Tel: 7676775624 | Mail: info@yellowandred.in

Language: EN KAN

    Follow us :


ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

Posted date: 02 Jan, 2024

Powered by:     Yellow and Red

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾರಿಟಬಲ್ ಟ್ರಸ್ಟ್ ವತಿಯಿಂದ ಟ್ರಸ್ಟ್ ಅಧ್ಯಕ್ಷರು, ಹಿರಿಯ ವಕೀಲರು, ಸಮಾಜ ಸೇವಕರು ಆದ ಜನಾನುರಾಗಿ ಎಂ ಕೆ ನಿಂಗಪ್ಪ ಅವರು ತಾಲ್ಲೂಕಿನ ಚಕ್ಕಲೂರು ಸರ್ಕಾರಿ ಪ್ರಾಥಮಿಕ ಶಾಲೆಗೆ ಉತ್ತಮ ಗುಣಮಟ್ಟದ ಪ್ರಿಂಟರ್ ಮತ್ತು ಸ್ಕ್ಯಾನರ್ ವಿತರಣೆ ಮಾಡಿದರು.


೨೦೨೪ರ ನೂತನ ವರ್ಷದ ಪ್ರಯುಕ್ತ ತಾಲ್ಲೂಕಿನ ಚಕ್ಕಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಿ.ಕೆ.ಚಾರಿಟಬಲ್ ಟ್ರಸ್ಟ್ ವತಿಯಿಂದ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲಾ ಮಕ್ಕಳ ಕಂಪ್ಯೂಟರ್ ಶಿಕ್ಷಣದ ಕಲಿಕೆಗೆ ಅವಶ್ಯಕವಾದ ಪ್ರಿಂಟರ್ ಮತ್ತು ಸ್ಕ್ಯಾನರ್ ಅನ್ನು ಶಾಲಾ ಶಿಕ್ಷಕರಿಗೆ ವಿತರಿಸಿದ ಸಿ.ಕೆ.ಚಾರಿಟಬಲ್ ಟ್ರಸ್ಟ್ ಟ್ರಸ್ಟ್ ಅಧ್ಯಕ್ಷರು, ಹಿರಿಯ ವಕೀಲರು, ಸಮಾಜ ಸೇವಕರು ಆದ ನಿಂಗಪ್ಪ ಅವರು ಮಾತನಾಡಿ,ಇಂದು ಖಾಸಗಿ ಶಾಲೆ ಮತ್ತು ಇಂಗ್ಲೀಷ್ ವ್ಯಾಮೋಹದಿಂದ ಗ್ರಾಮೀಣ ಪ್ರದೇಶದಲ್ಲೂ ಪೋಷಕರು ತಮ್ಮ ಗ್ರಾಮದ ಸರ್ಕಾರಿ ಶಾಲೆಯನ್ನು ಬಿಟ್ಟು ದೂರದ ಖಾಸಗಿ ಶಾಲೆಗೆ ಮಕ್ಕಳನ್ನು ದಾಖಲು ಮಾಡುತ್ತಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಾ ಮುಚ್ಚುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.


 ನಾನೂ ಸಹ ನಿಮ್ಮಂತೆ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯಲ್ಲೇ  ಓದಿ, ವೃತ್ತಿಯಲ್ಲಿ ವಕೀಲನಾಗಿದ್ದೇನೆ, ಸಮಾಜದ ಅಂಕುಡೊಂಕು ತಿದ್ದುವ ವಕೀಲ ವೃತ್ತಿಯನ್ನು ಆರಿಸಿಕೊಂಡು ನ್ಯಾಯದ್ಧನಾಗಿ ಕೆಲಸ ಮಾಡುತ್ತ ಬಂದವನಾಗಿದ್ದೇನೆ. ಮಕ್ಕಳು ಈ ದೇಶದ ಆಸ್ತಿ. ಭವಿಷ್ಯದ ಪ್ರಜೆಗಳು. ಸರ್ಕಾರಿ ಶಾಲೆಗಳನ್ನು ಉಳಿಸಬೇಕು. ಮಕ್ಕಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸಬೇಕು ಎಂಬ ನಿಟ್ಟಿನಲ್ಲಿ ನಾನು ಈ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇನೆ.

 

ವಿದ್ಯಾರ್ಥಿಗಳು ಸರ್ಕಾರ ಮತ್ತು ದಾನಿಗಳು ನೀಡುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಂಡು ಸಮಾಜಮುಖಿಗಳಾಗಬೇಕು. ಪೋಷಕರು ಸಹ ಖಾಸಗಿ ಶಾಲೆ ಮತ್ತು ಇಂಗ್ಲೀಷ್ ವ್ಯಾಮೋಹವನ್ನು ಬಿಟ್ಟು ತಮ್ಮ ಗ್ರಾಮದಲ್ಲೇ, ಉತ್ತಮ ಶಿಕ್ಷಕರಿರುವ ಗುಣಮಟ್ಟದ ಶಿಕ್ಷಣ ಮತ್ತು ನುರಿತ ಅನುಭವಿ ಶಿಕ್ಷಕರು ಇರುವ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಿ, ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಿ ಸರ್ಕಾರಿ ಶಾಲೆ ಉಳಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು.


ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮಾದು, ಎಸ್.ಡಿ.ಎಂ.ಸಿ ಅಧ್ಯಕ್ಷೆ ವಿಜಯಲಕ್ಷ್ಮಿ, ಸದಸ್ಯರಾದ ಕೃಷ್ಣಪ್ಪ,ರಾಮಚಂದ್ರು, ಶಾಲಾ ಶಿಕ್ಷಕರಾದ ರಾಜಣ್ಣ, ಪುಷ್ಪಲತಾ, ಅಂಗನವಾಡಿ ಕಾರ್ಯಕರ್ತೆ ಪುಷ್ಪ ಹಾಗೂ ಶಾಲಾ ಮಕ್ಕಳು, ಗ್ರಾಮಸ್ಥರು ಭಾಗವಹಿಸಿದ್ದರು. 


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