Tel: 7676775624 | Mail: info@yellowandred.in

Language: EN KAN

    Follow us :


ಮತ್ತೀಕೆರೆ-ಶೆಟ್ಟಿಹಳ್ಳಿ ಗ್ರಾಮದ ಕೆರೆ ಸ್ವಚ್ಛಗೊಳಿಸಿದ ಬೆಂಗಳೂರಿನ ಸುರಾನಾ ಕಾಲೇಜಿನ ವಿದ್ಯಾರ್ಥಿಗಳು

Posted date: 22 May, 2023

Powered by:     Yellow and Red

ಮತ್ತೀಕೆರೆ-ಶೆಟ್ಟಿಹಳ್ಳಿ ಗ್ರಾಮದ ಕೆರೆ ಸ್ವಚ್ಛಗೊಳಿಸಿದ ಬೆಂಗಳೂರಿನ ಸುರಾನಾ ಕಾಲೇಜಿನ ವಿದ್ಯಾರ್ಥಿಗಳು

ಚನ್ನಪಟ್ಟಣ: ತಾಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ಗ್ರಾಮದಲ್ಲಿ ಬೆಂಗಳೂರು ಸೌತ್ ಎಂಡ್ ಸರ್ಕಲ್ ನ ಬಸವನಗುಡಿಯ ಸುರಾನಾ ಕಾಲೇಜಿನ ವಿದ್ಯಾರ್ಥಿಗಳು ಏಳು ದಿನಗಳ ಕಾಲ ಎನ್‌ಎಸ್‌ಎಸ್ ಶಿಬಿರವನ್ನು ಹಮ್ಮಿಕೊಂಡಿದ್ದಾರೆ. ಬೆಂಗಳೂರಿನಿಂದ ಬಂದು ಗ್ರಾಮೀಣ ಭಾಗದಲ್ಲಿ ಚರಂಡಿ‌ ಹಾಗೂ ಗ್ರಾಮದ ರಸ್ತೆಗಳು,‌ ಶಾಲೆಯ ಆವರಣ, ಕಾಲೇಜು ಆವರಣವನ್ನು ಸ್ವಚ್ಛ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ.


ಇದೇ ವೇಳೆ ಸಹಾಯಕ ಪ್ರಾಧ್ಯಾಪಕರಾದ ಶ್ರೀನಿವಾಸ್. ಎಸ್ ಮಾತನಾಡಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಸ್ವಚ್ಛತೆಯ ಕಾರ್ಯವನ್ನು ಮಾಡುತ್ತಿದ್ದಾರೆ.‌ ನಗರದ ಭಾಗದಲ್ಲಿ ಬೆಳೆದ ಮಕ್ಕಳು ಮನೆಯಲ್ಲಿ ಆರಾಮಾವಾಗಿದ್ದರು.‌ ಅವರಿಗೆ ಗ್ರಾಮೀಣ ಭಾಗದಲ್ಲಿರುವ ಸಂಪ್ರದಾಯ, ಆಚಾರ ವಿಚಾರಗಳನ್ನು ತಿಳಿಸಿಕೊಟ್ಟು ಜನರ ಜೊತೆಗೆ ಬೆರೆಯುವ ಕೆಲಸವನ್ನು ಎನ್‌‌ಎಸ್‌ಎಸ್ ಶಿಬಿರದಲ್ಲಿ ಮಾಡಿಸಲಾಗುತ್ತಿದೆ ಎಂದರು.


ಮತ್ತೊಬ್ಬ ಸಹಾಯಕ ಪ್ರಾಧ್ಯಾಪಕರಾದ ನರೇಶ್ ಮಾತನಾಡಿ 70 ಮಂದಿ ನಾವು ಶೆಟ್ಟಿಹಳ್ಳಿ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ವಿದ್ಯಾರ್ಥಿಗಳಿಗೆ ಈ ಮೂಲಕ ಸ್ವಚ್ಚತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಅತ್ಯುತ್ಸಾಹದಲ್ಲಿ  ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಹಳ ಶ್ರದ್ಧೆಯಿಂದ ಸ್ವಚ್ಛತೆ ಮಾಡುತ್ತಿದ್ದಾರೆ. ನಗರ ಪ್ರದೇಶದಲ್ಲಿ ಇರುವ ಸೌಲಭ್ಯಗಳನ್ನು ‌ಬಿಟ್ಟು ಗ್ರಾಮೀಣ ಭಾಗದಲ್ಲಿರುವ ಜನರ ಒಡನಾಟವನ್ನು ಇಷ್ಟಪಟ್ಟಿದ್ದಾರೆ ಎಂದು ತಿಳಿಸಿದರು.

