Tel: 7676775624 | Mail: info@yellowandred.in

Language: EN KAN

    Follow us :


ಶಿಕ್ಷಣ ಪ್ರೇಮಿ ಮಳೂರು ದಿ.ಪುಟ್ಟಸ್ವಾಮಿಗೌಡರ ಸ್ಮರಣಾರ್ಥ ಅನ್ನವಿತ್ತ ಕುಟುಂಬಕ್ಕೆ ಗೌರವ ನಮನ

Posted date: 04 Jan, 2023

Powered by:     Yellow and Red

ಶಿಕ್ಷಣ ಪ್ರೇಮಿ ಮಳೂರು ದಿ.ಪುಟ್ಟಸ್ವಾಮಿಗೌಡರ ಸ್ಮರಣಾರ್ಥ ಅನ್ನವಿತ್ತ ಕುಟುಂಬಕ್ಕೆ ಗೌರವ ನಮನ

ಚನ್ನಪಟ್ಟಣ: ತಾಲ್ಲೂಕಿನಲ್ಲಷ್ಟೇ ಅಲ್ಲದೇ ಜಿಲ್ಲಾದ್ಯಂತ ಉದಾರ ದಾನಿಗಳು ಹಾಗೂ ಶ್ರೀಮಂತ ಕುಟುಂಬ ಎಂದೇ ಪ್ರಸಿದ್ಧಿಯಾಗಿದ್ದ ದಿ ಮಳೂರು ಪುಟ್ಟಸ್ವಾಮಿಗೌಡರ ಸಂಸ್ಮರಣೆ ಕಾರ್ಯಕ್ರಮವನ್ನು ಬೇವೂರು ಶ್ರೀ ಸಿದ್ದರಾಮೇಶ್ವರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದಾರೆ. ಗ್ರಾಮದ ಶ್ರೀ ಸಿದ್ಧರಾಮೇಶ್ವರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ 10ನೇ ತರಗತಿಯ ಪಬ್ಲಿಕ್ ಪರೀಕ್ಷೆ ಬರೆಯಲು ನಗರಕ್ಕೆ ಬರುತ್ತಿದ್ದ ವಿದ್ಯಾರ್ಥಿಗಳಿಗೆ ಸರಿಸುಮಾರು 20 ವರ್ಷಗಳ ಕಾಲ ಉಚಿತವಾಗಿ ಊಟ ವಸತಿ ಸೌಕರ್ಯವನ್ನು ಕಲ್ಪಿಸಿ ಶೈಕ್ಷಣಿಕವಾಗಿ ಪ್ರೋತ್ಸಾಹಿಸಿದ ದಾನಿಗಳಾದ ಶ್ರೀಮತಿ ಹುಚ್ಚಮ್ಮ ಶ್ರೀ ಚೂಡೇಗೌಡ ಉ.ಮಳೂರು ಪುಟ್ಟಸ್ವಾಮಿಗೌಡರನ್ನು ಸ್ಮರಿಸಿಕೊಂಡು ಅವರ ಕುಟುಂಬದವರಿಗೆ ಗೌರವ ಸಮರ್ಪಣೆ ಹಾಗೂ ಗುರು ವಂದನಾ ಕಾರ್ಯಕ್ರಮವನ್ನು ಜ.8ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಚಿಕ್ಕಮಳೂರು ಬಳಿಯ ಶಿಶಿರ ರೆಸಾರ್ಟ್‍ನಲ್ಲಿ ಆಯೋಜಿಸಲಾಗಿದೆ ಎಂದು ಬೇವೂರು ಶ್ರೀ ಸಿದ್ದರಾಮೇಶ್ವರ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಗಳ ವೃಂದದವರು ತಿಳಿಸಿದರು.


