Tel: 7676775624 | Mail: info@yellowandred.in

Language: EN KAN

    Follow us :


ಸರ್ಕಾರದ ಹಣ ದುರುಪಯೋಗ ಮಾಡಬೇಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಕುಮಾರಸ್ವಾಮಿ

Posted date: 10 Nov, 2023

Powered by:     Yellow and Red

ಸರ್ಕಾರದ ಹಣ ದುರುಪಯೋಗ ಮಾಡಬೇಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಕುಮಾರಸ್ವಾಮಿ

ಚನ್ನಪಟ್ಟಣ: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಬರದ ಛಾಯೆ ಆವರಿಸಿದೆ, ನಮ್ಮ ಚನ್ನಪಟ್ಟಣ ತಾಲೂಕು ಇದರಿಂದ ಹೊರತಾಗಿಲ್ಲ. ನನ್ನ ಕ್ಷೇತ್ರ ಸೇರಿದಂತೆ ರಾಮನಗರ ಜಿಲ್ಲೆಯೆಲ್ಲೆಡೆ ಬರದ ಪರಿಸ್ಥಿತಿ ಇದ್ದು, ಎಲ್ಲಾ ಇಲಾಖೆಗಳು ರೈತರಿಗೆ ಸ್ಪಂದಿಸಬೇಕು. ವಿಶೇಷವಾಗಿ ಕೃಷಿ ಇಲಾಖೆ, ರೇಷ್ಮೇ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜವಬ್ದಾರಿಯಿಂದ ಕೆಲಸ ನಿರ್ವಹಿಸಿ ರೈತರಿಗೆ ನೆರವಾಗಿ, ಸರ್ಕಾರದ ಹಣ ಎಂದರೆ ಅದು ಸಾರ್ವಜನಿಕರ ತೆರಿಗೆ ಹಣ, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕ್ಷೇತ್ರದ ಶಾಸಕರಾದ ಹೆಚ್.ಡಿ.ಕುಮಾರಸ್ವಾಮಿ ತಾಕೀತು ಮಾಡಿದರು.


ಅವರು ಶುಕ್ರವಾರ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ತಾಲ್ಲೂಕು ಆಡಳಿತದ ಬಹುತೇಕ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳ ಕೊರತೆ ಬಗ್ಗೆ ಗಮನ ಸೆಳೆದರು. ಅವರ ಪ್ರಶ್ನೆಗೆ ಉತ್ತರಿಸಿದ ಅವರು ಬಹುತೇಕ  ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಬೇರೆ ಕಡೆಯ ಸಿಬ್ಬಂದಿಗಳನ್ನು ನಿಯೋಜಿಸುವ ಜೊತೆಗೆ ಸರ್ಕಾರದ ಗಮನ ಸೆಳೆದು ಸಿಬ್ಬಂದಿಗಳ ಕೊರೆತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.


ಕಂದಾಯ ಇಲಾಖೆಗೂ ರೈತರಿಗೂ ನೇರ ಸಂಬಂಧವಿದೆ. ಅಧಿಕಾರಿಗಳು ರೈತರನ್ನು ಅನಾವಶ್ಯಕವಾಗಿ ಕಚೇರಿಗೆ ಅಲೆದಾಡಿಸಬೇಡಿ. ರೈತರನ್ನು ಲಂಚಕ್ಕಾಗಿ ಪೀಡಿಸದೇ ಅವರ ಕೆಲಸ ಕಾರ್ಯಗಳನ್ನು ತ್ವರಿವಾಗಿ ಮಾಡಿಕೊಡಲು ಮೊದಲ ಆದ್ಯತೆ ನೀಡಬೇಕು. ರೈತರ ಸಂಕಷ್ಟವನ್ನು ಅರಿತು ಅವರಿಗೆ ನೆರವಾಗುವ ರೀತಿಯಲ್ಲಿ ಕೆಲಸ ಮಾಡಿ, ಸ್ಥಳೀಯ ಅಧಿಕಾರಿಗಳು ರೈತರ ಬಳಿ ತೆರಳಿ ಕೆಲಸ ಮಾಡುವ ಮೂಲಕ ಮಾದರಿಯಾಗಿ ಎಂದು ಕಂದಾಯ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸಿಬ್ಬಂದಿಗಳಿಗೆ ಕರೆ ನೀಡಿದರು.


