Tel: 7676775624 | Mail: info@yellowandred.in

Language: EN KAN

    Follow us :


ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ ಡಿಸೆಂಬರ್ 1 ರಿಂದ ರೈತರಿಂದ ನೋಂದಣಿ ಆರಂಭಿಸಲು ಡಿಸಿ ಸೂಚನೆ

Posted date: 30 Nov, 2021

Powered by:     Yellow and Red

ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ ಡಿಸೆಂಬರ್ 1 ರಿಂದ ರೈತರಿಂದ ನೋಂದಣಿ ಆರಂಭಿಸಲು ಡಿಸಿ ಸೂಚನೆ

ರಾಮನಗರ, ನ.30/21:  ಬೆಂಬಲ ಬೆಲೆ ಯೋಜನೆಯಡಿ ರೈತರು ಬೆಳೆದ ಭತ್ತ ಖರೀದಿಸಲು ರಾಮನಗರ, ಚನ್ನಪಟ್ಟಣ, ಮಾಗಡಿ  ಹಾಗೂ ಕನಕಪುರದಲ್ಲಿ ತಾಲ್ಲೂಕುವಾರು ಒಂದರಂತೆ ಡಿಸೆಂಬರ 1 ರಿಂದ 4 ನೋಂದಣಿ ಕೇಂದ್ರ ತೆರೆದು ಕೆಲಸ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.


ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನಿಷ್ಟ ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ ಆರಂಭಿಸುವ ಕುರಿತಂತೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ನಿಗದಿಪಡಿಸಿರುವಂತೆ ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ 1,940/- ರೂ. ಹಾಗೂ ‘ಎ’ ಗ್ರೇಡ್ ಭತ್ತಕ್ಕೆ ಪ್ರತಿ ಕ್ವಿಂಟಾಲ್ 1,960/- ರೂ.ರಂತೆ  ಖರೀದಿಸಲಾಗುವುದು. ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಗುಣಮಟ್ಟಕ್ಕೆ(ಎಫ್‌ಎಕ್ಯೂ) ಅನುಗುಣವಾಗಿ ಭತ್ತವನ್ನು ನೀಡಲು ಇಚ್ಛೆಯನ್ನು ವ್ಯಕ್ತಪಡಿಸುವ ರೈತರ ನೋಂದಣಿ ಕಾರ್ಯ ನಡೆಸುವಂತೆ ಜಿಲ್ಲೆಯ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತದ ಅಧಿಕಾರಿಗಳಿಗೆ ತಿಳಿಸಿದರು.


2020-21ನೇ ಸಾಲಿನಲ್ಲಿ 288 ಜನ ರೈತರು ಭತ್ತ ನೀಡಲು ನೋಂದಣಿ ಮಾಡಿಕೊಂಡಿದ್ದು 237 ಜನ ರೈತರಿಂದ 5,769.90 ಕ್ವಿಂಟಾಲ್ ಭತ್ತ ಸಂಗ್ರಹಿಸಲಾಗಿರುತ್ತದೆ. ಮತ್ತು ರಾಗಿ ಮಾರಾಟಕ್ಕೆ 20780 ಜನ ನೋಂದಣಿ ಮಾಡಿಕೊಂಡಿದ್ದು 19754 ಜನ ರೈತರಿಂದ 403316.80ಕ್ವಿಂಟಾಲ್ ರಾಗಿಯನ್ನು ಕನಿಷ್ಟ ಬೆಂಬಲ ಯೋಜನೆಯಡಿ ಖರೀದಿಸಲಾಗಿರುತ್ತದೆ ಎಂದರು.


ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿಯೂ ನೋಂದಣಿ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಲು ನೌಕರರನ್ನು ನೇಮಿಸಿಕೊಂಡು ರೈತರ ನೋಂದಣಿ ಪ್ರಾರಂಭವಾಗಿರುವ ಬಗ್ಗೆ  ಜಿಲ್ಲೆಯ ಎಲ್ಲಾ ಭಾಗದಲ್ಲಿಯೂ ವ್ಯಾಪಕ ಪ್ರಚಾರ ಮಾಡುವಂತೆ ಹಾಗೂ ಖರೀದಿ ಕೇಂದ್ರಗಳಿಗೆ ಆಗಮಿಸುವ ರೈತರಿಗೆ ಕುಡಿಯುವ ನೀರು ಹಾಗೂ ಇತರೆ ಮೂಲಭೂತ ವ್ಯವಸ್ಥೆ ಮಾಡುವಂತೆ ತಿಳಿಸಿದರು.


ಖರೀದಿ ಕೇಂದ್ರಗಳಿಗೆ ತರಬೇತಿ ಹೊಂದಿದ ಗ್ರೇಡರ್‌ಗಳನ್ನು (ಗುಣಮಟ್ಟ ಪರಿವೀಕ್ಷಕರು) ನೇಮಕ ಮಾಡಲು ಹಾಗೂ ಗ್ರೇಡರ್‌ಗಳು ನಿಯಮಾನುಸಾರ ಸೂಕ್ತ ದಾಖಲೆಗಳನ್ನು ಪಡೆದು ದೃಢೀಕರಣ (ಗುಣಮಟ್ಟ) ಪತ್ರ ನೀಡಲು ಮತ್ತು ಉತ್ತಮ ಗುಣಮಟ್ಟದ ಭತ್ತವನ್ನು ಖರೀದಿಸಲು ವ್ಯವಸ್ಥೆ ಮಾಡುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ತಿಳಿಸಿದರು.


2021-22ನೇ ಸಾಲಿಗೆ ಬಿತ್ತನೆಯಾಗಿರುವ ಭತ್ತ ಬೆಳೆಯ ನಿರೀಕ್ಷಿತ ಫಸಲಿಗೆ ಸಂಬಂಧಿಸಿದಂತೆ, ಮಳೆಯ ಕಾರಣ ಭತ್ತದ ಬೆಳೆಯ ಫಸಲು ಇಳುವರಿಯು ಇಳಿಮುಖವಾಗಿದ್ದು, ಭತ್ತ 134600.00 ಕ್ವಿಂಟಾಲ್ ಫಸಲನ್ನು ನಿರೀಕ್ಷಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ಸಭೆಗೆ ಮಾಹಿತಿ ನೀಡಿದರು.


ಸಭೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕಿ ಸೌಮ್ಯ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ಸಹಾಯಕ ವ್ಯವಸ್ಥಾಪಕ ಜಯಣ್ಣ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