ನಗರದ ಹೊರವಲಯದ ಖಾಸಗಿ ಹೋಟೆಲ್‍ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಪೂರ್ವಸಿದ್ಧತೆಯನ್ನು ವಿವರಿಸಿದ ಬೇವೂರು ಶ್ರೀ ಸಿದ್ದರಾಮೇಶ್ವರ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಗಳ ವೃಂದದ ಗುಡ್ಡೆ ತಿಮ್ಮಸಂದ್ರ ಗ್ರಾಮದ ರಾಮಕೃಷ್ಣೇಗೌಡ (ಆರ್.ಕೆ.) ಅವರು, 1964ರಲ್ಲಿ ಶ್ರೀ ಸಿದ್ದರಾಮೇಶ್ವರ ಪ್ರೌಢಶಾಲೆ ಪ್ರಾರಂಭವಾಗಿ 1966-67ನೇ ಸಾಲಿನಲ್ಲಿ ಪ್ರಥಮವಾಗಿ 10ನೇ ತರಗತಿ ಪಬ್ಲೀಕ್ ಪರೀಕ್ಷೆ ಬರೆಯಲು ಪ್ರಾರಂಭಗೊಂಡು, 1987ರವರೆಗೆ ಬೇವೂರು ಹಾಗೂ ಸುತ್ತ ಮುತ್ತಲಿನ ಸುಮಾರು 18 ಕಿ.ಮೀ. ದೂರದ ಗ್ರಾಮಗಳಿಂದ ಸೌಲಭ್ಯಗಳಿಲ್ಲದೇ ನೂರಾರು ಕನಸುಗಳನ್ನು ಹೊತ್ತು ಬರುತ್ತಿದ್ದ ನೂರಾರು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉದಾರ ಸಹೃದಯಿಗಳು ಶಿಕ್ಷಣ ಪ್ರೇಮಿಗಳು ಆದ ಮಳೂರು ಶ್ರೀಮತಿ ಹುಚ್ಚಮ್ಮ ಶ್ರೀ ಚೂಡೇಗೌಡ ಉ.ಮಳೂರು ಪುಟ್ಟಸ್ವಾಮಿಗೌಡ ಅವರು, ಶಾಲೆಯೊಂದಿಗೆ ಒಪ್ಪಂದ ಮಾಡಿಕೊಂಡು ಸುಮಾರು 20 ವರ್ಷಗಳ ಕಾಲ ಯಾವುದೇ ಫಲಾಫೇಕ್ಷೆ ಇಲ್ಲದೆ ಪರೀಕ್ಷೆ ಪ್ರಾರಂಭಗೊಂಡು ಮುಗಿಯುವವರೆಗೆ ಯಾವುದೇ ಜಾತಿ, ಮತ, ಧರ್ಮ, ಲಿಂಗ ಬೇಧಬಾವವಿಲ್ಲದೇ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಪಾಠ ಹೇಳಿಕೊಡುತ್ತಿದ್ದ ಗುರುಗಳಿಗೆ ತಮ್ಮದೇ ಆದ ಕಲ್ಯಾಣ ಮಂಟಪದಲ್ಲೇ ಉಳಿಸಿಕೊಂಡು ಉಚಿತವಾಗಿ ಊಟ, ವಸತಿ ಸೌಕರ್ಯವನ್ನು ಕಲ್ಪಿಸಿ ಪ್ರೋತ್ಸಾಹಿಸಿದನ್ನು ನಾವು ನಮ್ಮ ಜೀವನದಲ್ಲಿ ಎಂದೂ ಮರೆಯಲಾಗದು. ಅವರ ಸಹಕಾರ ಪ್ರೋತ್ಸಾಹದಿಂದ ಓದಿದ ನೂರಾರು ಮಂದಿ ಇಂದು  ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಯನ್ನಲಂಕರಿಸಿದ್ದಾರೆ. ಅಂದು ಅನ್ನವಿತ್ತವರಿಗೆ ಮತ್ತು ವಿದ್ಯೆ ಕಲಿಸಿದ ಗುರುಗಳಿಗೆ ಇಂದು ಗೌರವ ನಮನ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವೆಂದು ಹಿರಿಯ ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಿದ್ದೇವೆ ಎಂದು ತಿಳಿಸಿದರು.


ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬೇವೂರು ಶ್ರೀ ಮಲ್ಲಿಕಾರ್ಜುನಸ್ವಾಮಿ ಮಠದ ಶ್ರೀ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿಗಳು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ನಿವೃತ್ತ ಪ್ರಾಂಶುಪಾಲರಾದ ಶಿವಲಿಂಗಯ್ಯ ಅವರು ವಹಿಸಲಿದ್ದು ಉದ್ಘಾಟನೆಯನ್ನು ಪೂಜ್ಯ ದಿ.ಮಳೂರು ಪುಟ್ಟಸ್ವಾಮಿಗೌಡರ ಪುತ್ರರಾದ ಸಿ.ಚೂಡಯ್ಯ ಅವರು ನೆರವೇರಿಸಲಿದ್ದು ಗೌಡಗೆರೆ ಶ್ರೀ ಚಾಮುಂಡೇಶ್ವರಿ-ಬಸವಪ್ಪ ಕ್ಷೇತ್ರದ ಧರ್ಮದರ್ಶಿಗಳಾದ ಡಾ.ಶ್ರೀ ಮಲ್ಲೇಶ್‍ಗುರೂಜಿ ಅವರು ಆಶೀರ್ವಚನ ನೀಡಲಿದ್ದಾರೆ. ಶ್ರೀಮತಿ ಹುಚ್ಚಮ್ಮ ಶ್ರೀ ಚೂಡೇಗೌಡ ಉ.ಮಳೂರು ಪುಟ್ಟಸ್ವಾಮಿಗೌಡ ಅವರ ಕುಟುಂಬದ 8 ಮಂದಿಯನ್ನು ಸನ್ಮಾನಿಸುವುದರ ಜೊತೆಗೆ ವಿದ್ಯೆ ಕಲಿಸಿದ ಹಾಗೂ ಅದೇ ಶಾಲೆಯಲ್ಲಿ ಓದಿ ಗುರುಗಳಾಗಿರುವ ಹಿರಿಯ ವಿದ್ಯಾರ್ಥಿಗಳು, ಸೇನೆಯಲ್ಲಿ ಸೇವೆ ಸಲ್ಲಿಸಿದ ಮಾಜಿ/ಹಾಲಿ ಸೈನಿಕರು ಮತ್ತು ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಗುವುದು. ಹಿರಿಯ ವಿದ್ಯಾರ್ಥಿಗಳು, ಸಾರ್ವಜನಿಕರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕೆಂದು ತಂಡದವರು ಮನವಿ ಮಾಡಿದರು.


ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಬಿ.ಟಿ.ನೇತ್ರಾವತಿಗೌಡ, ನಿವೃತ್ತ ಸಿಡಿಪಿಓ ಪುಟ್ಟಸ್ವಾಮಿ, ನಿವೃತ್ತ ಉಪ ಉಪ ಪ್ರಾಂಶುಪಾಲರಾದ ಟಿ.ಆರ್.ರಂಗಸ್ವಾಮಿ, ನಿವೃತ್ತ ಎಎಸ್‍ಐ ಅರೇಂದ್ರೇಗೌಡ ಅವರು ಮಾತನಾಡಿ ತಮ್ಮ ವಿದ್ಯಾರ್ಥಿ ಜೀವನದ ಬದುಕು, ಬವಣೆಯನ್ನು ಮೆಲುಕು ಹಾಕಿ,  ಆಶ್ರಯ ನೀಡಿ ಅನ್ನವನ್ನಿತ್ತು  ಶೈಕ್ಷಣಿಕವಾಗಿ ಪ್ರೋತ್ಸಾಹಿಸಿದ ಮಳೂರು ಶ್ರೀಮತಿ ಹುಚ್ಚಮ್ಮ ಶ್ರೀ ಚೂಡೇಗೌಡ ಉ.ಮಳೂರು ಪುಟ್ಟಸ್ವಾಮಿಗೌಡರನ್ನು ಸ್ಮರಿಸಿಕೊಂಡು, ಎಲ್ಲರನ್ನೂ ತಮ್ಮ ಮನೆ ಮಕ್ಕಳಂತೆ ಉಪಚರಿಸಿದ್ದರು. ಹೆಣ್ಣು ಮಕ್ಕಳನ್ನು ವಿಶೇಷ ಕಾಳಜಿಯಿಂದ ನೋಡಿಕೊಂಡಿದ್ದನ್ನು ಮರೆಯಲಾಗದು. ಶಿಕ್ಷಣ ಪ್ರೇಮ, ಮಾತೃ ವಾತ್ಸಲ್ಯದ ಸಾಕಾರ ಮೂರ್ತಿಗಳಾಗಿದ್ದ ದಂಪತಿಗಳು ಕಲಿಯುಗದ ಕಾಮಧೇನುವಿನಂತೆ ಎಂದು ಬಣ್ಣಿಸಿ, ಅವರು ಇಂದು ಲೌಖಿಕವಾಗಿ ಕಣ್ಮರೆಯಾಗಿದ್ದು ನಮ್ಮೆಲ್ಲರ ಹೃದಯದಲ್ಲಿ ಸದಾ ಶಾಶ್ವತ ಸ್ಥಾನ ಪಡೆದಿದ್ದಾರೆ ಎಂದರು.


