Tel: 7676775624 | Mail: info@yellowandred.in

Language: EN KAN

    Follow us :


ಅಬಿದಾಬಾನು ಸದಸ್ಯತ್ವವನ್ನು ರದ್ದುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸುತ್ತೇನೆ, ವಾಸೀಲ್ ಅಲಿಖಾನ್

Posted date: 03 Dec, 2023

Powered by:     Yellow and Red

ಅಬಿದಾಬಾನು ಸದಸ್ಯತ್ವವನ್ನು ರದ್ದುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸುತ್ತೇನೆ, ವಾಸೀಲ್ ಅಲಿಖಾನ್

ಚನ್ನಪಟ್ಟಣ: ಸಭೆ ಮುಗಿಸಿ ಹೊರಬಂದಾಗ ನನ್ನ ಮೇಲೆ ನಗರಸಭೆ ಆವರಣದಲ್ಲೇ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 28ನೇ ವಾರ್ಡ್ ನಗರಸಭೆ ಸದಸ್ಯೆ ಅಬಿದಾ ಬಾನು ಅವರ ಸದಸ್ಯತ್ವವನ್ನು ಜಿಲ್ಲಾಧಿಕಾರಿಗಳು ರದ್ದುಪಡಿಸಬೇಕು ಎಂದು ನಗರಸಭೆ ಕಾಂಗ್ರೆಸ್ ಸದಸ್ಯ ವಾಸೀಲ್ ಅಲಿಖಾನ್ ಆಗ್ರಹಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಪ್ರಸ್ತಾಪವಾದ ವಿಚಾರಕ್ಕೆ ಸಂಬಂಧಿಸಿದಂತೆ 28ನೇ ವಾರ್ಡ್ ಸದಸ್ಯೆ ಅಬಿದಾ ಬಾನು ಮಗ ಸುಹೇಲ್ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಪ್ರಕರಣದ ವಿಡಿಯೋ ಸೇರಿದಂತೆ ಎಲ್ಲ ದಾಖಲೆಗಳನ್ನು  ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಿದ್ದು, ಜನಪ್ರತಿನಿಧಿಗೆ ಅಪಮಾನ ಮಾಡಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.


ರಾಜೀನಾಮೆಗೆ ನಿರ್ಧರಿಸಿದ್ದೆ: ಮೊನ್ನೆ ನಗರಸಭೆ ಆವರಣದಲ್ಲಿ ನಡೆದ ಘಟನೆ ನನ್ನನ್ನು ತೀವ್ರವಾಗಿ ಘಾಸಿಗೊಳಿಸಿದ್ದು, ಇದರಿಂದ ಮನನೊಂದ ನನ್ನ ನಗರಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಆದರೆ, ಇತರೆ ನಗರಸಭೆ ಸದಸ್ಯರು, ಹಿತೈಷಿಗಳ ಒತ್ತಾಯದ ಮೇರೆಗೆ ನನ್ನ ನಿರ್ಧಾರವನ್ನು ಹಿಂಪಡೆದೆ ಎಂದು ತಿಳಿಸಿದರು.


ನಗರಸಭೆಗೆ ಆಯ್ಕೆಯಾದ ಮಹಿಳಾ ಸದಸ್ಯರ ಕುಟಂಬದವರು ಹಸ್ತಕ್ಷೇಪ ನಡೆಸುತ್ತಾ, ಅಧಿಕಾರ ನಡೆಸುತ್ತಿರುವ ವಿಚಾರವನ್ನು ನಾನು ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದೆ. ಆಗ ಮಹಿಳಾ ಸದಸ್ಯರು ನಮ್ಮ ಅಧಿಕಾರ ನಾವು ಚಲಾಯಿಸುತ್ತಿದ್ದೇವೆ. ಯಾರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬುದನ್ನು ತಿಳಿಸಿ ಎಂದು ಒತ್ತಾಯಿಸಿದರು. ಆಗ ನಾನು ಅನಿವಾರ್ಯವಾಗಿ 28ನೇ ವಾರ್ಡ್ ಸದಸ್ಯೆ ಅಬಿದಾ ಬಾನು ಹೆಸರು ಹೇಳಬೇಕಾಯಿತು. ಇದನ್ನು ಅವರು ವಿರೋಧಿಸಿ ಅಲ್ಲೇ ಮಾತಿನ ಚಕಮುಕಿ ನಡೆಯಿತು.


