Tel: 7676775624 | Mail: info@yellowandred.in

Language: EN KAN

    Follow us :


ಕೃಷಿ ಪ್ರಧಾನ ದೇಶದಲ್ಲಿ ರೈತನೇ ಗುರು, ಭಾವಿಪ ಶಿಕ್ಷಕರ ದಿನಾಚರಣೆಯಲ್ಲಿ ಡಾ ಟಿ ಬಿ ಪುಟ್ಟರಾಜು.

Posted date: 06 Sep, 2018

Powered by:     Yellow and Red

ಕೃಷಿ ಪ್ರಧಾನ ದೇಶದಲ್ಲಿ ರೈತನೇ ಗುರು, ಭಾವಿಪ ಶಿಕ್ಷಕರ ದಿನಾಚರಣೆಯಲ್ಲಿ ಡಾ ಟಿ ಬಿ ಪುಟ್ಟರಾಜು.

ಮಕ್ಕಳಿಗೆ ಅಕ್ಷರ ಹೇಳಿಕೊಟ್ಟವನು ಗುರು, ಹೆತ್ತ ಮಕ್ಕಳಿಗೆ ತಾಯಿಯೇ ಗುರು, ಭೂಮಿ ಮೇಲಿರುವ ಪ್ರತಿಯೊಂದು ಜೀವಿಗೂ ದೇಶದ ಬೆನ್ನೆಲುಬು, ಅನ್ನದಾತನೇ ಗುರು ಎಂದು ವಿಶ್ರಾಂತ ಪ್ರಾದ್ಯಾಪಕ ಹಾಗೂ ಕೃಷಿ ವಿಶ್ವವಿದ್ಯಾಲಯ ದ ತಾಂತ್ರಿಕ ಅಧಿಕಾರಿಗಳಾದ ಡಾ ಪುಟ್ಟರಾಜುರವರು ಅಭಿಪ್ರಾಯಪಟ್ಟರು.

ಅವರು ಭಾರತ ವಿಕಾಸ ಪರಿಷತ್ತು ಕಣ್ವ ಶಾಖೆ ಚನ್ನಪಟ್ಟಣ ಇವರು ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು.

 

ಇಂದು ರೈತ ಸಂಕಷ್ಟದಲ್ಲಿದ್ದು ಸರ್ಕಾರವಾಗಲಿ ಜನಪ್ರತಿನಿಧಿಗಳಾಗಲಿ ಅವರ ಸಹಾಯಕ್ಕೆ ನಿಲ್ಲದೆ ಅವನ ಬದುಕಿನಲ್ಲಿ ದಿನೆದಿನೇ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಅವನು ವ್ಯವಸಾಯ ಮಾಡಲು ತರುವ ಸಲಕರಣೆಗಳು ಮತ್ತು ರಾಸಾಯನಿಕಗಳಿಗೂ  ಅವರು ಹೇಳಿದ ಬೆಲೆ ತೆತ್ತು ತಂದು ವ್ಯವಸಾಯ ಮಾಡುತ್ತಾನೆ. ಆದರೆ ಅವನು ಬೆಳೆದ ಬೆಳೆಗೆ ತನ್ನದೇ ಆದ ಬೆಲೆ ನಿಗದಿ ಮಾಡಿ ಅದನ್ನು ಮಾರಾಟ ಮಾಡಲು ಅವಕಾಶ ಇಲ್ಲದೆ ಬೆಳೆದ ಬೆಳೆಯನ್ನು ಗಿಡದಲ್ಲೇ ಬಿಡುವುದು ಇಲ್ಲಾ ರಸ್ತೆಗೆ ಸುರಿಯುವುದು ಮಾಡುವುದರ ಜೊತೆಗೆ ಆತ ಸಾಲಗಾರನಾಗಿ ಬೆಂದು ಬಸವಳಿದು ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ‌.

ಪ್ರತಿನಿತ್ಯ ಅನ್ಮ ನೀಡುವ ರೈತನನ್ನು ಕೇವಲ ಸರ್ಕಾರವಷ್ಟೇ ಅಲ್ಲದೆ ಫಲಾನುಭವಿಯಾದ ಎಲ್ಲರೂ ಆತನನ್ನು ಗುರುವಾಗಿ ಸ್ವೀಕರಿಸಿ ಉತ್ತಮ ಬೆಲೆ ಕೊಟ್ಟು ರೈತರನ್ನು ಉಳಿಸಲು ಕೈಜೋಡಿಸಬೇಕೆಂದು ಕರೆ ನೀಡಿದರು.

