Tel: 7676775624 | Mail: info@yellowandred.in

Language: EN KAN

    Follow us :


ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

Posted date: 08 Feb, 2024

Powered by:     Yellow and Red

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದಿAದಾಗಿ ನಗರಸಭಾ ಆಡಳಿತಕ್ಕೆ ಗರಬಡಿದಿದೆ. ನಗರಾಡಳಿತವನ್ನು ಸುಸೂತ್ರವಾಗಿ ಹಾಗೂ ಸನ್ನಡತೆಯಿಂದ ಮುನ್ನಡೆೆಸಬೇಕಾದ ಈ ಇಬ್ಬರ ನಡುವಿನ ಮುಸುಕಿನ ಗುದ್ದಾಟದಿಂದ ಅಭಿವೃದ್ಧಿ ಕಾರ್ಯಗಳು, ಸಾರ್ವಜನಿಕರ ಕೆಲಸ ಹಾಗೂ ಇನ್ನಿತರ ಅಭಿವೃದ್ಧಿಗೆ ಹಿನ್ನಡೆಯಾಗಿದೆ.   

ನಾನು ಚುನಾಯಿತ ಜನಪ್ರತಿನಿಧಿಯಾಗಿರುವ ‘ನನ್ನ ಕಾರ್ಯಕ್ಷೇತ್ರದಲ್ಲಿ ಪೌರಾಯುಕ್ತರು ಪ್ರತಿಯೊಬ್ಬರ ಕೆಲಸಕ್ಕೂ ಹಾಗೂ ನಗರಸಭೆ ಆಡಳಿತದಲ್ಲೂ ಹಸ್ತಕ್ಷೇಪ ಮಾಡುತ್ತಿದ್ದಾರೆ. ಸಿಬ್ಬಂದಿಗಳು ಸಹ ನನ್ನ ಮಾತನ್ನು ಕೇಳುತ್ತಿಲ್ಲ. ಕೇಳದಿರಲು ಪೌರಾಯುಕ್ತರೆ ಆದೇಶ ನೀಡಿರಬಹುದು ಎಂದೆನಿಸುತ್ತಿದೆ. ಇದರಿಂದ ಅಧ್ಯಕ್ಷರಿಗೆ ಅಗೌರವ ತೋರಲಾಗುತ್ತಿದೆ,’ ಎಂಬ ಗುಮಾನಿ ಕಾಡುತ್ತಿದೆ ಎಂದು ಇತ್ತೀಚೆಗೆ ಅಧ್ಯಕ್ಷ ಪಿ. ಪ್ರಶಾಂತ್ ಬಹಿರಂಗವಾಗಿಯೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರೊಂದಿಗೆ ನಗರಸಭೆಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಬಹಿರಂಗವಾಗಿದ್ದು, ಇದೀಗ ‘ನನ್ನ ಕೊಠಡಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ನನ್ನ ವಿರುದ್ಧ ತೇಜೋವಧೆ ಮಾಡುತ್ತಿದ್ದಾರೆ,’ ಎಂದು ಆರೋಪಿಸಿ ಅಧ್ಯಕ್ಷರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.    

ಮತ್ತೊಂದೆಡೆ ‘ಕಾಮಗಾರಿ ಆಡಳಿತಾತ್ಮಕ ವಿಚಾರ, ಖಾತೆಗಳ ಸಂಬAಧ ಪ್ರತಿಯೊಂದರಲ್ಲೂ ಮೂಗು ತೂರಿಸುತ್ತಾ, ಕೆಲಸ ಮಾಡಲು ಅಧ್ಯಕ್ಷರು ಬಿಡುತ್ತಿಲ್ಲ.’ ಯಾರೂ ಯಾರ ಮಾತನ್ನು ತಿರಸ್ಕರಿಸುತ್ತಿಲ್ಲ. ಪ್ರತಿಯೊಬ್ಬರಿಗೂ ಅವರದೇ ಆದ ಗೌರವವಿದೆ. ಆಡಳಿತಾತ್ಮಕವಾಗಿ ಆಗುವಂತಹ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ. ಸರಿಯಾದ ದಾಖಲೆಗಳಿಲ್ಲದ ಇ-ಖಾತೆಗಳನ್ನು ನಾವು ತಿರಸ್ಕರಿಸುತ್ತಿದ್ದೇವೆ. ಎಲೆಕೇರಿ ಬಡಾವಣೆಗೆ ಸಂಬAಧಿಸಿದAತೆ ನೂರಾ ಮೂರು ಅನಧಿಕೃತ ಖಾತೆಗಳನ್ನು ಮಾಡಿಕೊಡಲಿಲ್ಲ ಎಂಬ ಕಾರಣದಿಂದ ನನ್ನ ಮೇಲೆ ಆರೋಪ ಮಾಡಿದ್ದಾರೆ ಎಂಬ ಹೇಳಿಕೆಯನ್ನು ಪೌರಾಯುಕ್ತ                     ಸಿ.ಪುಟ್ಟಸ್ವಾಮಿಯವರು ನೀಡಿದ್ದಾರೆ. ಇವರಿಬ್ಬರ ನಡುವಿನ ಮುಸುಕಿನ ಗುದ್ದಾಟದಲ್ಲಿ ನಗರಸಭಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೈರಾಣಾಗಿದ್ದು, ಕಛೇರಿಯಲ್ಲಿನ ಇಂತಹ ವಾತಾವರಣದಿಂದಾಗಿ ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂಬುದು ಕೆಲ ಸಿಬ್ಬಂದಿಗಳ ಅನಿಸಿಕೆಯಾಗಿದೆ. ಇನ್ನುಳಿದಂತೆ ಸಾರ್ವಜನಿಕರ ಬಹುತೇಕ ಕೆಲಸಗಳು ತಟಸ್ಥವಾಗಿವೆ. 

