Tel: 7676775624 | Mail: info@yellowandred.in

Language: EN KAN

    Follow us :

ಜಾನಪದ ಲೋಕದಲ್ಲಿ ಇಂದಿನಿಂದ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ: ಪ್ರೊ. ಬೋರಲಿಂಗಯ್ಯ

Posted date: 10 Feb, 2024

Powered by:     Yellow and Red

ಜಾನಪದ ಲೋಕದಲ್ಲಿ ಇಂದಿನಿಂದ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ: ಪ್ರೊ. ಬೋರಲಿಂಗಯ್ಯ

ರಾಮನಗರ : ಇಲ್ಲಿನ ಜಾನಪದ ಲೋಕದಲ್ಲಿ ಫೆ. 10 ಮತ್ತು 11 ರಂದು ಪ್ರತಿಷ್ಠಿತ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಕಾರ್ಯಾಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಅವರು ತಿಳಿಸಿದರು.

ಅವರು ಜಾನಪದ ಲೋಕದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಲೋಕೋತ್ಸವದ ಅಂಗವಾಗಿ ಜಾನಪದ ಕಲಾ ಪ್ರದರ್ಶನ, ಗೀತ ಗಾಯನ, ಪ್ರಶಸ್ತಿ ಪ್ರದಾನ, ದೇಸಿ ಮೇಳ, ವಿಚಾರ ಸಂಕೀರ್ಣ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜಾನಪದ ಲೋಕೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಫೆ. 10 ಮತ್ತು 11ರ ಎರಡು ದಿನಗಳಲ್ಲಿಯೂ ಬೆಳಿಗ್ಗೆ 9 ರಿಂದ ರಾತ್ರಿ 10 ಗಂಟೆಯವರೆಗೂ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.

ಫೆ. 10 ಮತ್ತು 11 ರ ಉತ್ಸವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ಮೂವತ್ತಕ್ಕೂ ಹೆಚ್ಚು ಜಾನಪದ ಕಲಾ ತಂಡಗಳು ಭಾಗವಹಿಸಲಿವೆ. ವಿವಿಧ ಕಲೆಗಳಲ್ಲದೆ ಜನಪದ ಗೀತಗಾಯನೋತ್ಸವ ಹಾಗೂ ರಾಜ್ಯದ ಉತ್ಕೃಷ್ಟ ಜಾನಪದ ಕಲಾವಿದರಿಗೆ ಮತ್ತು ವಿದ್ವಾಂಸರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದರು.

ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ ಕಾರ್ಯಕ್ರಮವನ್ನು ಸರ್ಕಾರದ ನಿವೃತ್ತ ಕಾರ್ಯದರ್ಶಿಗಳು ಹಾಗೂ ಸಾಂಸ್ಕೃತಿಕ ಚಿಂತಕರಾದ ಐ.ಎಂ. ವಿಠ್ಠಲಮೂರ್ತಿ ಅವರು ಫೆ.10ರ ಬೆಳಿಗ್ಗೆ 10.30ಕ್ಕೆ ಉದ್ಘಾಟಿಸುವರು. ಶ್ರಿ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸುವರು. ಶಾಸಕರಾದ ಇಕ್ಬಾಲ್ ಹುಸೇನ್ ಅವರು ಅಧ್ಯಕ್ಷತೆ ವಹಿಸುವರು. ಅಂದು ಮಧ್ಯಾಹ್ನ 2 ಗಂಟೆಗೆ ಜಾನಪದ ಕಲೆಗಳ ಯುವಜನೋತ್ಸವ ರಾಜ್ಯ ಮಟ್ಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸಂಜೆ 5 ಗಂಟೆಗೆ ರಾಜ್ಯ ಮತ್ತು ಹೊರ ರಾಜ್ಯಗಳ ಕಲಾವಿದರಿಂದ ವೈವಿಧ್ಯಮಯ ಜಾನಪದ ನೃತ್ಯ, ಕಲಾ ಪ್ರದರ್ಶನ ಹಾಗೂ ಗೀತಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

*ಕನ್ನಡ ಜಾನಪದ:* ಪುನರಾವಲೋಕನ ಎಂಬ ವಿಷಯದ ಬಗ್ಗೆ ಫೆ. 11ರ ಭಾನುವಾರ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮೀಣಾ ಗಾಯಕರಿಂದ ಸೋಬಾನೆ ಪದಗಳ ಗಾಯನ ನಡೆಯಲಿದೆ. ಸಂಜೆ 5 ಗಂಟೆಗೆ ಹಿರಿಯ ಜಾನಪದ ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮತ್ತು ಸಂಶೋಧನಾ ಕೇಂದ್ರದ ಉದ್ಘಾಟನೆ ಹಾಗೂ ಸಂಶೋಧನ ಫಲಿತಗಳ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಜೆ 5.30ಕ್ಕೆ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಹಾಗೂ ಮಾಜಿ ಲೋಕಾಯುಕ್ತರಾದ ಡಾ. ಸಂತೋಷ್ ಹೆಗಡೆ ಮತ್ತು ಪ್ರಸಿದ್ಧ ಸಂಗೀತ ನಿರ್ದೇಶಕರಾದ ಡಾ. ಹಂಸಲೇಖ ಅವರು ಪ್ರಶಸ್ತಿ ಪ್ರಧಾನ ಮಾಡುವರು ಎಂದು ತಿಳಿಸಿದರು.

