Tel: 7676775624 | Mail: info@yellowandred.in

Language: EN KAN

    Follow us :

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

Posted date: 03 Aug, 2023

Powered by:     Yellow and Red

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂಗಳವಾರ ಮತ್ತು ಬುಧವಾರ ಬೆಳಿಗ್ಗೆ ಐದರಿಂದ ಏಳು ಕಾಡಾನೆಗಳ ಹಿಂಡು ದಾಂಧಲೆ ಎಬ್ಬಿಸುವುದರ ಜೊತೆಗೆ ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸುತ್ತಾ ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ತಾಲೂಕಿನಲ್ಲಿ ಕಾಡಾನೆಗಳ ಹಿಂಡು ಪ್ರತಿದಿನ ಒಂದಲ್ಲಾ ಒಂದು ಕಡೆ ಕಾಣಿಸಿಕೊಳ್ಳುತ್ತಾ ರೈತರ ನೆಮ್ಮದಿಯನ್ನು ಕಸಿದುಕೊಂಡಿದ್ದು, ಬೇಸಾಯ ಚಟುವಟಿಕೆಗಳಿಗೆಂದು ತೋಟಗಳಿಗೆ ತೆರಳಲು ರೈತರು ಹಿಂದೇಟು ಹಾಕುವಷ್ಟರ ಮಟ್ಟಿಗೆ ಆನೆಗಳು ಭಯವನ್ನು ಮೂಡಿಸಿವೆ.

ಕೆಲ ದಿನಗಳ ಹಿಂದಷ್ಟೆ ಇದೇ ಸ್ಥಳದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳ ಹಿಂಡು ಇದೀಗ ಒಂದು ವಾರದ ಬಳಿಕ ಮತ್ತೆ ಬಂದಿರುವುದು ಮನೆಗೆ ಅತಿಥಿ ಬರುವ ರೀತಿಯಲ್ಲಿ ಬಂದು ಹೋಗುತ್ತಿವೆ ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ.

ತಮ್ಮ ಗ್ರಾಮದ ಪಕ್ಕದಲ್ಲೇ ಬಂದು ಕಣ್ವ ನದಿಗೆ ಅಡ್ಡಲಾಗಿ ಕಟ್ಟಿರುವ ಪಿಕಪ್ ಬಳಿಯ ನೀರಲ್ಲಿ ನಿಂತ ಆನೆಗಳ ಹಿಂಡನ್ನು ನೋಡಲು ಯುವಕರಾದಿಯಾಗಿ ಗ್ರಾಮಸ್ಥರುಗಳು ಮುಗಿಬಿದ್ದ ಪರಿಣಾಮ ಅರಣ್ಯ ಇಲಾಖೆಗೆ ಕೆಲಕಾಲ ಆನೆಗಳು ಚದುರಿದರೆ ಏನು ಮಾಡುಬಹುದೆಂಬ ಭಯ ಕಾಡಿ, ನಂತರ ಪೊಲೀಸರ ಸಹಕಾರ ಪಡೆದು ಸಾರ್ವಜನಿಕರನ್ನು ನಿಯಂತ್ರಿಸಿದ ಸಿಬ್ಬಂದಿಗಳು ಸಾಯಂಕಾಲ ಆನೆಗಳನ್ನು ಓಡಿಸುವ ಕೆಲಸ ಮಾಡಿದರು.

ಈ ಮಧ್ಯದಲ್ಲಿ ಆನೆಗಳು ಹಲವು ರೈತರುಗಳ ಬಾಳೆ, ಟಮೋಟೊ, ತೆಂಗು, ರೇಷ್ಮೆ, ಜೋಳ ಸೇರಿದಂತೆ ಹಲವು ಬೆಳೆಗಳನ್ನು ನಾಶ ಮಾಡಿದ್ದು, ಪದೇ ಪದೇ ಇಂತಹ ಘಟನೆಗಳಿಂದ ನೊಂದಿರುವ ರೈತ ಸಮುದಾಯ ಆನೆ ಹಾವಳಿ ತಪ್ಪಿಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿ ಇಲ್ಲವೇ ನಮಗೆ ಶಾಶ್ವತ ಪರಿಹಾರ ಕಲ್ಪಿಸಿಕೊಡಲಿ ಎಂದು ಆಗ್ರಹಿಸಿದ್ದಾರೆ.

