Tel: 7676775624 | Mail: info@yellowandred.in

Language: EN KAN

    Follow us :


ಹಣ ಕೊಟ್ಟರೂ ಸ್ಮಶಾನಕ್ಕೆ ಜಾಗ ಸಿಕ್ಕುತ್ತಿಲ್ಲಾ, ವಿದ್ಯುತ್ ಚಿತಾಗಾರ ಸದುಪಯೋಗಪಡಿಸಿಕೊಳ್ಳಿ, ಸಂಸದ ಡಿ ಕೆ ಸುರೇಶ್

Posted date: 15 Sep, 2023

Powered by:     Yellow and Red

ಹಣ ಕೊಟ್ಟರೂ ಸ್ಮಶಾನಕ್ಕೆ ಜಾಗ ಸಿಕ್ಕುತ್ತಿಲ್ಲಾ, ವಿದ್ಯುತ್ ಚಿತಾಗಾರ ಸದುಪಯೋಗಪಡಿಸಿಕೊಳ್ಳಿ, ಸಂಸದ ಡಿ ಕೆ ಸುರೇಶ್

ಚನ್ನಪಟ್ಟಣ: ನಗರ ಪ್ರದೇಶವಿರಲಿ, ಗ್ರಾಮೀಣ ಭಾಗದಲ್ಲೂ ಸ್ಮಶಾನಕ್ಕಾಗಿ ಹಣ ನೀಡಿದರೂ ಜಾಗ ಸಿಕ್ಕುತ್ತಿಲ್ಲ, ಅದಕ್ಕಾಗಿಯೇ ನನ್ನ ಲೋಕಸಭಾ ಕ್ಷೇತ್ರದ ಎಲ್ಲಾ ತಾಲ್ಲೂಕುಗಳಲ್ಲೂ ವಿದ್ಯುತ್ ಚಿತಾಗಾರ ಆರಂಭಿಸಲಾಗುತ್ತಿದೆ, ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಂಸದ ಡಿ ಕೆ ಸುರೇಶ್ ಕರೆ ನೀಡಿದರು. ಅವರು ನಗರದ ರಾಮಮ್ಮನಕೆರೆ ಬಳಿಯ ಹಿಂದೂ ರುದ್ರಭೂಮಿಯಲ್ಲಿ ಸಂಸದರ ಅನುದಾನದಲ್ಲಿ ನಿರ್ಮಾಣಗೊಂಡಿರುವ ಆಧುನಿಕ ವಿದ್ಯುತ್ ಚಿತಾಗಾರವನ್ನು ಸಂಸದ ಡಿ.ಕೆ.ಸುರೇಶ್ ಶುಕ್ರವಾರ ಲೋಕಾರ್ಪಣೆಗೊಳಿಸಿದರು.


ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ನನ್ನ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಂಟು ಕ್ಷೇತ್ರಗಳಲ್ಲೂ ಆಧುನಿಕ ವಿದ್ಯುತ್ ಚಿತಾಗಾರ ನಿರ್ಮಿಬೇಕೆಂಬ ಉದ್ದೇಶದಿಂದ ಚನ್ನಪಟ್ಟಣ ತಾಲೂಕಿನಲ್ಲಿಯೂ ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಮುಂದಾಗಿದ್ದು, ಇಂದು ಲೋಕಾರ್ಪಣೆಗೊಳಿಸಲಾಗಿದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.


ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆ ಸ್ಮಶಾನ ಜಾಗದ ಸಮಸ್ಯೆ ತಲೆದೋರಿದೆ. ಹಣ ನೀಡಿದರೂ ಸ್ಮಶಾನಕ್ಕೆ ಜಾಗ ಸಿಗದಂತ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ಹಿನ್ನೆಲೆಯಲ್ಲಿ ನನ್ನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸುವ ಪ್ರಯತ್ನ ಮಾಡಿದೆ. ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷ ಸಂಸದರ ಅನುದಾನ ಕಡಿತಗೊಂಡಿತ್ತು. ಇದರಿಂದ ಹಣಕಾಸಿನ ತೊಂದರೆಯಾಗಿ ಚಿತಾಗಾರ ನಿರ್ಮಾಣ ಕಾರ್ಯ ವಿಳಂಬವಾಯಿತು ಎಂದು ತಿಳಿಸಿದರು.


