Tel: 7676775624 | Mail: info@yellowandred.in

Language: EN KAN

    Follow us :


ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿ ಹರಿದಾಸ್

Posted date: 13 Apr, 2023

Powered by:     Yellow and Red

ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿ ಹರಿದಾಸ್

ಚನ್ನಪಟ್ಟಣ: ಪ್ರಜಾಪ್ರಭುತ್ವದ ಹಬ್ಬವಾದ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ನಿರ್ಭಯವಾಗಿ ನಿರ್ಭೀತಿಯಿಂದ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕೆಂದು, ವಿಧಾನಸಭಾ ಚುನಾವಣೆಯ ಅಸೆಂಬ್ಲಿ ಮಾಸ್ಟರ್ ಟ್ರೈನರ್ ಹರಿದಾಸ್ ತಿಳಿಸಿದರು.

   ಅವರು ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾರರರು ಮತಯಂತ್ರಗಳ ಮುಖಾಂತರ ತಮ್ಮ ಮತವನ್ನು ಚಲಾವಣೆ ಮಾಡಿ ನಂತರ ತಮ್ಮ ಮತಗಳು ತಮ್ಮ ಅಭ್ಯರ್ಥಿಗಳಿಗೆ ಬಿದ್ದಿದಿಯೋ ಇಲ್ಲವೋ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಮತದಾನದ ಅಣಕು ಪ್ರದರ್ಶನ ಮಾಡಿ ಮಾತನಾಡಿದರು.


    ಮತಯಂತ್ರಗಳ ಕಾರ್ಯನಿರ್ವಹಣೆಯ ಸಂದರ್ಭದಲ್ಲಿ ವಿವಿ ಪಾಟ್‍ನ ಕಾರ್ಯನಿರ್ವಣೆ, ನೀವು ಹಾಕಿದ ಮತಗಳ ಸಂಗ್ರಹಣೆಯ ಯಂತ್ರ ಹಾಗೂ ನಿಮ್ಮ ಮತ ಯಾರಿಗೆ ಹೋಗಿರುವುದರ ಚಿಹ್ನೆಯ ಮುಖಾಂತರ ಕೇವಲ ಏಳು ಸೆಕೆಂಡ್‍ಗಳಲ್ಲಿ ಪ್ರದರ್ಶನ, ನೀವು ಮತಹಾಕಿದ ಸಮಯ, ಯಾರಿಗೆ ಮತ, ಮತಗಳ ಸಂಗ್ರಹಣೆಯನ್ನು ಆಯಾ ಮತದಾರರೇ ಖುದ್ದಾಗಿ ಮತದಾನದ ಸಂದರ್ಭದಲ್ಲಿ ತಿಳಿಯಬಹುದಾಗಿದೆ ಎಂದರು.


    ಮುಂಜಾನೆ 7 ರಿಂದ ಪ್ರಾರಂಭವಾಗುವ ಮತದಾನ ಸಂಜೆ  6ರವರೆಗೆ ನಡೆಯಲಿದ್ದು, ಸಂಜೆ 6ರ ಸಮಯದಲ್ಲಿ ಮತದಾರರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದರೆ ಮತದಾನದ ಕೇಂದ್ರದಲ್ಲಿನ ನೂರು ಮೀಟರ್ ಒಳಗೆ ಅವರು 6 ಗಂಟೆಯೊಳಗೆ ಪ್ರವೇಶ ಪಡೆದಿದ್ದರೆ, ಸಂಬಂಧಿಸಿದ ಚುನಾವಣೆ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅಷ್ಟು ಮತದಾರರಿಗೆ ಮತ ಚಲಾಯಿಸಲು ಅನುಮತಿ ನೀಡಲಾಗುವುದು ಎಂದು ತಿಳಿಸಿದರು.


    ಈ ಭಾರಿ ಮತಯಂತ್ರದಲ್ಲಿ ಅಂಧ ಮತದಾರರಿಗೆ ಮತಚಲಾಯಿಸಲು ಅವರ ಲಿಪಿಗನುಗುಣವಾಗಿ ಯಂತ್ರದಲ್ಲಿ ಅಳವಡಿಸಲಾಗಿದೆ, ಅಲ್ಲದೆ ವಿಕಲಚೇತನರು, ವೃದ್ದರು, ಅನಾರೋಗ್ಯ ಪೀಡಿತರ ಒಪ್ಪಿಗೆಯ ಆಧಾರದ ಮೇಲೆ ಅವರ ಮನೆಯ ಬಳಿಗೆ ಸಂಬಂಧಿಸಿದ ಚುನಾವಣೆಯ ಅಧಿಕಾರಿಗಳೇ ಹೋಗಿ ಮತವನ್ನು ಹಾಕಿಸಿಕೊಳ್ಳುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ ಎಂದರು.


    ನ್ಯಾಯಸಮ್ಮತವಾದ ಚುನಾವಣೆ ನಡೆಯಲು ಪ್ರತಿಯೊಬ್ಬ ಮತದಾರರು ಸಹಕರಿಸಬೇಕು,ನಿಮ್ಮ ಮತ ನಿಮ್ಮ ಹಕ್ಕು ಈ ನಿಟ್ಟಿನಲ್ಲಿ ನಡೆಯುವ ಚುನವಣೆಯಲ್ಲಿ ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ತಿಳಿಸಿದರು.

   ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಮಹೇಂದ್ರ, ಚುನಾವಣೆಯ ಸೆಕ್ಟರ್ ಅಧಿಕಾರಿ ನಿಜಗುಣ, ಶಿರಸ್ತೇದಾರ ಹರೀಶ್ ಹಾಗೂ ಹಲವಾರು ಮಂದಿ ಅಧಿಕಾರಿವರ್ಗ ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