Tel: 7676775624 | Mail: info@yellowandred.in

Language: EN KAN

    Follow us :


ಅಕಾಲಿಕ ಮಳೆಗೆ ನಲುಗಿದ ರೈತರು, ಜಿಲ್ಲೆಯಲ್ಲಿ 27 ಕೋಟಿ ರೂ. ಮೌಲ್ಯದ ಬೆಳೆ ನಷ್ಟ

Posted date: 27 Nov, 2021

Powered by:     Yellow and Red

ಅಕಾಲಿಕ ಮಳೆಗೆ ನಲುಗಿದ ರೈತರು, ಜಿಲ್ಲೆಯಲ್ಲಿ 27 ಕೋಟಿ ರೂ. ಮೌಲ್ಯದ ಬೆಳೆ ನಷ್ಟ

ರಾಮನಗರ: ಕೈಗೆ ಬಂದು ತುತ್ತು ಬಾಯಿಗೆ ಇಲ್ಲ ಎಂಬಂತಹ ಸ್ಥಿತಿ ರೇಷ್ಮನಾಡು ರಾಮನಗರ ಜಿಲ್ಲೆಯ ರೈತರದ್ದಾಗಿದೆ. ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ಸುರಿದ  ಮಳೆಯಿಂದಾಗಿ ಅನ್ನದಾತ ತತ್ತರಿಸಿದ್ದು, ಕೈಗೆ ಬರಬೇಕಿದ್ದ ಫಸಲು ಕಣ್ಣ ಮುಂದೆಯೇ ನೆಲಕಚ್ಚುತ್ತಿದೆ. ಜಿಲ್ಲೆಯಲ್ಲಿ 41 ಹೆಕ್ಟೇರ್ ಗೂ ಅಧಿಕ ಪ್ರದೇಶದಲ್ಲಿ ಬೆಳೆದಿದ್ದ ರಾಗಿ, ಭತ್ತ ಸೇರಿದಂತೆ ವಿವಿಧ ಬೆಳೆ ನಷ್ಟವಾಗಿದೆ.


ಜಿಲ್ಲೆಯಾದ್ಯಂತ ಸುರಿದ ಅಕಾಲಿಕ ಮಳೆಯಿಂದಾಗಿ ಕೋಟ್ಯಾಂತರ ಮೌಲ್ಯದ ಬೆಳೆ ನಷ್ಟ ಉಂಟಾಗಿದೆ. ಇನ್ನು ಕಳೆದ ಹದಿನೈದು ದಿನಗಳಿಂದ ಬೀಳುತ್ತಿರುವ ಭಾರಿ ಮಳೆಯಿಂದ ಕೆರೆ, ಕುಂಟೆಗಳು ಕಟ್ಟೆಗಳು ಒಡೆದು ಅಪಾರ ಪ್ರಮಾಣದ ನೀರು ಕೃಷಿ ಜಮೀನಿಗೆ ನುಗ್ಗಿದೆ ಅಪಾರ ಬೆಳೆ ಹಾನಿ ಸಂಭವಿಸಿದೆ. 


ಮಳೆಯಿಂದಾಗಿ ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ರೇಷ್ಮೆ ಮತ್ತಿತರ ಬೆಳೆಗಳು ಮಣ್ಣು ಪಾಲಾಗುತ್ತಿವೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ಗದ್ದೆಯ ಒಳಗೆ ಕಾಲಿಡಲು ಸಹ ತೊಂದರೆಯಾಗಿದ್ದು ರಾಗಿ ಭತ್ತ ವಡೆ ಕಡೆದು ನೀರಿಗೆ ಬಿದ್ದು ಕೊಳೆಯುವ ಸ್ಥಿತಿಗೆ ತಲುಪಿದೆ. 


