Tel: 7676775624 | Mail: info@yellowandred.in

Language: EN KAN

    Follow us :


ಮಿಸ್ ಟೀನ್ ತುಮಕೂರು ಆಗಿ ನಗರದ ವಿದ್ಯಾರ್ಥಿನಿ ಆಯ್ಕೆ

Posted date: 14 Jun, 2023

Powered by:     Yellow and Red

ಮಿಸ್ ಟೀನ್ ತುಮಕೂರು ಆಗಿ ನಗರದ ವಿದ್ಯಾರ್ಥಿನಿ ಆಯ್ಕೆ

ಚನ್ನಪಟ್ಟಣ: ತುಮಕೂರು ನಗರದ ಎ ಎನ್ ಕೆ ಅಕಾಡೆಮಿ ಯವರು ನಡೆಸಿದ ಮಾಡೆಲಿಂಗ್ ಷೋ ನಲ್ಲಿ ಮಿಸ್ ತುಮಕೂರು ಆಗಿ ನಗರದ ಕೆಂಪೇಗೌಡ ಬಡಾವಣೆಯ ನಿವಾಸಿಗಳಾದ ಅನ್ನಪೂರ್ಣ ಆನಂದ್ ರವರ ಸುಪುತ್ರಿ ಶ್ರಾವ್ಯ ಎ ರವರು ಆಯ್ಕೆಯಾಗಿದ್ದಾರೆ. ಶ್ರಾವ್ಯ ಎ ರವರು ಚನ್ನಪಟ್ಟಣ ನಗರದ ಚನ್ನಾಂಬಿಕಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಮಾಡೆಲಿಂಗ್ ನಲ್ಲಿ ಆಸಕ್ತಿ ಹೊಂದಿದ್ದರು.


ಪುತ್ರಿಯ ಆಸೆಯನ್ನು ಈಡೇರಿಸುವ ಸಲುವಾಗಿ ಪೋಷಕರು ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಮಾಡೆಲಿಂಗ್ ಕಾರ್ಯಕ್ರಮದಲ್ಲಿಯೂ ಭಾಗವಹಿಸಲು ಅವಕಾಶ ನೀಡಿದ್ದರು. ನಂತರ ಅವಕಾಶಗಳಿಗಾಗಿ ಕಾದು ಕುಳಿತಿದ್ದ ಅವರಿಗೆ ತುಮಕೂರಿನ ಕವನ ಅಕ್ಷಯ್ ರವರು ನಡೆಸುವ ಎ ಎನ್ ಕೆ ಅಕಾಡೆಮಿ ಯ ಮಿಸ್ ತುಮಕೂರಿನಲ್ಲಿ ಭಾಗವಹಿಸುವ ಅವಕಾಶ ದೊರೆತಿದ್ದು, ಮೂರು ವಾರಗಳ ಕಾಲ ಪ್ರತಿ ಭಾನುವಾರ ತರಬೇತಿ ಪಡೆದುಕೊಂಡಿದ್ದರು.


೧೧/೦೬/೨೩ ರ ಭಾನುವಾರ ಹಲವಾರು ಮಾಡೆಲಿಂಗ್ ಅನುಭವ ಹೊಂದಿರುವ ಗಣ್ಯರ ಸಮ್ಮುಖದಲ್ಲಿ ಮಾಡೆಲಿಂಗ್ ಷೋ ಜರುಗಿದ್ದು, ಸಣ್ಣ ಮಕ್ಕಳದಿಂದ ಮೊದಲ್ಗೊಂಡು ಪದವಿ ವಿದ್ಯಾರ್ಥಿಗಳವರೆಗೂ ಐದು ವಿಭಾಗಗಳಲ್ಲಿ ಮಾಡೆಲಿಂಗ್ ಷೋ ಏರ್ಪಡಿಸಿದ್ದು, ಟೀನ್ ಟೀಂ ನಲ್ಲಿ ಶ್ರಾವ್ಯ ಎ ಭಾಗವಹಿಸಿದ್ದರು. ಒಟ್ಟು ಏಳು ಮಂದಿ ಭಾಗವಹಿಸಿದ್ದು ಅವರಲ್ಲಿ ಪ್ರಥಮ ಸ್ಥಾನವನ್ನು ಶ್ರಾವ್ಯ ಎ ರವರು ಪಡೆದುಕೊಂಡು ತಾಲ್ಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ.


