Tel: 7676775624 | Mail: info@yellowandred.in

Language: EN KAN

    Follow us :


ಹನಿ ನೀರಾವರಿ ಜೋಡಣೆಯಲ್ಲಿ ಚನ್ನಪಟ್ಟಣ ರಾಷ್ಟ್ರಕ್ಕೆ ಮಾದರಿಯಾಗಬೇಕು ಡಾ ಬೆಳ್ಳೂರು ಕೃಷ್ಣ.

Posted date: 20 Jul, 2018

Powered by:     Yellow and Red

ಹನಿ ನೀರಾವರಿ ಜೋಡಣೆಯಲ್ಲಿ ಚನ್ನಪಟ್ಟಣ ರಾಷ್ಟ್ರಕ್ಕೆ ಮಾದರಿಯಾಗಬೇಕು ಡಾ ಬೆಳ್ಳೂರು ಕೃಷ್ಣ.

ಹನಿ ನೀರಾವರಿ ಜೋಡಣೆಯಲ್ಲಿ ಹಳೆ ಮೈಸೂರು ಭಾಗ ಹಿಂದುಳಿದಿದ್ದು ಚನ್ನಪಟ್ಟಣವೂ ಹೊರತಾಗಿಲ್ಲ, ಈಗಿನಿಂದಲೇ ಎಲ್ಲಾ ರೈತರು ಹನಿ ನೀರಾವರಿ ಜೋಡಣೆ ಮಾಡುವುದರ ಮೂಲಕ ದೇಶದಲ್ಲೇ ಮಾದರಿಯಾಗಬೇಕು ಎಂದು ಹನಿ ನೀರಾವರಿ ಇಲಾಖೆಯ ಜಂಟಿ ನಿರ್ದೇಶಕ ಡಾ ಬೆಳ್ಳೂರು ಕೃಷ್ಣ ಕರೆ ನೀಡಿದರು.


ತಾಲ್ಲೂಕಿನ ಕಸಬಾ ಹೋಬಳಿಯ ನೀಲಕಂನಹಳ್ಳಿಯ ಶ್ರೀ ಶ್ರೀನಿವಾಸ ದೇವಸ್ಥಾನದ ಬಳಿ ತೋಟಗಾರಿಕೆ ಇಲಾಖೆಯು ಸುಜಯ್ ಇರಿಗೇಷನ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಮಾನ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ಇಸ್ರೇಲ್ ಮಾದರಿಯನ್ನು ರೈತರಿಗೆ ಕಲ್ಪಿಸಲು ಉತ್ಸುಕವಾಗಿದ್ದು ಆ ನಿಟ್ಟಿನಲ್ಲಿ ಎಲ್ಲಾ ರೈತರು ಕೈ ಜೋಡಿಸಿದರೆ ಕಡಿಮೆ ನೀರಿನಲ್ಲಿ ಹಾಗೂ ಕಡಿಮೆ ಗೊಬ್ಬರದಲ್ಲಿ ಅಧಿಕ ಇಳುವರಿ ಪಡೆಯಬಹುದು, ಸದ್ಯ ಚನ್ನಪಟ್ಟಣ ತಾಲೂಕಿನಲ್ಲಿ ನೀರು ಹೆಚ್ಚಾಗಿದೆ, ಈ ನೀರನ್ನು ರೈತರು ದುರುಪಯೋಗ ಪಡಿಸಿಕೊಳ್ಳದೆ ಹನಿ ನೀರಾವರಿ ಬಳಸುವ ಮೂಲಕ ಜಲ ಉಳಿಸುವ ಕಾರ್ಯಕ್ಕೆ ಮುಂದಾಗಬೇಕು, ಇಲ್ಲವಾದರೆ ಅತಿ ಹೆಚ್ಚು ನೀರುಣಿಸಿದ ಮಂಡ್ಯ ಭಾಗದ ಭೂಮಿಯಂತೆ ಈ ಭಾಗದ ಭೂಮಿಯು ಸಹ ಸತ್ವ ಕಳೆದುಕೊಳ್ಳುತ್ತದೆ ಎಂದು ರೈತರಿಗೆ ಮನವರಿಕೆ ಮಾಡಿದರು.


ಸುಜಯ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಮೃತ್ಯುಂಜಯ ಹನಿ ನೀರಾವರಿ ಗೆ ಸಂಬಂಧಿಸಿದ ಉಪಕರಣಗಳ ಪ್ರಾತ್ಯಕ್ಷಿಕೆ ತೋರಿಸಿ ಅವುಗಳ ಬಗ್ಗೆ ಮಾಹಿತಿ ನೀಡಿದರು, ಹಾಗೂ ಅಲ್ಲೇ ಪಕ್ಕದ ರಘು ರವರ ಜಮೀನಿನಲ್ಲಿ ಟಮೋಟ, ಸೌತೆಕಾಯಿ ಹಾಗೂ ಇನ್ನಿತರ ತೋಟಗಾರಿಕೆ ಬೆಳೆಗಳಿಗೆ ಅಳವಡಿಸಿದ್ದ ಹನಿ ನೀರಾವರಿ ಬಗ್ಗೆ ನೆರೆದಿದ್ದ ರೈತರಿಗೆ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಸದಸ್ಯೆ ವೀಣಾಚಂದ್ರು, ತಾಲ್ಲೂಕು ಪಂಚಾಯತ ಅಧ್ಯಕ್ಷ ಹರೂರು ರಾಜಣ್ಣ, ತಾಲ್ಲೂಕು ಪಂಚಾಯತ ಸದಸ್ಯ ರಮೇಶ್, ನೀಲಸಂದ್ರ ಗ್ರಾಮ ಪಂಚಾಯತಿ ಸದಸ್ಯ ಭರತ್, ಮಾವು ಬೆಳೆಗಾರರ ತಾಲ್ಲೂಕು ಅಧ್ಯಕ್ಷ ಧರಣೀಶ್ ರಾಂಪುರ, ರಾಮನಗರ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕ ಗುಣವಂತ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ವಿವೇಕ್ ಮತ್ತು ಸಿಬ್ಬಂದಿ, ಸೋಮಶಂಕರ್, ಕೃಷ್ಣಪ್ಪ, ಸುರೇಶ್, ರವಿ ಹಾಗೂ ಹಲವಾರು ರೈತರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