ಸಂದರ್ಭದಲ್ಲಿ ಸಮಿತಿಯ ದೇವರಾಜು ಕನ್ನಸಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದಪ್ಪ, ಬೇವೂರು ಎಲ್.ಗೋಕರ್ಣೇಶ, ಗೌಡಗೆರೆ ಶ್ರೀಧರಸ್ವಾಮಿ, ಅಂಕೇಗೌಡ ಮುಂತಾದವರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಅಮೃತ ಸರೋವರಗಳ ಬಳಿ ಹಾರಾಡಿದ ತ್ರಿವರ್ಣ ಧ್ವಜ

ಚನ್ನಪಟ್ಟಣ: ಸ್ವಾತಂತ್ರ್ಯದ ಅಮೃತ  ಮಹೋತ್ಸವ ದ ಸಲುವಾಗಿ   ಕೇಂದ್ರ ಸರ್ಕಾರದ  ಮಹತ್ವಾಕಾಂಕ್ಷಿ ಯೋಜನೆಯಾದ ಮಿಷನ್ ಅಮೃತ

ಇದೇ ತಿಂಗಳು ವಿಜಯಸಂಕಲ್ಪ ಅಭಿಯಾನ: ಜಿಲ್ಲಾ ಸಂಚಾಲಕ ರವೀಶ್
ಇದೇ ತಿಂಗಳು ವಿಜಯಸಂಕಲ್ಪ ಅಭಿಯಾನ: ಜಿಲ್ಲಾ ಸಂಚಾಲಕ ರವೀಶ್

ಚನ್ನಪಟ್ಟಣ,ಜ:19. ಮನೆ-ಮನಗಳಿಗೆ ಬಿಜೆಪಿ ನೇತೃತ್ವದ ಸರ್ಕಾರದ ಜನಪರ ಕೆಲಸಗಳನ್ನು ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕ

ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ಚನ್ನಪಟ್ಟಣ:16/01/2023:ರಂತಾಲ್ಲೂಕಿನ ಎಲೆತೋಟದಹಳ್ಳಿ  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಕನಹಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಪ್ರಗತಿಯಲ್ಲಿದ್ದ ಮುದ್ದೆಗೌಡನಕಟ್ಟೆ ಹೂಳೆತ್ತುವ  ಕ

ಕಾಂತರಾಜ್ ಪಟೇಲ್ ನಿಧನದಿಂದ ಜಿಲ್ಲೆಯ ಸಾಂಸ್ಕೃತಿಕ ಕ್ಷೇತ್ರಕ್ಕೆ  ತುಂಬಲಾರದ ನಷ್ಟವಾಗಿದೆ; ಎಂ.ಟಿ. ತಿಮ್ಮರಾಜು
ಕಾಂತರಾಜ್ ಪಟೇಲ್ ನಿಧನದಿಂದ ಜಿಲ್ಲೆಯ ಸಾಂಸ್ಕೃತಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ; ಎಂ.ಟಿ. ತಿಮ್ಮರಾಜು

ಚನ್ನಪಟ್ಟಣ: ನೇರ ನಡೆ-ನುಡಿಯ ಆದರ್ಶ  ವ್ಯಕ್ತಿತ್ವದೊಂದಿಗೆ ಅಜಾತಶತ್ರುವಾಗಿ ಬದುಕಿ ಬಾಳಿದ ಹೃದಯವಂತ ವ್ಯಕ್ತಿ ಕಾಂತರಾಜ್ ಪಟೇಲ್ ಅವರ ನಿಧ