ಶ್ರಮಪಟ್ಟು ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ನೆರವಿಗೆ ಬರಬೇಕಾದ ಕೃಷಿ ಹಾಗೂ ಕಂದಾಯ ಇಲಾಖೆಯವರು ಮಳೆಯಿಂದಾದ ಬೆಳೆ ಹಾನಿ ಕುರಿತು ಸರ್ವೇಗೆ ಮುಂದಾಗಿಲ್ಲ ಎಂದು ರೈತಾಪಿ ವರ್ಗ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕೂಡಲೇ ಜಿಲ್ಲಾಡಳಿತ ನಮ್ಮ ನೆರವಿಗೆ ಧಾವಿಸಿ ಪರಿಹಾರ ನೀಡದಿದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. 


 *27 ಕೋಟಿ ಮೌಲ್ಯದ ಬೆಳೆ ಹಾನಿ* 

ಅಕಾಲಿಕ ಮಳೆಯ ವೈಪರೀತ್ಯದಿಂದಾಗಿ ಎಲ್ಲಾ ವಿಧದ ಬೆಳೆಗಳಿಗೂ ಮಾರಕವಾಗಿ ಪರಿಣಮಿಸಿದ್ದು ರೈತರು ಹೈರಾಣಾಗಿದ್ದಾರೆ. 41 ಸಾವಿರಕ್ಕೂ ಹೆಚ್ಚು ಹೆಕ್ಟೇರ್‌ನಲ್ಲಿ ರಾಗಿ ಬೆಳೆದಿದ್ದು, 178 ಹೆಕ್ಟೇರ್ ಪ್ರದೇಶದ ಭತ್ತ, 454 ಹೆಕ್ಟೇರ್‌ನ ಮುಸುಕಿನ ಜೋಳ, 370 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲಾಗಿದೆ.


ಇನ್ನು ಅತಿವೃಷ್ಟಿಯಿಂದಾಗಿ 41 ಸಾವಿರ ಹೆಕ್ಟೇರ್‌ನಲ್ಲಿ ಬೆಳೆದಿದ್ದ ಹೆಚ್ಚು ಪ್ರದೇಶದಲ್ಲಿದ್ದ ವಿವಿಧ ಬೆಳೆಗಳಿಗೆ ಹಾನಿಯಾಗಿದೆ. ಬಿತ್ತನೆ ಮಾಡಿದ ಶೇ. 58 ರಷ್ಟು ಬೆಳೆಹಾನಿಯಾಗಿದೆ. ಇನ್ನು ನವೆಂಬರ್‌ನಲ್ಲಿ ವಾಡಿಕೆಗಿಂತ 270 ಮಿಲಿಲೀಟರ್ ಹೆಚ್ಚು ಮಳೆ ಸುರಿದಿದೆ. ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸರ್ವೆಗೆ ಮುಂದಾಗಿದ್ದು, ಪ್ರಾಥಮಿಕ ವರದಿಯನ್ನ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ರವಾನಿಸಿದ್ದೇವೆ. ಅಂದಾಜು 27ಕೋಟಿಗೂ ಹೆಚ್ಚು ಬೆಳೆ ನಷ್ಟವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದ್ರ  ತಿಳಿಸಿದರು.


ಒಟ್ಟಾರೆ ಹಿಂಗಾರು ಅವಧಿ ಮುಗಿದಿದ್ದರೂ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೆಳೆಗಳು ನೆಲಕಚ್ಚಿದ್ದು, ಇದರಿಂದಾಗಿ ರೈತ ಸಮುದಾಯ ಆತಂಕಕ್ಕೀಡಾಗಿದೆ. ಮಳೆಹಾನಿ ಕುರಿತು ಸರ್ವೇಗೆ ಮುಂದಾಗಬೇಕಿದ್ದ ಅಧಿಕಾರಿಗಳು ಅವೈಜ್ಙಾನಿಕವಾಗಿ ಕೇವಲ ಪ್ರಾಥಮಿಕ ವರದಿ ಸಲ್ಲಿಸಿದೆ ಎಂದು ಜಿಲ್ಲೆಯ ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸರ್ಕಾರ ಅನ್ನದಾತನ ನೆರವಿಗೆ ಧಾವಿಸಬೇಕಿದೆ ಎಂಬುದು ರೈತರ ಒತ್ತಾಸೆಯಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