Tel: 7676775624 | Mail: info@yellowandred.in

Language: EN KAN

    Follow us :


ತೆಂಗು ಸಂಸ್ಕರಣೆ ವ್ಯವಸ್ಥೆಯನ್ನು ಖುದ್ದು ವೀಕ್ಷಿಸಿದ ಸಚಿವರು

Posted date: 13 Aug, 2021

Powered by:     Yellow and Red

ತೆಂಗು ಸಂಸ್ಕರಣೆ ವ್ಯವಸ್ಥೆಯನ್ನು ಖುದ್ದು ವೀಕ್ಷಿಸಿದ ಸಚಿವರು

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮೈಲನಾಯಕನ ಹೊಸಹಳ್ಳಿ ಗ್ರಾಮದಲ್ಲಿರುವ ರೈತರ ಉತ್ಪಾದಕರ ಸಂಸ್ಥೆ (FPO) ಯ ಸಂಸ್ಕರಣಾ ಘಟಕಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರೈತರ ಜತೆ ಸಂವಾದ ನಡೆಸಿದರು. 


ರೈತರ ಉತ್ಪಾದಕರ ಸಂಸ್ಥೆಯು ನೇರವಾಗಿ ರೈತರಿಂದಲೇ ಖರೀದಿಸಿದ ತೆಂಗಿನ ಕಾಯಿಗಳನ್ನು ಸಂಸ್ಕರಿಸಿ, ಅವುಗಳನ್ನು ಮಧ್ಯವರ್ತಿಗಳ ಪ್ರಮೇಯವಿಲ್ಲದೆ ಗ್ರಾಹಕರಿಗೇ ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದು, ಈ ಪ್ರಯೋಗ ಯಶಸ್ವಿ ಮತ್ತು ಲಾಭದಾಯಕವೂ ಆಗಿದೆ. ಇಲ್ಲಿ ತೆಂಗಿನ ಕಾಯಿ ಸುಲಿದು ಕ್ರಮಬದ್ಧವಾಗಿ ಸಂಸ್ಕರಣೆ ಮಾಡಿ ಬೇರೆಡೆಗೆ ಪೂರೈಸುವ ವಿಧಾನವನ್ನು ಸಚಿವರು ಖುದ್ದು ವೀಕ್ಷಣೆ ಮಾಡಿದರು. 


ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, “ಈ ಪ್ರದೇಶದಲ್ಲಿ ಮೊದಲಿನಿಂದಲೂ ತೆಂಗು ಬೆಳೆಯನ್ನು ರೈತರು ಹೆಚ್ಚಾಗಿ ನೆಚ್ಚಿಕೊಂಡಿದ್ದಾರೆ. ಅನೇಕ ದಶಕಗಳಿಂದ ನ್ಯಾಯಸಮ್ಮತ ಬೆಲೆ ಸಿಗದೇ ಕಷ್ಟಕ್ಕೆ ಸಿಲುಕಿದ್ದ ರೈತರು ಸುಲಿದಿರುವ ಒಂದು ಕೆಜಿ ತೆಂಗಿನ ಕಾಯಿಯನ್ನು ಕೇವಲ 25 ರೂ.ಗಳಿಗೆ ಮಾತ್ರ ಮಾರುವಂಥಹ ಸ್ಥಿತಿ ಇತ್ತು. ಆದರೆ ದಲ್ಲಾಳಿಗಳು ಇದನ್ನೇ ಲಾಭ ಮಾಡಿಕೊಂಡಿದ್ದರು” ಎಂದರು. 


