Tel: 7676775624 | Mail: info@yellowandred.in

Language: EN KAN

    Follow us :


ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ. ಡಾ ರವಿಶಂಕರ್

Posted date: 01 Dec, 2021

Powered by:     Yellow and Red

ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ. ಡಾ ರವಿಶಂಕರ್

ಚನ್ನಪಟ್ಟಣ: ಕಾಲು ಬಾಯಿ ಜ್ವರದ ಪ್ರಕರಣಗಳಿಂದ ಸೀಮೆಹಸುಗಳು ಅಕಾಲ ಮರಣಕ್ಕೆ ತುತ್ತಾಗುವುದನ್ನು ತಡೆಯಲು ಕಡ್ಡಾಯವಾಗಿ ಲಸಿಕೆ ಹಾಕಿಸಿ ಎಂದು ಬಿ.ವಿ. ಹಳ್ಳಿ ಪಶು ವೈದ್ಯ ಆಸ್ಪತ್ರೆ ವೈದ್ಯ ಡಾ. ರವಿಶಂಕರ್  ತಿಳಿಸಿದರು.


ಅವರು ಬುಧವಾರ ತಾಲೂಕಿನ ದ್ಯಾವಪಟ್ಟಣ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಮತ್ತು ಗ್ರಾಮದ ಎಂಪಿಸಿಎಸ್  ಆಶ್ರಯದಲ್ಲಿ ಕಾಲು ಜ್ವರಕ್ಕೆ ಸೀಮೆ ಹಸುಗಳಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಸೀಮೆಹಸುಗಳ ಮಾಲೀಕರು ಲಸಿಕೆ ಹಾಕಿಸಿದರೆ ಹಾಲು ಕಡಿಮೆ ನೀಡುತ್ತದೆ ಎಂಬ ಮೂಢನಂಬಿಕೆಯಿಂದ ಲಸಿಕೆ ಹಾಕಿಸಲು ಹಿಂದೇಟು ಹಾಕುತ್ತಾರೆ. ಈ ರೀತಿ ಮಾಡುವುದರಿಂದ ಒಂದು ವೇಳೆ ಕಾಲು ಬಾಯಿಜ್ವರದಿಂದ ಮೃತಪಟ್ಟರೆ ರೈತರ ಕುಟುಂಬಗಳು ಬೀದಿಪಾಲಾಗುತ್ತವೆ ಎಂದ ಅವರು, ವೈರಸ್‌, ಬ್ಯಾಕ್ಟೀರಿಯಾಗಳಿಂದ ಹರಡುವ ಈ ರೋಗ ಒಂದು ಹಸುವಿನಿಂದ ಇನ್ನೊಂದು ಹಸುವಿಗೆ ಹರಡುತ್ತದೆ. ಇದರ ರಿಂದ ಲಕ್ಷಾಂತರ ರೂ. ಖರ್ಚು ಮಾಡಿ ಖರೀದಿ ಮಾಡಿರುವ ಸೀಮೆ ಹಸುಗಳು ಮೃತಪಡುತ್ತವೆ. ಇದರಿಂದ ಹಾಲು ಉತ್ಪಾದಕರು ಭಾರಿ ನಷ್ಟಕ್ಕೆ ಗುರಿಯಾಗುತ್ತಾರೆ ಎಂದು ಹೇಳಿದರು.


ವಿದೇಶಗಳಲ್ಲಿ ಸೀಮೆ ಹಸುಗಳಿಗೆ ಇಂತಹ ಕಾಯಿಲೆಗಳು ವ್ಯಾಪಿಸಿದರೆ ಸಾಮೂಹಿಕವಾಗಿ ಸಾಯಿಸಲಾಗುತ್ತದೆ. ಆದರೆ ನಮ್ಮ ದೇಶದಲ್ಲಿ ಇಂತಹ ಪದ್ಧತಿ ಇಲ್ಲ. ಅದ್ದರಿಂದ ತಮ್ಮ ರಾಸುಗಳ ಆರೋಗ್ಯದ ಕಡೆ ಹೆಚ್ವಿನ ಗಮನ‌ ನೀಡಬೇಕೆಂದರು.


 *ಉಚಿತವಾಗಿ ಲಸಿಕೆ:* ಹಾಲು ಉತ್ಪಾದಕರ ಸಹಕಾರ ಸಂಘದ ಡಾ. ಮಲ್ಲೇಶ್ ದ್ಯಾವಪಟ್ಟಣ ಮಾತನಾಡಿ, ಸೀಮೆ ಹಸುಗಳ ಮಾಲೀಕರು ಕಾಲು ಬಾಯಿ ಜ್ವರಕ್ಕೆ ಲಸಿಕೆ ಹಾಕಿಸಲು ಹೆದರಬೇಕಾಗಿಲ್ಲ. ಕಾಲು ಬಾಯಿ ಜ್ವರ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸೀಮೆಹಸುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತದೆ ಎಂದ ಅವರು, ಅನೇಕ ರೈತರು ಬ್ಯಾಂಕ್‌, ಖಾಸಗಿ ಹಣ ಕಾಸು ಸಂಸ್ಥೆಗಳಿಂದ ಸಾಲ ಮಾಡಿ ಹಸುಗಳನ್ನು ಖರೀದಿ ಮಾಡಿರುತ್ತಾರೆ. ಒಂದು ವೇಳೆ ಹಸುಗಳು ಮೃತಪಟ್ಟರೆ ರೈತರ ಕುಟುಂಬಗಳು ಬೀದಿಪಾಲಾಗುತ್ತವೆ ಎಂದರು.


ಸಂಘದ ಸಿಇಓ ಕೃಷ್ಣಕುಮಾರ್, ಪಶುವೈದ್ಯ ಇಲಾಖೆಯ ಸಿಬ್ಬಂದಿ, ಸಂಘದ  ನಿರ್ದೇಶಕರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