ಕನ್ನಮಂಗಲ ಗ್ರಾಮದ ದೇವಾಲಯಗಳ ಕೊಡುಗೆ ಜಮೀನು ಮಾರಾಟ ಮಾಡಿದವರ ಖಾತೆ ರದ್ದು ಮಾಡುವಂತೆ ಡಿ ಸಿ ಗೆ ಮನವಿ ಸಲ್ಲಿಸಿದ ರೈತ ಮುಖಂಡರು

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮದ ದೇವರುಗಳಾದ ಶ್ರೀ ಮಾಧವರಾಯ ಸ್ವಾಮಿ, ಬಸವೇಶ್ವರ ಸ್ವಾಮಿ ಮತ್ತು ಗುರುಮಠ ದ ಅಭಿವೃದ್ಧಿಗಾಗಿ ಗ್ರಾಮಸ್ಥರು ಎರಡು ಸರ್ವೇ ನಂಬರ್ ಗಳಲ್ಲಿ ನ ಒಟ್ಟು 6 ಎಕರೆ 28 ಗುಂಟೆ ಜಮೀನು ಕೊಟ್ಟಿದ್ದು, ಅದನ್ನೇ ದುರುಪಯೋಗ ಪಡಿಸಿಕೊಂಡ ಅರ್ಚಕರು ತಾವು ವ್ಯವಸಾಯಗಾರರೆಂದು ತಪ್ಪು ಮಾಹಿತಿ ನೀಡಿ ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡು ಬೇರೆಯವರಿಗೆ ಮಾರಾಟ ಮಾಡಿದ್ದಾರೆ. ಜಮೀನಿನ ವಿಷಯವಾಗಿ ಉಚ್ಚ ನ್ಯಾಯಾಲಯದಲ್ಲಿ ದಾವೆ ನಡೆಯುತ್ತಿದ್ದರೂ ಅಕ್ರಮವಾಗಿ ಮಾರಾಟ ಮಾಡಿದ್ದಾರೆ. ಈ ಖಾತೆಯನ್ನು ರದ್ದುಗೊಳಿಸಬೇಕೆಂದು ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಕನ್ನಮಂಗಲ ಗ್ರಾಮಸ್ಥರು ಮತ್ತು ಸಮಾನ ಮನಸ್ಕರ ಸಹಭಾಗಿತ್ವದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಸಿ ಪುಟ್ಟಸ್ವಾಮಿ ಯವರು ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 131 ರಲ್ಲಿನ 3 ಎಕರೆ 14 ಗುಂಟೆ ಮತ್ತು 132/2 ರಲ್ಲಿನ 3 ಎಕರೆ 14 ಗುಂಟೆ ಸೇರಿ ಒಟ್ಟು 6 ಎಕರೆ 28 ಗುಂಟೆ ಜಮೀನನ್ನು ಮೂರು ದೇವಾಲಯಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದು, ಈ ಜಮೀನನ್ನು ಗ್ರಾಮದ ಕೆಲವು ರೈತರು ಸಾಗುವಳಿ ಮಾಡುತ್ತಿದ್ದರು. ಬಂದ ಲಾಭವನ್ನು ದಕ್ಷಿಣೆ ರೂಪದಲ್ಲಿ ಅರ್ಚಕರಿಗೆ ಧಾರ್ಮಿಕ ಕಾರ್ಯಗಳನ್ನು ನಿರ್ವಹಿಸಲು ನೀಡಲಾಗುತ್ತಿತ್ತು. ಗೇಣಿ ಕಾನೂನು ಜಾರಿಗೆ ಬಂದ ಸಮಯದಲ್ಲಿ ಅರ್ಚಕರಾದ ಸಂಜೀವಯ್ಯ ಮತ್ತು ಕೆ ಟಿ ಶ್ರೀನಿವಾಸ ಉ ಬಿ ಶ್ರೀನಿವಾಸ ಮೂರ್ತಿ ರವರು ಸದರಿ ಜಮೀನುಗಳ ಅನುಭೋಗದಾರರೆಂದು ಭೂ ನ್ಯಾಯಮಂಡಳಿಗೆ ಗೇಣಿ ಅರ್ಜಿ ಸಲ್ಲಿಸಿ, ಅರ್ಚಕರು ಎಂಬುದನ್ನು ಮರೆಮಾಚಿ, ವ್ಯವಸಾಯಗಾರರೆಂದು ತಪ್ಪು ಮಾಹಿತಿ ನೀಡಿ, 16-03-1982 ರಂದು ಆದೇಶ ಪಡೆದು ವಂಚಿಸಿದ್ದಾರೆ.
