Tel: 7676775624 | Mail: info@yellowandred.in

Language: EN KAN

    Follow us :


ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

Posted date: 23 Nov, 2023

Powered by:     Yellow and Red

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತ ಮುಖಂಡ ಸಿ ಪುಟ್ಟಸ್ವಾಮಿ ಮುಂದಾಳತ್ವದಲ್ಲಿ ತಾಲೂಕಿನ ಭೈರಾಪಟ್ಟಣ ಗ್ರಾಮದ ಬಳಿ ಇರುವ ಬಮೂಲ್ ಶಿಬಿರ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.


ಬುಧವಾರ ಬೆಳಿಗ್ಗೆ ಬಮೂಲ್ ಶಿಬಿರ ಕಚೇರಿಯ ಮುಂದೆ ಜಮಾಯಿಸಿದ ರೈತರು, ಹಾಲು ಒಕ್ಕೂಟ ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ಮುಂಬಾಗಿಲಿನಿಂದ ಮೂರು ರೂ. ಕೊಟ್ಟು ಹಿಂಬಾಗಿಲಿನಿಂದ ಎರಡು ರೂ ಕಿತ್ತು ಕೊಳ್ಳುವ ಮೂಲಕ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು.


ರಾಜ್ಯದಲ್ಲೀಗ ಭೀಕರ ಬರಗಾಲ ಆವರಿಸಿರುವುದರಿಂದ ಒಂದು ಕಡೆ ರಾಸುಗಳ ಮೇವಿಗೆ ಕೊರತೆ ಉಂಟಾಗಿದ್ದರೆ, ಇನ್ನೊಂದು ಕಡೆ ಪಶು ಆಹಾರದ ಬೆಲೆ ಏರಿಕೆಯಿಂದ ರೈತರು ತತ್ತರಿಸಿದ್ದಾರೆ. ಇಂಥಹ ಸಮಯದಲ್ಲಿ ಬಮೂಲ್ ಗೆ ರೈತರು ಪೂರೈಕೆ ಮಾಡುವ ಹಾಲಿಗೆ 2.ರೂ. ಕಡಿತ ಮಾಡಿರುವುದು ಬರಗಾದಲ್ಲಿ ಗಾಯದ ಮೇಲೆ ಇನ್ನೊಂದು ಬರೆ ಎಳೆದಂತಾಗಿದೆ ಎಂದರು.


ಬೆಲೆ ಏರಿಕೆಯಿಂದ ಹಾಲು ಉತ್ಪಾದನಾ ವೆಚ್ಚ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಆದರೆ, ಇದನ್ನು  ಪರಿಗಣಿಸದ ಒಕ್ಕೂಟ ಏಕಾಏಕಿ ಹಾಲಿನ ಬೆಲೆಯನ್ನು 2.ರೂ. ಕಡಿತಗೊಳಿಸುವ ಮೂಲಕ ಹೈನ್ಯೋದ್ಯಮವನ್ನೇ ನಂಬಿಕೊಂಡಿರುವ ರೈತರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಕೆಎಂಎಫ್, ಎನ್‍ಡಿಡಿಬಿ ಸೇರಿದಂತೆ ಎಲ್ಲ ಹಾಲು ಒಕ್ಕೂಟಗಳು ಹಾಗೂ ಪಶು ಸಂಗೋಪನ ಇಲಾಖೆಗಳು ರೈತರು ಪೂರೈಸುವ ಹಾಲಿಗೆ ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡದೇ ರೈತರಿಗೆ ಅನ್ಯಾಯ ಮಾಡುತ್ತಾ ಬಂದಿದೆ. ಒಕ್ಕೂಟಗಳು ರೈತರಿಗೆ ಮಾಡುತ್ತಿರುವ ಈ ದ್ರೋಹದಿಂದಾಗಿ ರೈತರು ಪರಿತಪಿಸುವಂತಾಗಿದೆ. ರಾಸುಗಳ ನಿರ್ವಹಣೆ, ಹಾಲು ಉತ್ಪಾದನಾ ವೆಚ್ಚ ಎಲ್ಲವನ್ನು ಗಣನೆಗೆ ತೆಗೆದುಕೊಂಡು ವೈಜ್ಞಾನಿಕ ಬೆಲೆ ನಿಗದಿ ಮಾಡಿದ್ದರೆ, ಇಂದು ರೈತರು ಪ್ರತಿಭಟನೆ ನಡೆಸುವ ಅನಿವಾರ್ಯತೆಯೇ ಬರುತ್ತಿರಲಿಲ್ಲ. ಕಳೆದ ಎಪ್ಪತ್ತಾರು ವರ್ಷಗಳಿಂದ ರೈತರು ಬೆಳೆಯುವ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಿಲ್ಲ. ಹೈನುಗಾರಿಕೆಗಾದರೂ ನಿಗದಿ ಪಡಿಸಲಿ ಎಂದು ಆಗ್ರಹಿಸಿದರು.


