Tel: 7676775624 | Mail: info@yellowandred.in

Language: EN KAN

    Follow us :


ಕಳಂಕಿತ ಕೋಡಿಹಳ್ಳಿ ಇರುವ ಸಭೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ: ವಿಧಾನಸೌಧಲ್ಲಿ ನಡೆದ ಸಚಿವರ ನೇತೃತ್ವದ ಸಭೆಯಲ್ಲಿ ರೈತರ ಪಟ್ಟು

Posted date: 15 Oct, 2022

Powered by:     Yellow and Red

ಕಳಂಕಿತ ಕೋಡಿಹಳ್ಳಿ ಇರುವ ಸಭೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ: ವಿಧಾನಸೌಧಲ್ಲಿ ನಡೆದ ಸಚಿವರ ನೇತೃತ್ವದ ಸಭೆಯಲ್ಲಿ ರೈತರ ಪಟ್ಟು

 ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಸಕ್ಕರೆ ಸಚಿವ ಶಂಕರ್‌ ಪಾಟೀಲ್‌ ಮುನೇನಕೊಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಗೆ ಕೋಡಿಹಳ್ಳಿ ಚಂದ್ರಶೇಖರ್‌ ಆಗಮಿಸಿದ್ದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರೈತ ಹೋರಾಟಗಾರರು ವಾಗ್ವಾದ ನಡೆಸಿದ ಪ್ರಸಂಗ ಶನಿವಾರ ಜರುಗಿತು.


ಕಬ್ಬು ಬೆಲೆ, ಬಾಕಿ ಪಾವತಿ, ಬೆಳೆಗಾರರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಚಿವರು ವಿಧಾನಸೌಧದ ಮೂರನೇ ಮಹಡಿಯಲ್ಲಿ ಸಭೆ ನಿಗದಿಪಡಿಸಿದ್ದರು. ಈ ವೇಳೆ ರೈತ ಹೋರಾಟಗಾರರು ಕೋಡಿಹಳ್ಳಿ ಚಂದ್ರಶೇಖರ್‌ ಭಾಗವಹಿಸಿದ್ದನ್ನು ಆಕ್ಷೇಪಿಸಿ, ಒಂದೋ ಅವರಿರಬೇಕು ಇಲ್ಲವೇ ನಾವಿರಬೇಕು ಎಂದು ಪಟ್ಟು ಹಿಡಿದು ಸಚಿವರಿಗೆ ಸ್ಪಷ್ಟಪಡಿಸಲು ಒತ್ತಾಯಿಸಿದರು.


ಇನ್ನು ಗುರುತರ ಆರೋಪ ಹೊತ್ತು ಕಳಂಕಿತರಾದ ಕೋಡಿಹಳ್ಳಿ ಇರುವ ಸಭೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ ಎಂದು ಕೂಗಾಡಿದರು. ಅಲ್ಲದೆ ಸಭೆ ಆರಂಭವಾಗುತ್ತಿದ್ದಂತೆ ರೈತ ಮುಖಂಡ ವಿಜಯ ಕುಮಾರ್ ಮಾತನಾಡಿ, ಸಭೆಯ ಆಹ್ವಾನಿತರ ಪಟ್ಟಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೆಸರು ನಮೂದು ಆಗಿಲ್ಲ. ಆಹ್ವಾನ ಇಲ್ಲದಿದ್ದರೂ ಕೋಡಿಹಳ್ಳಿ ಚಂದ್ರಶೇಖರ್ ಸಭೆಗೆ ಬಂದಿದ್ದಾರೆ. ಅವರ ವಿರುದ್ಧ ಆಪಾದನೆಗಳಿವೆ. ಈ ನಿಟ್ಟಿನಲ್ಲಿ, ಅವರು ಸಭೆಯಲ್ಲಿ ಭಾಗಿಯಾಗುವುದು ಗೌರವ ತರುವುದಿಲ್ಲ. ಇದರ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಸಚಿವರಿಗೆ ಆಗ್ರಹಿಸಿದರು.