ಶಿಕ್ಷಣ ಪ್ರೇಮಿ ಮಳೂರು ದಿ.ಪುಟ್ಟಸ್ವಾಮಿಗೌಡರ ಸ್ಮರಣಾರ್ಥ ಅನ್ನವಿತ್ತ ಕುಟುಂಬಕ್ಕೆ ಗೌರವ ನಮನ
ಶಿಕ್ಷಣ ಪ್ರೇಮಿ ಮಳೂರು ದಿ.ಪುಟ್ಟಸ್ವಾಮಿಗೌಡರ ಸ್ಮರಣಾರ್ಥ ಅನ್ನವಿತ್ತ ಕುಟುಂಬಕ್ಕೆ ಗೌರವ ನಮನ

ಚನ್ನಪಟ್ಟಣ: ತಾಲ್ಲೂಕಿನಲ್ಲಷ್ಟೇ ಅಲ್ಲದೇ ಜಿಲ್ಲಾದ್ಯಂತ ಉದಾರ ದಾನಿಗಳು ಹಾಗೂ ಶ್ರೀಮಂತ ಕುಟುಂಬ ಎಂದೇ ಪ್ರಸಿದ್ಧಿಯಾಗಿದ್ದ ದಿ ಮಳೂರು ಪುಟ್ಟಸ್ವ

ಬೂತ್ ಮಟ್ಟದ ಕಾರ್ಯಕರ್ತರನ್ನು ಸದೃಢಗೊಳಿಸುತ್ತೇನೆ. ಸಿ ಪಿ ಯೋಗೇಶ್ವರ್
ಬೂತ್ ಮಟ್ಟದ ಕಾರ್ಯಕರ್ತರನ್ನು ಸದೃಢಗೊಳಿಸುತ್ತೇನೆ. ಸಿ ಪಿ ಯೋಗೇಶ್ವರ್

ಚನ್ನಪಟ್ಟಣ: ಬೂತ್‍ಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸುವ ಮುಖಾಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತ

ಮಿಸ್ ನಂದಿನಿ ಚಲನಚಿತ್ರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವರದಾನ ಪ್ರಿಯಾಂಕ ಉಪೇಂದ್ರ
ಮಿಸ್ ನಂದಿನಿ ಚಲನಚಿತ್ರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವರದಾನ ಪ್ರಿಯಾಂಕ ಉಪೇಂದ್ರ

ಚನ್ನಪಟ್ಟಣ: ಮಿಸ್ ನಂದಿನಿ ಚಲನಚಿತ್ರದಲ್ಲಿನ ನವಿರಾದ ಕಥೆಯು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಚಿತ್ರಕಥೆಯ ಮೂಲಕ ಸರ್ಕಾರಿ ಶ

ಚನ್ನಪಟ್ಟಣ ತಾಲ್ಲೂಕು ರೈತ ಸಂಘದ ಹುಟ್ಟಿಗೆ ಕಾರಣವಾಗಿತ್ತು ಸು ತ ರಾಮೇಗೌಡ
ಚನ್ನಪಟ್ಟಣ ತಾಲ್ಲೂಕು ರೈತ ಸಂಘದ ಹುಟ್ಟಿಗೆ ಕಾರಣವಾಗಿತ್ತು ಸು ತ ರಾಮೇಗೌಡ

ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕು ರೈತಸಂಘದ ಹುಟ್ಟಿಗೆ ಕಾರಣವಾಗಿತ್ತು. ಅರಳಾಳುಸಂದ್ರ ಗ್ರಾಮ ಮೊದಲ್ಗೊಂಡು ಹಲವಾರು ಗ್ರಾಮಗಳಲ್ಲಿ ರೈತ ಚಳವಳಿ

ಮುದಗೆರೆ ಗ್ರಾಮದ ಬಳಿ ಭೀಕರ ಅಪಘಾತ. ಮೂರು ಮಂದಿ ಸಾವು
ಮುದಗೆರೆ ಗ್ರಾಮದ ಬಳಿ ಭೀಕರ ಅಪಘಾತ. ಮೂರು ಮಂದಿ ಸಾವು

ಚನ್ನಪಟ್ಟಣ: ಬೆಂಗಳೂರು–ಮೈಸೂರು ನಡುವಿನ ಮುದಗೆರೆ ಗ್ರಾಮದ ಬಳಿಯ ವೈಶಾಲಿ ಹೋಟೆಲ್ ಹತ್ತಿರ ದಶಪಥ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲ್ಲರ್‌ ಒಂದು ಚ

Top Stories »  


Top ↑