ಶೋಕಿಗಾಗಿ ಅಧ್ಯಕ್ಷ, ಪೌರಾಯುಕ್ತರಾಗಿದ್ದೀರಿ ಮೊದಲು ಅಭಿವೃದ್ಧಿ ಮಾಡಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ

ಚನ್ನಪಟ್ಟಣ: ನೀವು ಚನ್ನಪಟ್ಟಣ ನಗರವನ್ನು ಅಭಿವೃದ್ಧಿ ಮಾಡಲು ಬಂದವರಲ್ಲಾ, ಕೇವಲ ಶೋಕಿಗಾಗಿ ಅಧ್ಯಕ್ಷ ಮತ್ತು ಪೌರಾಯುಕ್ತರಾಗಿದ್ದೀರಿ, ನಿಮ್ಮ ಶೋಕಿಗೆ ನೀವು ಬೇರೆ ಕೆಲಸವನ್ನು ಹುಡುಕಿಕೊಳ್ಳಿ, ಮೊದಲು ನಗರಸಭೆ ಆಡಳಿತದ ಮೂಲಕ ಉತ್ತಮ ನಗರವನ್ನು ಕಟ್ಟಿ ಎಂದು ಆಕ್ರೋಶದ ಧ್ವನಿಯ ಮೂಲಕ ತಮ್ಮ ಸಿಟ್ಟನ್ನು ಹೊರಹಾಕುವ ಮೂಲಕ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಸದಸ್ಯ ಶ್ರೀನಿವಾಸಮೂರ್ತಿ ವಾಗ್ವಾದಕ್ಕಿಳಿದರು. ಮೀತಿ ಮೀರಿದ ಕಸ ಮತ್ತು ಚರಂಡಿ ಸ್ವಚ್ಛತೆ ಸಮಸ್ಯೆ, ಆಡಳಿತ ಪಕ್ಷದ ಸದಸ್ಯರ ನಡುವೆಯೇ ವಾಗ್ವಾದ, ಬಾಯಿ ಜಾರಿ ಜಾತಿ ಎಳೆದು ತಂದ ಪೇಚಿಗೆ ಸಿಲುಕಿದ ಕೈ ಸದಸ್ಯ, ಪೌರಾಯುಕ್ತರಿಗೆ ಮಸಿ ಬಳಿಯುವ ಎಚ್ಚರಿಕೆ! ರಸ್ತೆ ಬದಿ ವ್ಯಾಪಾರದಿಂದ ಉಂಟಾಗುತ್ತಿರುವ ದಟ್ಟಣೆ ಸೇರಿದಂತೆ ಹಲವು ವಿಚಾರಗಳ ಬಿಸಿಬಿಸಿ ಚರ್ಚೆಗೆ ನಗರಸಭೆ ಸಾಮಾನ್ಯಸಭೆ ಸಾಕ್ಷಿಯಾಯಿತು.
ನಗರಸಭೆ ಅಧ್ಯಕ್ಷ ಪ್ರಶಾಂತ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯ ಆರಂಭದಲ್ಲೇ ಕಸದ ಸಮಸ್ಯೆ ಹಾಗೂ ಚರಂಡಿಯ ಸ್ವಚ್ಛತೆಯ ಸಮಸ್ಯೆ ಕುರಿತು ಆಡಳಿತ ಪಕ್ಷದ ೧೪ನೇ ವಾರ್ಡ್ ಸದಸ್ಯ ಶ್ರೀನಿವಾಸಮೂರ್ತಿ ಸ್ವಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದರು.
*ನಗರಸಭೆಯ ವಾಪ್ತಿಯಲ್ಲಿ ಕಸದ ಸಮಸ್ಯೆ ಮಿತಿ ಮೀರಿದೆ.* ವಾರ್ಡ್ಗಳಲ್ಲಿ ಕಸದ ರಾಶಿ ಹರಡಿದ್ದು, ಅದನ್ನು ವಿಲೇವಾರಿ ಮಾಡುವಂತೆ ಹಲವಾರ ಬಾರಿ ಮನವಿ ಮಾಡಿದರು ಸಹ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ನಗರಸಭೆ ಅಧ್ಯಕ್ಷರಿಗೆ ಯಾವ ಬೀದಿ ಯಾವ ವಾರ್ಡ್ ವ್ಯಾಪ್ತಿಗೆ ಬರುತ್ತದೆ ಎಂಬುದೇ ಗೊತ್ತಿಲ್ಲ. ಬರೀ ತಿರುಗಾಡುವುದೇ ಕಾಯಕ ಎಂದುಕೊಂಡಿದ್ದಾರೆ ಎಂದು ಕಿಡಿಕಾರಿದರು.
