Tel: 7676775624 | Mail: info@yellowandred.in

Language: EN KAN

    Follow us :


ವಿಚಾರವನ್ನೇ ನಾಯಕನನ್ನಾಗಿ ಮಾಡಿಕೊಂಡು ಸಂಘಟನೆ ಕಟ್ಟಬೇಕು. ಸಿ ಪುಟ್ಟಸ್ವಾಮಿ

Posted date: 01 Jan, 2022

Powered by:     Yellow and Red

ವಿಚಾರವನ್ನೇ ನಾಯಕನನ್ನಾಗಿ ಮಾಡಿಕೊಂಡು ಸಂಘಟನೆ ಕಟ್ಟಬೇಕು. ಸಿ ಪುಟ್ಟಸ್ವಾಮಿ

80ರ ದಶಕದ ರೈತ ಚಳುವಳಿಯ ಆಶಯದಂತೆ ಜಿಲ್ಲೆಯಲ್ಲಿ ಸದೃಢ ರೈತಚಳುವಳಿಯನ್ನು ಸಂಘಟಿಸಲು ನಿರ್ಧರಿಸಲಾಗಿದೆ. ಈ ಸಂಘಟನೆಗೆ ಯಾವುದೇ ನಾಯಕರಿಲ್ಲ, ವಿಚಾರಗಳೇ ಸಂಘಟನೆಯ ನಾಯಕ ಎಂದು ಹಿರಿಯ ರೈತ ಮುಖಂಡ ಸಿ.ಪುಟ್ಟಸ್ವಾಮಿ ತಿಳಿಸಿದರು.

ಕರ್ನಾಟಕ ರಾಜ್ಯ ರೈತಸಂಘ ಸಮಾನ ಮನಸ್ಕರ ಸಹಭಾಗಿತ್ವದ ಸಂಘಟನೆಗೆ ತಾಲೂಕಿನ ದೇವರಹೊಸಹಳ್ಳಿ, ಮಾಕಳಿ ಹಾಗೂ ಎಲೇಕೇರಿ ಗ್ರಾಮದಲ್ಲಿ ನೂರಾರು ಸದಸ್ಯರನ್ನು ಸೇರ್ಪಡೆಗೊಳಿಸಿ ಮಾತನಾಡಿದರು.


ದೇಶದಲ್ಲಿ ಹೋರಾಟಗಳಿಲ್ಲದೇ ಯಾವುದನ್ನು ಪಡೆಯಲು ಸಾಧ್ಯವಿಲ್ಲ ಎಂಬ ಸನ್ನಿವೇಶ ನಿರ್ಮಾಣವಾಗಿದೆ. ಅನ್ನದಾತ ತನ್ನ ಹಕ್ಕು ಹಾಗೂ ಗೌರವಗಳನ್ನು ಪಡೆಯಲು ಸಂಘಟಿತರಾಗುವ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಹೊಸ ನೆಲೆಗಟ್ಟಿನಲ್ಲಿ ರೈತಸಮುದಾಯವನ್ನು ಸಂಘಟಿಸುವ ಕೆಲಸಕ್ಕೆ ಮುಂದಾಗಿದ್ದೇವೆ. ಇಡೀ ರಾಜ್ಯದಲ್ಲಿ ವಿಚಾರವಂತ ರೈತ ಚಳುವಳಿಯನ್ನು ಸಂಘಟಿಸುವುದು ನಮ್ಮ ಉದ್ದೇಶ. ಮೊದಲ ಹಂತವಾಗಿ ರಾಮನಗರ ಜಿಲ್ಲೆಯಲ್ಲಿ ಈ ಕೆಲಸಕ್ಕೆ ಮುಂದಡಿಯಿಡಲಾಗಿದೆ ಎಂದರು.