ಈಗ ಕೃಷಿ ಕಲ್ಪದಂಥ ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿ ತಲೆಎತ್ತಿರುವ ರೈತರ ಉತ್ಪಾದಕರ ಸಂಸ್ಥೆಯು ನೇರವಾಗಿ ರೈತರಿಂದಲೇ ಒಂದು ಕೆಜಿ ತೂಕದ ಸುಲಿದಿರುವ ತೆಂಗಿಗೆ 35 ರೂ.ವರೆಗೂ ಬೆಲೆ ಕೊಟ್ಟು ಖರೀದಿ ಮಾಡುತ್ತಿದೆ. ಅಲ್ಲದೆ, ಇಲ್ಲಿನ ತೆಂಗನ್ನು ಅತ್ಯುತ್ತಮವಾಗಿ ಸಂಸ್ಕರಣೆ ಮಾಡಿ ಆಂಧ್ರ ಪ್ರದೇಶದ ವೈಜಾಕ್ (ವಿಶಾಖಪಟ್ಟಣಂ) ನಗರಕ್ಕೆ ಪೂರೈಕೆ ಮಾಡುತ್ತಿದೆ. ಇಲ್ಲಿಂದ ವಾರಕ್ಕೊಮ್ಮೆ ಒಂದು ಟ್ರಕ್ ತೆಂಗಿನ ಕಾಯಿ ಅಲ್ಲಿಗೆ ಸರಬರಾಜು ಆಗುತ್ತಿದ್ದು, ರೈತರಿಗೆ ಉತ್ತಮ ಬೆಲೆ ಸಿಗುತ್ತಿದೆ ಎಂದು ಸಚಿವರು ತಿಳಿಸಿದರು. 


ಜಿಲ್ಲೆಯಲ್ಲಿ ರೈತರು ಮತ್ತು ಬಳಕೆದಾರರ ನಡುವೆ ರೈತರ ಉತ್ಪಾದಕರ ಸಂಸ್ಥೆ (FPO) ಮೂಲಕ ಉತ್ತಮ ಲಿಂಕ್ ಏರ್ಪಟ್ಟದ್ದು, ಇದಕ್ಕೆ ಇನ್ನಷ್ಟು ಶಕ್ತಿ ತುಂಬಲಾಗುವುದು. ಸರಕಾರದಿಂದ ಹೆಚ್ಚು ಪ್ರೋತ್ಸಾಹ ಕೊಡಲಾಗುವುದು ಎಂದ ಅವರು, ಈ ವ್ಯವಹಾರದಲ್ಲಿ ರೈತರ ಉತ್ಪಾದಕರ ಸಂಸ್ಥೆಗೆ ತನ್ನ ಖರ್ಚೆಲ್ಲ ಕಳೆದು ಅತ್ಯಲ್ಪ ಪ್ರಮಾಣದ ಲಾಭ ಇರುತ್ತದೆ ಎಂದರು. 


ಕೃಷಿ ಕಲ್ಪ ಫೌಂಡೇಶನ್ ಅಧ್ಯಕ್ಷ ಪ್ರಶಾಂತ ಪ್ರಕಾಶ್ ಅವರು ಮಾಡಿರುವ ಸಾಧನೆಯನ್ನು ಕೊಂಡಾಡಿದ ಅವರು, ಸುಧಾರಿತ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಕೃಷಿ ಮಾಡದಿದ್ದರೆ ಭವಿಷ್ಯದಲ್ಲಿ ಆಹಾರದ ಅಗತ್ಯವನ್ನು ನೀಗಿಸುವುದು ಕಷ್ಟವಾಗುತ್ತದೆ ಎಂದು ಸಚಿವರು ತಿಳಿಸಿದರು. 


ಈ ಸಂದರ್ಭದಲ್ಲಿ ಕೃಷಿ ಕಲ್ಪ ಪ್ರತಿಷ್ಠಾನದ ಅಧ್ಯಕ್ಷ ಪ್ರಶಾಂತ ಪ್ರಕಾಶ, ಜಿಲ್ಲಾಧಿಕಾರಿ ರಾಕೇಶ್ ಕುಮಾರ, ಜಿಲ್ಲಾ ಪಂಚಾಯಿತಿ ಸಿಇಓ ಇಕ್ರಂ, ಕೃಷಿ ಕಲ್ಪ ಫೌಂಡೇಷನ್ ಸಿಇಓ ಸಿ.ಎಂ.ಪಾಟೀಲ್, ಅರ್ಕಾವತಿ ಎಫ್ ಪಿ ಒ ಸಿಇಓ ವಿನುತಾ, ತಹಶಿಲ್ದಾರ್ ನಾಗೇಶ್, ಇಓ ಚಂದ್ರ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