ಇದಕ್ಕೆ ನಗರಸಭೆ ಸದಸ್ಯರಾದ ಕೋಟೆ ಚಂದ್ರ, ಮನೋಹರ್, ವಾಸಿಲ್ ಅಲಿಖಾನ್, ಲಿಯಾಕತ್ ಅಲಿಖಾನ್ ಸೇರಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರು ಧ್ವನಿಗೂಡಿಸಿದರು. ಕಸ, ಚರಂಡಿ ಸ್ವಚ್ಛತೆ ಒಂದೆರಡು ವಾರ್ಡ್ಗೆ ಸೀಮಿತವಲ್ಲ ಎಲ್ಲಾ ವಾರ್ಡ್ಗಳಲ್ಲೂ ಇದೇ ಪರಿಸ್ಥಿತಿ ಇದೆ. ಚುನಾಯಿತ ಪ್ರತಿನಿಧಿಗಳಾದ ನಮಗೆ ಜನರಿಗೆ ಜವಾಬು ಹೇಳುವುದೇ ಕಷ್ಟಕರವಾಗಿ ಪರಿಣಮಿಸಿದೆ. ಆದಷ್ಟು ಬೇಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ. ಪೌರಕಾರ್ಮಿಕರಿಗೆ ವಾರ್ನ್ ಮಾಡಿ ಕೆಲಸ ಮಾಡಿಸಿ. ಇಲ್ಲದಿದ್ದರೆ ಸಮಸ್ಯೆ ಬಗೆಹರಿಯುವವರೆಗೆ ನೀರಿನ ಬಿಲ್ ಸೇರಿದಂತೆ ಎಲ್ಲ ಬಿಲ್ಗಳು ಹಾಗೂ ನಗರಸಭೆಯ ತೆರಿಗೆಯನ್ನು ಮನ್ನಾ ಮಾಡಿ ಎಂದು ಆಗ್ರಹಿಸಿದರು.
ಲಿಯಾಕತ್ ಅಲಿಖಾನ್ ಮಾತನಾಡಿ, ನಗರದ ಬಡಾಮಕಾನ್ನ ಹಜರತ್ ಸೈಯದ್ ಮಹಮ್ಮದ್ ಅಖಿಲ್ ಷಾ ಖಾದ್ರಿ ಗಂಧ ಮಹೋತ್ಸವ ಮುಗಿದ ವಾರದ ಮೇಲಾಗಿದ್ದರೂ ಸಹ ಇನ್ನು ಅಲ್ಲಿನ ಮೈದಾನದಲ್ಲಿ ಜಮಾವಣೆಯಾಗಿರುವ ಕಸವನ್ನು ವಿಲೇವಾರಿ ಮಾಡಲಾಗಿಲ್ಲ. ಗಾಳಿ ಬಂದಾಗ ಕಸ ಹಾರಿ ಮನೆಗಳನ್ನು ಸೇರುತ್ತಿದ್ದರೂ ನಗರಸಭೆ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ. ಇದೀಗ ನೋಡಿದರೆ ಕಸ ವಿಲೇವಾರಿಗೆ ಇಂತಿಷ್ಟು ಶುಲ್ಕ ಪಾವತಿಸಬೇಕು ಎನ್ನುತ್ತಿದ್ದಾರೆ. ಇದನ್ನು ಮೊದಲೇ ಏಕೆ ತಿಳಿಸಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಉತ್ತರಿಸಿದ ಪೌರಾಯುಕ್ತ ಸಿ ಪುಟ್ಟಸ್ವಾಮಿ ಹಾಗೂ ಸಂಬಂಧಿಸಿದ ಇಂಜಿನಿಯರ್ ಗಳು ಉತ್ತರಿಸಿ, ಅದು ಖಾಸಗಿ ಜಾಗವಾಗಿದ್ದು, ವಕ್ಫ್ ಬೋರ್ಡ್ ಲಕ್ಷಾಂತರ ಹಣವನ್ನು ಲಾಭಮಾಡಿಕೊಂಡಿದೆ. ನಮಗೆ ಕಟ್ಟಬೇಕಾದ ಹಣವನ್ನು ಅವರು ಕಟ್ಟಿಲ್ಲ, ನಮ್ಮಲ್ಲಿ ಸಿಬ್ಬಂದಿಗಳ ಕೊರತೆ ಇರುವುದರಿಂದ ಹೊರಗಿನ ಕಾರ್ಮಿಕರನ್ನು ಕರೆತರಬೇಕಾಗಿದೆ ಎಂದು ಉತ್ತರಸಿದರು.
