Tel: 7676775624 | Mail: info@yellowandred.in

Language: EN KAN

    Follow us :


ನವೀನತೆಯ ಪಶುಕೊಟ್ಟಿಗೆ ಪ್ರಾಜೆಕ್ಟ್. ರಾಷ್ಟ್ರಪ್ರಶಸ್ತಿಗೆ ಭಾಜನರಾದ ವಿದ್ಯಾರ್ಥಿ

Posted date: 25 Sep, 2021

Powered by:     Yellow and Red

ನವೀನತೆಯ ಪಶುಕೊಟ್ಟಿಗೆ ಪ್ರಾಜೆಕ್ಟ್. ರಾಷ್ಟ್ರಪ್ರಶಸ್ತಿಗೆ ಭಾಜನರಾದ ವಿದ್ಯಾರ್ಥಿ

ಮೂಲ ಮತ್ತು ಹೈನೀದ್ಯೋಮವನ್ನೇ ನೆಚ್ಚಿಕೊಂಡಿರುವ ರೈತರಿಗೆ ಉಪಯುಕ್ತವಾಗುವಂತ ಆಧುನಿಕ ದನದ ಕೊಟ್ಟಿಗೆಯನ್ನು ಆವಿಷ್ಕಾರಗೊಳಿಸಿ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿರುವ ವಿದ್ಯಾರ್ಥಿ ದೇವೇಗೌಡ ಅವರಿಗೆ ಜಿಲ್ಲಾಡಳಿತ ಅಭಿನಂದನೆ ಸಲ್ಲಿಸಿದೆ.


ಕನಕಪುರ ತಾಲ್ಲೂಕಿನ ಕಾಡಂಚಿನ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಯೊಬ್ಬ ಅಭಿವೃದ್ಧಿಪಡಿಸಿರುವ ''ಆಧುನಿಕ ದನದ ಕೊಟ್ಟಿಗೆ'' ಪ್ರಾಜೆಕ್ಟ್‌ಗೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಕನಕಪುರ ತಾಲ್ಲೂಕು ಮರಳವಾಡಿ ಹೋಬಳಿ ಕಲ್ಲನಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ, ಪ್ರಸ್ತುತ ಎಕ್ಸ್‌ ಮುನಿಷಿಪಲ್‌ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿ ಯು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ದೇವೇಗೌಡ ಹೈನುಗಾರಿಕೆ ರೈತರಿಗೆ ಉಪಯುಕ್ತವಾಗುವಂತ ಆಧುನಿಕ ದನದ ಕೊಟ್ಟಿಗೆಯನ್ನು ಆವಿಷ್ಕಾರಗೊಳಿಸಿ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿರುವ ವಿದ್ಯಾರ್ಥಿಯಾಗಿದ್ದಾನೆ.


 ಗ್ರಾಮೀಣ ಭಾಗದ ರೈತರು ಕಾಡು ಪ್ರಾಣಿಗಳಿಂದ ಎದುರಿಸುತ್ತಿದ್ದ ಸಮಸ್ಯೆ ಮತ್ತು ಬೆಂಕಿ ಅವಘಡ, ರಾಸುಗಳ ಕಳ್ಳತನ, ಅವಮಾನ ವೈಪರೀತ್ಯ ಮೊದಲಾದ ತೊಂದರೆಗಳಿಂದ ಹಸುಗಳನ್ನು ರಕ್ಷಣೆ ಮಾಡುವುದು ಹೇಗೆ ಎಂಬುದರ ಬಗ್ಗೆ ಅಧ್ಯಯನ ನಡೆಸಿ ಕಡಿಮೆ ವೆಚ್ಚದಲ್ಲಿ ರೈತ ಸ್ನೇಹಿಯಾಗಿ ದನದ ಕೊಟ್ಟಿಗೆ ನಿರ್ಮಾಣ ಮಾಡಬಹುದು ಎಂಬುದನ್ನು ತನ್ನ ಪ್ರಾಜೆಕ್ಟ್ ಮೂಲಕ ತೋರಿಸಿದ್ದಾನೆ. ಪ್ರತಿವರ್ಷ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ನಡೆಯುವ ವಿಜ್ಞಾನ ಮತ್ತು ವೈಜ್ಞಾನಿಕ ಆವಿಷ್ಕಾರ ಮೇಳದಲ್ಲಿ 2019-20 ನೇ ಸಾಲಿನಲ್ಲಿ ದೇವೇಗೌಡ ತಾನು ಮಾಡಿರುವ ಆಧುನಿಕ ದನದ ಕೊಟ್ಟಿಗೆಯನ್ನು ಜಿಲ್ಲಾ ಮಟ್ಟಕ್ಕೆ ಕಳಿಸಿಕೊಟ್ಟಿದ್ದ. ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಯಿತು. ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಸುಮಾರು 550 ಪ್ರಾಜೆಕ್ಟಗಳು ಆಯ್ಕೆಯಾಗಿದ್ದವು.


 ಅದರಲ್ಲಿ ದೇವೇಗೌಡನ ಪ್ರಾಜೆಕ್ಟ್‌ ಸೇರಿತ್ತು. ಕೋವಿಡ್‌ ಕಾರಣದಿಂದ ರಾಷ್ಟ್ರಮಟ್ಟದ ಸ್ಪರ್ಧೆಯನ್ನು ಮುಂದೂಡಿ ಆನಂತರದಲ್ಲಿ ಆನ್‌ಲೈನ್‌ ಮೋಡ್‌ನಲ್ಲಿ ನಡೆಸಿ ಇದೇ ಸ್ಪೆಪ್ಟಂಬರ್‌ 8 ರಂದು ಫಲಿತಾಂಶವನ್ನು ಪ್ರಕಟಮಾಡಲಾಯಿತು.