ಗ್ರಾಮೀಣ ಭಾಗದಲ್ಲಿನ ನಿವೇಶನದಾರರಿಗೆ ಮತ್ತು ನರೇಗಾ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಹುತೇಕ ಸಮಸ್ಯೆಗಳಿಗೆ ಪಿಡಿಓ ಗಳೇ ನೇರ ಕಾರಣಕರ್ತರಾಗಿದ್ದಾರೆ. ಸಾರ್ವಜನಿಕರ ಕೆಲಸ ಮಾಡಿಕೊಡದೇ ಜನರನ್ನು ಅಲೆದಾಡಿಸುವ ಕೆಲಸ ಮಾಡುವ ಜೊತೆಗೆ ರಾಜಕೀಯ ಮಾಡಿಕೊಂಡು ತಿರುಗುತ್ತಾರೆ. ತಹಸೀಲ್ದಾರ್ ಹಾಗೂ ತಾಪಂ ಕಾರ್ಯನಿರ್ವಾಹಣಾಧಿಕಾರಿ ಪಿಡಿಓ ಗಳ ರಾಜಕೀಯ ಪ್ರೇರಿತ ಕಾರ್ಯವೈಖರಿಗಳಿಗೆ ಕಡಿವಾಣ ಹಾಕುವ ಕೆಲಸ ಮಾಡಬೇಕು. ಪಿಡಿಓ ಗಳನ್ನು ಬಿಗಿ ಮಾಡುವ ಮೂಲಕ ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡಬೇಕು. ಪ್ರತಿ ವಾರವೂ ಅವರುಗಳು ನಿರ್ವಹಿಸಿರುವ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡು ಯಾಕೆ ತಡವಾಗಿದೆ ಎಂದು ಪ್ರಶ್ನಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.


ನಾನು ಎರಡು ಬಾರಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ಆಗಲಿ, ನನ್ನ ಶಾಸಕತ್ವ ಅವಧಿಯಲ್ಲಾಗಲಿ ಎಂದಿಗೂ ಯಾವುದೇ ಸ್ತರದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲಾ, ಮಾಡಿಕೊಳ್ಳುವುದು ಇಲ್ಲ. ಬೇರೆ ರಾಜಕಾರಣಿಗಳಂತೆ ಅಧಿಕಾರಿಗಳ ವಿರುದ್ಧ ಹರಿಹಾಯಲಿಲ್ಲ. ನನ್ನ ಪರವಾಗಿ ಹಣ ಸಂಗ್ರಹಿಸುವಂತೆ ನಾನು ಎಂದಿಗೂ ಯಾವ ಅಧಿಕಾರಿಗಳಿಗೂ ಸೂಚಿಸಿಲ್ಲ. ಈ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ದೊಡ್ಡ ಮಟ್ಟದ ಅನುದಾನಗಳು ದೊರೆಯುವ ನಿರೀಕ್ಷೆ ಇಲ್ಲ. ಹಾಗಂತ ಅಧಿಕಾರಿಗಳು ಕೈಕಟ್ಟಿ ಕೂರದೆ ಬರುವ ಅನುದಾನಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕೆಲಸ ಮಾಡಿ. ನಿಮಗೆ ಯಾವುದೇ ರೀತಿಯ ತೊಂದರೆಯಾದರೂ ನನ್ನ ಬಳಿಗೆ ನೇರವಾಗಿ ಬನ್ನಿ, ಆದರೆ, ಸುಖಾಸುಮ್ಮನೆ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ ಎಂದರು.