*ಅಧಿಕಾರಿಗಳ ಗೈರಿಗೆ ಆಕ್ರೋಶ:*
ನಗರದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಾದ ಸಾಮಾನ್ಯ ಸಭೆಗೆ ಅಧಿಕಾರಿಗಳು ಗೈರಾಗುವ ಚಾಳಿ ಮುಂದುವರಿದಿದೆ. ನಗರದ ಕೆಲ ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಎರಡು ಮೂರು ದಿನಗಳಿಗೊಮ್ಮೆ ನೀರು ಬಿಡಲಾಗುತ್ತಿದೆ. ಆದರೆ, ಈ ಕುರಿತು ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣವೆಂದರೆ ವಾಟರ್ಬೋರ್ಡ್ ಅಧಿಕಾರಿಗಳೇ ಸಭೆಗೆ ಬಂದಿಲ್ಲ. ಅಧಿಕಾರಿಗಳು ಬಾರದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಾದರೂ ಹೇಗೆ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ನಗರಸಭೆ ಅಧಿಕಾರಿಗಳು ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೮೭ ಪೌರಕಾರ್ಮಿಕರಿದ್ದು, ಅವರಲ್ಲಿ ಸುಮಾರು ೪೪ ಮಂದಿ ಖಾಯಂ ನೌಕರರಿದ್ದಾರೆ. ರಜೆ ಮತ್ತಿತರ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಒಂದು ವಾರ್ಡ್ಗೆ ಇಬ್ಬರಂತೆ ಪೌರಕಾರ್ಮಿಕರನ್ನು ನೇಮಿಸಲಾಗಿದೆ. ಆದರೆ, ಖಾಯಂ ಆಗಿರುವವರು ಆರೋಗ್ಯ ರಜೆ ಮತ್ತಿತರ ರಜೆಗಳನ್ನು ಹಾಕಿಕೊಂಡಾಗ ತೊಂದರೆಯಾಗುತ್ತಿದೆ ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷ ಪ್ರಶಾಂತ್ ಮಾತನಾಡಿ, ನಗರದ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಕಸ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಆದಷ್ಟು ಪರಿಹರಿಸಲಾಗಿದೆ. ಮುಂದಿನ ದಿನಗಳಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಇನ್ನಷ್ಟು ಚುರುಕು ಮುಟ್ಟಿಸುವ ಮೂಲಕ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ಸ್ಥಾಯಿಸಮಿತಿ ಸದಸ್ಯ ಮಂಜನಾಥ್ ಮಾತನಾಡಿ, ಸುಮ್ಮಸುಮ್ಮನೇ ರಜೆ ಹಾಕಿ ತೊಂದರೆ ನೀಡುತ್ತಿರುವ ಪೌರಕಾರ್ಮಿಕರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಸಭೆ ಅನುಮತಿ ನೀಡಿದರೆ ಇವರಿಗೆಲ್ಲ ನೋಟಿಸ್ ಜಾರಿ ಮಾಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ನಗರದ ಡಿ.ಟಿ.ರಾಮು ಸರ್ಕಲ್ನಿಂದ ಪೋಸ್ಟ್ ಆಫೀಸ್ ರಸ್ತೆಯ ಬದಿಗಳಲ್ಲಿ ಬೀದಿ ವ್ಯಾಪಾರ ಹಾಗೂ ಆಟೋ ನಿಲುಗಡೆಯಿಂದ ಆಗುತ್ತಿರುವ ತೊಂದರೆಯ ಕುರಿತು ಗಮನ ಸೆಳೆದ ಸದಸ್ಯರು ಇದಕ್ಕೆ ಕಡಿವಾಣ ಹಾಕುವಂತೆ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶುಭಾಂಬಿಕಗೆ ಮನವಿ ಮಾಡಿದರು.