ಕೋಡಿಹಳ್ಳಿ ಚಂದ್ರಶೇಖರ್​ ಮಾತನಾಡಿ, ಆರೋಪದ ಕುರಿತು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿರುವೆ. ಯಾವುದೇ ತನಿಖೆ ನಡೆಸಿ, ನಾನು ಅಪರಾಧಿ ಎಂದು ಸರ್ಕಾರ ಘೋಷಣೆ ಮಾಡಿದರೆ ಶಿಕ್ಷೆಗೆ ಸಿದ್ದ. ಅದರ ಬದಲಾಗಿ, ವೈಯಕ್ತಿಕ ಭಿನ್ನಾಭಿಪ್ರಾಯವನ್ನು ಸಭೆಯಲ್ಲಿ ತರುವುದು ಸೂಕ್ತ ಅಲ್ಲ. ವಿಷಯದ ಕಡೆ ಗಮನ ನೀಡೋಣ ಎಂದು ಕೋರಿದರು.


ಈ ವಿಚಾರವಾಗಿ ರೈತರ ಎರಡು ಬಣಗಳ ಮಧ್ಯೆ ವಾಗ್ವಾದ ನಡೆಯಿತು. ರೈತ ಮುಖಂಡರಾದ ಸುನಂದಾ ಜಯರಾಂ ಇನ್ನಿತರರು ಮಧ್ಯೆ‌ ಪ್ರವೇಶಿಸಿ, ಸಭೆಯ ಮಹತ್ವ ಅರಿತು ವಿಷಯಗಳ ಚರ್ಚೆ, ಪರಿಹಾರ ಕಂಡುಕೊಳ್ಳೋಣ ಎಂದರು.


ಸಚಿವ ಶಂಕರ್ ಪಾಟೀಲ್ ಸಹ ಸಭೆಯಲ್ಲಿ ಗೊಂದಲ ಆಗುವುದು ಬೇಡ. ನಾವು ನಿಗದಿಪಡಿಸಿದ ವಿಚಾರದ ಬಗ್ಗೆ ಚರ್ಚೆ ಮಾಡೋಣವೆಂದು ವಿನಂತಿಸಿಕೊಂಡರು. ಬಳಿಕ ಎಲ್ಲರೂ ಸುಮ್ಮನಾದರು.


*ಅರೆಯದ ಕಬ್ಬುದರ ನಿಗದಿ ಸರ್ಕಾರಕ್ಕೆ ಐದು ದಿನಗಳ ಅಂತಿಮ ಗಡುವು:* ರಾಜ್ಯಾದ್ಯಂತ ಪ್ರಬಲಗೊಳ್ಳುತ್ತಿರುವ ಕಬ್ಬು ಬೆಳೆಗಾರರ ಹೋರಾಟವನ್ನು ಮನಗಂಡು ರಾಜ್ಯ ಸರ್ಕಾರ ಇಂದು ಸಕ್ಕರೆ ಕಾರ್ಖಾನೆ ಮಾಲೀಕರ ಹಾಗೂ ರೈತ ಪ್ರತಿನಿಧಿಗಳ ಸಭೆಯನ್ನು ವಿಧಾನಸೌಧದಲ್ಲಿ ಸಕ್ಕರೆ ಸಚಿವರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು, ಸುಮಾರು ಮೂರು ಗಂಟೆಗಳ ಕಾಲ ಚರ್ಚೆ ನಡೆದರು ಯಾವುದೇ ತೀರ್ಮಾನವಾಗಲಿಲ್ಲ.


ಈ ವೇಳೆ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾತನಾಡಿ ಸಭೆಯಲ್ಲಿ ರೈತ ಮುಖಂಡರು ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ಎರಡು ದಿನದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮತ್ತೊಮ್ಮೆ ರೈತ ಪ್ರತಿನಿಧಿಗಳ ಸಭೆ ಕರೆದು ರೈತರಿಗೆ ಸಿಹಿ ಸುದ್ದಿ ನೀಡುವುದಾಗಿ ತಿಳಿಸಿ ಸಭೆಯನ್ನು ಮುಕ್ತಾಯಗೊಳಿಸಿದರು.


