
ತಾಲ್ಲೂಕು ಆಡಳಿತದ ಗಣರಾಜ್ಯೋತ್ಸವದಲ್ಲಿ ಸಿಪಿವೈ ಭಾಗಿ ಹೆಚ್ಡಿಕೆ ಗೈರು
ಚನ್ನಪಟ್ಟಣ.ಜ.೨೬: ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಬಾಲಕರ ಸರ್ಕಾರಿ ಕಿರಿಯ ಕಾಲೇಜು ಆವರಣದಲ್ಲಿ ೭೪ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಚಾಲೆಂಜ್ ಎನ್ನುವಂತೆ ಮಾಜಿ ಮಂತ್ರಿ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಪಿ ಯೋಗೇಶ್ವರ್ ಅ
ಅಮೃತ ಸರೋವರಗಳ ಬಳಿ ಹಾರಾಡಿದ ತ್ರಿವರ್ಣ ಧ್ವಜ
ಚನ್ನಪಟ್ಟಣ: ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಸಲುವಾಗಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಿಷನ್ ಅಮೃತ ಸರೋವರ ಯೋಜನೆಯನ್ನು ಜಾರಿಗೊಳಿಸಿದ್ದು, ಇದರ ಸಲುವಾಗಿ ಪ್ರತಿ ಜಿಲ್ಲೆಗೆ 75 ಕೆರೆಗಳ ಪುನಶ್ಚೇತನ/ನಿರ್ಮಾಣ ಮಾಡುವ ಗುರಿ ನೀಡಿದ್ದು ಅದರಂತೆ ಚನ್ನಪಟ್ಟಣ ತಾಲೂಕಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜ

ಇದೇ ತಿಂಗಳು ವಿಜಯಸಂಕಲ್ಪ ಅಭಿಯಾನ: ಜಿಲ್ಲಾ ಸಂಚಾಲಕ ರವೀಶ್
ಚನ್ನಪಟ್ಟಣ,ಜ:19. ಮನೆ-ಮನಗಳಿಗೆ ಬಿಜೆಪಿ ನೇತೃತ್ವದ ಸರ್ಕಾರದ ಜನಪರ ಕೆಲಸಗಳನ್ನು ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಜನಪರ ಆಡಳಿತ ನೀಡುವಲ್ಲಿ ಯಶಸ್ವಿಯಾಗಿರುವ ಬಿಜೆಪಿ ಪಕ್ಷದ ನೈಜ ಜನಪರ ಸಿದ್ದಾಂತಗಳ ಬಗೆಗಿನ ಮಾಹಿತಿಯನ್ನು ಪ್ರತಿಯೊಂದು ಮನೆ-ಮನಕ್ಕೆ ತಲುಪಿಸುವ ಉದ್ದೇಶವೇ ವಿಜಯ ಸಂಕಲ್ಪ ಅಭಿಯಾನ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹಾಗ

ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ಚನ್ನಪಟ್ಟಣ:16/01/2023:ರಂತಾಲ್ಲೂಕಿನ ಎಲೆತೋಟದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಕನಹಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಪ್ರಗತಿಯಲ್ಲಿದ್ದ ಮುದ್ದೆಗೌಡನಕಟ್ಟೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನದಡಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ನಂತರ ಕಾರ್ಯಕ್ರಮ ಕುರಿತು ಎಲೆತೋಟದಹಳ್

ಕಾಂತರಾಜ್ ಪಟೇಲ್ ನಿಧನದಿಂದ ಜಿಲ್ಲೆಯ ಸಾಂಸ್ಕೃತಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ; ಎಂ.ಟಿ. ತಿಮ್ಮರಾಜು
ಚನ್ನಪಟ್ಟಣ: ನೇರ ನಡೆ-ನುಡಿಯ ಆದರ್ಶ ವ್ಯಕ್ತಿತ್ವದೊಂದಿಗೆ ಅಜಾತಶತ್ರುವಾಗಿ ಬದುಕಿ ಬಾಳಿದ ಹೃದಯವಂತ ವ್ಯಕ್ತಿ ಕಾಂತರಾಜ್ ಪಟೇಲ್ ಅವರ ನಿಧನದಿಂದ ಜಿಲ್ಲೆಯ ಸಾಂಸ್ಕೃತಿಕ ಕ್ಷೇತ್ರಕ್ಕೆ ಅಪಾರವಾದ ನಷ್ಟ ಉಂಟಾಗಿದೆ ಎಂದು ಹಿರಿಯ ರಂಗಭೂಮಿ ಕಲಾವಿದ ಮಂಗಳವಾರಪೇಟೆ ಎಂ ಟಿ ತಿಮ್ಮರಾಜು ತಿಳಿಸಿದರು.ಪಟ್ಟಣದ ಕೊಲ್ಲಾಪುರದಮ್ಮನ ದೇವಸ್ಥಾನ ಆವರಣದ ಡಾ. ರಾಜ್

