ಇದೇ ತಿಂಗಳು ವಿಜಯಸಂಕಲ್ಪ ಅಭಿಯಾನ: ಜಿಲ್ಲಾ ಸಂಚಾಲಕ ರವೀಶ್

ಚನ್ನಪಟ್ಟಣ,ಜ:19. ಮನೆ-ಮನಗಳಿಗೆ ಬಿಜೆಪಿ ನೇತೃತ್ವದ ಸರ್ಕಾರದ ಜನಪರ ಕೆಲಸಗಳನ್ನು ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಜನಪರ ಆಡಳಿತ ನೀಡುವಲ್ಲಿ ಯಶಸ್ವಿಯಾಗಿರುವ ಬಿಜೆಪಿ ಪಕ್ಷದ ನೈಜ ಜನಪರ ಸಿದ್ದಾಂತಗಳ ಬಗೆಗಿನ ಮಾಹಿತಿಯನ್ನು ಪ್ರತಿಯೊಂದು ಮನೆ-ಮನಕ್ಕೆ ತಲುಪಿಸುವ ಉದ್ದೇಶವೇ ವಿಜಯ ಸಂಕಲ್ಪ ಅಭಿಯಾನ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹಾಗೂ ವಿಜಯ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕ ಎಲೇಕೇರಿ ರವೀಶ್ ತಿಳಿಸಿದರು.
ಅವರು ನಗರದ ಹೊರವಲಯದ ಖಾಸಗಿ ಹೋಟೆಲ್ನಲ್ಲಿ ಆಯೋಜನೆ ಮಾಡಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
ವಿಜಯ ಸಂಕಲ್ಪ ಯಾತ್ರೆ ರಾಜ್ಯಾದಾದ್ಯಂತ ನಡೆದು ಈಗಾಗಲೇ ಯಶಸ್ವಿಯಾಗಿದೆ, ಜಿಲ್ಲೆಯಲ್ಲಿ ಜನವರಿ 21 ರಿಂದ ಪ್ರಾರಂಭವಾಗಿ 29 ರವರೆಗೆ ನಡೆಯಲಿದೆ ಎಂದು ತಿಳಿಸಿದರು.
ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಹಮ್ಮಿಕೊಂಡಿರುವ ಉದ್ದೇಶ, ನಗರ ಹಾಗೂ ಗ್ರಾಮೀಣ ಪ್ರದೇಶದ ಪ್ರತಿ ಬೂತ್ನಲ್ಲಿನಲ್ಲಿರುವ ಮನೆಗಳಲ್ಲಿನ ಮತದಾರರಿಗೆ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಭಾರತೀಯ ಜನತಾ ಪಕ್ಷದ ಅದರಲ್ಲೂ ದೇಶದ ಪ್ರಧಾನಿ ನರೇಂದ್ರ ಮೋದಿ ರವರ ಜನಪರ ಆಡಳಿತವನ್ನು ತಿಳಿಯಪಡಿಸುವ ಪ್ರಮುಖ ಉದ್ದೇಶವಾಗಿದೆ ಎಂದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಧಾನಿ ನರೇಂದ್ರ ಮೋದಿರವರು ದೇಶಕ್ಕೆ ನೀಡಿರುವ ಭರಪೂರ ಕೊಡುಗೆಗಳನ್ನು ಬೂತ್ ಮಟ್ಟದಲ್ಲಿ ಪ್ರಚಾರಪಡಿಸಿ ಬೂತ್ ವಿಜಯ ಸಂಕಲ್ಪ ಯಾತ್ರೆಯನ್ನು ಕೈಗೊಂಡರೆ ಅದರಲ್ಲೂ ಪ್ರತಿ ಮತದಾರರಿಗೆ ಬಿಜೆಪಿಯ ಅಭಿವೃದ್ದಿ ಯೋಜನೆಗಳನ್ನು ಮನನ ಮಾಡಿಸಬೇಕು ಎಂದು ತಿಳಿಸಿದರು.
ವಿಜಯ ಸಂಕಲ್ಪ ಯಾತ್ರೆಯಲ್ಲಿ ಪ್ರಮುಖ ಉದ್ದೇಶಗಳಿದ್ದು, ಮೊದಲನೆಯದಾಗಿ ಸರ್ಕಾರದ ಅಭಿವೃದ್ದಿಯ ಬಗೆಗಿನ ಸ್ಟಿಕರ್ ಗಳನ್ನು ಅಂಟಿಸುವುದು, ಗೋಡೆಗಳ ಮೇಲೆ ಬರಹ, ಬಿಜೆಪಿ ಸದಸ್ಯತ್ವ ನೊಂದಣಿ, ಪ್ರಧಾನಮಂತ್ರಿ ರವರ ಮನ್ ಕೀ ಬಾತ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ ಎಂದರು.
ವಿಜಯ ಸಂಕಲ್ಪಯಾತ್ರೆ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ನೀಡಿರುವ ಕೊಡುಗೆಗಳು ಫಲಪ್ರದವಾಗಿದ್ದು, ಇತಿಹಾಸದಲ್ಲಿ ಯಾವ ಪಕ್ಷಗಳು ನೀಡದಿರುವ ಕೊಡುಗೆಗಳನ್ನು ಬಿಜೆಪಿ ನೀಡಿರುವುದರ ಬಗ್ಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮಾಹಿತಿ ನೀಡಿ ಮತ್ತೆ ಬಿಜೆಪಿಯನ್ನು ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಸ್ಥಾಪನೆ ಮಾಡುವುದೇ ಈ ಯಾತ್ರೆಯ ಉದ್ದೇಶವಾಗಿದೆ ಎಂದು ತಿಳಿಸಿದರು.
ವಿಜಯ ಸಂಕಲ್ಪಯಾತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಡಾ|| ಅಶ್ವಥ್ನಾರಾಯಣ್, ಮಾಜಿ ಸಚಿವ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹಾಗೂ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಈ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದರು.
ಈ ಸಂದರ್ಭದಲ್ಲಿ ಚನ್ನಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಂಪುರ ಮಲವೇಗೌಡ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ಟಿ.ಜಯರಾಮು, ತಾಲ್ಲೂಕು ಭೂತ್ ವಿಜಯ ಸಂಕಲ್ಪ ಯಾತ್ರೆಯ ಸಂಚಾಲಕ ಕುಳ್ಳಪ್ಪ ( ಶಿವಲಿಂಗಯ್ಯ) ಮಾತನಾಡಿ ಯಾತ್ರೆಯ ರೂಪುರೆಷೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಮಾಜಿ ಅಧ್ಯಕ್ಷ ಆನಂದಸ್ವಾಮಿ, ನಗರಸಭೆ ನಾಮಿನಿ ಸದಸ್ಯ ಸಂತೋಷ್, ಕೆ.ಡಿ.ಬಿ.ಸದಸ್ಯ ಶಬೀರ್ಉಲ್ಲಾ ಬೇಗ್, ಸೋಮಶೇಖರ್, ಪಾರ್ಥಸಾರಥಿ, ಮಾಕಳಿ ಬೋರೇಗೌಡ ಹಾಗೂ ಹಲವಾರು ಮುಖಂಡರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in channapatna »

