Tel: 7676775624 | Mail: info@yellowandred.in

Language: EN KAN

    Follow us :


ನಾಲ್ಕು ಡಿಜಿಟ್ ತಲುಪಿದ ರೇಷ್ಮೆ ಗೂಡಿನ ಬೆಲೆ- ಬರೋಬ್ಬರಿ 1043 ರೂ.ಗೆ ಒಂದು ಕೆಜಿ ರೇಷ್ಮೆಗೂಡು ಮಾರಾಟ

Posted date: 02 Feb, 2022

Powered by:     Yellow and Red

ನಾಲ್ಕು ಡಿಜಿಟ್ ತಲುಪಿದ ರೇಷ್ಮೆ ಗೂಡಿನ ಬೆಲೆ- ಬರೋಬ್ಬರಿ 1043 ರೂ.ಗೆ ಒಂದು ಕೆಜಿ ರೇಷ್ಮೆಗೂಡು ಮಾರಾಟ

ಬೆಂಗಳೂರು, ಫೆ.02: ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ನಾಲ್ಕು ಡಿಜಿಟ್‌ಗೆ ತಲುಪಿರುವುದಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ.


ದಿನದಿಂದ ದಿನಕ್ಕೆ ರೇಷ್ಮೆಗೂಡಿನ ದರ ಏರಿಕೆಯಾಗುತ್ತಲ್ಲಿದ್ದು, ಒಂದು ಕೆಜಿ ರೇಷ್ಮೆಗೂಡಿನ ಬೆಲೆ ಒಂದು ಸಾವಿರ ರೂಪಾಯಿ ಗಡಿದಾಟಿದೆ. ರಾಮನಗರ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಇಂದು ದಾಖಲೆ ಮಟ್ಟದಲ್ಲಿ ರೇಷ್ಮೆ ಗೂಡು ಹರಾಜಾಗಿದ್ದು, ಒಂದು ಕೆಜಿ ರೇಷ್ಮೆಗೂಡು ಬರೋಬ್ಬರಿ‌ 1,043 ರೂಪಾಯಿಗೆ ಮಾರಾಟವಾಗಿದೆ. 


 ರೇಷ್ಮೆ ಮಾರುಕಟ್ಟೆಗಳಲ್ಲಿ ರೇಷ್ಮೆ ಗೂಡಿಗೆ ಹೆಚ್ಚಿನ ದರ ಸಿಗದಂತೆ ನಿಯಂತ್ರಿಸುತ್ತಿದ್ದ ದಲ್ಲಾಳಿಗಳಿಗೆ ಕಡಿವಾಣ, ಮಾರುಕಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ, ರೇಷ್ಮೆ ಬೆಳೆಗಾರರಿಗೆ ಆಗುತ್ತಿದ್ದ ಕಿರುಕುಳಕ್ಕೆ ಬ್ರೇಕ್ ಹಾಕಿದ್ದು, ರೇಷ್ಮೆಗೂಡು ಕದಿಯುತ್ತಿದ್ದವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ, ಇ- ಪೇಮೆಂಟ್ ವ್ಯವಸ್ಥೆ ಜಾರಿ ಸೇರಿದಂತೆ ಸಚಿವ ಡಾ.ನಾರಾಯಣಗೌಡ ಅವರು ತೆಗೆದುಕೊಂಡ ಹಲವು ದಿಟ್ಟ ಕ್ರಮಗಳ ಪರಿಣಾಮವಾಗಿ ಇಂದು ದಾಖಲೆ ದರಕ್ಕೆ ರೇಷ್ಮೆ ಗೂಡು ಮಾರಾಟವಾಗುವ ಮೂಲಕ ರೈತರಿಗೆ ನೈಜ ಬೆಲೆ ಸಿಗಲು ಕಾರಣವಾಗಿದೆ. 


 ರೇಷ್ಮೆ ದರ ಸರಾಸರಿ ಕಳೆದ ವರ್ಷಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ. 2020-21 ನೇ ಸಾಲಿನಲ್ಲಿ ಪ್ರತಿ ಕೆಜಿ ರೇಷ್ಮೆ ಗೂಡಿಗೆ ಸರಾಸರಿ 300 ರೂಪಾಯಿ ಇತ್ತು.  2021 ಸಾಲಿನ ನವೆಂಬರ್- ಡಿಸೆಂಬರ್ ತಿಂಗಳಿನಲ್ಲಿ 700-800 ರೂ.ನಷ್ಟಿತ್ತು. ಆದರೆ ಇವತ್ತು 1043 ರೂ.ಗೆ ಮಾರಾಟವಾಗುವ ಮೂಲಕ ದಾಖಲೆ ಸೃಷ್ಟಿಸಿದೆ. 