ಕರ್ನಾಟಕ ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಹಾಗೂ ಕ್ಯೂರೇಟರ್ ರವಿಕುಮಾರ್ ಪತ್ರಿಕಾ ಗೋಷ್ಠಿಯಲ್ಲಿದ್ದರು. 

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in arts »

ಜಾನಪದಕ್ಕೆ ಆದಿ ಅಂತ್ಯವಿಲ್ಲ, ಪದ್ಮಶ್ರೀ ಪುರಸ್ಕೃತ ಸೋಮಣ್ಣ
ಜಾನಪದಕ್ಕೆ ಆದಿ ಅಂತ್ಯವಿಲ್ಲ, ಪದ್ಮಶ್ರೀ ಪುರಸ್ಕೃತ ಸೋಮಣ್ಣ

ರಾಮನಗರ : ಫೆ 10: ಜಾನಪದಕ್ಕೆ ಆದಿ ಅಂತ್ಯವಿಲ್ಲ, ಇಂತಹ ಸಂದರ್ಭದಲ್ಲೇ ಜಾನಪದ ಜನ್ಮತಾಳಿತು. ಮುಂದೆ ಇಂತಹ ಸಮಯದಲ್ಲಿ ಅಂತ್ಯವಾಗುತ್ತದೆ ಎಂದು ಯಾರು ಹೇಳಲು

ಜಾನಪದ ಲೋಕದಲ್ಲಿ ಇಂದಿನಿಂದ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ: ಪ್ರೊ. ಬೋರಲಿಂಗಯ್ಯ
ಜಾನಪದ ಲೋಕದಲ್ಲಿ ಇಂದಿನಿಂದ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ: ಪ್ರೊ. ಬೋರಲಿಂಗಯ್ಯ

ರಾಮನಗರ : ಇಲ್ಲಿನ ಜಾನಪದ ಲೋಕದಲ್ಲಿ ಫೆ. 10 ಮತ್ತು 11 ರಂದು ಪ್ರತಿಷ್ಠಿತ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ

ಮಹಾಪೌರ್ಣಿಮೆ ನಾಟಕ ಬಡಜನರ ದನಿಯಾಗಿದೆ, ಪ್ರೊ ಹೊನ್ನು ಸಿದ್ದಾರ್ಥ
ಮಹಾಪೌರ್ಣಿಮೆ ನಾಟಕ ಬಡಜನರ ದನಿಯಾಗಿದೆ, ಪ್ರೊ ಹೊನ್ನು ಸಿದ್ದಾರ್ಥ

ಬೆಂಗಳೂರು: ರಂಗ ನಿರ್ದೇಶಕ ಶಿವಲಿಂಗಯ್ಯ ನವರು ನಿರ್ದೇಶಿಸಿದ ಮಹಾಪೌರ್ಣಿಮೆ ನಾಟಕವು ಬಡಜನರ ದನಿಯಾಗಿದೆ, ಒಂದಲ್ಲಾ ಹತ್ತು ಬಾರಿ ನೋಡಿದರೂ ಮತ್ತೊಮ್ಮೆ ನೋಡಬ

ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್
ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್

ರಾಮನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮ ಟ್ರೈಕ್ವೆಟ್ರಾ ಅಡ್ವೆಂಚರ್ ಕ್ಯಾಂಪ್ ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಗ

20 ಕೆಜಿಯ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ  ಶುಭಾಪುಂಜಾ
20 ಕೆಜಿಯ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ ಶುಭಾಪುಂಜಾ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ನಟಿ ಶುಭಾಪುಂಜಾ ಇದೀಗ ಲಂಬಾಣಿ ಹುಡುಗಿಯಾಗಿ ಮತ್ತೆ ತೆರೆ ಮೇಲೆ ರಂಜಿಸಲು ಸಿದ್ದರಾಗಿದ್ದಾರೆ.