ಆದೇಶವನ್ನು ಪ್ರಶ್ನಿಸಿ ದೇವಾಲಯಗಳ ಪರವಾಗಿ ಗ್ರಾಮಸ್ಥರು ರಿಟ್ ಪಿಟಿಷನ್ 2222/1984 ರ ಅಡಿಯಲ್ಲಿ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು 06-03-1991 ರಂದು ಭೂ-ನ್ಯಾಯಮಂಡಳಿ ಆದೇಶವನ್ನು ರದ್ದುಪಡಿಸಿ ಪುನರ್ ವಿಚಾರಣೆಗಾಗಿ ಪ್ರಕರಣವನ್ನು ಇತ್ಯರ್ಥ ಮಾಡಲು ಭೂ-ನ್ಯಾಯಮಂಡಳಿಗೆ ಹಿಂದುರಿಗಿಸಿ, ಸರ್ಕಾರದ ಆದೇಶದ 30-08-1987 ರಂದು ಜಿಲ್ಲಾಧಿಕಾರಿಗಳಿಗೆ ಸದರಿ ಪ್ರಕರಣವನ್ನು ಇತ್ಯರ್ಥ ಪಡಿಸಲು ಎಲ್ ಆರ್ ಎಫ್/ಐ ಎನ್ ಎಂ ಸಂಖ್ಯೆ 12/98-99 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಸದರಿ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಸ್ಥರಿಗೆ ಸರಿಯಾದ ಮಾಹಿತಿ ನೀಡದೆ, 12-01-2004 ರಲ್ಲಿ ಅರ್ಚಕರ ಪರವಾಗಿ ಆದೇಶ ಮಾಡಿದ್ದು, ಅರ್ಜಿದಾರರು ಕರ್ನಾಟಕ ಮೇಲ್ಮನವಿ ಪ್ರಾಧಿಕಾರಕ್ಕೆ ಅಪೀಲು ಸಂಖ್ಯೆ 170/2005 ರ ಅಡಿಯಲ್ಲಿ ಪ್ರಶ್ನಿಸಿದ್ದು, ಪ್ರಾಧಿಕಾರವು 13-10-2017 ರಂದು ಅರ್ಚಕರ ಪರವಾಗಿ ಆದೇಶ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಗ್ರಾಮಸ್ಥರು ಉಚ್ಚ ನ್ಯಾಯಾಲಯದಲ್ಲಿ ರಿಟ್ ಪಿಟಿಷನ್ ಸಂಖ್ಯೆ 9062/2020-21 ರ ಅಡಿಯಲ್ಲಿ ಮೇಲ್ಮನವಿ ಸಲ್ಲಿಸಿ ವಿಚಾರಣೆ ಹಂತದಲ್ಲಿದೆ.