ಸಭೆಯಲ್ಲಿ ಪೌರಾಯುಕ್ತ ಪುಟ್ಟಸ್ವಾಮಿ, ನಗರಸಭೆ ಉಪಾಧ್ಯಕ್ಷೆ ಹಸೀನಾ ಫರ್ಹೀನ್, ಸದಸ್ಯರಾದ ಸತೀಶ್ಬಾಬು, ನಾಗೇಶ್, ಮಹದೇವ, ರಫೀಕ್, ರೇವಣ್ಣ, ಜಯಮಾಲ, ಸುಮಾರವೀಶ್ ಮುಂತಾದವರು ಉಪಸ್ಥಿತರಿದ್ದರು.
ಣಜಾತಿ ಎಳೆದ ತಂದು ಪೇಚಿಗೆ ಸಿಲುಕಿದ ಕೈ ಸದಸ್ಯ!*
ಸಾಮಾನ್ಯ ಸಭೆಯಲ್ಲಿ ನಗರದ ಬಡಾಮಕಾನ್ನ ಹಜರತ್ ಸೈಯದ್ ಮಹಮ್ಮದ್ ಅಖಿಲ್ ಷಾ ಖಾದ್ರಿ ಗಂಧ ಮಹೋತ್ಸವದ ವೇಳೆ ಮೈದಾನದಲ್ಲಿ ಶೇಖರಣೆಯಾಗಿರುವ ಕಸವನ್ನು ಇನ್ನು ತೆರವುಗೊಳಿಸದ ವಿಚಾರಕ್ಕೆ ನಗರಸಭೆ ಅಧಿಕಾರಿಗಳ ವಿರುದ್ಧ ಹರಿಹಾಯುವ ಭರದಲ್ಲಿ ಕಾಂಗ್ರೆಸ್ ಸದಸ್ಯ ಲಿಯಾಕತ್ ಅಲಿಖಾನ್ ಜಾತಿ ಎಳೆದು ಪೇಚಿಗೆ ಸಿಲುಕಿದರು.
ಕಸ ವಿಲೇವಾರಿಯಾಗದ ಕಾರಣ ಜನ ಆ ಜಾಗದಲ್ಲಿ ಓಡಾಡುವುದೇ ದುಸ್ತರವಾಗಿ ಪರಿಣಮಿಸಿದೆ. ಗಂಧ ಮಹೋತ್ಸವ ಮುಗಿದ ವಾರದ ಮೇಲಾಗಿದ್ದರೂ ಕಸ ವಿಲೇವಾರಿಯಾಗದ ಕಾರಣ ಜನ ಚುನಾಯಿತ ಸದಸ್ಯರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ನೀವೇನು ಕೌನ್ಸಿಲರೋ ಇಲ್ಲ ಹ..ರೋ ಎಂದು ನಮ್ಮನ್ನು ಬೈಯುತ್ತಿದ್ದಾರೆ ಎಂದು ಮಾತಿನ ಭರದಲ್ಲಿ ಜಾತಿ ಎಳೆದು ತಂದರು.
ಇದಕ್ಕೆ ಬಿಜೆಪಿ ನಾಮಿನಿ ಸದಸ್ಯ ಸ್ವಾಮಿ ಮತ್ತು ಅದೇ ಜಾತಿಯ ಮಹಿಳಾ ಸದಸ್ಯರೊಬ್ಬರು ಆಕ್ಷೇಪ ವ್ಯಕ್ತಪಡಿಸಿ, ಕ್ಷಮಾಪಣೆ ಕೇಳುವಂತೆ ಆಗ್ರಹಿಸಿದರು. ತಮ್ಮ ತಪ್ಪು ಒಪ್ಪಿಕೊಂಡ ಲಿಯಾಕತ್ ನಾನು ಬಾಯಿ ಜಾರಿ ಹಾಗೇ ಮಾತನಾಡಿದ್ದೇನೆಯೇ ಹೊರತು ಯಾವುದೇ ದುರುದ್ದೇಶ ಇಟ್ಟುಕೊಂಡು ಆ ಮಾತು ಹೇಳಿಲ್ಲ. ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ವಿಷಾಧ ವ್ಯಕ್ತಪಡಿಸಿ ವಿವಾದಕ್ಕೆ ತೆರೆ ಎಳೆದರು.