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ

ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮೆಹರೀಶ್
ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮೆಹರೀಶ್

ಚನ್ನಪಟ್ಟಣ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾಗಿ ಮತ್ತೀಕೆರೆ ಗ್ರಾಮದ ಮೆಹರೀಶ್ (ಮನು) ರವರು ಸೋಮವಾರ ಅವಿರೋಧವಾಗಿ ಆಯ್

ಪಂಪ್ ಸೆಟ್ ಬಾವಿ ನೀರಿಗಾಗಿ  ತಾಯಿ, ಪುತ್ರ ಕೊಲೆ
ಪಂಪ್ ಸೆಟ್ ಬಾವಿ ನೀರಿಗಾಗಿ ತಾಯಿ, ಪುತ್ರ ಕೊಲೆ

ಪಾಂಡವಪುರ: ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಟ್ ಬಾವಿ ನೀರಿನ ವಿಚಾರಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ಪುತ್ರನನ್ನು ಸ್ವಂತ ಸಂಬಂಧಿ

ಕೆರೆಯಲ್ಲಿ ಕುರಿ ಮೈತೊಳೆಯುತ್ತಿದ್ದ ಒಂದೇ ಕುಟುಂಬದ ಮೂರು ಮಂದಿ ಸಾವು
ಕೆರೆಯಲ್ಲಿ ಕುರಿ ಮೈತೊಳೆಯುತ್ತಿದ್ದ ಒಂದೇ ಕುಟುಂಬದ ಮೂರು ಮಂದಿ ಸಾವು

ಮಾಗಡಿ: ತಾಲೂಕಿನ ಮುತ್ತಸಾಗರ ಗೊಲ್ಲರಹಟ್ಟಿ ಗ್ರಾಮದ  ಪೂಜಾರಿ ರಾಜಣ್ಣ ಎಂಬುವರ ಪುತ್ರ ನಾಗರಾಜು [30], ಜ್ಯೋತಿ [35], ಲಕ್ಷ್ಮೀ [22] ಕುರಿ ಮೈತೊಳೆಯುತ್ತ

ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ಗಂಟುರೋಗ (ಪೆಬ್ರಿನ್) ಸೋಂಕು ತಕ್ಷಣ ನಿಯಂತ್ರಿಸದಿದ್ದರೆ ರೇಷ್ಮೆ ಉದ್ಯಮ ಸರ್ವನಾಶ: ವಿ.ಬಾಲಸುಬ್ರಮಣ್ಯಂ ಆತಂಕ
ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ಗಂಟುರೋಗ (ಪೆಬ್ರಿನ್) ಸೋಂಕು ತಕ್ಷಣ ನಿಯಂತ್ರಿಸದಿದ್ದರೆ ರೇಷ್ಮೆ ಉದ್ಯಮ ಸರ್ವನಾಶ: ವಿ.ಬಾಲಸುಬ್ರಮಣ್ಯಂ ಆತಂಕ

ಬೆಂಗಳೂರು: ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ತರವಾಗಿ ಹರಡುತ್ತಿರುವ ಗಂಟುರೋಗ (ಪೆಬ್ರಿನ್) ಸೋಂಕನ್ನು ತಕ್ಷಣವೇ ನಿಯಂತ್ರಿಸದಿದ್ದರೆ ಇನ್ನೊಂದು ವರ್ಷದೊಳಗೆ ರೇಷ್ಮೆ ಉದ್ಯಮ ಪೂರ್ತಿ ನಶಿಸಿಹೋಗಲಿ

Top Stories »  

Top ↑