Tel: 7676775624 | Mail: info@yellowandred.in

Language: EN KAN

    Follow us :


ಕಾವೇರಿ ಕಣಿವೆ ಬರಿದು, ತಮಿಳುನಾಡಿಗೆ ನೀರು ಬೇಡ, ರೈತ ಮಹಿಳೆಯರಿಂದ ಪ್ರತಿಭಟನೆ

Posted date: 06 Oct, 2023

Powered by:     Yellow and Red

ಕಾವೇರಿ ಕಣಿವೆ ಬರಿದು, ತಮಿಳುನಾಡಿಗೆ ನೀರು ಬೇಡ, ರೈತ ಮಹಿಳೆಯರಿಂದ ಪ್ರತಿಭಟನೆ

ರಾಮನಗರ:ಚನ್ನಪಟ್ಟಣ; ಕರ್ನಾಟಕದ ಜನರಿಗೆ ಕುಡಿಯುವ ಹಾಗೂ ರೈತರ ಜಮೀನಿಗೆ ನೀರಿನ ಅಭಾವದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ, ಗುರುವಾರ ನಗರದಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಮಹಿಳಾ ಘಟಕದ ವತಿಯಿಂದ ಖಾಲಿ ಕೊಡ ಪ್ರದರ್ಶನ ಹಾಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯದ ಮುಖ್ಯ ಮಂತ್ರಿಗಳಿಗೆ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.


ನಗರದ ಹೃದಯ ಭಾಗದಲ್ಲಿರುವ ಗಾಂಧಿಭವನದಲ್ಲಿ ಜಮಾವಣೆಗೊಂಡ ರೈತಸಂಘದ ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನಗರದ ತಾಲೂಕು ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಹೆದ್ದಾರಿಯುದ್ದಕ್ಕೂ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿದರು. ರಕ್ತ ಕೊಟ್ಟೇವು ಕಾವೇರಿ ಬಿಡೆವು, ಕಾವೇರಿ ನಮ್ಮದು, ನಮ್ಮ ನೀರು ನಮ್ಮ ಹಕ್ಕು ಎಂದು ಕೂಗುವ ಮೂಲಕ‌ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿದರು.


ಈಗಾಗಲೇ ರಾಜ್ಯ ಬರಗಾಲಕ್ಕೆ ತುತ್ತಾಗಿದೆ, ಕನ್ನಂಬಾಡಿ ಸೇರಿದಂತೆ ಕಾವೇರಿ ಪ್ರಾಂತ್ಯದ ಬಹುತೇಕ ಎಲ್ಲಾ ಅಣೆಕಟ್ಟೆಗಳಲ್ಲಿ ನೀರು ಖಾಲಿಯಾಗಿದೆ. ಬೆಂಗಳೂರು ಸೇರಿದಂತೆ ಮೈಸೂರು ಬೆಂಗಳೂರು ಹೆದ್ದಾರಿಯ ಎಲ್ಲಾ ನಗರಗಳಿಗೂ ಕುಡಿಯುವ ನೀರು ಹಾಗೂ ವ್ಯವಸಾಯಕ್ಕೆ ಮೂಲವಾಗಿರುವ ಕಾವೇರಿಯ ಒಡಲು ಖಾಲಿಯಾಗಿದೆ. ಈ ಸ್ಥಿತಿಯಲ್ಲೂ ತಮಿಳುನಾಡಿಗೆ ನೀರು ಬಿಡುತ್ತಿರುವುದು ಆತಂಕಕಾರಿ ವಿಚಾರ. ಭವಿಷ್ಯದಲ್ಲಿ ಕುಡಿಯುವ ನೀರಿಗೂ ಭೀಕರ ಸ್ಥಿತಿ ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಹಾಗೂ ಸುಪ್ರೀಂಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ತಿರಸ್ಕರಿಸಿ, ನೀರು ಬಿಡುವುದನ್ನು ನಿಲ್ಲಿಸಿ, ರೈತರಿಗೆ ನ್ಯಾಯ ಒದಗಿಸಬೇಕೆಂದು ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದರು.


*ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ!*

ಈ ಹಿಂದಿನಿಂದಲೂ ಕಾವೇರಿ ನೀರು ವಿಚಾರದಲ್ಲಿ ಸಮಿತಿ ಹಾಗೂ ಪ್ರಾಧಿಕಾರದ ಎದುರು ರಾಜ್ಯ ಸರ್ಕಾರ ಸಮರ್ಥವಾಗಿ ವಾಸ್ತವಾಂಶ ಮಂಡಿಸುತ್ತಿಲ್ಲ. ಕೋಟಿ-ಕೋಟಿ ಫೀಜು ಪಡೆಯುವ ವಕೀಲರು ಸಹ ನಮ್ಮ ಪರ ನ್ಯಾಯ ಬರುವಂತೆ ವಾದ ಮಂಡಿಸುತ್ತಿಲ್ಲ. ನಮ್ಮ ರಾಜ್ಯ ಸರ್ಕಾರ ಕಾವೇರಿ ವಿಚಾರದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈಗಲಾದರೂ ಬರ ಅದ್ಯಯನ ಸಮಿತಿ, ಕಾವೇರಿ ಅಧ್ಯಯನ ಸಮಿತಿ ಹಾಗೂ ತಜ್ಞರ ಸಮಿತಿ ಕೂಡಲೇ ಪ್ರಾಧಿಕಾರಕ್ಕೆ ಹಾಗೂ ಕೇಂದ್ರಕ್ಕೆ ರಾಜ್ಯದ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಸಂಕಷ್ಟ ಸಮಯದ ಸೂತ್ರ ಅನುಸರಿಸಲು ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ, ಎರಡು ರಾಜ್ಯಗಳ ನೀರಿನ ಸಮಸ್ಯೆ ಬಗೆಹರಿಸಲು ಮುಂದಾಗಬೇಕು, ಹಿರಿಕಿರಿಯ ರೈತ ಮುಖಂಡರ ಸಲಹೆ ಪಡೆಯಬೇಕು ಎಂದು ರೈತಸಂಘದ ಮಹಿಳಾ ಪದಾಧಿಕಾರಿಗಳು ಒತ್ತಾಯಿಸಿದರು.


*ನೂತನ ಮದ್ಯದಂಗಡಿಗೂ ವಿರೋಧ;*

ಗಾಂಧಿ ಭವನದ ಮುಂಭಾಗ ಹಾಗೂ ಹೆದ್ದಾರಿಯುದ್ದಕ್ಕೂ ಕಾವೇರಿ ವಿಚಾರವಾಗಿ ಖಾಲಿಕೊಡಗಳ ಪ್ರದರ್ಶನ ನಡೆಸಿದ ಸಂಘಟನೆಯ ಕಾರ್ಯಕರ್ತರು, ಇದರೊಂದಿಗೆ ರಾಜ್ಯದಲ್ಲಿ ಜನಸಂಖ್ಯೆಗನುಗುಣವಾಗಿ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧವೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಎರಡೂ ವಿಚಾರಗಳ ಬಗ್ಗೆ ಪ್ರತಿಭಟನಾಕಾರರು, ತಹಸೀಲ್ದಾರ್ ಮಹೇಂದ್ರ ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.


ಈ ವೇಳೆ ಮಂಡ್ಯ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ, ಮದ್ದೂರು ತಾಲೂಕು ಕಾರ್ಯದರ್ಶಿ ಡಿ.ಕೆ.ಚಂದ್ರು, ರೈತಸಂಘ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಬೈರಾಪಟ್ಟಣ ಶೋಭಾ, ತಾಲೂಕು ಅಧ್ಯಕ್ಷೆ ಬಿ.ಕೆ.ಶ್ವೇತ, ಪ್ರಧಾನ ಕಾರ್ಯದರ್ಶಿ ಚಕ್ಕಲೂರು ಅನಿತಾ, ಉಪಾಧ್ಯಕ್ಷರಾದ ಚಿಕ್ಕತಾಯಮ್ಮ, ಹರೂರು ರೂಪ, ನಾಗವೇಣಿ, ಗೌರವಾಧ್ಯಕ್ಷೆ ಬೈರಾಪಟ್ಟಣ ಸಾವಿತ್ರಮ್ಮ ಸೇರಿದಂತೆ ಹಲವಾರು ರೈತ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