Tel: 7676775624 | Mail: info@yellowandred.in

Language: EN KAN

    Follow us :


ಮಾವು ಅಭಿವೃದ್ಧಿ ಮಂಡಳಿಯಿಂದ ರಾಮನಗರದಲ್ಲಿ ರೈತ ಬಜಾರ್:

Posted date: 08 Aug, 2022

Powered by:     Yellow and Red

ಮಾವು ಅಭಿವೃದ್ಧಿ ಮಂಡಳಿಯಿಂದ ರಾಮನಗರದಲ್ಲಿ ರೈತ ಬಜಾರ್:

Farmer's Bazaar at Ramnagar by Mango Development Board:

 August 7, 2022: ರಾಮನಗರ ಕೋಲಾರ ಮಾವು ಅಭಿವೃದ್ಧಿ ಮಂಡಳಿಯಿಂದ ರಾಮನಗರದಲ್ಲಿ ರೈತ ಬಜಾರ್ ಆರಂಭಿಸುತ್ತಿದ್ದು, ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ರಾಜ್ಯ ಮಾವು ಅಭಿವೃದ್ಧಿ ಮಂಡಳಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಎಂ.ಕೆ.ವಾಸುದೇವ್ ತಿಳಿಸಿದರು.


ನಗರದ ಪಿ.ಸಿ ಬಡಾವಣೆಯ ಯಾಜ್ಞವಲ್ಕ್ಯಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, 6ಕೋಟಿ ರೂ. ಯೋಜನೆಗೆ 12 ಎಕರೆ ಭೂಮಿಯನ್ನು ರಾಮನಗರ-ಚನ್ನಪಟ್ಟಣ ಮುಖ್ಯ ರಸ್ತೆಯಲ್ಲಿ ಸರ್ಕಾರ ಒದಗಿಸಿದ್ದು, ಡಿಪಿಆರ್‌ಗೆ ಅನುಮೋದನೆ ಸಿಕ್ಕಿದೆ. ಸದ್ಯದಲ್ಲೇ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ ಎಂದರು.

 

ರೈತರು ಬೆಳೆದ ಹಣ್ಣು, ತರಕಾರಿಯನ್ನು ತಂದು ಮಾರಾಟ ಮಾಡಬಹುದು. ಮಾವು ಅಭಿವೃದ್ಧಿ ಮಂಡಳಿಗೆ ಕಮಿಷನ್ ಪಾವತಿಸುವ ಅಗತ್ಯವಿಲ್ಲ. ಇದರಿಂದಾಗಿ ಕೃಷಿ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಸಿಗಲಿದ್ದು, ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ಜೊತೆಗೆ ಮಾವು ಬೆಳೆಗಾರರಿಗೆ ತರಬೇತಿ ನೀಡಲು ಕೇಂದ್ರ ತೆರೆಯಲಾಗುವುದು ಎಂದು ತಿಳಿಸಿದರು.


ಚಿಂತಾಮಣಿಯಲ್ಲಿರುವ ಮಾವು ಸಂಸ್ಕರಣಾ ಘಟಕ ಮಾದರಿಯಲ್ಲಿ ಕೋಲಾರದಲ್ಲೂ ಗುಣಮಟ್ಟದ ಘಟಕ ಸ್ಥಾಪನೆ ಮಾಡಿ ವಿದೇಶಗಳಿಗೆ ಮಾವಿನ ಹಣ್ಣು ರಫ್ತು ಮಾಡಲು ಕ್ರಮ ವಹಿಸಲಾಗುವುದು. ಶ್ರೀನಿವಾಸಪುರ ತಾಲ್ಲೂಕಿನ ಹೊಗಳಗೆರೆಯಲ್ಲಿನ 12 ಎಕರೆ ಮಾವು ಮಂಡಳಿ ಜಾಗದಲ್ಲಿ ಮಾವು ಸಂಸ್ಕರಣಾ ಘಟಕ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎಂದರು.


ಸರ್ಕಾರಿ ವಕೀಲರಾಗಿ ಮರು ಆಯ್ಕೆ ಆಗಿರುವ ಮಾಗೇರಿ ನಾರಾಯಣಸ್ವಾಮಿ ಅವರನ್ನು ಇದೇ ಸಂದರ್ಭದಲ್ಲಿ ವಾಸುದೇವ್ ಸನ್ಮಾನಿಸಿದರು.


ನಗರಸಭೆ ಸದಸ್ಯ ಮುರಳಿಗೌಡ ಮಾತನಾಡಿ, ವಾಸುದೇವ್ ಮಾವು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ರೈತರ ನೆರವಿಗೆ ನಿಲ್ಲಬೇಕು ಎಂದು ಮನವಿ ಮಾಡಿದರು.