ಬಮೂಲ್ ಹಾಲು ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದೆ, ಚನ್ನಪಟ್ಟಣ ವು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅಲ್ಲಿರುವ ಅನಾವಶ್ಯಕ ಆಡಳಿತ್ಮಾಕ ವೆಚ್ಚ. ಅಗತ್ಯಕ್ಕೂ ಮೀರಿ ಇರುವ ಸಿಬ್ಬಂದಿ, ಅಗತ್ಯಕ್ಕಿಂತ ಹೆಚ್ಚು ವ್ಯವಸ್ಥಾಪಕರು ಹಾಗೂ ಅವರಿಗೆ ನೀಡಲಾಗುವ ಕಾರು ಮತ್ತಿತರ ಸೌಲಭ್ಯ. ಪಾರದರ್ಶಕತೆ ಇಲ್ಲದ ಖರೀದಿ ನೀತಿಯಿಂದಾಗಿ ಖರ್ಚು ದುಬಾರಿಯಾಗುತ್ತಿದೆ. ಒಕ್ಕೂಟದ ಅಧಿಕಾರಿಗಳಿಗೆ ಜೀವನ ನಿರ್ವಹಣೆ ಸೂಚ್ಯಂಕ ಆಧಾರಿತವಾಗಿ ಸಂಬಳ ಹಾಗೂ ಭತ್ಯೆಗಳು ದೊರೆಯುತ್ತವೆ. ಆದರೆ, ಬವಣೆ ಅನುಭವಿಸಿ ಹಾಲು ಪೂರೈಕೆ ಮಾಡುವ ರೈತರಿಗೆ ಯಾವುದೇ ಸೂಚ್ಯಂಕವಿಲ್ಲದಿರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.


ಇನ್ನಾದರೂ ಹಾಲು ಒಕ್ಕೂಟ ತನ್ನ ರೈತ ವಿರೋಧಿ ಧೋರಣೆಯನ್ನು ಬದಲಿಸಿಕೊಳ್ಳಬೇಕು. ರೈತರು ಪೂರೈಕೆ ಮಾಡುವ ಹಾಲಿನ ದರವನ್ನು ಹೆಚ್ಚಿಸುವ ಜತೆಗೆ ನಮ್ಮ ವಿವಿಧ 17ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದಲಿ ಮುಂದೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ಹಿರಿಯ ರೈತ ಮುಖಂಡ ಸಿ.ಪುಟ್ಟಸ್ವಾಮಿ, ರೈತ ಮುಖಂಡರಾದ ಬೋರಾಪುರ ಶಂಕರೇಗೌಡ, ಮಲ್ಲಿಜಾರ್ಜುನ ಗೌಡ, ಮುಳ್ಳಹಳ್ಳಿ ಮಂಜುನಾಥ, ಸಿದ್ದಪ್ಪ, ನರಸಿಂಹೇಗೌಡ, ದೇವರಾಜು, ಮಲ್ಲಿಕಾರ್ಜುನ್, ಶೋಭಾ ಇತರರು ಉಪಸ್ಥಿತರಿದ್ದರು


*(ರೈತರ ಪ್ರತಿಭಟನೆಗೆ ಪ್ಯಾಕೇಜ್)*


ಬೆಂಗಳೂರು ಹಾಲು ಒಕ್ಕೂಟಕ್ಕೆ ಲಾಭವಾದಾಗ ರೈತರಿಂದ ಪಡೆಯುವ ಹಾಲಿನ ದರವನ್ನು ಹೆಚ್ಚಿಸಲಾಗುತ್ತದೆ. ಅಂತೆಯೇ ನಷ್ಟವಾದಾಗ ಹಾಲಿನ ದರವನ್ನು ಕಡಿತಗೊಳಿಸಲಾಗುತ್ತದೆ. ಸದ್ಯದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲಿನ ದರವನ್ನು 2.ರೂ. ಕಡಿತ ಮಾಡಲಾಗಿದೆ ಎಂದು ಬಮೂಲ್ ವ್ಯವಸ್ಥಾಪಕ ಡಾ.ಶ್ರೀಧರ್ ತಿಳಿಸಿದರು.


