Tel: 7676775624 | Mail: info@yellowandred.in

Language: EN KAN

    Follow us :


ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ: ಚುನಾವಣಾಧಿಕಾರಿ ಮುನೇಗೌಡ

Posted date: 06 Apr, 2023

Powered by:     Yellow and Red

ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ: ಚುನಾವಣಾಧಿಕಾರಿ ಮುನೇಗೌಡ

ಚನ್ನಪಟ್ಟಣ: ೧೮೫:ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾಲ್ಕು ಕಡೆ ಚೆಕ್ ಪೋಸ್ಟ್ ನಿರ್ಮಾಣ ಸೇರಿದಂತೆ ಎಲ್ಲಾ ರೀತಿಯಿಂದಲೂ ಈಗಾಗಲೇ ಕಟ್ಟುನಿಟ್ಟಾದ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ, ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮುನೇಗೌಡ ತಿಳಿಸಿದರು.


ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.13ರಂದು ಚುನಾವಣೆಗೆ ಆಧಿಸೂಚನೆ ಹೊರಡಿಸಲಾಗುವುದು. ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಏ.21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಏ.24 ಕೊನೆಯ ದಿನವಾಗಿದೆ. ಮೇ.10ರಂದು ಮತದಾನ ನಡೆಯಲಿದ್ದು, ಮೇ.13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ.15ರ ಒಳಗೆ ಎಲ್ಲ ಚುನಾವಣೆ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.


ಕ್ಷೇತ್ರದಲ್ಲಿ ಒಟ್ಟು 2,24,886 ಮತದಾರರಿದ್ದು, ಇವರಲ್ಲಿ 1,09,133 ಪುರುಷರು ಹಾಗೂ 1,15,753 ಮಹಿಳಾ ಮತದಾರರು ಇದ್ದಾರೆ.  80ವರ್ಷಕ್ಕಿಂತ ಮೇಲ್ಪಟ್ಟ 4,129 ಮತದಾರರು, 2,824 ವಿಶೇಷ ಚೇತನ ಮತದಾರರು ಹಾಗೂ 54 ಸೇವಾ ಮತದಾರರು ಇದ್ದಾರೆ. 80 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ವಿಶೇಷ ಚೇತನ ಮತದಾರರಿಗೆ ಈ ಬಾರಿ ಅಂಚೆ ಮೂಲಕ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ ಎಂದರು. ಕ್ಷೇತ್ರದಲ್ಲಿ 266 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಇದರಲ್ಲಿ 56 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳು, 2ಮತಗಟ್ಟೆಗಳನ್ನು ಅತೀ ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ನಗರದ ಎಲೇಕೇರಿ 80ನೇ ಮತಗಟ್ಟೆ ಹಾಗೂ ತಾಲೂಕಿನ ಸಾದಹಳ್ಳಿ 213ನೇ ಮತಗಟ್ಟೆಯನ್ನು ಅತೀಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.


ಐದು ಸಖಿ (ಪಿಂಕ್) ಮತಗಟ್ಟೆಗಳು, ಒಂದು ಯುವಕರ ಮತಗಟ್ಟೆ (ಯಂಗ್ ಸ್ಟರ್) ಮತಗಟ್ಟೆಯನ್ನು ಸ್ಥಾಪಿಸಲಾಗುತ್ತದೆ. ಸಖಿ ಮತಗಟ್ಟೆಗಳನ್ನು ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡಲ್ಲು ಸ್ಥಾಪಿಸುತ್ತಿದ್ದು, ಯುವ ಮತದಾರರ ಮತಗಟ್ಟೆಯನ್ನು ಕಲಾನಗರ ದಲ್ಲಿ ಸ್ಥಾಪಿಸಲಾಗುತ್ತದೆ. ಮತದಾನದ ಪ್ರಮಾಣ ಹೆಚ್ಚಿಸಲು, ಪದವಿ ಕಾಲೇಜುಗಳು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಧ್ವನಿ, ದೃಶ್ಯ ಹಾಗೂ ಆಟೋ ಮೂಲಕ ಪ್ರಚಾರ ಮಾಡಲಾಗುತ್ತದೆ ಎಂದರು.


ಚುನಾವಣಾ ಅಕ್ರಮಗಳಿಗೆ ತಡೆಹಾಕುವ ನಿಟ್ಟಿನಲ್ಲಿ ತಾಲೂಕಿನಲ್ಲಿ 4 ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಲಾಗಿದೆ. ತಾಲೂಕಿನ ಜಗದಾಪುರ, ಕೋಲೂರು, ಕುಂಬಾರಕಟ್ಟೆ, ಮಾಕಳಿ ಬಳಿ ಚೆಕ್‍ಪೋಸ್ಟ್ ನಿರ್ಮಿಸಲಾಗಿದೆ. ಹೋಬಳಿ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಚೆಕ್‍ಪೋಸ್ಟ್ ಗಳಲ್ಲಿ ಎಸ್‍ಎಸ್‍ಟಿ ತಂಡ, ಪೊಲೀಸ್ ಸಿಬ್ಬಂದಿ, ಫ್ಲೈಯಿಂಗ್ ಸ್ಕ್ವಾಡ್ ಹಾಗೂ ವಿಡಿಯೋ ಸರ್ವಿಲೆಯನ್ಸ್ ತಂಡಗಳನ್ನು ಸ್ಥಾಪಿಸಲಾಗಿದೆ.


ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಇದುವರೆಗೆ ಸುಮಾರು 6.80 ಲಕ್ಷ ರೂ. ನಗದು, 326 ಲೀ. ಮದ್ಯ, 480 ಹಾಲಿನ  ಸ್ಟೀಲ್ ಕ್ಯಾನ್‍ಗಳು, 55ಟನ್ ಅಕ್ಕಿ, 4 ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, ಸುಮಾರು 20 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.


ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ತೆರನಾದ ಚುನಾವಣಾ ಸಂಬಂಧಿತ ಜಾಹೀರಾತು, ಪಾವತಿ ಸುದ್ದಿಗಳಿಗೆ ಸಂಬಂಧಿಸಿದಂತೆ ನಿಬಂಧನೆಗಳನ್ನು ವಿಧಿಸಲಾಗಿದೆ. ಜಾಹೀರಾತು ಪ್ರಕಟಿಸುವ ಮುನ್ನ ಜಿಲ್ಲಾ ಮಿಡಿಯಾ ಸರ್ಟಿಫಿಕೇಷನ್ ಸೆಲ್‍ಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯುವುದು ಕಡ್ಡಾಯ.  ಇದರ ಜತೆಗೆ ಮದುವೆ ಇನ್ನಿತರ ಸಮಾರಂಭಗಳಿಗೆ ಚುನಾವಣಾಧಿಕಾರಿಗಳ ಅನುಮತಿ ಪಡೆಯಬೇಕು. ಸಮಾರಂಭಗಳಲ್ಲಿ ಚುನಾವಣಾ ಪ್ರಚಾರ ನಡೆಸುವಂತಿಲ್ಲ ಎಂದು ಎಚ್ಚರಿಕೆ ನೀಡಿದರು.


ಚುನಾವಣಾ ದೂರುಗಳಿಗೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳ ಕಚೇರಿಯಲ್ಲಿ 24/7 ಕಂಟ್ರೋಲ್ ರೂಂ ಪ್ರಾರಂಭಿಸಲಾಗಿದ್ದು, ಇದು ದಿನದ 24 ಗಂಟೆ ಕಾರ್ಯ ನಿರ್ವಹಿಸಲಿದೆ. ಸಾರ್ವಜನಿಕರು ದೂರವಾಣಿ ಸಂಖ್ಯೆ: 080-27251765 ಹಾಗೂ ಟೋಲ್ ಫ್ರೀ ಸಂಖ್ಯೆ: 1950ಕ್ಕೆ ಕರೆಮಾಡಿ ದೂರು ಸಲ್ಲಿಸಬಹುದಾಗಿದೆ. ಇದಲ್ಲದೇ ಸಿ-ವಿಜಿಲ್ ಆಪ್ ಮೂಲಕವೂ ದೂರುಗಳನ್ನು ಸಲ್ಲಿಸಬಹುದಾಗಿದ್ದು, ನೀತಿ ಸಂಹಿತೆ ಉಲ್ಲಂಘನೆಯ ಕುರಿತು ಮೊಬೈಲ್‍ನಲ್ಲಿ ಚಿತ್ರೀಕರಿಸಿ ಸಿ-ವಿಜಿಲ್ ಆಪ್‍ನಲ್ಲಿ ಅಪ್‍ಲೋಡ್ ಮಾಡಬಹುದಾಗಿದೆ. ಒಟ್ಟಾರೆಯಾಗಿ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.


ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಯೂ ಆಗಿರುವ ತಾಪಂ ಇಓ ಶಿವಕುಮಾರ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಮತದಾನದ ಹೆಚ್ಚಳಕ್ಕೂ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೈತಿಕ ಮತದಾನ, ಇವಿಎಂ ಬಳಕೆ, ಸಿ-ವಿಜಿಲ್ ಆಪ್‍ನ ಬಳಕೆಯ ಕುರಿತು ಮಾಹಿತಿ ನೀಡುವ ಕೆಲಸವನ್ನು ಮಾಡಲಾಗುತ್ತಿದೆ. ಈಗಾಗಲೇ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಪ್ರಚಾರ ನಡೆಸುವ ಮೂಲಕ ಚುನಾವಣೆಯಲ್ಲಿ ಭಾಗವಹಿಸುವಿಕೆ ಕುರಿತು ಅರಿವು ಮೂಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಶಿರಸ್ತೇದಾರರಾದ ಹರೀಶ್, ಉಪ ತಹಶಿಲ್ದಾರ್ ಸೋಮೇಶ್ ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