Tel: 7676775624 | Mail: info@yellowandred.in

Language: EN KAN

    Follow us :


ಅನ್ನಭಾಗ್ಯ ಅಕ್ಕಿ ಕಳವು, ಆಡಳಿತ ಮಂಡಳಿ ಸದಸ್ಯರನ್ನು ಬಂಧಿಸಬೇಕು, ಕುಮಾರಸ್ವಾಮಿ ಹೊಣೆ ಹೊರಬೇಕು ಗಂಗಾಧರ್

Posted date: 23 Nov, 2023

Powered by:     Yellow and Red

ಅನ್ನಭಾಗ್ಯ ಅಕ್ಕಿ ಕಳವು, ಆಡಳಿತ ಮಂಡಳಿ ಸದಸ್ಯರನ್ನು ಬಂಧಿಸಬೇಕು, ಕುಮಾರಸ್ವಾಮಿ ಹೊಣೆ ಹೊರಬೇಕು ಗಂಗಾಧರ್

ಚನ್ನಪಟ್ಟಣ: ನಗರದ ಟಿಎಪಿಸಿಎಂಎಸ್ ಗೋದಾಮಿನಲ್ಲಿ ೧,೬೦೦ ಕ್ವಿಂಟಾಲ್ ಅನ್ನಭಾಗ್ಯ ದ ಅಕ್ಕಿ ಕಳವು ಆಗಿದ್ದು, ಇದಕ್ಕೆ ಯಾರೋ ಒಬ್ಬ ಗುಮಾಸ್ತನನ್ನು ಬಂಧಿಸುವುದರಲ್ಲಿ ಅರ್ಥವಿಲ್ಲಾ. ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಬೇಕು. ಇದರ ಸಂಪೂರ್ಣ ಹೊಣೆಯನ್ನು ಮಾಜಿ ಮುಖ್ಯಮಂತ್ರಿ, ಹಾಲಿ ಕ್ಷೇತ್ರದ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ ಯವರು ಹೊರಬೇಕು ಎಂದು ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಗಂಗಾಧರ್ ಹೇಳಿದರು. ಅವರು ಗುರುವಾರ ಸಂಜೆ ನಗರದ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.


ಅನ್ನಭಾಗ್ಯ ಯೋಜನೆಯನ್ನು ಸರ್ಕಾರ ಬಡವರಿಗಾಗಿ ತಂದಿದೆ. ಬಡವರ ಅಕ್ಕಿಯನ್ನು ಬಿಡದೆ ಕಬಳಿಸಿರುವುದು ಹೇಯ ಕೃತ್ಯ. ಇದು ಒಂದು ದಿನದ ಅಥವಾ ಒಬ್ಬರ ಕೆಲಸವಲ್ಲ. ಆರು ತಿಂಗಳಿನಿಂದಲೂ ನಡೆಯುತ್ತಿದೆ ಎಂಬ ಮಾಹಿತಿ ನಮಗೆ ದೊರೆತಿದೆ. ಜೆಡಿಎಸ್ ಪಕ್ಷದ ಬೆಂಬಲಿತ ಆಡಳಿತ ಮಂಡಳಿ ಕಾರ್ಯನಿರ್ವಹಿಸುತ್ತಿದೆ. ಅವರಿಗೆ ಇದು ಗೊತ್ತಿರಲಿಲ್ಲವೇ ? ಅಥವಾ ಅವರು ಶಾಮೀಲಾಗಿರಬಹುದೇ, ಆರು ತಿಂಗಳಿನಿಂದ ನಡೆಯುತ್ತಿದೆ ಎಂಬ ಮಾಹಿತಿ ಇದ್ದು, ಶಾಸಕರ ಗಮನಕ್ಕೆ ಬಂದಿಲ್ಲವೇ ! ಬಂದಿದ್ದರೆ ಅವರು ಯಾಕೆ ಕ್ರಮ ಕೈಗೊಂಡಿಲ್ಲ. ಇದಕ್ಕೆ ಕುಮಾರಸ್ವಾಮಿ ಯವರೇ ಉತ್ತರಿಸಬೇಕು ಎಂದರು.


ಅಧಿಕಾರಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸುತ್ತಿರಲಿಲ್ಲವೇ, ದಾಖಲೆಗಳಲ್ಲಿ ಸರಿಯಾಗಿದ್ದು, ದಾಸ್ತಾನು ಮಾತ್ರ ಹೇಗೆ ಕಡಿಮೆಯಾಗಲು ಸಾಧ್ಯ !? ಅದು ಐವತ್ತು ಲಕ್ಷ ಮೊತ್ತದ ಅಕ್ಕಿ ಕಳವು ಅಥವಾ ಕಾಣೆ ಆಗುವವರೆಗೂ ಅಧಿಕಾರಿಗಳು ಸುಮ್ಮನೆ ಕುಳಿತಿದ್ದದ್ದು ಯಾಕೆ, ಅಧಿಕಾರಿಗಳು ಸಹ ಈ ಕಳವು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಅವರೆಲ್ಲರನ್ನು ಅಮಾನತ್ತಿನಲ್ಲಿಟ್ಟು ವಿಚಾರಣೆಗೊಳಪಡಿಸಬೇಕು. ಕಳೆದ ಆರು ತಿಂಗಳ ಮೊದಲೇ ಅಧಿಕಾರಿಗಳಿಗೆ ಗೊತ್ತಿದ್ದು, ಬೇರೆ ಕಡೆಯಿಂದ ಒಂದಷ್ಟು ತಂದಿಡಲಾಗಿದೆ ಎಂಬ ಮಾಹಿತಿಯೂ ನಮಗಿದೆ. ಆದ್ದರಿಂದ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಬೇಕೆಂದರು.


ಶಾಸಕ ಕುಮಾರಸ್ವಾಮಿ ಯವರು ದೇಶ-ವಿದೇಶದ ಸುದ್ದಿಯನ್ನೆಲ್ಲಾ ಮಾತನಾಡುತ್ತಾರೆ, ಆಡಳಿತ ಸರ್ಕಾರ ಮತ್ತು ನಮ್ಮ ನಾಯಕ ಡಿ ಕೆ ಶಿವಕುಮಾರ್ ರವರ ವಿರುದ್ಧ ಸುಖಾಸುಮ್ಮನೆ ಮಾತನಾಡುತ್ತಾರೆ. ಗ್ಯಾರಂಟಿ ಯೋಜನೆ ಬಗ್ಗೆ ಕುಹಕವಾಡುತ್ತಾರೆ. ನಮ್ಮ ಗ್ಯಾರಂಟಿ ಯೋಜನೆಗಳು ಶೇಕಡಾ ೯೫ ರಷ್ಟು ಫಲಾನುಭವಿಗಳಿಗೆ ತಲುಪಿವೆ. ಅದನ್ನು ಅವರ ಕ್ಷೇತ್ರದಲ್ಲಿ ಶಾಸಕರು ಜವಾಬ್ದಾರಿ ತೆಗೆದುಕೊಳ್ಳಬೇಕು. ಅದನ್ನೂ ಮಾಡದೆ ಕೇವಲ ವಿರುದ್ಧವಾಗಿ ಮಾತನಾಡುತ್ತಾರೆ. ಇಷ್ಟೆಲ್ಲಾ ಮಾತನಾಡುವ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಆಡಳಿತ ಕೈತಪ್ಪಿದಾಗ ಮಾತನಾಡದೆ ಮೌನ ವಹಿಸಿರುವುದು ಸರಿಯಲ್ಲಾ ಎಂದರು. ಇನ್ನೂ ಕೆಡಿಪಿ ಸಭೆಯನ್ನೂ ಸಹ ಕಾಟಚಾರಕ್ಕೆ ಮಾಡಿದ್ದು, ಅಲ್ಲಿಯೂ ಸಹ ಅಭಿವೃದ್ಧಿ ಕುರಿತು ಮಾತನಾಡಿಲ್ಲಾ ಎಂದರು.