ಯಾಜ್ಞವಲ್ಕ್ಯ ಸಂಘದ ಅಧ್ಯಕ್ಷ ಅಶ್ವಥ್, ಬಿಜೆಪಿ ಜಿಲ್ಲಾ ಕಾರ್ಯಾಲಯದ ಕಾರ್ಯದರ್ಶಿ ಕೆ.ರಾಜೇಶ್ ಸಿಂಗ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಕೆಂಬೋಡಿ ನಾರಾಯಣಸ್ವಾಮಿ, ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ಪ್ರಗತಿಪರ ರೈತರನ್ನು ಸನ್ಮಾನಿಸಿದ ತಾಲ್ಲೂಕು ಆಡಳಿತ
ಪ್ರಗತಿಪರ ರೈತರನ್ನು ಸನ್ಮಾನಿಸಿದ ತಾಲ್ಲೂಕು ಆಡಳಿತ

ಚನ್ನಪಟ್ಟಣ ಜ..೧೬: ತಾಲೂಕು ಕಚೇರಿಯಲ್ಲಿ ಸೋಮವಾರ ವಿಶೇಷವಾಗಿ ತಾಲ್ಲೂಕು ಆಡಳಿತ ಹಾಗೂ ಕಂದಾಯ ಇಲಾಖೆ ನೌಕರರ ಸಂಘವು ಸಂಕ್ರಾಂತಿ ಹಬ್ಬ ಆಚರಣೆ ಮೂ

ಇ-ಕೆವೈಸಿ ಮಾಡಿಸದ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಇಲ್ಲ
ಇ-ಕೆವೈಸಿ ಮಾಡಿಸದ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಇಲ್ಲ

ರಾಮನಗರ, ಡಿ. 08: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (ಪಿಎಂಕಿಸಾನ್) ಯೋಜನೆಯನ್ನು 2018ರ ಡಿಸೆಂಬರ್

ಕಾಡುಹಂದಿ ಕೊಲ್ಲಲು ಅವಕಾಶವಿದ್ದರೂ ಅರಣ್ಯ ಇಲಾಖೆ ಪ್ರಚಾರ ನೀಡಿಲ್ಲ ರೈತರ ಆರೋಪ
ಕಾಡುಹಂದಿ ಕೊಲ್ಲಲು ಅವಕಾಶವಿದ್ದರೂ ಅರಣ್ಯ ಇಲಾಖೆ ಪ್ರಚಾರ ನೀಡಿಲ್ಲ ರೈತರ ಆರೋಪ

ಮದ್ದೂರು: ಮಾನವರ ಪ್ರಾಣಹಾನಿ, ರೈತ ಬೆಳೆದ ಬೆಳೆ ನಾಶಮಾಡುವ ಕಾಡುಹಂದಿಗಳನ್ನು ಕೊಲ್ಲಲು ಸರ್ಕಾರ ಅನುಮತಿ ನೀಡಿದೆ. ಆದರೆ ರೈತರಿಗೆ ಅರಣ್ಯಾಧಿಕಾರ

ಅನ್ನದಾತ ಇಂದು ತಲ್ಲಣಗೊಂಡಿದ್ದಾನೆ. ಎಸ್ಎ ಕಂಪನಿ ಆತನನ್ನು ಉನ್ನತಕ್ಕೇರಿಸಲಿ ವಿಲ್ಟ್ರೆಡ್ ಡಿಸೋಜಾ
ಅನ್ನದಾತ ಇಂದು ತಲ್ಲಣಗೊಂಡಿದ್ದಾನೆ. ಎಸ್ಎ ಕಂಪನಿ ಆತನನ್ನು ಉನ್ನತಕ್ಕೇರಿಸಲಿ ವಿಲ್ಟ್ರೆಡ್ ಡಿಸೋಜಾ

ಮಂಡ್ಯ: ನ: ೧೫/೨೦೨೨. ಅನ್ನದಾತೋ ಸುಖೀನೋಭವ ಎಂಬ ಮಾತನ್ನು ಉಳಿಸಿಕೊಂಡಿರುವ ರೈತ ಇಂದು ತಲ್ಲಣಗೊಂಡಿದ್ದಾನೆ. ರೈತನ ಸೋಗಿನಲ್ಲಿ ಮಾರಾಟ ಮಾಡುತ್ತಿರುವ

ಕಳಂಕಿತ ಕೋಡಿಹಳ್ಳಿ ಇರುವ ಸಭೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ: ವಿಧಾನಸೌಧಲ್ಲಿ ನಡೆದ ಸಚಿವರ ನೇತೃತ್ವದ ಸಭೆಯಲ್ಲಿ ರೈತರ ಪಟ್ಟು
ಕಳಂಕಿತ ಕೋಡಿಹಳ್ಳಿ ಇರುವ ಸಭೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ: ವಿಧಾನಸೌಧಲ್ಲಿ ನಡೆದ ಸಚಿವರ ನೇತೃತ್ವದ ಸಭೆಯಲ್ಲಿ ರೈತರ ಪಟ್ಟು

 ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಸಕ್ಕರೆ ಸಚಿವ ಶಂಕರ್‌ ಪಾಟೀಲ್‌ ಮುನೇನಕೊಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭ

ರಾಮನಗರ ಗಡಿ ಗ್ರಾಮಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡ ರೋಗ, ಕನಕಪುರ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ರೋಗ ಪತ್ತೆ
ರಾಮನಗರ ಗಡಿ ಗ್ರಾಮಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡ ರೋಗ, ಕನಕಪುರ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ರೋಗ ಪತ್ತೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿಯೂ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೈತರನ್ನು ಆತಂಕಕ್ಕೆ ದೂಡಿದೆ.


ಜಿಲ್ಲೆಯಲ್ಲಿ ಜಾನುವಾರು ಜಾತ್ರೆ ಮತ್ತು ಸಾಗಾಣಿಕೆ ನಿಷೇಧ
ಜಿಲ್ಲೆಯಲ್ಲಿ ಜಾನುವಾರು ಜಾತ್ರೆ ಮತ್ತು ಸಾಗಾಣಿಕೆ ನಿಷೇಧ

ರಾಮನಗರ-ಅ.11: ರಾಜ್ಯದಾದ್ಯಂತ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೋಗವು ಹರಡದಂತೆ ಮುನ್ನೆಚರಿಕೆ ಕ್ರಮವಾಗಿ ಅಕ್ಟೋಬರ್ 11 ರಿಂದ ನವೆಂಬರ್ 10 ರವರೆಗೆ ರಾಮನಗರ ಜಿಲ್ಲೆಯಾದ್ಯಂತ ಜಾ

ರೈತರಿಗೆ ಸಕಾಲದಲ್ಲಿ ದೊರೆಯದ ಯೂರಿಯಾ, ಕಾಳಸಂತೆಯಲ್ಲಿ ಮಾರಾಟ
ರೈತರಿಗೆ ಸಕಾಲದಲ್ಲಿ ದೊರೆಯದ ಯೂರಿಯಾ, ಕಾಳಸಂತೆಯಲ್ಲಿ ಮಾರಾಟ

ಚನ್ನಪಟ್ಟಣ: ಈಬಾರಿ ಏಪ್ರಿಲ್ ನಿಂದಲೇ ಮಳೆ ಆರಂಭವಾಗಿದ್ದು ಈಗಲೂ ಮುಂದುವರೆದಿದೆ. ಕೆಲವರು ಮಧ್ಯಮಧ್ಯ ಅಂದರೆ ಮಳೆ ಬಿಡುವು ಕೊಟ್ಟಾಗ ಬಿತ್ತನೆ ಮಾಡಿದ್

ಬೆಳೆ ಸಮೀಕ್ಷೆ ಮತ್ತು ವಿಮೆ ಆಂದೋಲನಕ್ಕೆ ಚಾಲನೆ
ಬೆಳೆ ಸಮೀಕ್ಷೆ ಮತ್ತು ವಿಮೆ ಆಂದೋಲನಕ್ಕೆ ಚಾಲನೆ

ಚನ್ನಪಟ್ಟಣ.ಆ.೧೦: ೨೦೨೨-೨೩ ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಹಾಗೂ ಬೆಳೆವಿಮೆ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕಿನ ಎಲ್ಲಾ ಹೋಬಳಿಗಳಲ್

ಜಿಲ್ಲೆಯಲ್ಲಿ ಅಬ್ಬರಿಸಿದ ವರುಣ. 447 ಹೆಕ್ಟೇರ್ ಬೆಳೆ ಹಾನಿ190 ಮನೆಗಳು ಜಖಂ
ಜಿಲ್ಲೆಯಲ್ಲಿ ಅಬ್ಬರಿಸಿದ ವರುಣ. 447 ಹೆಕ್ಟೇರ್ ಬೆಳೆ ಹಾನಿ190 ಮನೆಗಳು ಜಖಂ

ಆರಿದ್ರಾ ಮತ್ತು ಆಶ್ಲೇಷ ಮಳೆಯು ಈ ಬಾರಿ ವಾಡಿಕೆಗಿಂತ ಹೆಚ್ಚಾಗಿ ಸುರಿದ ಪರಿಣಾಮ ರೇಷ್ಮೆನಾಡು ರಾಮನಗರ ಜಿಲ್ಲೆ ತಲ್ಲಣಗೊಂಡಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಕಳಲ್ಲಿ ಬೆಳೆದ ಬೆಳೆ ಮತ್ತು ಮನೆಗಳಿಗೆ ಹೆಚ್

Top Stories »  


Top ↑