 

ಇದೇ ವೇಳೆ ಸಹಾಯಕ ಪ್ರಾಧ್ಯಾಪಕರಾದ ಅಶೋಕ್ ಮಾತನಾಡಿ ಮತ್ತೀಕೆರೆ ಹಾಗೂ ಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷರು ಸದಸ್ಯರು ಸಹ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡುತ್ತಿದ್ದಾರೆ ಬಹಳ ಖುಷಿಯಾಗಿದೆ ಎಂದರು. ಏಳು ದಿನಗಳ ಈ ಎನ್‌ಎಸ್‌ಎಸ್ ಕ್ಯಾಂಪ್‌ನಲ್ಲಿ ಗ್ರಾಮದಲ್ಲಿ ಇರುವ ಅನೈರ್ಮಲ್ಯತೆಯನ್ನು ತೊಡೆದು ಹಾಕಿ ನೈರ್ಮಲ್ಯ ಕಾಪಾಡಿ ಚರಂಡಿ, ಶಾಲೆಯ ಆವರಣ, ಕಾಲೇಜು ಆವರಣವನ್ನು ಸ್ವಚ್ಛ ಮಾಡಿಸಲಾಗುತ್ತದೆ‌. ಜನರಲ್ಲಿ ಸ್ವಚ್ಛತೆಯ‌ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.


ಸುರಾನ ಕಾಲೇಜಿನ ವಿದ್ಯಾರ್ಥಿ ಸಾಗರ್ ಮಾತನಾಡಿ ನಾವು ಬೆಂಗಳೂರಿನಿಂದ ಬಂದಿದ್ದು ಎಲ್ಲರೂ ಸೇರಿ ಸ್ವಚ್ಛತೆಯನ್ನು ಮಾಡುವುದರ ಜೊತೆಗೆ ಗ್ರಾಮದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು. ವಿದ್ಯಾರ್ಥಿನಿ ಸಹನಾ ಮಾತನಾಡಿ ಪ್ರತಿನಿತ್ಯ ಪೌರಕಾರ್ಮಿಕರು ನಮಗಾಗಿ ಸ್ವಚ್ಛತಾ ಕಾರ್ಯವನ್ನು ಮಾಡುತ್ತಾರೆ ಅವರು ಇಲ್ಲದಿದ್ದರೆ ಎಲ್ಲೆಡೆ ಅನೈರ್ಮಲ್ಯತೆ ತುಂಬಿ ತುಳುಕುತ್ತಿತ್ತು. ಅವರೊಂದಿಗೆ ನಾವು ಸಹ ಕೈ ಜೋಡಿಸುತ್ತಿದ್ದೇವೆ.‌ ನಮ್ಮಲ್ಲಿ ಸೇವಾ ಮನೋಭಾವ ಬೆಳೆದಾಗ ಎಲ್ಲರಿಗೂ ಸಹ ಸಹಾಯ ಮಾಡುವ ಗುಣ ಬರುತ್ತದೆ. ‌ನಾವು ಮೊದಲು ಸೇವಾ ಮನೋಭಾವವನ್ನು ಬೆಳಸಿಕೊಳ್ಳಬೇಕು ಎಂದರು.


 ಇದೇ ಸಂದರ್ಭದಲ್ಲಿ ಊರಿನ ಗ್ರಾಮಸ್ಥರು, ಎನ್‌ಎಸ್‌ಎಸ್‌ ಕ್ಯಾಂಪ್‌‌ನ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು, ಸಹಾಯಕ ಪ್ರಾಧ್ಯಾಪಕರುಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