ಶಿಕ್ಷಣ ಪ್ರೇಮಿ ಮಳೂರು ದಿ.ಪುಟ್ಟಸ್ವಾಮಿಗೌಡರ ಸ್ಮರಣಾರ್ಥ ಅನ್ನವಿತ್ತ ಕುಟುಂಬಕ್ಕೆ ಗೌರವ ನಮನ
ಚನ್ನಪಟ್ಟಣ: ತಾಲ್ಲೂಕಿನಲ್ಲಷ್ಟೇ ಅಲ್ಲದೇ ಜಿಲ್ಲಾದ್ಯಂತ ಉದಾರ ದಾನಿಗಳು ಹಾಗೂ ಶ್ರೀಮಂತ ಕುಟುಂಬ ಎಂದೇ ಪ್ರಸಿದ್ಧಿಯಾಗಿದ್ದ ದಿ ಮಳೂರು ಪುಟ್ಟಸ್ವಾಮಿಗೌಡರ ಸಂಸ್ಮರಣೆ ಕಾರ್ಯಕ್ರಮವನ್ನು ಬೇವೂರು ಶ್ರೀ ಸಿದ್ದರಾಮೇಶ್ವರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದಾರೆ. ಗ್ರಾಮದ ಶ್ರೀ ಸಿದ್ಧರಾಮೇಶ್ವರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ 10ನೇ ತರಗತಿಯ ಪಬ್ಲಿಕ್ ಪರೀಕ್ಷೆ ಬರೆಯಲು ನಗರಕ್

ಬೂತ್ ಮಟ್ಟದ ಕಾರ್ಯಕರ್ತರನ್ನು ಸದೃಢಗೊಳಿಸುತ್ತೇನೆ. ಸಿ ಪಿ ಯೋಗೇಶ್ವರ್
ಚನ್ನಪಟ್ಟಣ: ಬೂತ್ಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸುವ ಮುಖಾಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಈಗನಿಂದಲೇ ಪಕ್ಷ ಸಂಘಟನೆ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಕರೆ ನೀಡಿದರು.ತಾಲೂಕಿನ ಜೆ.ಬ್ಯಾಡರಹಳ್ಳಿ ಗ್ರಾಮದಲ್ಲಿ ತಾಲೂಕು ಬಿಜೆಪಿ ಹಮ್ಮಿಕೊಂಡಿದ್ದ ಬೂತ್ ವಿಜಯ್

ಮಿಸ್ ನಂದಿನಿ ಚಲನಚಿತ್ರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವರದಾನ ಪ್ರಿಯಾಂಕ ಉಪೇಂದ್ರ
ಚನ್ನಪಟ್ಟಣ: ಮಿಸ್ ನಂದಿನಿ ಚಲನಚಿತ್ರದಲ್ಲಿನ ನವಿರಾದ ಕಥೆಯು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಚಿತ್ರಕಥೆಯ ಮೂಲಕ ಸರ್ಕಾರಿ ಶಾಲೆಗಳ ಅಗತ್ಯತೆ ಮತ್ತು ಮಹತ್ವವನ್ನು ತಿಳಿಸುವ ಪ್ರಯತ್ನ ಮಾಡಿದ್ದು, ಈ ಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುವಂತೆ ಚಿತ್ರನಟಿ ಪ್ರಿಯಾಂಕ ಉಪೇಂದ್ರ ಮನವಿ ಮಾಡಿದರು.ತಮ್ಮ ನೂತನ ಚಲನಚಿತ್ರ ಮಿಸ್ ನಂದಿನಿಯ ಪ್ರಚಾರದ

ಚನ್ನಪಟ್ಟಣ ತಾಲ್ಲೂಕು ರೈತ ಸಂಘದ ಹುಟ್ಟಿಗೆ ಕಾರಣವಾಗಿತ್ತು ಸು ತ ರಾಮೇಗೌಡ
ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕು ರೈತಸಂಘದ ಹುಟ್ಟಿಗೆ ಕಾರಣವಾಗಿತ್ತು. ಅರಳಾಳುಸಂದ್ರ ಗ್ರಾಮ ಮೊದಲ್ಗೊಂಡು ಹಲವಾರು ಗ್ರಾಮಗಳಲ್ಲಿ ರೈತ ಚಳವಳಿ ಮಾಡುವ ಮೂಲಕ ರಾಜ್ಯ ಸಂಘಕ್ಕೆ ಮುನ್ನುಡಿ ಬರೆಯಿತು ಎಂದು ಹಿರಿಯ ಪತ್ರಕರ್ತ ಸು ತ ರಾಮೇಗೌಡ ತಿಳಿಸಿದರು. ಅವರು ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚೆನ್ನಪಟ್ಟಣ ತಾಲೂಕು ಘಟಕ ವತಿಯಿಂದ ವಿಶ್ವ ರೈತ ದಿನಾಚರಣೆ ಹಾಗೂ ವಿಚಾರ ಸಂಕಿ

ಮುದಗೆರೆ ಗ್ರಾಮದ ಬಳಿ ಭೀಕರ ಅಪಘಾತ. ಮೂರು ಮಂದಿ ಸಾವು
ಚನ್ನಪಟ್ಟಣ: ಬೆಂಗಳೂರು–ಮೈಸೂರು ನಡುವಿನ ಮುದಗೆರೆ ಗ್ರಾಮದ ಬಳಿಯ ವೈಶಾಲಿ ಹೋಟೆಲ್ ಹತ್ತಿರ ದಶಪಥ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲ್ಲರ್ ಒಂದು ಚಲಿಸುತ್ತಿದ್ದ ಕ್ಯಾಂಟರ್ಗೆ ಬೆಳ್ಳಂಬೆಳಗ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಓರ್ವ ಬಾಲಕ ಮಂಡ್ಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.