*ರೈತನ ಮಗನಾಗಿ, ರೇಷ್ಮೆ ಬೆಳೆಗಾರನಾಗಿದ್ದ ನನಗೆ ಸಾರ್ಥಕ ಕ್ಷಣ: ಸಚಿವ ಡಾ.ನಾರಾಯಣಗೌಡ*

*ರೇಷ್ಮೆ ಬೆಳೆಯಿರಿ, ನಿಮ್ಮೊಂದಿಗೆ ಸರ್ಕಾರ ಇದೆ*


ಪ್ರತಿ ಕೆಜಿ ಗೂಡಿಗೆ ಸಾವಿರ ರೂಪಾಯಿ ಗಡಿ ದಾಟಿರುವುದು  ರೇಷ್ಮೆ ಬೆಳೆಗಾರರಿಗೆ ಸಂತೋಷವನ್ನು ತಂದಿದೆ. ಇಂದು ರಾಮನಗರ ಮಾರುಕಟ್ಟೆಯಲ್ಲಿ ಒಂದು ಕೆಜಿ ರೇಷ್ಮೆ ಗೂಡು 1,043 ರೂ.ಗೆ ಮಾರಾಟವಾಗಿದೆ. ಇದು ರೇಷ್ಮೆ ಬೆಳೆಗಾರರಲ್ಲಿ ಮತ್ತಷ್ಟು ಹುಮ್ಮಸ್ಸು ತರಿಸಿದ್ದು, ಉತ್ತಮ ಗುಣಮಟ್ಟದ ರೇಷ್ಮೆ ಗೂಡು ಬೆಳೆಯಲು ಇದು ಸಹಕಾರಿಯಾಗಲಿದೆ. ರೇಷ್ಮೆ ಮಾರುಕಟ್ಟೆಗಳಲ್ಲಿ ಆಗುತ್ತಿದ್ದ ಭ್ರಷ್ಟಾಚಾರ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿರುವ ಪರಿಣಾಮದಿಂದ ರೇಷ್ಮೆ ಗೂಡಿನ ಗುಣಮಟ್ಟಕ್ಕೆ ತಕ್ಕಂತೆ ನೈಜ ಬೆಲೆ ಸಿಗುತ್ತಿದೆ. ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡ ಪರಿಣಾಮದಿಂದ

ರೇಷ್ಮೆ ಗೂಡಿನ ದರವೂ ಭಾರಿ ಪ್ರಮಾಣದಲ್ಲಿ ಹೆಚ್ಚಾಗುವ ನಿರೀಕ್ಷೆಯಿತ್ತು, ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ರೇಷ್ಮೆ ಬೆಳೆಗಾರರ ಜೊತೆ ನಮ್ಮ ಸರ್ಕಾರ ಇದೆ. ರೇಷ್ಮೆ ಬೆಳೆಗಾರರಿಗೆ ಯಾವುದೇ ರೀತಿ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಹಾಗೂ ಗುಣಮಟಕ್ಕೆ ತಕ್ಕಂತೆ ಉತ್ತಮ ಬೆಲೆ ಸಿಗುವಂತೆ ನೋಡಿಕೊಳ್ಳುತ್ತೇನೆ. ರೇಷ್ಮೆ ಗೂಡು ದರ ನಾಲ್ಕು ಡಿಜಿಟ್‌ಗೆ ತಲುಪಿರುವುದು ಮತ್ತಷ್ಟು ರೈತರು ರೇಷ್ಮೆ ಬೆಳೆಯುವುದಕ್ಕೆ ಪ್ರೇರಣೆಯಾಗಲಿದೆ ಎಂದು ಸಚಿವ ಡಾ.ನಾರಾಯಣ ಗೌಡ ಅವರು ತಿಳಿಸಿದ್ದಾರೆ.


*ಬಿಡ್ಡಿಂಗ್ ತಂತ್ರಾಂಶ ನವೀಕರಣ*

ಕಷ್ಟಪಟ್ಟು ರೇಷ್ಮೆ ಬೆಳೆಯುವ ರೈತರಿಗೆ ನೈಜ ಬೆಲೆ ಸಿಗಬೇಕು ಎಂಬುವುದು ಸಚಿವ ಡಾ.ನಾರಾಯಣ ಗೌಡ ಅವರ ಕನಸಾಗಿತ್ತು. ಆ ನಿಟ್ಟಿನಲ್ಲಿ ರೇಷ್ಮೆ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ ಇಲಾಖೆಯಲ್ಲಿ ಹಲವು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದರು. ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ತೆಗೆದುಕೊಂಡ ಪರಿಣಾಮವಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ನಾಲ್ಕು ಡಿಜಿಟ್‌ಗೆ ತಲುಪುವ ನಿರೀಕ್ಷೆ ಇಲಾಖೆಗೆ ಇತ್ತು. ಹಾಗಾಗಿ, ಕೇವಲ ಮೂರು ಡಿಜಿಟ್ ಹೊಂದಿದ್ದ ಬಿಡ್ಡಿಂಗ್ ತಂತ್ರಾಂಶವನ್ನು ಅಪ್ಡೇಟ್ ಮಾಡಲಾಗಿತ್ತು. ತಂತ್ರಾಂಶ ನವೀಕರಿಸಿರುವುದರಿಂದ ನಾಲ್ಕು ಡಿಜಿಟ್‌ನಲ್ಲಿ ಬಿಡ್ಡಿಂಗ್ ಮಾಡಲು ಸಹಕಾರಿಯಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