ಟೀನ್ ಟೀಂ ನಲ್ಲಿ ರ್ಯಾಂಪ್ ವಾಕ್ ಮಾಡಿದ್ದು, ಇದರಲ್ಲಿ ಬಹಳ ಮುಖ್ಯವಾಗಿ ಜಡ್ಜ್ ಗಳ ಪ್ರಶ್ನೆಗೆ ಉತ್ತರಿಸಬೇಕಾಗಿತ್ತು. ಜಡ್ಜ್ ಗಳು ಕೇಳಿದ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಿದ ಹಾಗೂ ನಡಿಗೆಯಲ್ಲೂ ಯಾವುದೇ ರಾಜಿಯಾಗದೇ ವಾಕ್ ಹಾಗೂ ಉಡುಗೆ ತೊಡುಗೆ, ಸೌಂದರ್ಯ ವರ್ಧಕ ಮಾಡಿಕೊಂಡಿದ್ದ ಶ್ರಾವ್ಯ ಎ ರವರ ಜಾಣ್ಮೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಜಡ್ಜ್ ಗಳು ಪ್ರಥಮ ಸ್ಥಾನ ನೀಡಿ ಗೌರವಿಸಿದರು. ಶ್ರಾವ್ಯ ಟೀನ್ ಟೀಂ ನಲ್ಲಿ ನಯನ, ಜಾನ್ವಿ, ಹರ್ಷಿತಾ, ಐಶ್ವರ್ಯ, ಪ್ರಗತಿ ಮತ್ತು ರೋಜಾ ಎಂಬುವವರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.


ನಗರದ ಎಂ ಜಿ ರಸ್ತೆಯ ಬಾಲಭವನದಲ್ಲಿ ನಡೆದ ಕಾರ್ಯಕ್ರಮವನ್ನು ನಿವೃತ್ತ ಸೈನಿಕ ಜಿ ಬಸಪ್ಪ ಉದ್ಘಾಟಿಸಿದರು. ಜಡ್ಜ್ ಗಳಾಗಿ ಜೂರಿ, ಘ್ನಾನೇಶ್, ವೈಷ್ಣವಿ, ಮಂಜು ಪಿ, ಮುಖ್ಯ ಅತಿಥಿಗಳಾಗಿ ನಟ ಧರ್ಮಣ್ಣ ಕಡೂರ್, ತಮಿಳು ನಟ ವಿಜಯ್, ಅರ್ಪಿತಾ ದೇವ್, ಕವನ, ಅಕ್ಷಯ್, ಅರ್ಜುನ್ ಪಾಳೆಗಾರ್, ಜಗದೀಶ್ ಬಾಬು, ಗೌತಮ್, ದೀಕ್ಷಿತ್, ರಕ್ಷಿತ್, ಶಿವು ಮತ್ತಿತರರು ಉಪಸ್ಥಿತರಿದ್ದರು.


ನನ್ನ ತಂದೆ-ತಾಯಿ ಬಹಳ ಕಷ್ಟದ ಜೊತೆಗೆ ಇಷ್ಟ ಪಟ್ಟು ಓದಿಸುತ್ತಿದ್ದಾರೆ. ಒಂದನೇ ತರಗತಿಯಿಂದ ಇಲ್ಲಿಯವರೆಗೂ ಉತ್ತಮ ಅಂಕಗಳನ್ನು ಪಡೆದು ಓದುತ್ತಿದ್ದೇನೆ. ನೃತ್ಯದಲ್ಲೂ ಆಸಕ್ತಿ ಇದೆ. ನನ್ನ ಮುಂದಿನ ಗುರಿ ಮಾಡೆಲಿಂಗ್ ಜೊತೆಗೆ ಇಂಜಿನಿಯರ್ ಆಗಬೇಕೆಂಬ ಕನಸಿದೆ.

-ಶ್ರಾವ್ಯ ಎ. ಮಿಸ್ ಟೀನ್ ತುಮಕೂರು.


ನಮ್ಮ  ಎ ಎನ್ ಕೆ ಅಕಾಡೆಮಿ ಯಿಂದ ಮಾಡೆಲಿಂಗ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತೇವೆ. ಇದೇ ಮೊದಲನೇ ಬಾರಿ ಹಮ್ಮಿಕೊಂಡಿದ್ದು ಬಹುತೇಕ ಹಳೇ ಮೈಸೂರು ಭಾಗದ ಜಿಲ್ಲೆಗಳಿಂದ ಸ್ಪರ್ಧಿಗಳು ಆಗಮಿಸಿದ್ದರು. ಈ ಟೀನ್ ಟೀಂ ನಲ್ಲಿ ಶ್ರಾವ್ಯ ರವರು ಆಯ್ಕೆಯಾಗಿರುವುದು ನಮ್ಮ ಅಕಾಡೆಮಿಗೆ ಹೆಮ್ಮೆಯ ವಿಷಯವಾಗಿದೆ. ಆಸಕ್ತರು ನಮ್ಮನ್ನು ಸಂಪರ್ಕಿಸಿದರೆ ತರಬೇತಿ ನೀಡುತ್ತೇವೆ.

-ಕವನ, ಎ ಎನ್ ಕೆ ಅಕಾಡೆಮಿ ತುಮಕೂರು. ಮೊ:81473 31137.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