Tel: 7676775624 | Mail: info@yellowandred.in

Language: EN KAN

    Follow us :


ನಗರಸಭೆ ಆಡಳಿತಾಧಿಕಾರಿಗಳ ವಿರುದ್ದ ಕಿಡಿಕಾರಿದ ಸದಸ್ಯರು

Posted date: 16 Jun, 2023

Powered by:     Yellow and Red

ನಗರಸಭೆ ಆಡಳಿತಾಧಿಕಾರಿಗಳ ವಿರುದ್ದ ಕಿಡಿಕಾರಿದ ಸದಸ್ಯರು

ಚನ್ನಪಟ್ಟಣ: ನಗರಸಭಾ ಆಡಳಿತಾಧಿಕಾರಿಗಳ ವಿರುದ್ದ ಪಕ್ಷ ಬೇಧ  ಮರೆತು ಆಡಳಿತ ಮತ್ತು ವಿರೋಧ ಪಕ್ಷದವರ ಸದಸ್ಯರು ಒಗ್ಗೂಡಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಘಟನೆ ನಗರಸಭಾ ಸಾಮಾನ್ಯ ಸಭೆಯಲ್ಲಿ ಜರುಗಿತು.


ಗುರುವಾರ ನಗರಸಭಾ ಕಚೇರಿಯಲ್ಲಿ ಕರೆಯಲಾಗಿದ್ದ ಸಾಮಾನ್ಯ ಸಭೆಯಲ್ಲಿ ಪಕ್ಷಬೇಧ ಮರೆತು ಸದಸ್ಯರೆಲ್ಲಾ ಪೌರಾಯುಕ್ತರು ಸೇರಿದಂತೆ ಅಧಿಕಾರಿ ವರ್ಗವನ್ನು ತರಾಟೆಗೆ ತೆಗೆದುಕೊಂಡು ಕಾಟಾಚಾರಕ್ಕೆ ಸಭೆ ಕರೆಯುವ ಬದಲು ನಿಮ್ಮಿಷ್ಟ ಬಂದ ರೀತಿ ಕಾರ್ಯ ನಿರ್ವಹಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಸಭೆ ಪ್ರಾರಂಭವಾಗುತ್ತಿದ್ದಂತೆ ನಗರಸಭಾ ಸದಸ್ಯ ವಾಸೀಲ್ ಆಲಿಖಾನ್ ನಾವು ಗೆದ್ದು ಎರಡು ವರ್ಷವಾಗುತ್ತಿದ್ದು, ಎರಡನೇ ಬಾರಿ ಸಭೆ ನಡೆಸುತಿದ್ದೀರಾ, ನಾವೂ ಸಹ ನೀವೂ ನೀಡುವ ಟೀ ಬಿಸ್ಕೆಟ್‍ಗೆ ಬಂದು ಹೋಗುವದಕ್ಕಷ್ಟೆ ಸಭೆ ಸೀಮಿತವಾಗಿದ್ದು ಸಭೆಯಲ್ಲಿ ಚರ್ಚಿಸಿದ ಯಾವೂಂದು ವಿಷಯಗಳು ಜಾರಿಯಾಗುವುದಿಲ್ಲ, ಅಧಿಕಾರಿಗಳು ನಮಗೆ ಕವಡೆಕಾಸಿನ ಕಿಮ್ಮತ್ತು ನೀಡುವುದಿಲ್ಲ, ಇಂತಹ ಸನ್ನಿವೇಶದಲ್ಲಿ ಯಾವ ಕಾರಣಕ್ಕೆ ಸಭೆಗೆ ಬರಬೇಕೆಂದು ಆಸಹಾಯಕತೆ ವ್ಯಕ್ತಪಡಿಸಿದರು.


ಇದಕ್ಕೆ ಉತ್ತರಿಸಲು ಪೌರಾಯುಕ್ತ ಪುಟ್ಟಸ್ವಾಮಿ ಮುಂದಾದ ವೇಳೆ ಅವರ ವಿರುದ್ದ ಸಹ ಹರಿಹಾಯ್ದ ವಾಸಿಲ್ ನೀವೆ ದಾರಿ ತಪ್ಪಿರುವಾಗ ನಿಮ್ಮ ಅಧಿಕಾರಿ ವರ್ಗ ಯಾವ ರೀತಿ ಕೆಲಸ ಮಾಡುತ್ತದೆ ಹೇಳಿ, ಮೊದಲು ನೀವು ಸರಿಯಾದರೆ, ಅಧಿಕಾರಿ ವರ್ಗ ತಾನಾಗೇ ಸರಿಹೋಗುತ್ತೆ ಎಂದು ಪೌರಾಯುಕ್ತರ ವಿರುದ್ದ ಗರಂ ಆದರು.