 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಸೀತಾರಾಮು ರವರು ಮಕ್ಕಳಿಗೆ ತಾಯಿಯೇ ಮೊದಲ ಗುರುವಾದರೂ ಆ ವಿದ್ಯಾರ್ಥಿಗಳನ್ನು ಒಂದು ಶಿಲ್ಪವನ್ನಾಗಿ ತಯಾರು ಮಾಡುವುದು ಶಿಕ್ಷಕ. ಕೂಲಿ ಕಾರ್ಮಿಕ ಅವಿದ್ಯಾವಂತ ದಂಪತಿಗಳ ಪುತ್ರರಾದ ಡಾ ಸರ್ವಪಲ್ಲಿ ರಾಧಾಕೃಷ್ಣನ್ ರವರು ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಯಾದರೆಂದರೆ ಅದಕ್ಕೆ ಅವರ ಶ್ರಮ ಹಾಗೂ ನನ್ನ ಮಗನನ್ನು ವಿದ್ಯಾವಂತನನ್ನಾಗಿ ಮಾಡಬೇಕೆಂಬ ಹೆಬ್ಬಯಕೆಯ ಜೊತೆಗೆ ಅವರಿಗೆ ಅಕ್ಷರಾಭ್ಯಾಸ ಮಾಡಿಸಿದ ಗುರುಗಳ ಪಾತ್ರ ದೊಡ್ಡದಿದೆ ಎಂದರು.

 

ಕರ್ನಾಟಕ ದಕ್ಷಿಣ ಪ್ರಾಂತ್ಯದ ಭಾವಿಪ ಅಧ್ಯಕ್ಷರಾದ ಡಿ ಪಿ ಸ್ವಾಮಿಯವರು ಮಾತನಾಡಿ ಇಡೀ ದಕ್ಷಿಣ ಕರ್ನಾಟಕ ದಲ್ಲಿ ಚನ್ನಪಟ್ಟಣದ ಕಣ್ವ ಶಾಖೆಯು ಅತ್ಯುತ್ತಮ ಕಾರ್ಯಕ್ರಮಗಳನ್ನು ಏರ್ಪಡಿಸುತಿದ್ದು ಶ್ಲಾಘನೀಯ. ಆದರೆ ಇಷ್ಟು ವರ್ಷಗಳಾದರೂ ಸಹ ಸಂಘಕ್ಕೆ ಒಂದು ಸ್ವಂತ ಕಟ್ಟಡ ಇಲ್ಲದಿರಿವುದು ಬೇಸರವಿದೆ, ಈ ನಿಟ್ಟಿನಲ್ಲಿ ಸಂಘದ ಪದಾಧಿಕಾರಿಗಳು ಗಮನಹರಿಸಬೇಕು ಎಂದು ಸೂಚಿಸಿದರು.

 

ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾವಿಪ ತಾಲ್ಲೂಕು ಅಧ್ಯಕ್ಷ ವಸಂತಕುಮಾರ್ ರವರು ಸಂಘದ ಕಟ್ಟಡ, ರೈತರಿಗಾಗುತ್ತಿರುವ ಅನ್ಯಾಯ ಮತ್ತು ಶಿಕ್ಷಕರಿಗೆ ಬೋಧನಾ ವೃತ್ತಿಗಿಂತ ಇಲಾಖೆಯ ಕೆಲಸಗಳೇ ಹೆಚ್ಚಾಗುತ್ತಿರುವ ಬಗ್ಗೆ ತಮ್ಮ ಅಸಮಾಧಾನವನ್ನು ಹೊರಹಾಕಿದರು.

 

ನಿವೃತ್ತ ಮುಖ್ಯ ಶಿಕ್ಷಕಿ ಎಂ ಸಿ ಗೌರಮ್ಮನವರ ಸ್ಮರಣಾರ್ಥ ಶ್ರೀಮತಿ ಸಂಧ್ಯಾಮಹೇಶ್ ರವರು ಊಟದ ವ್ಯವಸ್ಥೆ ಏರ್ಪಡಿಸಿದ್ದರು.

ಇದೆ ಸಮಯದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕಳ್ಳಲಾಗಿತ್ತು.

 

ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಕಾರ್ಯದರ್ಶಿ ಎಂ ಎನ್ ಸತ್ಯನಾರಾಯಣ, ನಿವೃತ್ತ ಶಿಕ್ಷಕಿ ಸರೋಜಮ್ಮ, ಸಾರ್ವಜನಿಕ ವಿದ್ಯಾಸಂಸ್ಥೆಯ ಉಪಪ್ರಾಂಶುಪಾಲ ದೊಡ್ಡೇಗೌಡ, ಭಾವಿಪ ದ ಉಪಾಧ್ಯಕ್ಷ ಕೆ ಬಿ ಉಮೇಶ್, ಸಹ ಕಾರ್ಯದರ್ಶಿ ಎಸ್ ಶಿವಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಬಿ ಎನ್ ಕಾಡಯ್ಯ, ಕೋಶಾಧ್ಯಕ್ಷ ತಿಪ್ರೇಗೌಡ, ಉಪಾಧ್ಯಕ್ಷೆ ರಾಧಿಕಾರವಿಕುಮಾರಗೌಡ, ಪತ್ರಿಕಾ ಕಾರ್ಯದರ್ಶಿ ಗೋ ರಾ ಶ್ರೀನಿವಾಸ, ಹಾಗೂ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

 

ಗೋ ರಾ ಶ್ರೀನಿವಾಸ...

ಪತ್ರಿಕಾ ಕಾರ್ಯದರ್ಶಿ.

ಭಾವಿಪ ಕಣ್ವ ಶಾಖೆ ಚನ್ನಪಟ್ಟಣ.

ಮೊ; 9845856139.

 

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