ಆದರೆ ಸಭೆ ಮುಗಿಸಿ ಹೊರಬಂದ ಮೇಲೆ ಅವರ ಮಗ ಸುಹೇಲ್ ಕೆಲವು ರೌಡಿಗಳನ್ನು ಜತೆಗೆ ಕರೆದುಕೊಂಡು ಬಂದ ನಗರಸಭೆ ಆವರಣದಲ್ಲೇ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿ, ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ನಾನು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಅವರ ತಾಯಿ ಸಹ ನನ್ನ ಮೇಲೆ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ವಿವರಿಸಿದರು.  


ಸುಹೇಲ್ ಬೆಳಗ್ಗೆಯಿಂದ ಸಂಜೆಯವರೆಗೆ  ನಗರಸಭೆಯಲ್ಲೇ ಆವರಣದಲ್ಲೇ ಇದ್ದು, ಎಲ್ಲ ನಿಯಂತ್ರಣ ಮಾಡಲು ನೋಡುತ್ತಾನೆ. ಅಧಿಕಾರಿಗಳನ್ನು  ಬ್ಲಾಕ್ ಮೇಲೆ ಮಾಡುತ್ತಾನೆ. ಅಧಿಕಾರಿಗಳ ಯಾವ ವೀಕ್‍ನೆಸ್ ಅವನ ಬಳಿ ಇದೆಯೋ ಗೊತ್ತಿಲ್ಲ ಅಧಿಕಾರಿಗಳು ಸಹ ಅವನಿಗೆ ಹೆದರುತ್ತಾರೆ ಎಂದರು.


ಕಳೆದ ಎರಡು ದಶಕಗಳಿಂದ ನಗರಸಭೆಗೆ ಮೂರು ಬಾರಿ ಆಯ್ಕೆಯಾಗಿ ಸೇವೆ ಸಲ್ಲಿಸಿದ್ದೇನೆ. ಎಂದೂ ಈ ರೀತಿಯ ಕಹಿ ಅನುಭವವಾಗಿರಲಿಲ್ಲ. ಮೊನ್ನೆ ನಡೆದ ಘಟನೆ ಸಾಕಷ್ಟು ಬೇಸರ ಮೂಡಿಸಿದ್ದು, ಇಂಥವರ ಜತೆ ರಾಜಕೀಯ ಮಾಡಬೇಕೆ ಎಂಬ ಜಿಜ್ಞಾಸೆ ಮೂಡಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.


ಪಕ್ಷಕ್ಕಾಗಿ ಅಷ್ಟು ಸೇವೆ ಸಲ್ಲಿಸಿದರು ಪಕ್ಷ ಈ ವಿಚಾರದಲ್ಲಿ ಸರಿಯಾಗಿ ಸ್ಪಂದಿಸಲಿಲ್ಲ. ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದರೂ ಸಹ ನನಗೆ ಸರಿಯಾದ ಸಹಕಾರ ಸಿಗಲಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಲ್ಲಸಲ್ಲದ ಪ್ರಕರಣ ದಾಖಲಿಸುವ ಕೆಲಸ ಮಾಡಿದರು. ಆದರೆ,  ನಡೆದಿರುವ ಪ್ರಕರಣಕ್ಕೆ ನನ್ನ ಪರ ನನಗೆ ಬೆಂಬಲ ಸಿಗಲಿಲ್ಲ. ಮಹಿಳಾ ಸದಸ್ಯರ ಹಕ್ಕುಗಳನ್ನು ಪ್ರತಿಪಾದಿಸಿದ್ದೇ ತಪ್ಪಾಯಿತೆ ಎಂದು ಪ್ರಶ್ನಿಸಿದರು.


ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ  ಮಥೀನ್, ಲಿಯಾಖತ್,  ಮುಖಂಡರಾದ ಶಾಬಿರ್, ತೌಸಿಫ್, ಲೋಕೇಶ್ ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