ತಾಲೂಕಿನ ಬೈರಾಪಟ್ಟಣದ ಬಳಿ ಇರುವ ಬಮೂಲ್ ಶಿಬಿರ ಕಚೇರಿಯ ಸಭಾಂಗಣದಲ್ಲಿ ರೈತರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ರೈತರ ಕುಂದು-ಕೊರತೆ ಆಲಿಸಿ ಮಾತನಾಡಿದ ಅವರು, ಪ್ರಸ್ತತ ಬಮೂಲ್‍ಗೆ 67 ಕೋಟಿ ನಷ್ಟವಾಗಿದೆ. ಬಮೂಲ್ ಗೆ ಆಗುತ್ತಿರುವ ನಷ್ಟವನ್ನು ಕಡಿಮೆ ಮಾಡಲು ಹಾಲಿನ ದರವನ್ನು ಕಡಿತ ಮಾಡಲಾಗಿದೆ. ಇದರಿಂದ ಒಕ್ಕೂಟಕ್ಕೆ ಏನು ದೊಡ್ಡ ಲಾಭವಾಗುವುದಿಲ್ಲ ಎಂದು ತಿಳಿಸಿದರು.


ಒಕ್ಕೂಟಕ್ಕೆ ಬರುವ ಲಾಭದ ಹಣವನ್ನು ರೈತರ ಅಭ್ಯುದಯಕ್ಕೆ ವಿನಿಯೋಗಿಸಲಾಗುತ್ತದೆ. ರಾಸುಳಿಗೆ ವಿಮೆ, ಬಮೂಲ್ ಕಲ್ಯಾಣ ಟ್ರಸ್ಟ್ ಮೂಲಕ ಸೌಲಭ್ಯ, ರಿಯಾಯಿತಿ ದರದಲ್ಲಿ ಚಾಪ್‍ಕಟ್ಟರ್ ಸೇರಿದಂತೆ ಇನ್ನಿತರ ಸಲಕರಣಗಳ ವಿತರಣೆ, ಪ್ರತಿಭಾ ಪುರಸ್ಕಾರ ಸೇರಿದಂತೆ ಹಲವಾರು ಕಾರ್ಯಕ್ರಮಗಳ ಮೂಲಕ ಲಾಭದ ಹಣವನ್ನು ರೈತರ ಶ್ರೇಯೋಭಿವೃದ್ಧಿಗೆ ವಿನಿಯೋಗಿಸಲಾಗುತ್ತದೆ. ಒಕ್ಕೂಟ ಎಂದಿಗೂ ರೈತರ ಪರವಾಗಿಯೇ ಇದೆ, ಈ ಸೌಲಭ್ಯಗಳು ಬೇಡವೆಂದಾದರೆ ಹೆಚ್ಚಿನ ಲಾಭವನ್ನು ನೀಡಬಹುದಾಗಿದೆ ಎಂದು ತಿಳಿಸಿದರು.


ರೈತ ವಿರೋಧಿ ಧೋರಣೆ: ಪ್ರಸ್ತುತ ಸನ್ನಿವೇಶದಲ್ಲಿ ಹಸುಗಳನ್ನು ಸಾಕಿ, ಹೈನೋದ್ಯಮ ನಡೆಸುವುದು ಎಷ್ಟು ಕಷ್ಟಕರ ಎಂಬುದು ಅಧಿಕಾರಿಗಳಿಗೆ ಅರಿವಿಲ್ಲ. ಹಾಲಿನ ದರ ಕಡಿತದಿಂದ  ಮೊದಲೇ ಬಡತನದಲ್ಲಿ ಕಷ್ಟಪಡುತ್ತಿರುವ ರೈತರ ಸಂಕಷ್ಟ ಇನ್ನಷ್ಟು ಹೆಚ್ಚಾಗುವಂತೆ ಮಾಡಿದೆ. ಬಮೂಲ್ ಅಧ್ಯಕ್ಷರು ಹಾಗೂ ವ್ಯವಸ್ಥಾಪಕರನ್ನು ಇಲ್ಲಿಗೆ ಕರೆಸಿ ನಾವು ಅವರೊಡನೆಯೇ ಮಾತುಕತೆ ನಡೆಸುತ್ತೇವೆ ಎಂದು ರೈತರು ಆಗ್ರಹಿಸಿದರು.