ಕೆಡಿಪಿ ಸಭೆಯಲ್ಲಿ ನಗರಾಡಳಿತ, ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ, ರೇಷ್ಮೆ, ತೋಟಗಾರಿಕೆ, ಪಶುಪಾಲನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆರೋಗ್ಯ ಸೇರಿದಂತೆ ಬಹುತೇಕ ಇಲಾಖೆ ಅಧಿಕಾರಿಗಳು ತಮ್ಮಲ್ಲಿನ ಸಿಬ್ಬಂದಿ ಕೊರತೆ ಕುರಿತು ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡಿದರು. ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಕುಮಾರಸ್ವಾಮಿ, ಬೇರೆ ಕಡೆಯಿಂದ ಸಿಬ್ಬಂದಿಯನ್ನು  ನಿಯೋಜಿಸುವ ಜತೆಗೆ ಸಿಬ್ಬಂದಿ ಕೊರೆತೆ ನೀಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.


ಗ್ರಾಮೀಣ ಭಾಗದಲ್ಲಿ ನಿರ್ಮಿಸಿರುವ ಬಹುತೇಕ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿವೆ. ಕೆಐಆರ್‍ಡಿಎಲ್ ಹಾಗೂ ನಿರ್ಮಿತಿ ಕೇಂದ್ರ ನಿರ್ಮಿಸಿರುವ ಘಟಕಗಳನ್ನು ಪೂರ್ಣಗೊಳಿಸಿ ಹಸ್ತಾಂತರ ಮಾಡದ ಕಾರಣ ಸಮಸ್ಯೆಯಾಗಿದೆ ಎಂದು ತಾಪಂ ಇಓ ಶಿವಕುಮಾರ್ ಕುಮಾರಸ್ವಾಮಿ ಯವರ ಗಮನಕ್ಕೆ ತಂದರು. ಗ್ರಾಮೀಣ ಭಾಗದಲ್ಲಿ ಎಷ್ಟು ಕಡೆ ನೀರಿನ ಘಟಕಗಳು ಕೆಟ್ಟು ನಿಂತಿವೆ ಎಂಬ ವರದಿ ಸಲ್ಲಿಸುವಂತೆ ಎಚ್‍ಡಿಕೆ ಸೂಚಿಸಿದರು.


ಜಲಜೀವನ್ ಮಿಷನ್‍ನಲ್ಲಿ ಅನುಷ್ಠಾನಗೊಳಿಸಿರುವ ಕಾಮಗಾರಿಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಕೆಲವು ಕಡೆ ಗುಂಡಿಗಳನ್ನು ಮುಚ್ಚದ ಕುರಿತು, ನಲ್ಲಿ ಅಳವಡಿಸದ ಕುರಿತು ದೂರುಗಳು ಬರುತ್ತಿವೆ. ಬೇರೆ ಕಡೆ ಏನಾಗಿದೆಯೋ ನನಗೆ ಗೊತ್ತಿಲ್ಲ ಆದರೆ, ನಮ್ಮ ತಾಲೂಕಿನಲ್ಲಿ ಯೋಜನೆಯನ್ನು ಪೂರ್ಣಪ್ರಮಾಣದಲ್ಲಿ ಗುಣಮಟ್ಟದೊಂದಿಗೆ ಅನುಷ್ಠಾಗೊಳಿಸಿ, ಇಲ್ಲವಾದರೆ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಿ ಎಂದು ಹಿರಿಯ ಅಧಿಕಾರಿಗಳಿಗೆ ಕುಮಾರಸ್ವಾಮಿ ತಾಕೀತು ಮಾಡಿದರು.


ನಗರದ ಯುಜಿಡಿ ಕಾಮಗಾರಿಗಾಗಿ 93 ಕೋಟಿ ಅನುದಾನ ಮಂಜೂರಾಗಿದೆ. ಆದರೆ ಪರಿಷ್ಕೃತ ಅಂದಾಜು ವೆಚ್ಚ 142 ಕೋಟಿಗೆ ಏರಿಕೆಯಾಗಿರುವುದರಿಂದ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಗಮನಕ್ಕೆ ತಂದರು.