ತಾಲ್ಲೂಕು ಆಡಳಿತದ ಗಣರಾಜ್ಯೋತ್ಸವದಲ್ಲಿ ಸಿಪಿವೈ ಭಾಗಿ ಹೆಚ್ಡಿಕೆ ಗೈರು
ಚನ್ನಪಟ್ಟಣ.ಜ.೨೬: ತಾಲ್ಲೂಕು ರಾಷ್ಟ
ಅಮೃತ ಸರೋವರಗಳ ಬಳಿ ಹಾರಾಡಿದ ತ್ರಿವರ್ಣ ಧ್ವಜ
ಚನ್ನಪಟ್ಟಣ: ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಸಲುವಾಗಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಿಷನ್ ಅಮೃತ

ಇದೇ ತಿಂಗಳು ವಿಜಯಸಂಕಲ್ಪ ಅಭಿಯಾನ: ಜಿಲ್ಲಾ ಸಂಚಾಲಕ ರವೀಶ್
ಚನ್ನಪಟ್ಟಣ,ಜ:19. ಮನೆ-ಮನಗಳಿಗೆ ಬಿಜೆಪಿ ನೇತೃತ್ವದ ಸರ್ಕಾರದ ಜನಪರ ಕೆಲಸಗಳನ್ನು ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕ

ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ಚನ್ನಪಟ್ಟಣ:16/01/2023:ರಂತಾಲ್ಲೂಕಿನ ಎಲೆತೋಟದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಕನಹಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಪ್ರಗತಿಯಲ್ಲಿದ್ದ ಮುದ್ದೆಗೌಡನಕಟ್ಟೆ ಹೂಳೆತ್ತುವ ಕ

ಕಾಂತರಾಜ್ ಪಟೇಲ್ ನಿಧನದಿಂದ ಜಿಲ್ಲೆಯ ಸಾಂಸ್ಕೃತಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ; ಎಂ.ಟಿ. ತಿಮ್ಮರಾಜು
ಚನ್ನಪಟ್ಟಣ: ನೇರ ನಡೆ-ನುಡಿಯ ಆದರ್ಶ ವ್ಯಕ್ತಿತ್ವದೊಂದಿಗೆ ಅಜಾತಶತ್ರುವಾಗಿ ಬದುಕಿ ಬಾಳಿದ ಹೃದಯವಂತ ವ್ಯಕ್ತಿ ಕಾಂತರಾಜ್ ಪಟೇಲ್ ಅವರ ನಿಧ

ಶಿಕ್ಷಣ ಪ್ರೇಮಿ ಮಳೂರು ದಿ.ಪುಟ್ಟಸ್ವಾಮಿಗೌಡರ ಸ್ಮರಣಾರ್ಥ ಅನ್ನವಿತ್ತ ಕುಟುಂಬಕ್ಕೆ ಗೌರವ ನಮನ
ಚನ್ನಪಟ್ಟಣ: ತಾಲ್ಲೂಕಿನಲ್ಲಷ್ಟೇ ಅಲ್ಲದೇ ಜಿಲ್ಲಾದ್ಯಂತ ಉದಾರ ದಾನಿಗಳು ಹಾಗೂ ಶ್ರೀಮಂತ ಕುಟುಂಬ ಎಂದೇ ಪ್ರಸಿದ್ಧಿಯಾಗಿದ್ದ ದಿ ಮಳೂರು ಪುಟ್ಟಸ್ವ

ಬೂತ್ ಮಟ್ಟದ ಕಾರ್ಯಕರ್ತರನ್ನು ಸದೃಢಗೊಳಿಸುತ್ತೇನೆ. ಸಿ ಪಿ ಯೋಗೇಶ್ವರ್
ಚನ್ನಪಟ್ಟಣ: ಬೂತ್ಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸುವ ಮುಖಾಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತ

ಮಿಸ್ ನಂದಿನಿ ಚಲನಚಿತ್ರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವರದಾನ ಪ್ರಿಯಾಂಕ ಉಪೇಂದ್ರ
ಚನ್ನಪಟ್ಟಣ: ಮಿಸ್ ನಂದಿನಿ ಚಲನಚಿತ್ರದಲ್ಲಿನ ನವಿರಾದ ಕಥೆಯು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಚಿತ್ರಕಥೆಯ ಮೂಲಕ ಸರ್ಕಾರಿ ಶ

ಚನ್ನಪಟ್ಟಣ ತಾಲ್ಲೂಕು ರೈತ ಸಂಘದ ಹುಟ್ಟಿಗೆ ಕಾರಣವಾಗಿತ್ತು ಸು ತ ರಾಮೇಗೌಡ
ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕು ರೈತಸಂಘದ ಹುಟ್ಟಿಗೆ ಕಾರಣವಾಗಿತ್ತು. ಅರಳಾಳುಸಂದ್ರ ಗ್ರಾಮ ಮೊದಲ್ಗೊಂಡು ಹಲವಾರು ಗ್ರಾಮಗಳಲ್ಲಿ ರೈತ ಚಳವಳಿ

ಮುದಗೆರೆ ಗ್ರಾಮದ ಬಳಿ ಭೀಕರ ಅಪಘಾತ. ಮೂರು ಮಂದಿ ಸಾವು
ಚನ್ನಪಟ್ಟಣ: ಬೆಂಗಳೂರು–ಮೈಸೂರು ನಡುವಿನ ಮುದಗೆರೆ ಗ್ರಾಮದ ಬಳಿಯ ವೈಶಾಲಿ ಹೋಟೆಲ್ ಹತ್ತಿರ ದಶಪಥ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲ್ಲರ್ ಒಂದು ಚ
ಪ್ರತಿಕ್ರಿಯೆಗಳು