Tel: 7676775624 | Mail: info@yellowandred.in

Language: EN KAN

    Follow us :


ಪಂಪ್ ಸೆಟ್ ಬಾವಿ ನೀರಿಗಾಗಿ ತಾಯಿ, ಪುತ್ರ ಕೊಲೆ

Posted date: 26 Apr, 2023

Powered by:     Yellow and Red

ಪಂಪ್ ಸೆಟ್ ಬಾವಿ ನೀರಿಗಾಗಿ  ತಾಯಿ, ಪುತ್ರ ಕೊಲೆ

ಪಾಂಡವಪುರ: ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಟ್ ಬಾವಿ ನೀರಿನ ವಿಚಾರಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ಪುತ್ರನನ್ನು ಸ್ವಂತ ಸಂಬಂಧಿ ಮೈದುನ ಕುಡುಗೋಲಿನಿಂದ ಕತ್ತು ಕೊಯ್ದು ಜೋಡಿ ಕೊಲೆ ಮಾಡಿರುವ ಘಟನೆ ತಾಲೂಕಿನ‌ ಹೆಗ್ಗಡಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.


ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ನಿವಾಸಿ ಶಾಂತಮ್ಮ (47) ಹಾಗೂ ಇವರ ಪುತ್ರ ಯಶ್ವಂತ್ (17) ಕೊಲೆಗೀಡಾದವರು. ಇದೇ ಕುಟುಂಬಕ್ಕೆ ಸೇರಿದ ಶಾಂತಮ್ಮ ಅವರ ಮೈದುನ ಸತೀಶ್ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಕೊಲೆ ಆರೋಪಿ ಸತೀಶ್ ಗೆ ಶಾಂತಮ್ಮ ಸ್ವಂತ ಅಣ್ಣನ ಹೆಂಡತಿಯಾಗಿದ್ದು, ಯಶವಂತ್ ಅಣ್ಣನ ಮಗನಾಗಿದ್ದಾನೆ.


ಒಂದೇ ಕುಟುಂಬಕ್ಕೆ ಸೇರಿದ ಶಾಂತಮ್ಮ ಹಾಗೂ ಆರೋಪಿ ಸತೀಶ್ ಅವರಿಗೆ ಐದು ಎಕರೆ ಜಮೀನಿದ್ದು, ಒಂದೇ ಪಂಪ್ ಸೆಟ್ ಬಾವಿಯಿಂದ ನೀರು ಹಾಯಿಸಬೇಕಾಗಿತ್ತು.


ಜಮೀನಿಗೆ ನೀರು‌ ಹಾಯಿಸುವ ವಿಚಾರವಾಗಿ ಕುಟುಂಬಸ್ಥರ ನಡುವೆ ಆಗಾಗ ಜಗಳ‌ ನಡೆಯುತ್ತಿತ್ತು. ಆದರೆ ಬುಧವಾರ ಮಧ್ಯಾಹ್ನ ಹೆಗ್ಗಡಹಳ್ಳಿ ಗ್ರಾಮದ ಸಮೀಪ ಜಮೀನಿನಲ್ಲಿ ಪಂಪ್ ಸೆಟ್ ನೀರಿನ ವಿಚಾರವಾಗಿ ಶಾಂತಮ್ಮ, ಇವರ ಪುತ್ರ ಯಶ್ವಂತ್ ಹಾಗೂ ಸತೀಶ್ ನಡುವೆ ಜಗಳ ನಡೆಯುತ್ತಿದ್ದಾಗ, ಸ್ಥಳದಲ್ಲಿದ್ದ ಸತೀಶ್ ಅವರು ಕೊಡಲಿ‌ಯಿಂದ ಶಾಂತಮ್ಮ ಹಾಗೂ ಯಶ್ವಂತ್ ಅವರಿಗೆ ಕತ್ತು ಹಾಗೂ ತಲೆಗೆ ತೀವ್ರವಾಗಿ ಹೊಡೆದ ಪರಿಣಾಮ ಸ್ಥಳದಲ್ಲೇ ತಾಯಿ, ಮಗ ಮರಣ ಹೊಂದಿದ್ದಾರೆ. ತಾಯಿಯನ್ನು ಪಂಪ್ ಸೆಟ್ ಮನೆಯಲ್ಲಿ ಹಾಗೂ ಪುತ್ರನನ್ನು ಮುಂಭಾಗದಲ್ಲಿ ಕೊಲೆ ಮಾಡಿದ್ದಾನೆ.


ಕೊಲೆ ಮಾಡಿದ ನಂತರ ಆರೋಪಿ ತನ್ನ ಹೆಂಡತಿಯ ಸಹೋದರನಿಗೆ ಕರೆ ಮಾಡಿ, ತನ್ನ ಪತ್ನಿ ಮತ್ತು ಮಕ್ಕಳನ್ನು ತವರಿಗೆ ಕಳುಹಿಸಿ, ಆತ ನೇರವಾಗಿ ಪೋಲೀಸ್ ಠಾಣೆಗೆ ತೆರಳಿ ಶರಣಾಗಿದ್ದು, ಪೋಲೀಸರು ಗ್ರಾಮಕ್ಕೆ ಬಂದು ವಿಷಯ ತಿಳಿಸುವ ತನಕ ಕುಟುಂಬದವರಿಗಾಗಲಿ, ಗ್ರಾಮಸ್ಥರಿಗೆ ಕೊಲೆಯ ವಿಷಯವೇ ತಿಳಿದಿರಲಿಲ್ಲಾ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ವಿಷಯ ಹಬ್ಬುತ್ತಿದ್ದಂತೆ ತಾಲ್ಲೂಕು ಸೇರಿದಂತೆ ಮಂಡ್ಯ ಜಿಲ್ಲೆಯಾದ್ಯಂತ ಸಹಸ್ರಾರು ಮಂದಿ ನೆರೆದಿದ್ದು, ಜನರನ್ನು ನಿಯಂತ್ರಿಸಲು ಪೋಲೀಸರು ಸಿ ಆರ್ ಪಿ ಎಫ್ ತುಕಡಿಯನ್ನು ಕರೆಸಿಕೊಂಡು ನಿಯಂತ್ರಿಸಿದ್ದಾರೆ.


ವಿಷಯ ತಿಳಿದ ತಕ್ಷಣ ಪಾಂಡವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಆರೋಪಿ ಸತೀಶ್ ಅವರನ್ನು‌ ವಶಕ್ಕೆ ತೆಗೆದುಕೊಂಡಿದ್ದಾರೆ.


ಜೋಡಿ ಕೊಲೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