*ಕಳಪೆ ಕಾಮಗಾರಿ ಆರೋಪ:*

ಆಡಳಿತ ಪಕ್ಷದ ಸದಸ್ಯ ಶ್ರೀನಿವಾಸಮೂರ್ತಿ ಮಾತನಾಡಿ ನಗರದಲ್ಲಿ ನಗರಸಭಾ ಅನುದಾನ ಹಾಗೂ ನಗರೋತ್ಥಾನ ಮತ್ತು ವಿಶೇಷ ಅನುದಾನದಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳು ಬಹುತೇಕ ಕೆಲಸಗಳು ಸಂಪೂರ್ಣ ಕಳಪೆಯಾಗಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿ ಬಿಲ್ ಮಾಡದಂತೆ ಮನವಿ ಮಾಡಿದರೂ ಏನು ಪ್ರಯೋಜನವಾಗಿಲ್ಲ. ನಮ್ಮ ದೂರಿಗೆ ಕ್ಯಾರೆ ಎನ್ನದೆ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರನಿಗೆ ಬಿಲ್ ಮಾಡಿದ್ದು, ಬಾಕಿಯುಳಿದ ಕೆಲಸ ಮಾಡುವರು ಯಾರು, ಇದಕ್ಕೆ ಉತ್ತರಿಸುವವರು ಯಾರೆಂದು ಅಧಿಕಾರಿ ವಿರುದ್ದ ಹರಿಹಾಯ್ದರು.


ಇದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರು ಸಹ ದನಿಗೊಡಿಸಿ, ತಮ್ಮ ವಾರ್ಡ್‍ಗಳಲ್ಲೂ ಇದೇ ರೀತಿ ಯಾಗಿದ್ದು, ಈ ಬಗ್ಗೆ ಅಧ್ಯಕ್ಷರು ಮತ್ತು ಪೌರಾಯುಕ್ತರು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಪೂರ್ಣಗೊಳ್ಳುವವರೆಗೂ ಬಿಲ್‍ಪಾಸ್ ಮಾಡದಂತೆ, ಕಳಪೆ ಕೆಲಸ ಮಾಡಿದ ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಪಡಿಸಿದರು.


*ಸಮಸ್ಯೆಗಳ ಕಾರುಬಾರು:*

ನಗರಸಭೆಯಲ್ಲಿ ಒಂದಲ್ಲಾ ಎರಡಲ್ಲಾ ಹತ್ತಾರು ಸಮಸ್ಯೆಗಳಿದ್ದು, ಯಾವೊಂದು ಸಮಸ್ಯೆ ಸಹ ಇಲ್ಲಿಯವರೆಗೂ ಬಗೆಹರಿದ ಉದಾಹರಣೆ ಇಲ್ಲವಾಗಿದ್ದು, ಅಧಿಕಾರಿ ವರ್ಗ ಸೇರಿದಂತೆ ನಾವೆಲ್ಲಾ ಕೇವಲ ಕಾಟಾಚಾರದ ಸಭೆಯನ್ನಷ್ಟೇ ಮಾಡುತ್ತಿರುವುದಾಗಿ ಸರ್ವ ಸದಸ್ಯರು ನಗರಸಭಾ ಆಡಳಿತ ವೈಖರಿ ವಿರುದ್ದ ತಿರುಗಿಬಿದ್ದರು.


ನಗರದಲ್ಲಿ ಯುಜಿಡಿ ಸಮಸ್ಯೆ ಮೀತಿಮೀರಿದ್ದು, ಅದರಿಂದಾಗುತ್ತಿರುವ ದುಷ್ಪರಿಣಾಮಗಳು ಯಾರ ಅರಿವಿಗೂ ಬರುತ್ತಿಲ್ಲ, ಕಸದ ಸಮಸ್ಯೆ ಬಗ್ಗೆ ಮಾತನಾಡುವಂತೆಯೇ ಇಲ್ಲಾ, ಇನ್ನೂ ನೀರಿನ ಸಮಸ್ಯೆ ಬಗ್ಗೆ ಮಾತನಾಡೋಣವೆಂದರೆ ನಾವೂ ಕರೆಯುವ ಯಾವ ಸಭೆಗೂ ವಾಟರ್ ಬೋರ್ಡ್‍ನವರು ಬರುವುದೆ ಇಲ್ಲಾ, ಇವುಗಳನ್ನೆಲ್ಲಾ ನೋಡಿದರೆ ಯಾವ ಪುರುಸಾರ್ಥಕ್ಕೆ ನಾವೂಗಳು ನಗರಸಭಾ ಸದಸ್ಯರಾಗಿದ್ದೇವೆ ಎಂದು ನಮ್ಮನ್ನು ನಾವೇ ಪ್ರಶ್ನಿಸಿಕೊಳ್ಳುವಂತಾಗಿದ್ದು, ನಮ್ಮ ಹಿತ ಕಾಯಬೇಕಾದ ಅಧ್ಯಕ್ಷರು, ಪೌರಾಯುಕ್ತರು ಸಹ ಕೋಲೆ ಬಸವನ ತರ ಎಲ್ಲದಕ್ಕೂ ತಲೆ ಆಡಿಸುವುದು ಬಿಟ್ಟರೇ ಬೇರೆನೂ ಮಾಡುತ್ತಿಲ್ಲವೆಂದು ಆಸಹಾಯಕತೆ ವ್ಯಕ್ತಪಡಿಸಿದರು.


