Tel: 7676775624 | Mail: info@yellowandred.in

Language: EN KAN

    Follow us :


ಅರಳಾಪುರ ಸುತ್ತ ರೈತರ ಪಂಪ್ ಸೆಟ್ ಗೆ ಕನ್ನ, ಬೆಲೆಬಾಳುವ ಎಲೆಕ್ಟ್ರಿಕ್ ವಸ್ತು-ಕಾಪರ್ ವೈಯರ್ ಕದಿಯುತ್ತಿರುವ ಖದೀಮರು

Posted date: 01 Jan, 2022

Powered by:     Yellow and Red

ಅರಳಾಪುರ ಸುತ್ತ ರೈತರ ಪಂಪ್ ಸೆಟ್ ಗೆ ಕನ್ನ, ಬೆಲೆಬಾಳುವ ಎಲೆಕ್ಟ್ರಿಕ್ ವಸ್ತು-ಕಾಪರ್ ವೈಯರ್ ಕದಿಯುತ್ತಿರುವ ಖದೀಮರು

ಚನ್ನಪಟ್ಟಣ:ಜ/01/22. ಕಳೆದ ಇಪ್ಪತ್ತು ದಿನಗಳಿಂದ ಸತತವಾಗಿ ರೈತರ ಕೃಷಿಪಂಪ್ ಸೆಟ್ ಗಳಲ್ಲಿನ ಬೆಲೆಬಾಳುವ ಎಲೆಕ್ಟ್ರಿಕ್ ವಸ್ತುಗಳು ಹಾಗೂ ಕಾಪರ್ ವೈಯರ್ ಗಳನ್ನು ಖದೀಮರು ಕಳ್ಳತನ ಮಾಡುತ್ತಿದ್ದಾರೆ ಎಂದು ರೈತರು ದೂರಿದ್ದಾರೆ.

ತಾಲೂಕಿನ ಅರಳಾಪುರ ಗ್ರಾಮ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಾದ ಬೇವೂರು ಮಂಡ್ಯ, ಬೊಮ್ಮನಾಯಕನಹಳ್ಳಿ, ಕುರಿದೊಡ್ಡಿ, ಹೊಸೂರುದೊಡ್ಡಿ ಗ್ರಾಮದಲ್ಲಿನ ರೈತರ ಕೃಷಿಪಂಪ್ ಸೆಟ್ ಗಳಲ್ಲಿನ ವಸ್ತುಗಳನ್ನು ಕಳ್ಳರು ಕಳ್ಳತನ ಮಾಡುತ್ತಿದ್ದಾರೆ. ಪ್ರಮುಖವಾಗಿ ಅರಳಾಪುರ ಗ್ರಾಮದ 20 ಕ್ಕೂ ಹೆಚ್ಚು ರೈತರ ತೋಟದಲ್ಲಿದ್ದ ಬೋರ್ ವೆಲ್ ನಲ್ಲಿನ ಎಲೆಕ್ಟ್ರಿಕ್ ವಸ್ತುಗಳನ್ನ ಕಳ್ಳರು ಕದ್ದು ಪರಾರಿಯಾಗಿದ್ದಾರೆ.


ಚನ್ನಪಟ್ಟಣದ ಗಡಿ ಗ್ರಾಮಗಳಾಗಿರುವ ಹಿನ್ನೆಲೆಯಲ್ಲಿ, ಈ ಭಾಗದಲ್ಲಿ ಕಳೆದ 15-20 ದಿನಗಳಿಂದ ಕಳ್ಳರ ಕೈಚಳಕ ಜೋರಾಗಿದೆ. ಈ ಬಗ್ಗೆ ನಾವು ಎಂ.ಕೆ. ದೊಡ್ಡಿ ಪೊಲೀಸರ ಗಮನಕ್ಕೂ ವಿಚಾರ ಮುಟ್ಟಿಸಿದ್ದೇವೆ, ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅವರು ದೂರಿದ್ದಾರೆ.


ದಿನನಿತ್ಯವೂ ಸಹ ಒಂದಲ್ಲಾ ಒಂದೂರಿನಲ್ಲಿ, ಮೋಟಾರು, ಸ್ಟಾರ್ಟರ್, ಕಾಪರ್ ಕಳ್ಳತನವಾಗುತ್ತಿವೆ.‌ ಇದರಿಂದಾಗಿ ಕಷ್ಟಕಾಲದಲ್ಲಿರುವ ನಮಗೆ ಬಹಳಷ್ಟು ಸಮಸ್ಯೆಯಾಗುತ್ತಿದೆ. ಹಾಗಾಗಿ ಸಂಬಂಧಿಸಿದ ಪೊಲೀಸರು ನಮ್ಮ ಭಾಗದಲ್ಲಿ ಕಳ್ಳತನವಾಗದಂತೆ ಎಚ್ಚರಿಕೆವಹಿಸಬೇಕೆಂದು ಈ ಭಾಗದ ನೊಂದ ರೈತರು ಮನವಿ ಮಾಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