ದೇಶದ 60 ಪ್ರಾಜೆಕ್ಟಗಳು ಆಯ್ಕೆಯಾಗಿದ್ದು ಕರ್ನಾಟಕಕ್ಕೆ 5 ಸ್ಥಾನಗಳು ಲಭಿಸಿವೆ.

 ಅದರಲ್ಲಿ ದೇವೇಗೌಡನ ಪ್ರಾಜೆಕ್ಟ್‌ 3 ನೇ ಸ್ಥಾನವನ್ನು ಪಡೆದುಕೊಂಡಿದೆ. ರಾಜ್ಯದ ಗಡಿಗ್ರಾಮದ ಕಾಡಂಚಿನಲ್ಲಿ ಇರುವ ಬಡ ಕೂಲಿ ಕುಟುಂಬದಿಂದ ಬಂದಂತಹ ದೇವೇಗೌಡ ಆವಿಷ್ಕಾರ ಮಾಡಿರುವ ಆಧುನಿಕ ದನದ ಕೊಟ್ಟಿಗೆ ಪ್ರಾಜೆಕ್ಟ್‌ ದೇಶದಲ್ಲಿ ಆಯ್ಕೆಯಾಗಿ 23 ನೇ ಸ್ಥಾನವನ್ನು ಪಡೆದು, ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿ ರಾಜ್ಯಕ್ಕೆ ಕೀರ್ತಿ ತಂದಿರುವುದು ತಾಲ್ಲೂಕಿನ ಹೆಮ್ಮೆಯಾಗಿದೆ.


ಶಾಲೆಯ ವಿಜ್ಞಾನ ಶಿಕ್ಷಕ ಶಿವಶಂಕರಾಚಾರಿ.ಕೆ ಅವರ ಮಾರ್ಗದರ್ಶನದಲ್ಲಿ ದೇವೇಗೌಡ ಪಶು ಆಸ್ಪತ್ರೆ ಮತ್ತು ಗ್ರಾಮ ಪಂಚಾಯಿತಿ ಹಾಗೂ ಹೈನುಗಾರಿಕೆ ರೈತರನ್ನು ಸಂಪರ್ಕಿಸಿ ದನದ ಕೊಟ್ಟಿಗೆಯಲ್ಲಿ ಎದುರಾಗಬಹುದಾದ ಎಲ್ಲಾ ಸಮಸ್ಯೆಗಳ ಬಗ್ಗೆ ದೀರ್ಘವಾಗಿ ಅಧ್ಯಯನ ನಡೆಸಿದ್ದಾನೆ. ಎಲ್ಲಾ ರೀತಿಯಿಂದ ಜಾನುವಾರುಗಳನ್ನು ರಕ್ಷಣೆ ಮಾಡುವ ಕಾರ್ಯತಂತ್ರದೊಂದಿಗೆ ಈ ಆವಿಷ್ಕಾರ ಮಾಡಿದ್ದಾನೆ.

 ಕೊಟ್ಟಿಗೆಯಲ್ಲಿ ಇರುವ ರಾಸು ಕಳ್ಳತನ, ಬೆಂಕಿ ಅವಘಡವಾದರೆ ಕರೆಗಂಟೆ ಬಾರಿಸುತ್ತೆ, ಬೇಸಿಗೆ ಹಾಗೂ ಚಳಿಗಾಲಕ್ಕೆ ಹವನಿಯಂತ್ರಿತವಾಗುತ್ತೆ. ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂ‌ಗ್‌ ವ್ಯವಸ್ಥೆ, ವಿದ್ಯುತ್‌ ದೀಪ ಹಾಗೂ ಪ್ಯಾನ್‌ ವ್ಯವಸ್ಥೆ, ಮೋಟಾರ್‌ ಚಾಲಿತ ಸಗಣಿ ತಳ್ಳುವುದು, ರಬ್ಬರ್‌ ನೆಲಹಾಸು, ಕಾಡು ಪ್ರಾಣಿಯನ್ನು ತಡಯಬಲ್ಲ ಕಿಟಕಿ ವ್ಯವಸ್ಥೆಯನ್ನು ಈ ಆಧುನಿಕ ದನದ ಕೊಟ್ಟಿಗೆ ಹೊಂದಿದೆ.


 ಇದನ್ನು ಅತ್ಯಂತ ಕಡಿಮೆ ಖರ್ಚಿನಲ್ಲಿ ನಿರ್ಮಿಸಿಕೊಳ್ಳಬಹುದಾಗಿದ್ದು ರೈತ ಸ್ನೇಹಿ ಆಗಿರುವ ಈ ಪ್ರಾಜೆಕ್ಟ್‌ ನನ್ನು ಗ್ರಾಮ ಪಂಚಾಯಿತಿಗಳ ಮೂಲಕ ಅನುಷ್ಠಾನಕ್ಕೆ ರಾಮನಗರ ಜಿಲ್ಲಾ ಪಂಚಾಯಿತಿ, ಕನಕಪುರ ತಾಲ್ಲೂಕು ಪಂಚಾಯಿತಿ ಯೋಜನೆ ರೂಪಿಸುತ್ತಿದೆ.  ರೈತರು ಈ ಪ್ರಾಜೆಕ್ಟ್‌ ನ್ನು ಅನುಷ್ಠಾನಗೊಳಿಸಿಕೊಂಡರೆ ಬೆಂಕಿ ಅವಘಡ, ಕಾಡುಪ್ರಾಣಿಗಳ ದಾಳಿ ಮತ್ತಿತರರ ಸಮಸ್ಯೆಗಳಿಂದ ರಾಸುಗಳನ್ನು ರಕ್ಷಿಸಬಹುದಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