ಈ ವೇಳೆ ರೈತರ ಪರವಾಗಿ ತಮ್ಮ ಬೇಡಿಕೆಗಳನ್ನು ಮಂಡಿಸಿದ ಹಿರಿಯ ರೈತ ಮುಖಂಡ ಸಿ.ಪುಟ್ಟಸ್ವಾಮಿ, ರೈತರು ಪೂರೈಕೆ ಮಾಡುವ ಹಾಲಿಗೆ ವೈಜ್ಞಾನಿಕ ದರ ನಿಗದಿ ಮಾಡಬೇಕು. ಒಕ್ಕೂಟದ ಅನಾವಶ್ಯಕ ಆಡಳಿತ್ಮಾಕ ವೆಚ್ಚಗಳಿಗೆ ಕಡಿವಾಣ ಹಾಕಬೇಕು. ಬಮೂಲ್ ಕಲ್ಯಾಣ ಟ್ರಸ್ಟ್ ಧರ್ಮದರ್ಶಿಗೆ ಇರುವ ಮಾರ್ಗಸೂಚಿಗಳು, ಪ್ರತಿ ಲೀಟರ್ ಹಾಲಿಗೆ ಆಗುವ ಆಡಳಿತ್ಮಾಕ ವೆಚ್ಚ, ಹಾಲು ಸಾಗಾಣಿಕೆ ವೆಚ್ಚ, ಒಕ್ಕೂಟದ 59ನೇ ಆಡಳಿತ ಮಂಡಳಿ ಸಭೆಯ ತೀರ್ಮಾನವನ್ನು ವಾಪಸ್ ಪಡೆಯಬೇಕು. ಶೇ. 3.5 ಫ್ಯಾಟ್ ಮತ್ತು ಶೇ. 8.5 0 ಎಸ್‍ಎನ್‍ಎಸ್ ಹಾಲಿಗೆ ಕನಿಷ್ಠ  40 ರೂ. ನಿಗದಿಪಡಿಸಬೇಕು. ಹಾಲಿನ ಮೇಲೆ ವಿಧಿಸುವ ಲೆವಿ ಪದ್ಧತಿಯನ್ನು ಕೈಬಿಡಬೇಕು. ಜಿಲ್ಲಾವಾರು ಪಶು ಆಹಾರ ಉತ್ಪಾದನಾ ಘಟಕ ತೆರೆಯಲು ಕ್ರಮ ವಹಿಸಬೇಕು. ಒಕ್ಕೂಟದ ನೇಮಕಾತಿ ಸಂದರ್ಭದಲ್ಲಿ ಸಹಕಾರಿ ಸಂಘದ ನೌಕರರಿಗೆ ಶೇ. 10 ಹಾಗೂ ಉತ್ಪಾದಕ ರೈತರ ಮಕ್ಕಳಿಗೆ ಶೇ. 90 ಪ್ರಮಾಣದಲ್ಲಿ ಅವಕಾಶ ನೀಡಬೇಕು, ಒಕ್ಕೂಟದ ಪ್ರಸಕ್ತ ಬೈಲಾ ತಿದ್ದುಪಡಿಗೆ ತಾಲೂಕುವಾರು ಚರ್ಚೆಗೆ ಒಳಪಡಿಸಿ ಹೈನೋಧ್ಯಮದ ರಕ್ಷಣೆಗೆ  ಅಗತ್ಯ ಕ್ರಮಕ್ಕೆ ಕೈಗೊಳ್ಳಬೇಕು ಎಂಬ ಬೇಡಿಕೆಗಳನ್ನು ಮಂಡಿಸಿದರು.  


ಈ ಸಂದರ್ಭದಲ್ಲಿ ಬಮೂಲ್ ಉಪವ್ಯವಸ್ಥಾಪಕ ಹೇಮಂತ್, ವಿಸ್ತೀರ್ಣಾಧಿಕಾರಿ ಹೊನ್ನಪ್ಪ ಪೂಜಾರ್, ಕೃಷಿ ಅಧಿಕಾರಿ ಜಿತೇಂದ್ರ ಇತರರು ಇದ್ದರು.


 ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