ನಗರದ ಕಸದ ವಿಲೇವಾರಿಗೆ ಸಂಬಂಧಿಸಿದಂತೆ ವಂದಾರಗುಪ್ಪೆ ಬಳಿಗೆ 9.5 ಎಕರೆ ಜಾಗ ಗುರುತಿಸಿದ್ದು, ಹದ್ದುಬಸ್ತು ಮಾಡಿ ಹಸ್ತಾಂತರಿಸಿದರೆ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಸಾಧ್ಯವಾಗಲಿದೆ ಎಂದು ಪೌರಾಯುಕ್ತ ಸಿ ಪುಟ್ಟಸ್ವಾಮಿ ತಿಳಿಸಿದರು.


ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ, ಅವುಗಳನ್ನು ನಿಯಂತ್ರಿಸಲು ಸಿಸಿಟಿವಿ ಅವಶ್ಯಕತೆ ಇದ್ದು, ಸಾರಿಗೆ ಅಧಿಕಾರಿಗಳು ಇದೂವರೆಗೂ ಗಮನಹರಿಸಿಲ್ಲ ಎಂದು ನಗರ ಪೋಲಿಸ್ ಠಾಣೆ ಆರಕ್ಷಕ ನಿರೀಕ್ಷಕ ಹರೀಶ್ ಸಭೆಯ ಗಮನಕ್ಕೆ ತಂದರು. ಅದಕ್ಕೆ ಪ್ರತಿಕ್ರಿಯಿಸಿದ ಎಚ್‍ಡಿಕೆ, ಪ್ರಸ್ತಾವನೆ ಸಲ್ಲಿಸಿ, ಇನ್ನೊಂದು ವಾರದಲ್ಲಿ ನನ್ನ ಅನುದಾನದಲ್ಲೇ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ವಹಿಸುತ್ತೇನೆ. ಅಂತೆಯೇ ಗ್ರಾಮೀಣ ಭಾಗದಿಂದ ಬರುವ ರೈತರನ್ನು ಹೆಲ್ಮೆಟ್ ಹಾಕಿಲ್ಲ ಎಂತಲೋ ಇಲ್ಲ ನಿಯಮ ಪಾಲನೆ ಮಾಡಿಲ್ಲ ಎಂತಲೋ ಸುಲಿಗೆ ಮಾಡಬೇಡಿ, ಅವರ ಮೇಲೆ ಕೇಸ್ ಹಾಕಬೇಡಿ. ಶಾಲಾ ಕಾಲೇಜುಗಳ ಬಳಿ ಅಲೆಯುವ ಪುಂಡುಪೋಕರಿಗಳಿಗೆ ಕಡಿವಾಣ ಹಾಕಿ, ಹೆಣ್ಣು ಮಕ್ಕಳು ನೆಮ್ಮದಿಯಿಂದ ಓಡಾಡುವ ವಾತಾವರಣ ನಿರ್ಮಿಸಿ, ಅಗತ್ಯ ಬಿದ್ದರೆ ಇಂಥ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಗಮನ ನೀಡಿ ಎಂದು ಸೂಚಿಸಿದರು.


ಇದೇ ವೇಳೆ ತಾಲೂಕುಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿಯನ್ನು ಮಂಡಿಸಿದರು.


ಈ ಸಂದರ್ಭದಲ್ಲಿ ತಹಸೀಲ್ದಾರ್ ಮಹೇಂದ್ರ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಶಿವಕುಮಾರ್, ತಾಪಂ ಆಡಳಿತಾಧಿಕಾರಿ ರಾಧ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಮೆಹರೀಶ್, ಪೌರಾಯುಕ್ತ ಸಿ.ಪುಟ್ಟಸ್ವಾಮಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