80ರ ದಶಕದ ರೈತಸಂಘಟನೆ ಹಾಗೂ ಚಳವಳಿಗೆ ಸಾಕಷ್ಟು ಗೌರವವಿತ್ತು. ಈಗಲೂ ಸಹ ರೈತಸಂಘಕ್ಕೆ ತನ್ನದೇ ಆದ ಮಹತ್ವವಿದೆ. ಸರ್ಕಾರಗಳು ಚಳವಳಿಗಳನ್ನು ದಿಕ್ಕು ತಪ್ಪಿಸುವ, ಹೋರಾಟಗಳನ್ನು ಹತ್ತಿಕ್ಕುವ ಕೆಲಸಗಳನ್ನು ನಿರಂತರವಾಗಿ ನಡೆಸುತ್ತಿದೆ. ರೈತಸಂಘ ನಾಯಕತ್ವ ಇನ್ನಿತ್ತರ ಕಾರಣಗಳಿಂದ ಕೊಂಚ ಹೋರಾಟಗಳಲ್ಲಿ ಹಿಂದೆ ಬಿದದ್ದು ಇದಕ್ಕೆ ಒಂದು ಕಾರಣ. ಈ ದೆಸೆಯಲ್ಲಿ ಯಾವುದೇ ನಾಯಕತ್ವ ಇಲ್ಲದ, ವಿಚಾರಗಳೇ ನಾಯಕ ಎಂಬ ಹೊಸ ಆಲೋಚನೆಯಿಂದ ರಾಜ್ಯ ರೈತಸಂಘ ಸಮಾನ ಮನಸ್ಕರ ಸಹಭಾಗಿತ್ವ ಸಂಘಟನೆಯನ್ನು ಕಟ್ಟಲು ಮುಂದಾಗಿದ್ದೇವೆ ಎಂದು ತಿಳಿಸಿದರು.


ಕೇವಲ ಹೋರಾಟಕಷ್ಟೇ ಸಿಮೀತವಾಗದೆ, ರೈತರು ಹಾಗೂ ರೈತಕುಟುಂಬಕ್ಕೆ ಕಾನೂನಿನ ಅರಿವು, ಕೃಷಿನೀತಿಗಳ ಬಗ್ಗೆ ವಿಚಾರ ಸಂಕಿರಣ, ರೈತಸಮುದಾಯಕ್ಕೆ ಆದಾಯ ತರುವ ಕೃಷಿ ಚಟುವಟಿಕೆಗಳನ್ನು ನಡೆಸಲು ಕಾರ್ಯಾಗಾರ, ಮಾರುಕಟ್ಟೆ ಜ್ಞಾನದ ಬಗ್ಗೆ ತಿಳುವಳಿಕೆ ಜೊತೆಗೆ, ರೈತಸಮುದಾಯದ ಸಾಮಾಜಿಕ ಪ್ರಗತಿಗೆ ಪೂರಕವಾದ ಕೆಲಸಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಒಟ್ಟಾರೆ, ಜಿಲ್ಲೆಯಲ್ಲಿ ಪ್ರಜ್ಞಾವಂತ ಗುಣಾತ್ಮಕ ಚಳುವಳಿ ಕಟ್ಟಲು ಮುಂದಡಿ ಇಡಲಾಗಿದೆ. ಸಂಘಟನೆಗೆ ಸೇರ್ಪಡೆಯಾಗಿರುವ ಸದಸ್ಯರು ಸಂಘಟನೆ ಹಾಗೂ ಸಮಾಜಕ್ಕೆ ಒಳ್ಳೆಯ ಹೆಸರು ಬರುವ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.


ಈ ವೇಳೆ ಎಲೇಕೇರಿ, ದೇವರಹೊಸಹಳ್ಳಿ ಹಾಗೂ ಮಾಕಳಿ ಗ್ರಾಮದಲ್ಲಿ ನೂರಾರು ರೈತರು, ರೈತಮಹಿಳೆಯರು ಹಾಗೂ ಯುವಕರು ಸಂಘಟನೆಗೆ ಸೇರ್ಪಡೆಗೊಂಡರು. ಎಲ್ಲರಿಗೂ ಹಸಿರು ಶಾಲು ಹಾಕಿ ಸಂಘಟನೆಗೆ ಸ್ವಾಗತಿಸಲಾಯಿತು.

ಈ ವೇಳೆ ಸಂಘಟನೆಯ ಮೋಗೇನಹಳ್ಳಿ ತಮ್ಮಣ್ಣಗೌಡ, ಹೊಂಬಾಳೆಗೌಡ, ದೇವೇಗೌಡ, ಪ್ರಕಾಶ್, ಶಶಿಕುಮಾರ್ , ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಫೋಟೋ:31-ಸಿಪಿಟಿ-1ಪಿ: ಚನ್ನಪಟ್ಟಣದ ಎಲೆಕೇರಿಯಲ್ಲಿ ಹಲವು ರೈತರು ಕರ್ನಾಟಕ ರಾಜ್ಯ ರೈತಸಂಘ ಸಮಾನ ಮನಸ್ಕರ ಸಹಭಾಗಿತ್ವ ಸಂಘಟನೆಗೆ ಸೇರ್ಪಡೆಗೊಂಡರು. ಇವರನ್ನು ಹಿರಿಯ ರೈತಮುಖಂಡ ಸಿ.ಪುಟ್ಟಸ್ವಾಮಿ ಸ್ವಾಗತಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