ಸಭೆಯಲ್ಲಿ ಭಾಗವಹಿಸಿದ್ದ ರೈತರು ಇವತ್ತೇ ಕಬ್ಬುದರ ನಿಗದಿಯಾಗಬೇಕು ಎಂದು ಪಟ್ಟು ಹಿಡಿದಾಗ ಮುಖ್ಯಮಂತ್ರಿಗಳು ಪ್ರವಾಸ ಹೋಗಿರುವ ಕಾರಣ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ರೈತರ ಮನವೊಲಿಸಿದರು.


ಪಂಜಾಬ್ ರಾಜ್ಯದಲ್ಲಿ 3,800 ರೂ. ಉತ್ತರ ಪ್ರದೇಶದಲ್ಲಿ 3,500 ರೂ. ಗುಜರಾತ್‌ನಲ್ಲಿ 4,400 ರೂ. ದರ ನಿಗದಿ ಮಾಡಿದ್ದಾರೆ ರಾಜ್ಯ ಸರ್ಕಾರವು ಅದನ್ನು ಗಮನಿಸಿ ರಾಜ್ಯ ಸಲಹಾ ಬೆಲೆಯನ್ನು ನ್ಯಾಯಯುತವಾಗಿ ನಿಗದಿ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ಮುಖಂಡರು ಒತ್ತಾಯಿಸಿದರು.


ಸಭೆಯಲ್ಲಿ ಸುನಂದ ಜಯರಾಮ್ ಕಬ್ಬು ಬೆಳೆಯುವ ರೈತರ ಸಂಕಷ್ಟವನ್ನು ವಿವರವಾಗಿ ತಿಳಿಸಿದರು. ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಚೂನಪ್ಪ ಪೂಜಾರಿ, ರಮೇಶ್ ಹೂಗಾರ್, ಜೋಶಿ, ನಾರಾಯಣರೆಡ್ಡಿ, ಸುನೀತಾ ಪುಟ್ಟಣ್ಣಯ್ಯ, ಸುರೇಶ್ ಪಾಟೀಲ್, ಎಂ.ವಿ. ಗಾಡಿ, ತೇಜಸ್ವಿ ಪಟೇಲ್, ಆತ್ತಹಳಿ ದೇವರಾಜ್ ಕಬ್ಬು ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲಗೇರಿ, ದಕ್ಷಿಣ ಭಾರತ ಸಕ್ಕರೆ ಖಾಸಗಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಲ ಅಧ್ಯಕ್ಷ ಜಗದೀಶ್ ಗುಡುಗಂಟಿ ಇನ್ನೂ ಮುಂತಾದ 200ಕ್ಕೂ ಹೆಚ್ಚು ರೈತ ಪ್ರತಿನಿಧಿಗಳು ಭಾಗವಹಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ಕಾಡುಹಂದಿ ಕೊಲ್ಲಲು ಅವಕಾಶವಿದ್ದರೂ ಅರಣ್ಯ ಇಲಾಖೆ ಪ್ರಚಾರ ನೀಡಿಲ್ಲ ರೈತರ ಆರೋಪ
ಕಾಡುಹಂದಿ ಕೊಲ್ಲಲು ಅವಕಾಶವಿದ್ದರೂ ಅರಣ್ಯ ಇಲಾಖೆ ಪ್ರಚಾರ ನೀಡಿಲ್ಲ ರೈತರ ಆರೋಪ

ಮದ್ದೂರು: ಮಾನವರ ಪ್ರಾಣಹಾನಿ, ರೈತ ಬೆಳೆದ ಬೆಳೆ ನಾಶಮಾಡುವ ಕಾಡುಹಂದಿಗಳನ್ನು ಕೊಲ್ಲಲು ಸರ್ಕಾರ ಅನುಮತಿ ನೀಡಿದೆ. ಆದರೆ ರೈತರಿಗೆ ಅರಣ್ಯಾಧಿಕಾರ

