Tel: 7676775624 | Mail: info@yellowandred.in

Language: EN KAN

    Follow us :


ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

Posted date: 23 Jan, 2024

Powered by:     Yellow and Red

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ, ಕಾಂಗ್ರೆಸ್ ಸರ್ಕಾರವು ದಲಿತರಿಗೆ ನ್ಯಾಯ ಒದಗಿಸುವುದಾದರೆ, ಪ್ರಾಧಿಕಾರದ ಅಧ್ಯಕ್ಷ ಹಾಗೂ ರಾಜ್ಯದಲ್ಲಿ ಎರಡು ನಿಗಮಗಳಿಗೆ ನೇಮಕ ಮಾಡುವ ಮೂಲಕ ದಲಿತರಿಗೆ ಮುಯ್ಯಿ ತೀರಿಸಿ ಎಂದು ದಲಿತ ಮುಖಂಡ, ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯ ಮತ್ತೀಕೆರೆ ಹನುಮಂತಯ್ಯ ಒತ್ತಾಯಿಸಿದರು. ಅವರು ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಸಮುದಾಯದ ಮುಖಂಡರೊಂದಿಗೆ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ತಾಲ್ಲೂಕಿನಲ್ಲಿ ದಲಿತ ಸಮುದಾಯ ಎಲ್ಲಾ ರೀತಿಯಲ್ಲೂ ಹಿಂದುಳಿದಿದೆ. ಆಳುವ ಸರ್ಕಾರಗಳು ನಮ್ಮ ಜೊತೆಗಿಲ್ಲ. ಮಾನ್ಯ ಸಂಸದರಾದ ಡಿ ಕೆ ಸುರೇಶ್ ಉತ್ತಮ ನಾಯಕರು, ಆದರೆ ನಮ್ಮ ತಾಲ್ಲೂಕಿಗೆ, ಅದರಲ್ಲೂ ದಲಿತ ಸಮುದಾಯಕ್ಕೆ ಅವರ ಕೊಡುಗೆ ಶೂನ್ಯವಾಗಿದೆ. ಅಂಬೇಡ್ಕರ್ ಭವನದ ವಿಷಯವಾಗಿ ಕೇವಲ ಭರವಷೆಯನ್ನಿತ್ತು ಹೋಗಿದ್ದಾರೆ ವಿನಹ ಮುಂದಡಿ ಇಟ್ಟಿಲ್ಲ. ನಿಮ್ಮ ಸಹೋದರ ಡಿ ಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದು ಅವರ ಮುಖೇನ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.


ಕಾಂಗ್ರೆಸ್ ಎಂದರೆ ಸಾಮಾಜಿಕ ನ್ಯಾಯ, ದಲಿತರ ಪರ ಎಂದು ಹೇಳುತ್ತೀರಿ, ಆದರೆ ನೀವು ಸಂಘದ ಪರ ನಿಲ್ಲುತ್ತೀರಿ, ನೀವು ಸಂಘದ ಪರ ನಿಲ್ಲಿ ನೀವು ಸಾಂವಿಧಾನಿಕ ಹುದ್ದೆಯಲ್ಲಿಲ್ಲದಾಗ ನಿಲ್ಲಿ. ಸಾಮಾಜಿಕ ನ್ಯಾಯ ದ ಪರ ನೀವು ನಿಂತಿದ್ದೇ ಆದರೆ ನಮಗೆ ನ್ಯಾಯ ಕೊಡಿ. ಜನಗಣತಿ ವಿಷಯದಲ್ಲಿ ಜನಗಣತಿ ಬಿಡುಗಡೆ ಬೇಡಾ ಎಂದು ಒಕ್ಕಲಿಗರ ಸ್ವಾಮೀಜಿ ಜೊತೆ ಸಹಿ ಮಾಡಿದ್ದೀರಿ. ಓರ್ವ ಸಾಂವಿಧಾನಿಕ ಹುದ್ದೆಯಲ್ಲಿರುವವರು ಸಹಿ ಮಾಡಿರುವುದನ್ನು ನಾವು ಖಂಡಿಸುತ್ತೇವೆ. ಪ್ರಮಾಣ ವಚನ ಸ್ವೀಕಾರ ಮಾಡುವಾಗ ಯಾವುದೇ ಜಾತಿ, ಮತ ನೋಡದೆ ನ್ಯಾಯಪರ ನಿಲ್ಲುತ್ತೇವೆ ಎನ್ನುವ ನೀವು ಒಂದು ಸಮುದಾಯದ ಪರ ನಿಲ್ಲುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.


ಚನ್ನಪಟ್ಟಣ ತಾಲ್ಲೂಕಿನ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಖಾಲಿ ಇದೆ. ಇದೂವರೆಗೂ ದಲಿತರು ಅಧ್ಯಕ್ಷರಾಗಿಲ್ಲ. ದಲಿತರು ಎಲ್ಲೂ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಬಾರದೆಂದಿಲ್ಲ. ಈ ಬಾರಿ ಕಾಂಗ್ರೆಸ್ ಸರ್ಕಾರ ನ್ಯಾಯಪರವಾಗಿದ್ದರೆ ದಲಿತರಿಗೆ ಅಧ್ಯಕ್ಷ ಸ್ಥಾನ ಕಲ್ಪಿಸಿ. ರಾಜ್ಯದಲ್ಲೂ ಸಹ ದಲಿತರಿಗೆ ಉತ್ತಮ ಸ್ಥಾನ ದೊರೆತಿರುವುದು ಬಹಳ ಕಡಿಮೆಯಾಗಿದೆ ಎಂದರು.


ನೀವು ನಮಗೆ ಮುಯ್ಯಿ ನೀಡಿ, ನಾವು ಈಗಾಗಲೇ ನಿಮಗೆ ಮೂರು ಬಾರಿ ಮುಯ್ಯಿ ನೀಡಿದ್ದೇವೆ. ಮುಂದೆಯೂ ನಿಮಗೆ ಮುಯ್ಯಿ ತೀರಿಸುತ್ತೇವೆ. ತಾಲ್ಲೂಕಿನಲ್ಲಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ರಾಜ್ಯದಲ್ಲಿ ಇಬ್ಬರಿಗಾದರೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ, ದಲಿತರು ಮತ್ತು ಮುಸ್ಲಿಮರು ನಮ್ಮ ಪರ ಇದ್ದಾರೆ. ಅವರು ನಮಗೆ ಮತ ನೀಡುತ್ತಾರೆ ಎಂಬ ಭ್ರಮೆ ಬೇಡ, ಮತ ಯಂತ್ರದಲ್ಲಿ ನೋಟಾ ಎಂಬುದು ಒಂದಿದೆ ಎಂಬುದನ್ನು ಮರೆಯಬೇಡಿ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಅಪ್ಪಗೆರೆ ಶ್ರೀನಿವಾಸ್, ಮಲ್ಲುಂಗೆರೆ ಮಹದೇವ, ಮೈಲನಾಯಕನಹಳ್ಳಿ ಕೃಷ್ಣಯ್ಯ ಎ ಸಿ, ಜಗದೀಶ್, ಶ್ರೀನಿವಾಸ್ ಮತ್ತೀಕೆರೆ, ವಿಜಯಕುಮಾರ್, ಪುರುಷೋತ್ತಮ ಸೇರಿದಂತೆ ಹಲವಾರು ದಲಿತ ಮುಖಂಡರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