*ಪೌರಾಯುಕ್ತರಿಗೆ ಮಸಿ ಬಳಿಯುವ ಎಚ್ಚರಿಕೆ!*
ಕಸದ ಸಮಸ್ಯೆ ಪರಿಹಾರಕ್ಕೆ ನಗರಸಭೆ ಅಧಿಕಾರಿಗಳು ಉದಾಸೀನ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ನಗರಸಭೆ ಸದಸ್ಯ ಶ್ರೀನಿವಾಸ್ಮೂರ್ತಿ ಪೌರಾಯುಕ್ತರಿಗೆ ಮಸಿ ಬಳಿಯುವ ಎಚ್ಚರಿಕೆ ನೀಡಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿತು.
ವಾರ್ಡ್ ವ್ಯಾಪ್ತಿಯಲ್ಲಿ ಕಸ ವಿಲೇವಾರಿ, ಚರಂಡಿ ಸ್ವಚ್ಚತೆ ಸೇರಿದಂತೆ ಸಾಕಷ್ಟು ಸಮಸ್ಯೆಗಳಿವೆ. ವಾರ್ಡ್ಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಿದರೆ ಯಾವ ಅಧಿಕಾರಿಗಳು ಸ್ಪಂದಿಸುವುದಿಲ್ಲ. ಪೌರಾಯುಕ್ತರಿಗೆ ಕರೆ ಮಾಡಿದರೆ ಅವರು ಕರೆಯನ್ನೇ ಸ್ವೀಕರಿಸುವುದಿಲ್ಲ. ಅವರು ಯಾವುದಕ್ಕೂ ತಲೆ ಕೆಡೆಸಿಕೊಳ್ಳುವುದಿಲ್ಲ. ಜನರ ಸಮಸ್ಯೆ ಪರಿಹರಿಸಲು ಇದೇ ರೀತಿ ಉದಾಸೀನತೆ ತೋರಿದರೆ ಮುಖಕ್ಕೆ ಬಸಿ ಬಳೆಯಬೇಕಾಗುತ್ತದೆ ಎಂದು ಪೌರಾಯುಕ್ತರಿಗೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಚರ್ಚೆ ಮತ್ತು ಉತ್ತರಗಳಿಗಿಂತ ಗದ್ದಲವೇ ಜೋರಾಗಿತ್ತು. ಇದರ ಜೊತೆಗೆ ಎಲ್ಲಾ ಪತ್ರಕರ್ತರುಗಳಿಗೆ ಸಭೆಯ ಮಾಹಿತಿ ನೀಡದೆ ಅವರಿಗೆ ಅನುಕೂಲವಾಗುವ ಕೆಲವೇ ಪತ್ರಕರ್ತರುಗಳಿಗೆ ಮಾತ್ರ ಮಾಹಿತಿ ನೀಡಿದ್ದಾರೆ ಎಂದು ಹಲವಾರು ಪತ್ರಕರ್ತರು ಸಹ ಆಕ್ಷೇಪಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in channapatna »

ತಾಲ್ಲೂಕು ಆಡಳಿತದ ಗಣರಾಜ್ಯೋತ್ಸವದಲ್ಲಿ ಸಿಪಿವೈ ಭಾಗಿ ಹೆಚ್ಡಿಕೆ ಗೈರು
ಚನ್ನಪಟ್ಟಣ.ಜ.೨೬: ತಾಲ್ಲೂಕು ರಾಷ್ಟ
ಅಮೃತ ಸರೋವರಗಳ ಬಳಿ ಹಾರಾಡಿದ ತ್ರಿವರ್ಣ ಧ್ವಜ
ಚನ್ನಪಟ್ಟಣ: ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಸಲುವಾಗಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಿಷನ್ ಅಮೃತ

ಇದೇ ತಿಂಗಳು ವಿಜಯಸಂಕಲ್ಪ ಅಭಿಯಾನ: ಜಿಲ್ಲಾ ಸಂಚಾಲಕ ರವೀಶ್
ಚನ್ನಪಟ್ಟಣ,ಜ:19. ಮನೆ-ಮನಗಳಿಗೆ ಬಿಜೆಪಿ ನೇತೃತ್ವದ ಸರ್ಕಾರದ ಜನಪರ ಕೆಲಸಗಳನ್ನು ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕ

ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ಚನ್ನಪಟ್ಟಣ:16/01/2023:ರಂತಾಲ್ಲೂಕಿನ ಎಲೆತೋಟದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಕನಹಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಪ್ರಗತಿಯಲ್ಲಿದ್ದ ಮುದ್ದೆಗೌಡನಕಟ್ಟೆ ಹೂಳೆತ್ತುವ ಕ

ಕಾಂತರಾಜ್ ಪಟೇಲ್ ನಿಧನದಿಂದ ಜಿಲ್ಲೆಯ ಸಾಂಸ್ಕೃತಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ; ಎಂ.ಟಿ. ತಿಮ್ಮರಾಜು
ಚನ್ನಪಟ್ಟಣ: ನೇರ ನಡೆ-ನುಡಿಯ ಆದರ್ಶ ವ್ಯಕ್ತಿತ್ವದೊಂದಿಗೆ ಅಜಾತಶತ್ರುವಾಗಿ ಬದುಕಿ ಬಾಳಿದ ಹೃದಯವಂತ ವ್ಯಕ್ತಿ ಕಾಂತರಾಜ್ ಪಟೇಲ್ ಅವರ ನಿಧ

ಶಿಕ್ಷಣ ಪ್ರೇಮಿ ಮಳೂರು ದಿ.ಪುಟ್ಟಸ್ವಾಮಿಗೌಡರ ಸ್ಮರಣಾರ್ಥ ಅನ್ನವಿತ್ತ ಕುಟುಂಬಕ್ಕೆ ಗೌರವ ನಮನ
ಚನ್ನಪಟ್ಟಣ: ತಾಲ್ಲೂಕಿನಲ್ಲಷ್ಟೇ ಅಲ್ಲದೇ ಜಿಲ್ಲಾದ್ಯಂತ ಉದಾರ ದಾನಿಗಳು ಹಾಗೂ ಶ್ರೀಮಂತ ಕುಟುಂಬ ಎಂದೇ ಪ್ರಸಿದ್ಧಿಯಾಗಿದ್ದ ದಿ ಮಳೂರು ಪುಟ್ಟಸ್ವ

ಬೂತ್ ಮಟ್ಟದ ಕಾರ್ಯಕರ್ತರನ್ನು ಸದೃಢಗೊಳಿಸುತ್ತೇನೆ. ಸಿ ಪಿ ಯೋಗೇಶ್ವರ್
ಚನ್ನಪಟ್ಟಣ: ಬೂತ್ಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸುವ ಮುಖಾಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತ

ಮಿಸ್ ನಂದಿನಿ ಚಲನಚಿತ್ರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವರದಾನ ಪ್ರಿಯಾಂಕ ಉಪೇಂದ್ರ
ಚನ್ನಪಟ್ಟಣ: ಮಿಸ್ ನಂದಿನಿ ಚಲನಚಿತ್ರದಲ್ಲಿನ ನವಿರಾದ ಕಥೆಯು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಚಿತ್ರಕಥೆಯ ಮೂಲಕ ಸರ್ಕಾರಿ ಶ

ಚನ್ನಪಟ್ಟಣ ತಾಲ್ಲೂಕು ರೈತ ಸಂಘದ ಹುಟ್ಟಿಗೆ ಕಾರಣವಾಗಿತ್ತು ಸು ತ ರಾಮೇಗೌಡ
ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕು ರೈತಸಂಘದ ಹುಟ್ಟಿಗೆ ಕಾರಣವಾಗಿತ್ತು. ಅರಳಾಳುಸಂದ್ರ ಗ್ರಾಮ ಮೊದಲ್ಗೊಂಡು ಹಲವಾರು ಗ್ರಾಮಗಳಲ್ಲಿ ರೈತ ಚಳವಳಿ

ಮುದಗೆರೆ ಗ್ರಾಮದ ಬಳಿ ಭೀಕರ ಅಪಘಾತ. ಮೂರು ಮಂದಿ ಸಾವು
ಚನ್ನಪಟ್ಟಣ: ಬೆಂಗಳೂರು–ಮೈಸೂರು ನಡುವಿನ ಮುದಗೆರೆ ಗ್ರಾಮದ ಬಳಿಯ ವೈಶಾಲಿ ಹೋಟೆಲ್ ಹತ್ತಿರ ದಶಪಥ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲ್ಲರ್ ಒಂದು ಚ
ಪ್ರತಿಕ್ರಿಯೆಗಳು