ಟಿಎಪಿಸಿಎಂಎಸ್ ನ ಮಾಜಿ ಅಧ್ಯಕ್ಷ ಹೊಡಿಕೆಹೊಸಹಳ್ಳಿ ಚಂದ್ರು ಮಾತನಾಡಿ, ಇದು ಆಡಳಿತ ಮಂಡಳಿಯ ವೈಫಲ್ಯವಾಗಿದೆ. ಇದಕ್ಕೆ ಅಧಿಕಾರಿಗಳು ಸಹ ಸಾಥ್ ನೀಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇವರೆಲ್ಲರನ್ನು ತನಿಖೆಗೊಳಪಡಿಸಬೇಕು ಎಂದರು. ಈಗಾಗಲೇ ಟಿಎಪಿಸಿಎಂಎಸ್ ಚುನಾವಣೆ ಕಾವು ಪಡೆದುಕೊಂಡಿದೆ. ಮತದಾರರ ಪಟ್ಟಿಯೂ ಗೊಂದಲಮಯವಾಗಿದೆ. ಅಧಿಕಾರಿಗಳು ಪುನರ್ ಪರಿಶೀಲನೆ ನಡೆಸಿ ಚುನಾವಣೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಕುಕ್ಕುಟ ಮಹಾಮಂಡಳದ ಅಧ್ಯಕ್ಷ ಹಾಗೂ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಡಿ ಕೆ ಕಾಂತರಾಜು, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್, ನಗರ ಘಟಕದ ಅಧ್ಯಕ್ಷ ಸುನೀಲ್, ಮಾಜಿ ಅಧ್ಯಕ್ಷ ರಮೇಶ್, ಮುಖಂಡರಾದ ಎಂ ಸಿ ಕರಿಯಪ್ಪ, ಪಿ ಡಿ ರಾಜು, ಚೇತನ್ ಕೀಕರ್, ನಗರಸಭೆ ಸದಸ್ಯ ಸಾಬೀರ್, ಪಾಪಯ್ಯ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

ತಾಲ್ಲೂಕಿನ ಅಭಿವೃದ್ಧಿ ಬಿಟ್ಟು, ಬೇಡದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ, ಹೆಚ್ಡಿಕೆ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ ಡಿಕೆಸು
ತಾಲ್ಲೂಕಿನ ಅಭಿವೃದ್ಧಿ ಬಿಟ್ಟು, ಬೇಡದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ, ಹೆಚ್ಡಿಕೆ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ ಡಿಕೆಸು

ಚನ್ನಪಟ್ಟಣ: ಆಯಾಯ ಕ್ಷೇತ್ರದ ಶಾಸಕರು ಮೊದಲಿಗೆ ತಂತಮ್ಮ ಕ್ಷೇತ್ರದ ಅಭಿವೃದ್ಧಿ ಗೆ ಒತ್ತು ನೀಡಬೇಕೆ ವಿನಹ ಬೇರೆಯವರನ್ನು ತೆಗಳವುದನ್ನೇ ವೃತ್ತಿ ಮಾಡಿಕೊಂಡಿ

ಒಳ್ಳೆಯವರಾಗಿ ಉತ್ತಮ ಜೀವನ ರೂಪಿಸಿಕೊಳ್ಳಿ, ರೌಡಿ ಶೀಟರ್ ಗಳಿಗೆ ಪಾಠ ಮಾಡಿದ ಡಿವೈಎಸ್ಪಿ ಕೆ ಸಿ ಗಿರಿ
ಒಳ್ಳೆಯವರಾಗಿ ಉತ್ತಮ ಜೀವನ ರೂಪಿಸಿಕೊಳ್ಳಿ, ರೌಡಿ ಶೀಟರ್ ಗಳಿಗೆ ಪಾಠ ಮಾಡಿದ ಡಿವೈಎಸ್ಪಿ ಕೆ ಸಿ ಗಿರಿ

ಚನ್ನಪಟ್ಟಣ: ರೌಡಿಶೀಟರ್‍ ಗಳು ಅಪರಾಧ ಕೃತ್ಯಗಳಿಂದ ದೂರವಿರಬೇಕು. ಸಮಾಜದಲ್ಲಿ ತಮ್ಮ ನಡತೆಯನ್ನು ಸುಧಾರಿಸಿಕೊಳ್ಳಬೇಕು. ತಮ್ಮ ಸನ್ನಡತೆಯ ಆಧಾರದ ಮೇಲೆ ರೌಡಿ

Top Stories »  


Top ↑