೆಗಳಿಗೆ ಅಕ್ಟೋಬರ್‌ನಲ್ಲಿ ಸಮಗ್ರ ಯೋಜನಾ ವರದಿ (DPR)‌ ಅಂತಿಮಗೊಳಿಸಿ ಡಿಸೆ

ಮೇಕೆದಾಟು ಯೋಜನೆ; ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ
ಮೇಕೆದಾಟು ಯೋಜನೆ; ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆ ಹಲವಾರು ಬಾರಿ ನಿಂತ ನೀರಾದಂತೆ, ನಿಂತಲ್ಲಿಯೇ ನಿಂತಿದೆ. ಈ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲು ಕರ್ನಾಟಕ ರಾಜ್ಯ ಮೇಕೆದಾಟು ಹ

ಮೀನು ಕೃಷಿ ಸಹಾಯವಾಣಿಗೆ ಸಚಿವ ಎಸ್ ಅಂಗಾರವರಿಂದ ಚಾಲನೆ
ಮೀನು ಕೃಷಿ ಸಹಾಯವಾಣಿಗೆ ಸಚಿವ ಎಸ್ ಅಂಗಾರವರಿಂದ ಚಾಲನೆ

ಮೀನು ಕೃಷಿಕರ  ದಿನಾಚರಣೆಯ ಅಂಗವಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ  ಸಚಿವರಾದ ಎಸ್.ಮೀನುಗಾರಿಕೆ ಸಚಿವರಾದ ಅಂಗಾರ ಅವರು ಮೀನುಗಾರಿಕೆಯ ಮಾಹಿತಿ ನೀಡುವ ಸಹಾಯವಾಣಿಗೆ ಚಾಲನ

ಬೆಳೆ ವಿಮೆಯ ನೋಂದಣಿ ಹೆಚ್ಚಾಗಬೇಕು: ಡಾ ನಾರಾಯಣ ಗೌಡ
ಬೆಳೆ ವಿಮೆಯ ನೋಂದಣಿ ಹೆಚ್ಚಾಗಬೇಕು: ಡಾ ನಾರಾಯಣ ಗೌಡ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದ್ದು, ಈ ಬಗ್ಗೆ ರೈತರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಹೆಚ್ಚಿನ ರೈತರನ್ನು ನೋಂದಣಿ ಮಾಡಿ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ

ಕೋಡಂಬಳ್ಳಿ ಗ್ರಾಮದ ಬಡರೈತನ ಆರು ಕುರಿಗಳನ್ನು ಬಲಿಪಡೆದ ಬೀದಿನಾಯಿಗಳು
ಕೋಡಂಬಳ್ಳಿ ಗ್ರಾಮದ ಬಡರೈತನ ಆರು ಕುರಿಗಳನ್ನು ಬಲಿಪಡೆದ ಬೀದಿನಾಯಿಗಳು

ಚನ್ನಪಟ್ಟಣ: ಕೋಡಂಬಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಿನೆದಿನೇ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚಿಗೆ ಹತ್ತು ಕುರಿಗಳನ್ನು ಬಲಿ ಪಡೆದ ಗಾಯ ಮಾಸುವ ಮುನ್ನವೇ ಮೂರು ಫಲ ದ (ಗರ್ಭಿಣಿ)

ಕೋಡಂಬಳ್ಳಿ ಗ್ರಾಮದಲ್ಲಿ ನಾಯಿಗಳಿಗೆ ಬಲಿಯಾದ ಕುರಿಗಳ ಹಿಂಡು. ಕುರಿಗಾಯಿಯ ಅಳಲು, ಗ್ರಾಮ ಪಂಚಾಯತಿ ಅಧಿಕಾರಗಳ ಮೇಲೆ ಗ್ರಾಮಸ್ಥರು ಗರಂ
ಕೋಡಂಬಳ್ಳಿ ಗ್ರಾಮದಲ್ಲಿ ನಾಯಿಗಳಿಗೆ ಬಲಿಯಾದ ಕುರಿಗಳ ಹಿಂಡು. ಕುರಿಗಾಯಿಯ ಅಳಲು, ಗ್ರಾಮ ಪಂಚಾಯತಿ ಅಧಿಕಾರಗಳ ಮೇಲೆ ಗ್ರಾಮಸ್ಥರು ಗರಂ

ತಾಲ್ಲೂಕಿನ ಕೋಡಂಬಳ್ಳಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಬಸವರಾಜು ಎಂಬುವವರು, ತೋಟದಲ್ಲಿ ಮೇಯಲು ಬಿಟ್ಟಿದ್ದ ಕುರಿಗಳ ಮೇಲೆ, ಏಕಾಏಕಿ ಹದಿನೆಂಟು ನಾಯಿಗಳ ಹಿಂಡು ಎರಗಿ ದಾಳಿ ನಡೆಸಿವೆ. ಹತ್ತು ಕುರಿಗಳ

ಅರಣ್ಯ ಇಲಾಖೆಯ ಪಕ್ಕದ ಜಮೀನಿಗೆ ನುಗ್ಗಿದ ಒಂಟಿ ಸಲಗ. ಲಕ್ಷಾಂತರ ರೂ ಬೆಳೆ ನಾಶ. ಪ್ರಾಣಕ್ಕೆ ಎರವಾದರೆ ಇಲಾಖೆಯೇ ಹೊಣೆ ರುದ್ರಪ್ಪ
ಅರಣ್ಯ ಇಲಾಖೆಯ ಪಕ್ಕದ ಜಮೀನಿಗೆ ನುಗ್ಗಿದ ಒಂಟಿ ಸಲಗ. ಲಕ್ಷಾಂತರ ರೂ ಬೆಳೆ ನಾಶ. ಪ್ರಾಣಕ್ಕೆ ಎರವಾದರೆ ಇಲಾಖೆಯೇ ಹೊಣೆ ರುದ್ರಪ್ಪ

ತಾಲ್ಲೂಕಿನಾದ್ಯಂತ ಆನೆಗಳ ಉಪಟಳ ಹೆಚ್ಚಾಗುತ್ತಲೆ ಇದೆ. ಶಾಶ್ವತವಾಗಿ ಆನೆಗಳನ್ನು ಅಟ್ಟದ ಕಾರಣ ಹಾಗೂ ಅರಣ್ಯದಂಚಿನಲ್ಲಿ ಸೂಕ್ತ ಭದ್ರತೆ ಇಲ್ಲದ ಕಾರಣ ಹೋದ ಪುಟ್ಟಾ, ಬಂದಾ ಪುಟ್ಟ ಎಂಬಂತಾಗಿದೆ. ಭಾನುವಾರ

Top Stories »  

Top ↑