ಅನ್ನದಾತ ಇಂದು ತಲ್ಲಣಗೊಂಡಿದ್ದಾನೆ. ಎಸ್ಎ ಕಂಪನಿ ಆತನನ್ನು ಉನ್ನತಕ್ಕೇರಿಸಲಿ ವಿಲ್ಟ್ರೆಡ್ ಡಿಸೋಜಾ
ಅನ್ನದಾತ ಇಂದು ತಲ್ಲಣಗೊಂಡಿದ್ದಾನೆ. ಎಸ್ಎ ಕಂಪನಿ ಆತನನ್ನು ಉನ್ನತಕ್ಕೇರಿಸಲಿ ವಿಲ್ಟ್ರೆಡ್ ಡಿಸೋಜಾ

ಮಂಡ್ಯ: ನ: ೧೫/೨೦೨೨. ಅನ್ನದಾತೋ ಸುಖೀನೋಭವ ಎಂಬ ಮಾತನ್ನು ಉಳಿಸಿಕೊಂಡಿರುವ ರೈತ ಇಂದು ತಲ್ಲಣಗೊಂಡಿದ್ದಾನೆ. ರೈತನ ಸೋಗಿನಲ್ಲಿ ಮಾರಾಟ ಮಾಡುತ್ತಿರುವ

ಕಳಂಕಿತ ಕೋಡಿಹಳ್ಳಿ ಇರುವ ಸಭೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ: ವಿಧಾನಸೌಧಲ್ಲಿ ನಡೆದ ಸಚಿವರ ನೇತೃತ್ವದ ಸಭೆಯಲ್ಲಿ ರೈತರ ಪಟ್ಟು
ಕಳಂಕಿತ ಕೋಡಿಹಳ್ಳಿ ಇರುವ ಸಭೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ: ವಿಧಾನಸೌಧಲ್ಲಿ ನಡೆದ ಸಚಿವರ ನೇತೃತ್ವದ ಸಭೆಯಲ್ಲಿ ರೈತರ ಪಟ್ಟು

 ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಸಕ್ಕರೆ ಸಚಿವ ಶಂಕರ್‌ ಪಾಟೀಲ್‌ ಮುನೇನಕೊಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭ

ರಾಮನಗರ ಗಡಿ ಗ್ರಾಮಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡ ರೋಗ, ಕನಕಪುರ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ರೋಗ ಪತ್ತೆ
ರಾಮನಗರ ಗಡಿ ಗ್ರಾಮಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡ ರೋಗ, ಕನಕಪುರ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ರೋಗ ಪತ್ತೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿಯೂ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೈತರನ್ನು ಆತಂಕಕ್ಕೆ ದೂಡಿದೆ.


ಜಿಲ್ಲೆಯಲ್ಲಿ ಜಾನುವಾರು ಜಾತ್ರೆ ಮತ್ತು ಸಾಗಾಣಿಕೆ ನಿಷೇಧ
ಜಿಲ್ಲೆಯಲ್ಲಿ ಜಾನುವಾರು ಜಾತ್ರೆ ಮತ್ತು ಸಾಗಾಣಿಕೆ ನಿಷೇಧ

ರಾಮನಗರ-ಅ.11: ರಾಜ್ಯದಾದ್ಯಂತ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೋಗವು ಹರಡದಂತೆ ಮುನ್ನೆಚರಿಕೆ ಕ್ರಮವಾಗಿ ಅಕ್ಟೋಬರ್ 11 ರಿಂದ ನವೆಂಬರ್ 10 ರವರೆಗೆ ರಾಮನಗರ ಜಿಲ್ಲೆಯಾದ್ಯಂತ ಜಾ

ರೈತರಿಗೆ ಸಕಾಲದಲ್ಲಿ ದೊರೆಯದ ಯೂರಿಯಾ, ಕಾಳಸಂತೆಯಲ್ಲಿ ಮಾರಾಟ
ರೈತರಿಗೆ ಸಕಾಲದಲ್ಲಿ ದೊರೆಯದ ಯೂರಿಯಾ, ಕಾಳಸಂತೆಯಲ್ಲಿ ಮಾರಾಟ

ಚನ್ನಪಟ್ಟಣ: ಈಬಾರಿ ಏಪ್ರಿಲ್ ನಿಂದಲೇ ಮಳೆ ಆರಂಭವಾಗಿದ್ದು ಈಗಲೂ ಮುಂದುವರೆದಿದೆ. ಕೆಲವರು ಮಧ್ಯಮಧ್ಯ ಅಂದರೆ ಮಳೆ ಬಿಡುವು ಕೊಟ್ಟಾಗ ಬಿತ್ತನೆ ಮಾಡಿದ್