ಪ್ರಕರಣ ನ್ಯಾಯಾಲಯದಲ್ಲಿದ್ದಾಗ್ಯೂ ಎರಡು ಸರ್ವೇ ನಂಬರಿನ ಜಮೀನನ್ನು ಮೇಲ್ಕಂಡ ಅರ್ಚಕರು 06-07-2021 ರಂದು ಕೆ ಹೆಚ್ ಬೋರೇಗೌಡ ಮತ್ತು ರಾಜು ಎಂಬುವವರಿಗೆ ಕ್ರಯಪತ್ರದ ಆಧಾರದ ಮೇಲೆ ಖಾತೆ ಮಾಡಿಸಿಕೊಟ್ಟಿದ್ದಾರೆ. ಹಾಗಾಗಿ ಈ ಖಾತೆಗಳನ್ನು ರದ್ದು ಪಡಿಸಿ ದೇವಾಲಯಗಳ ಹೆಸರಿಗೆ ಖಾತೆ ಮಾಡಿಸಿಕೊಡಬೇಕೆಂದು ಗ್ರಾಮಸ್ಥರ ಪರವಾಗಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ರೈತ ಮುಖಂಡರಾದ ಹೊಂಬಾಳೇಗೌಡ, ನಂಜಪ್ಪ, ಗ್ರಾಮಸ್ಥರಾದ ಚಲುವೇಗೌಡ, ಸಿದ್ದೇಗೌಡ, ಶೇಖರ್, ನಾಗರಾಜು, ಯೋಗಲಿಂಗ, ಚಲುವರಾಜು, ಚಂದ್ರೇಗೌಡ, ಸುರೇಶ್ ಕುಮಾರ್, ಕುಮಾರ್, ಗಿರೀಶ್, ನಾರಾಯಣ, ನಾಗರಾಜು, ಚಂದ್ರಶೇಖರ್ ಸೇರಿದಂತೆ ಹಲವಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮೆಹರೀಶ್
ಚನ್ನಪಟ್ಟಣ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾಗಿ ಮತ್ತೀಕೆರೆ ಗ್ರಾಮದ ಮೆಹರೀಶ್ (ಮನು) ರವರು ಸೋಮವಾರ ಅವಿರೋಧವಾಗಿ ಆಯ್

ಪಂಪ್ ಸೆಟ್ ಬಾವಿ ನೀರಿಗಾಗಿ ತಾಯಿ, ಪುತ್ರ ಕೊಲೆ
ಪಾಂಡವಪುರ: ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಟ್ ಬಾವಿ ನೀರಿನ ವಿಚಾರಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ಪುತ್ರನನ್ನು ಸ್ವಂತ ಸಂಬಂಧಿ

ಕೆರೆಯಲ್ಲಿ ಕುರಿ ಮೈತೊಳೆಯುತ್ತಿದ್ದ ಒಂದೇ ಕುಟುಂಬದ ಮೂರು ಮಂದಿ ಸಾವು
ಮಾಗಡಿ: ತಾಲೂಕಿನ ಮುತ್ತಸಾಗರ ಗೊಲ್ಲರಹಟ್ಟಿ ಗ್ರಾಮದ ಪೂಜಾರಿ ರಾಜಣ್ಣ ಎಂಬುವರ ಪುತ್ರ ನಾಗರಾಜು [30], ಜ್ಯೋತಿ [35], ಲಕ್ಷ್ಮೀ [22] ಕುರಿ ಮೈತೊಳೆಯುತ್ತ

ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ಗಂಟುರೋಗ (ಪೆಬ್ರಿನ್) ಸೋಂಕು ತಕ್ಷಣ ನಿಯಂತ್ರಿಸದಿದ್ದರೆ ರೇಷ್ಮೆ ಉದ್ಯಮ ಸರ್ವನಾಶ: ವಿ.ಬಾಲಸುಬ್ರಮಣ್ಯಂ ಆತಂಕ
ಬೆಂಗಳೂರು: ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ತರವಾಗಿ ಹರಡುತ್ತಿರುವ ಗಂಟುರೋಗ (ಪೆಬ್ರಿನ್) ಸೋಂಕನ್ನು ತಕ್ಷಣವೇ ನಿಯಂತ್ರಿಸದಿದ್ದರೆ ಇನ್ನೊಂದು ವರ್ಷದೊಳಗೆ ರೇಷ್ಮೆ ಉದ್ಯಮ ಪೂರ್ತಿ ನಶಿಸಿಹೋಗಲಿ
ಪ್ರತಿಕ್ರಿಯೆಗಳು