*ಸುಮಾರು ೩ ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ಆಧುನಿಕ ವಿದ್ಯುತ್ ಚಿತಾಗಾರವನ್ನು ನಿರ್ಮಿಸಲಾಗಿದೆ.*

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸ್ಮಶಾನ ಇಲ್ಲದವರು ಇಲ್ಲಿ ಬಂದು ಚಿತಾಗಾರದ ಉಪಯೋಗ ಪಡೆದುಕೊಳ್ಳಬೇಕು. ಎಲ್ಲ ಕಡೆ ಇಂಥ ಚಿತಾಗಾರ ನಿರ್ಮಾಣವಾದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.


ಈ ಸಂದರ್ಭಲ್ಲಿ ನಗರಸಭೆ ಆಯುಕ್ತ ಸಿ.ಪುಟ್ಟಸ್ವಾಮಿ, ಸದಸ್ಯರಾದ ವಾಸಿಲ್ ಅಲಿಖಾನ್, ಮತೀನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಆರ್. ಪ್ರಮೋದ್, ಸುನೀಲ್, ರಾಜ್ಯ ಕುಕ್ಕುಟ ಮಂಡಳಿ ಅಧ್ಯಕ್ಷ ಡಿ.ಕೆ.ಕಾಂತರಾಜು, ಮುಖಂಡರಾದ ಚಂದ್ರಸಾಗರ, ಬೋರ್‌ವೆಲ್ ರಂಗನಾಥ್ ಮುಂತಾದವರು ಉಪಸ್ಥಿತರಿದ್ದರು.



*ಪಕ್ಷದ ಸಿದ್ಧಾಂತ ನಂಬಿ ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ: ಸುರೇಶ್*


ಪಕ್ಷದ ಸಂಘಟನೆ ಕುರಿತು ಕಾಂಗ್ರೆಸ್ ಸದಾ ಗಮನ ಹರಿಸುತ್ತದೆ. ನಮ್ಮ ಪಕ್ಷದ ತತ್ವ ಸಿದ್ಧಾಂತವನ್ನು ನಂಬಿ ಯಾರೇ ಬಂದರೂ ಸ್ವಾಗತಿಸುತ್ತೇವೆ, ಆದರೆ, ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಕಾರ್ಯ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ಚುನಾವಣೆ ಬರುತ್ತದೆ ಹೋಗುತ್ತದೆ. ಆದರೆ ಪಕ್ಷ ಸಂಘಟನೆ ಕಾರ್ಯ ಎಂಬುದು ನಿರಂತರವಾಗಿ ನಡೆಯುತ್ತದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡಾ ಸಂಘಟನೆಗೆ ಒತ್ತು ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದ್ದೇವೆ. ಮುಂದೆ ಯಾರು ಬರುತ್ತಾರೋ ಕಾದು ನೋಡೋಣ. ಬರುವವರೆಗೆ ಸ್ವಾಗತ ಎಂದು ಮಾರ್ಮಿಕವಾಗಿ ನುಡಿದರು.


ಡಿಸಿಎಂ ಸ್ಥಾನ ಹೆಚ್ಚಳಕ್ಕೆ ಸಚಿವ ರಾಜಣ್ಣ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ರಾಜಣ್ಣ ಅವರನ್ನೇ ಕೇಳಿ, ನನಗೇನು ಗೊತ್ತಿಲ್ಲ. ನಾನು ಒಬ್ಬ ಲೋಕಸಭಾ ಸದಸ್ಯ ಅಷ್ಟೇ ಎಂದರು.