ಇನ್ನು ನಗರದಲ್ಲಿ ಯುಜಿಡಿ ಸಮಸ್ಯೆ, ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಸದ ಸಮಸ್ಯೆ, ಹೆಚ್ಚಾಗಿದ್ದು, ಇಪ್ಪತ್ಮೂರು ಸಾವಿರಕ್ಕೂ ಹೆಚ್ಚು ಇ-ಖಾತೆಗಳಾಗಬೇಕಿದ್ದು, ಇದುವರೆಗೂ ಕೇವಲ ಹತ್ತು ಸಾವಿರಕ್ಕೂ ಕಡಿಮೆ ಇ-ಖಾತೆಗಳಾಗಿವೆ ಎಂದು ಇತ್ತಿಚೆಗೆ ನಗರದಲ್ಲಿ ಸಂಸದ ಡಿ.ಕೆ.ಸುರೇಶ ರವರು ಇತ್ತೀಚೆಗೆ ಪೌರಾಯುಕ್ತರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇವರಿಬ್ಬರ ಮುಸುಕಿನ ಗುದ್ದಾಟದಿಂದ ಇ-ಖಾತೆಗಳಿಗೆ ಸಂಬಂದಿಸಿದಂತೆ, ಆಸ್ತಿದಾರರು ನರಕ ಅನುಭವಿಸುವಂತಾಗಿದೆ. 

ನಗರಸಭೆಯಲ್ಲಿನ ಈ ಬೆಳವಣಿಗೆಗಳ ಬಗ್ಗೆ ಕ್ಷೇತ್ರದ ಶಾಸಕರಾಗಲಿ, ಸಂಸದರಾಗಲಿ, ವಿಧಾನ ಪರಿಷತ್ ಸದಸ್ಯರಾಗಲಿ ಗಮನ ಹರಿಸದ ಕಾರಣ ದಿನಕಳೆದಂತೆ ಇಲ್ಲಿನ ಸಮಸ್ಯೆಗಳು ಕಗ್ಗಂಟಾಗುತ್ತಿದೆ. ಸ್ಥಾಯಿ ಸಮಿತಿ ಅಧ್ಯಕ್ಷ ಅವಧಿ ಮುಗಿದು ವರ್ಷ ಕಳೆಯುತ್ತಿದ್ದರೂ ಅಧ್ಯಕ್ಷರ ಆಯ್ಕೆಯಾಗದಿರುವುದು, ಸಾಮಾನ್ಯ ಸಭೆ ನಡೆಯದಿರುವುದು, ಖಾತೆಗಾಗಿ ತಿಂಗಳಾನುಗಟ್ಟಲೆ ಅಲೆಯುತ್ತಿರುವುದು ಈ ಮೇಲಿನ ಕಾರಣಗಳಿಂದಾಗಿಯೇ ಎಂದರೆ ತಪ್ಪಾಗಲಾರದು.    

ಅಕ್ರಮ ಇ-ಖಾತೆಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳನ್ನು ಸಹ ಸಾರ್ವಜನಿಕರು ಹಾಗೂ ಕೆಲ ಜನಪ್ರತಿನಿಧಿಗಳು ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದು, ಬಹುತೇಕ ಸದಸ್ಯರುಗಳ ಜೊತೆಗೂಡಿ ಜಿಲ್ಲಾಧಿಕಾರಿಗಳಿಗೆ ಪೌರಾಯುಕ್ತರ ವಿರುದ್ಧ ದೂರು ನೀಡಿದ್ದು, ಸ್ಪಂದಿಸಿದ ಜಿಲ್ಲಾಧಿಕಾರಿ ಡಾ|| ಅವಿನಾಶ್ ಮೆನನ್ ರಾಜೇಂದ್ರನ್ ರವರು ತಂಡವನ್ನು ರಚಿಸಿದ್ದಾರೆ. 