ಕಲಾವಿದರಿಗೆ ಪ್ಯಾಕೇಜ್: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ
ಕಲಾವಿದರಿಗೆ ಪ್ಯಾಕೇಜ್: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ

ರಾಮನಗರ, 28ನೇ ಮೇ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾಗಶಃ ಲಾಕಡೌನ್ ಜಾರಿಯಲ್ಲಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ ಕಲಾತಂಡಗಳಿಗೆ ಪ್ರತಿ ಫಲಾನುಭವಿಗಳಿಗೆ ತಲಾ ರೂ.3,000/- ಗಳಂ

ಸಂಗೀತ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಡಿವೈಎಸ್ಪಿ ರಮೇಶ್
ಸಂಗೀತ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಡಿವೈಎಸ್ಪಿ ರಮೇಶ್

ಸಂಗೀತ ಎನ್ನುವುದು ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಲ್ಲ, ಸಕಲ ಜೀವ ರಾಶಿಗಳಿಗೂ ಸಂಗೀತದ ಇಂಪು ಗೊತ್ತಿದೆ. ಪ್ರಾಣಿ ಪಕ್ಷಿಗಳೂ ಸಹ ಸಂಗೀತಕ್ಕೆ ತಲೆದೂಗುತ್ತವೆ. ಇತ್ತೀಚಿನ ಅಧ್ಯಯನದ ಪ್ರಕಾರ, ಸಾಕು ಪ್

ಐವತ್ತೈದು ವರ್ಷಗಳ ಸಾಧನೆಗೆ ನೂರಕ್ಕೂ ಹೆಚ್ಚು ಶಿಷ್ಯರನ್ನು ತಯಾರಿಗೆ ಸಿಕ್ಕ ಪ್ರಶಸ್ತಿ: ಬ್ರಹ್ಮಣಿಪುರ ತಮಟೆ ತಿಮ್ಮಯ್ಯಗೆ ಒಲಿದ ಪ್ರಶಸ್ತಿ
ಐವತ್ತೈದು ವರ್ಷಗಳ ಸಾಧನೆಗೆ ನೂರಕ್ಕೂ ಹೆಚ್ಚು ಶಿಷ್ಯರನ್ನು ತಯಾರಿಗೆ ಸಿಕ್ಕ ಪ್ರಶಸ್ತಿ: ಬ್ರಹ್ಮಣಿಪುರ ತಮಟೆ ತಿಮ್ಮಯ್ಯಗೆ ಒಲಿದ ಪ್ರಶಸ್ತಿ

ಚನ್ನಪಟ್ಟಣ:ಜ/05/21/ಮಂಗಳವಾರ. ಹದಿನೈದು ವರ್ಷದ ಬಾಲಕನಾಗಿದ್ದಾಗಲೇ ತಮಟೆ ವಾದನದಲ್ಲಿ ಸೈ ಎನಿಸಿಕೊಂಡು, ಕಳೆದ ಐವತ್ತೈದು ವರ್ಷಗಳಿಂದ ಮೈಸೂರು ದ

ಜಿಲ್ಲೆಯ ಕಲಾವಿದರಿಗೆ ಹಣ ನೀಡದೆ ವಾಪಸ್ಸು ಕಳುಹಿಸಿದ ಕಸಂ ಇಲಾಖೆ. ಕಲಾವಿದರ ನೋವಿನ ನುಡಿ
ಜಿಲ್ಲೆಯ ಕಲಾವಿದರಿಗೆ ಹಣ ನೀಡದೆ ವಾಪಸ್ಸು ಕಳುಹಿಸಿದ ಕಸಂ ಇಲಾಖೆ. ಕಲಾವಿದರ ನೋವಿನ ನುಡಿ

ರಾಮನಗರ:ಏ/೨೫/೨೦/ಶನಿವಾರ. ಕೊರೊನಾ (ಕೋವಿಡ್-೧೯) ವೈರಸ್ ದೇಶಕ್ಕೆ ಕಾಲಿಟ್ಟ ನಂತರ ದೇಶ ಮತ್ತು ರಾಜ್ಯದ ಆರ್ಥಿಕತೆಗೆ ಪೆಟ್ಟು ಬಿದ್ದಿರುವಂತೆಯೇ,

ಅಬ್ಬೂರು ರಾಜಶೇಖರ ರವರಿಗೆ ಎಚ್ ಕೆ ವೀರಣ್ಣಗೌಡ ಪ್ರಶಸ್ತಿ*
ಅಬ್ಬೂರು ರಾಜಶೇಖರ ರವರಿಗೆ ಎಚ್ ಕೆ ವೀರಣ್ಣಗೌಡ ಪ್ರಶಸ್ತಿ*

ರಾಮನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಎಚ್.ಕೆ.ವೀರಣ್ಣಗೌಡ ಪ್ರಶಸ್ತಿಗೆ ಹಿರಿಯ ಪರ್ತಕರ್ತರು ಆರಂಭ ಪತ್ರಿಕೆಯ ಸಂಸ್ಥಾಪಕ ಸಂ

Top Stories »  

Top ↑