ಬೆಳೆ ಸಮೀಕ್ಷೆ ಮತ್ತು ವಿಮೆ ಆಂದೋಲನಕ್ಕೆ ಚಾಲನೆ
ಬೆಳೆ ಸಮೀಕ್ಷೆ ಮತ್ತು ವಿಮೆ ಆಂದೋಲನಕ್ಕೆ ಚಾಲನೆ

ಚನ್ನಪಟ್ಟಣ.ಆ.೧೦: ೨೦೨೨-೨೩ ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಹಾಗೂ ಬೆಳೆವಿಮೆ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕಿನ ಎಲ್ಲಾ ಹೋಬಳಿಗಳಲ್

ಜಿಲ್ಲೆಯಲ್ಲಿ ಅಬ್ಬರಿಸಿದ ವರುಣ. 447 ಹೆಕ್ಟೇರ್ ಬೆಳೆ ಹಾನಿ190 ಮನೆಗಳು ಜಖಂ
ಜಿಲ್ಲೆಯಲ್ಲಿ ಅಬ್ಬರಿಸಿದ ವರುಣ. 447 ಹೆಕ್ಟೇರ್ ಬೆಳೆ ಹಾನಿ190 ಮನೆಗಳು ಜಖಂ

ಆರಿದ್ರಾ ಮತ್ತು ಆಶ್ಲೇಷ ಮಳೆಯು ಈ ಬಾರಿ ವಾಡಿಕೆಗಿಂತ ಹೆಚ್ಚಾಗಿ ಸುರಿದ ಪರಿಣಾಮ ರೇಷ್ಮೆನಾಡು ರಾಮನಗರ ಜಿಲ್ಲೆ ತಲ್ಲಣಗೊಂಡಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಕಳಲ್ಲಿ ಬೆಳೆದ ಬೆಳೆ ಮತ್ತು ಮನೆಗಳಿಗೆ ಹೆಚ್

ಮಾವು ಅಭಿವೃದ್ಧಿ ಮಂಡಳಿಯಿಂದ ರಾಮನಗರದಲ್ಲಿ ರೈತ ಬಜಾರ್:
ಮಾವು ಅಭಿವೃದ್ಧಿ ಮಂಡಳಿಯಿಂದ ರಾಮನಗರದಲ್ಲಿ ರೈತ ಬಜಾರ್:

 August 7, 2022: ರಾಮನಗರ ಕೋಲಾರ ಮಾವು ಅಭಿವೃದ್ಧಿ ಮಂಡಳಿಯಿಂದ ರಾಮನಗರದಲ್ಲಿ ರೈ

ರೈತಸಂಘದಲ್ಲಿ ಯುವಕರು ಹೆಚ್ಚು ತೊಡಗಿಸಿಗೊಳ್ಳಬೇಕು ರೈತ ಹುತಾತ್ಮರ ದಿನಾಚರಣೆಯಲ್ಲಿ ಬಡಗಲಪುರ ನಾಗೇಂದ್ರ
ರೈತಸಂಘದಲ್ಲಿ ಯುವಕರು ಹೆಚ್ಚು ತೊಡಗಿಸಿಗೊಳ್ಳಬೇಕು ರೈತ ಹುತಾತ್ಮರ ದಿನಾಚರಣೆಯಲ್ಲಿ ಬಡಗಲಪುರ ನಾಗೇಂದ್ರ

ಚನ್ನಪಟ್ಟಣ:ಜು.೨೩:  ಇಂದು ತಾಲ್ಲೂಕಿನ ರೈತ ಹೋರಾಟಗಾರ ರಾಜ್ಯ ರೈತ ಸಂಘದ ಕಾರ್ಯಾದ್ಯಕ್ಷರಾಗಿದ್ದ ಎಂ.ರಾಮು ಹಾಗೂ ರಾಜ್ಯ ರೈತ ಸಂಘದ ಉಪಾಧ್

Top Stories »  


Top ↑