ಸರ್ಕಾರ ನಡೆಸುತ್ತಿರುವವರು ರಾಜ್ಯ ನಾಯಕರು. ನೀವು ಅವರನ್ನೇ ಕೇಳಬೇಕು ಎನ್ನುವ ಮೂಲಕ ಈ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.


ಹೆಜ್ಜಾಲ-ಚಾಮರಾಜನಗರ ರೈಲ್ವೆ ಮಾರ್ಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ರೈಲ್ವೆ ಮಾರ್ಗಕ್ಕೆ ಭೂಸ್ವಾಧೀನ ಪ್ರಕ್ರಿಯೇ ಆರಂಭವಾಗಬೇಕು. ಅದಕ್ಕೆ ಸಂಬಂಧಿಸಿದಂತೆ ರೈಲ್ವೆ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚೆ ನಡೆಸಿದ್ದೇನೆ. ಕೇಂದ್ರ ಸರ್ಕಾರ ಯೋಜನೆಯನ್ನು ಮಧ್ಯದಲ್ಲಿ ಕೈಬಿಟ್ಟಿತ್ತು. ಆದರೆ, ಯೋಜನೆಯನ್ನು ಕೈಗೆತ್ತುಕೊಳ್ಳಿ ಎಂದು ಒತ್ತಾಯಿಸಿದ್ದು, ಇದೀಗ ಯೋಜನೆಯನ್ನು ಕೇಂದ್ರ ಸರ್ಕಾರ ಕೈಗೆತ್ತುಕೊಂಡಿದೆ ಎಂದು ತಿಳಿಸಿದರು.


ಈ ಮಾರ್ಗದ ಭೂಸ್ವಾಧೀನಕ್ಕೆ ಸುಮಾರು ೧,೫೦೦ ಕೋಟಿ ರೂ.ನಿಂದ ೨,೦೦೦ ಸಾವಿರ ಕೋಟಿ ರೂ. ಹಣ ಬೇಕಾಗುತ್ತದೆ. ಯೋಜನೆಗೆ ರಾಜ್ಯ ಸರ್ಕಾರ ಸಹ ಶೇ.೫೦ರಷ್ಟು ಹಣ ಭರಿಸಬೇಕಿದೆ. ಆದಷ್ಟು ಬೇಗ ಭೂಸ್ವಾಧೀನ ಪ್ರಕ್ರಿಯೆ ನಡೆಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದರು.


*ತಪ್ಪಾಗಿ ನಮೂದಾದ ತಾಲ್ಲೂಕು ಮತ್ತು ಜಿಲ್ಲಾಧಿಕಾರಿ ಹೆಸರು!*

ನಿರ್ಮಾಣವಾಗಿರುವ ಆಧುನಿಕ ವಿದ್ಯುತ್ ಚಿತಾಗಾರದ ಕಟ್ಟಡದಲ್ಲಿ ಚನ್ನಪಟ್ಟಣ ಎಂದು ಬರೆಯುವ ಬದಲು ಕೇವಲ (*ಚನ್ನಪಟ್ಟ*) ಎಂದು ಉದ್ಘಾಟನಾ ನಾಮಫಲಕದಲ್ಲಿ ಅಧಿಕಾರಿಗಳ ಯಡವಟ್ಟಿನಿಂದ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರ ಹೆಸರನ್ನು ತಪ್ಪಾಗಿ ನಮೂದಿಸಿರುವುದು ಕಂಡುಬಂದಿತ್ತು.

ನಾಮಫಲಕದಲ್ಲಿ ಜಿಲ್ಲಾಧಿಕಾರಿಗಳ ಹೆಸರನ್ನು ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಎಂಬುದಾಗಿ ನಮೂದಿಸುವ ಬದಲು ‘ ಡಾ. ಅವಿನಾಶ್ ರಾಜೇಂದ್ರ ಮೆನನ್’ ಎಂದು ನಮೂದಿಸಿದ್ದು ಎದ್ದು ಕಾಣುತ್ತಿದ್ದು, ಇದು ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿತ್ತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