*ಪುಟ್‍ಪಾತ್ ಸಮಸ್ಯೆ, ಸಿಬ್ಬಂದಿ ಕೊರತೆ ಪರಿಹರಿಸಿ:*

ನಗರದಲ್ಲಿನ ಪ್ರಮುಖ ರಸ್ತೆಗಳಲ್ಲಿ ಪುಟ್‍ಪಾತ್ ಅತಿಕ್ರಮಣ ವಾಗಿರುವುದರಿಂದ, ಬೀದಿ ವ್ಯಾಪಾರಿಗಳು ವ್ಯಾಪಾರಕ್ಕೆ ಪುಟ್‍ಪಾತ್ ಅನ್ನೇ ಆಕ್ರಮಿಸಿಕೊಂಡಿರುವ ಕಾರಣ ಪಾದಾಚಾರಿಗಳಿಗೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವು ಸಭೆಗಳಲ್ಲಿ ಪ್ರಸ್ತಾಪವಾದರೂ ಸಮಸ್ಯೆ ಬಗೆಹರಿದಿಲ್ಲ, ದಯಮಾಡಿ ಅಧ್ಯಕ್ಷರು ಮತ್ತು ಪೌರಾಯುಕ್ತರು ಪೊಲೀಸ್ ಇಲಾಖೆಯ ಸಹಕಾರದಲ್ಲಿ ಪುಟ್‍ಪಾತ್ ತೆರವಿಗೆ ಮುಂದಾಗುವಂತೆ ಒಕ್ಕೊರಲಿನಲ್ಲಿ ಮನವಿ ಮಾಡಿಕೊಂಡರು.


ಇದರೊಟ್ಟಿಗೆ ನಗರಸಭೆಯಲ್ಲಿ ಸಿಬ್ಬಂದಿಗಳ ಕೊರತೆ ಜಾಸ್ತಿಯಿದೆ, ಇದರಿಂದ ದೈನಂದಿನ ಕೆಲಸಕಾರ್ಯಗಳ ನಿರ್ವಹಣೆಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಈ ಬಗ್ಗೆ ಜಿಲ್ಲೆಯವರೇ ಆದ ಡಿಸಿಎಂ ರವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಮುಂದಾಗುವಂತೆ ಒಮ್ಮತದ ನಿರ್ಧಾರಕ್ಕೆ ಬರಲಾಯಿತು.


*ಸದಸ್ಯರಿಗೆ ಗೌರವ ನೀಡಿ:*

ಅಧಿಕಾರಿಗಳಾಗಲಿ, ಸಿಬ್ಬಂದಿ ವರ್ಗದವರಾಗಲಿ ನಗರಸಭಾ ಸದಸ್ಯರಿಗೆ ಗೌರವ ನೀಡುತ್ತಿಲ್ಲ, ವಾರ್ಡ್‍ನಲ್ಲಿ ಕೆಲಸ ಮಾಡುವ ಗುತ್ತಿಗೆದಾರರು ಸಹ ನಮ್ಮನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ, ಇಷ್ಟಬಂದ ರೀತಿಯಲ್ಲಿ ಕಾರ್ಯ ನಿರ್ವಹಿಸುವುದು ನಮ್ಮ ಗೌರವಕ್ಕೆ ಧಕ್ಕೆ ತರಲಿದ್ದು, ದಯಮಾಡಿ ಪೌರಾಯುಕ್ತರು ಈ ವಿಚಾರದಲ್ಲಿ ಎಲ್ಲರಿಗೂ ಸ್ಪಷ್ಟ ಸೂಚನೆ ನೀಡಿ ನಮ್ಮ ಹಕ್ಕು ಭಾದ್ಯತೆಗಳನ್ನು ಕಾಪಾಡಬೇಕೆಂದರು.


ಉಳಿದಂತೆ ಅಧ್ಯಕ್ಷರ ಅಪ್ಪಣೆ ಮೇರೆಗೆ ಎಸ್‍ಎಫ್‍ಸಿ ಅನುದಾನ, ಮಳಿಗೆ ಹರಾಜು, 15 ನೇ ಹಣಕಾಸು ಕ್ರೀಯಾ ಯೋಜನೆ ತಯಾರಿ, ಆಸ್ತಿಗಳ ಸೃಜನೆ ಸೇರಿ ಹಲವು ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಅಧ್ಯಕ್ಷರಾದ ಪಿ.ಪ್ರಶಾಂತ್, ಪೌರಾಯುಕ್ತ ಪುಟ್ಟಸ್ವಾಮಿ, ಉಪಾಧ್ಯಕ್ಷರಾದ ಹಸೀನಾ ಪರ್ಹಿನ್ ಸೇರಿದಂತೆ ಸದಸ್ಯರಗಳು, ಅಧಿಕಾರಿ ವರ್ಗದವರು, ಸಿಬ್ಬಂದಿಗಳು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