ನಗರ ಸಭೆಯಲ್ಲಿ ಅಕ್ರಮ ಖಾತೆಗಳನ್ನು ಮಾಡಿಕೊಡಲಾಗುತ್ತಿದೆ. ಅಧಿಕಾರಿಗಳು ಈ ವಿಚಾರದಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದರ ಮಧ್ಯೆ ಪೌರಾಯುಕ್ತರ ವಿರುದ್ಧ ನಕಲಿ ಖಾತೆ ನೀಡಿರುವ ಗಂಭೀರ ಆರೋಪ ಕೇಳಿಬಂದಿತ್ತು. ನಗರಸಭೆ ಅಧ್ಯಕ್ಷ ಪಿ. ಪ್ರಶಾಂತ್ ಖುದ್ದು ನಕಲಿ ಖಾತೆಗಳನ್ನು ಬಹಿರಂಗಗೊಳಸಿದ್ದರು. ಇದರೊಂದಿಗೆ ಅಕ್ರಮ ಖಾತೆ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಹಲವಾರು ಆರೋಪಗಳು ಕೇಳಿ ಬಂದಿದ್ದರಿಂದ ಜಿಲ್ಲಾಧಿಕಾರಿಗಳು ಈ ತನಿಖೆಗೆ ಆದೇಶ ನೀಡಿದ್ದಾರೆ. 

ಬುಧವಾರ ಆದೇಶ ಹೊರಡಿಸಿರುವ ಅವರು, ನಗರಸಭೆ ಅಧ್ಯಕ್ಷರು, ಸದಸ್ಯರು ಮತ್ತು ಸಾರ್ವಜನಿಕರಿಂದ ಬಂದಿರುವ ಪ್ರತಿದೂರಿಗೆ ಸಂಬಂಧಿಸಿದಂತೆ, ನಿಯಮಾನುಸಾರ ಪರಿಶೀಲಿಸಿ, ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿರುವ ಮತ್ತು ನಗರಸಭೆಯಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ತನಿಖೆಗೆ ತಂಡ ರಚಿಸಿದ್ದು, ಈ ತಂಡಕ್ಕೆ ವರದಿ ನೀಡುವಂತೆ ಕೇವಲ ಒಂದು ದಿನದ ಅವಕಾಶ ನೀಡಿರುವುದು ವಿಶೇಷ. ಇದರೊಂದಿಗೆ, ಈ ಹಿಂದೆ ಚನ್ನಪಟ್ಟಣ ನಗರಸಭೆಯಲ್ಲಿ ಪೌರಾಯುಕ್ತರಾಗಿದ್ದ ಶಿವನಂಕಾರಿಗೌಡರ ನೇತೃತ್ವದಲ್ಲಿ ತಂಡ ರಚನೆ ಮಾಡಿರುವುದು ಮತ್ತೊಂದು ವಿಶೇಷವಾಗಿದೆ. ಚನ್ನಪಟ್ಟಣ ನಗರಸಭೆಯಲ್ಲಿ ಬೆಳಕಿಗೆ ಬಂದಿದ್ದ ನಕಲಿ ಖಾತೆಗಳ ವಿಚಾರ ಸಾಕಷ್ಟು ಸಂಚಲನ ಮೂಡಿಸಿತ್ತು. 

ಗ್ರಾಮ ಪಂಚಾಯಿತಿಗಳಿAದ ನಗರಸಭೆಗೆ ಹಸ್ತಾಂತರವಾದ ಅನಧಿಕೃತ ಸ್ವತ್ತುಗಳಿಗೆ (೧೧ಬಿ) ಮತ್ತು ನಗರಸಭೆಯ ಅನಧಿಕೃತ ಸ್ವತ್ತುಗಳಿಗೆ (ಕಟ್ಟಡ ಮತ್ತು ಖಾಲಿ ನಿವೇಶಗಳಿಗೆ) ಇ- ಆಸ್ತಿ ತಂತ್ರಾAಶದಲ್ಲಿ ಅಧಿಕೃತ ಸ್ವತ್ತು ಎಂದು ನೀಡಿರುವ ಪ್ರಕರಣಗಳು ಹಾಗೂ ಇತರ ದೂರಿನ ಅಂಶಗಳ ಬಗ್ಗೆ ಪರಿಶೀಲಿಸಿ, ಸ್ಪಷ್ಟ ಅಭಿಪ್ರಾಯದೊಂದಿಗೆ ಫೆ.೮ ರೊಳಗೆ ವರದಿ ಸಲ್ಲಿಸಲು ತನಿಖಾ ತಂಡಕ್ಕೆ ಆದೇಶ ನೀಡಿದ್ದಾರೆ.

ಇಂದು ಗುರುವಾರ ತನಿಖಾ ತಂಡವು ನಗರ ಸಭೆಗೆ ಆಗಮಿಸಿ ಅವರಿಗೆ ಬೇಕಾದಂತಹ ದಾಖಲೆಗಳನ್ನು ಪಡೆದಿದ್ದು, ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವುದಾಗಿ ಬಲ್ಲ ಮಾಹಿತಿಗಳು ಲಭ್ಯವಾಗಿವೆ. ಜಿಲ್ಲಾಧಿಕಾರಿಗಳು ವರದಿಯನುಸಾರ ಯಾವ ಕ್ರಮವನ್ನು ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.


ಗೋ ರಾ ಶ್ರೀನಿವಾಸ 

ಮೊ – 9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  


Top ↑