Tel: 7676775624 | Mail: info@yellowandred.in

Language: EN KAN

    Follow us :


ದೇವರಹೊಸಹಳ್ಳಿ ಗ್ರಾಮದಲ್ಲಿ ಸಂಪೂರ್ಣ ನಡೆಯದ ಲಾಕ್ಡೌನ್ ಆತಂಕದಲ್ಲಿ ಗ್ರಾಮಸ್ಥರು

Posted date: 15 Jun, 2020

Powered by:     Yellow and Red

ದೇವರಹೊಸಹಳ್ಳಿ ಗ್ರಾಮದಲ್ಲಿ ಸಂಪೂರ್ಣ ನಡೆಯದ ಲಾಕ್ಡೌನ್ ಆತಂಕದಲ್ಲಿ ಗ್ರಾಮಸ್ಥರು

ಚನ್ನಪಟ್ಟಣ:ಜೂ/೧೫/೨೦/ಸೋಮವಾರ. ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ಯುವಕನೋರ್ವನಿಗೆ ನಿನ್ನೆ ದಿನ ಕೊರೊನಾ ಪಾಸಿಟಿವ್ ಬಂದಿದ್ದು ಆತನನ್ನು ರಾಮನಗರ ದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಸರ್ಕಾರದ ಸುತ್ತೋಲೆಯ (SOP) ಪ್ರಕಾರ ಸೋಂಕಿತನ ಮನೆಯ ಸುತ್ತಲಿನ ಐವತ್ತು ಮೀಟರ್ ಅಳತೆಯನ್ನು ನಿಯಂತ್ರಣ ವಲಯ (ಕಂಟೋನ್ಮೆಂಟ್ ಝೋನ್) ವನ್ನಾಗಿ‌ ನೂರು ಮೀಟರ್ ಅಳತೆಯನ್ನು ಬಫರ್ ಝೋನ್ ಆಗಿ ತಾಲ್ಲೂಕು ಆಡಳಿತ ಮಾಡಬೇಕಾಗಿದೆ. ಹಾಗೂ ಸೋಂಕಿತನ ಪ್ರಥಮ ಸಂಪರ್ಕ ಮತ್ತು ದ್ವಿತೀಯ ಸಂಪರ್ಕ ವನ್ನು ಶೀಘ್ರವಾಗಿ ಪತ್ತೆಹಚ್ಚಿ ಕ್ವಾರಂಟೈನ್ ಮಾಡಬೇಕಾಗಿದ್ದು ಅದು ಸಂಪೂರ್ಣವಾಗಿ ಆಗಿಲ್ಲದಿರುವುದರಿಂದ ನಮಗೆ ಆತಂಕವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.


ಆ ಸೋಂಕಿತನು ಸಂಪೂರ್ಣ ಗ್ರಾಮದಲ್ಲಿ ಓಡಾಡಿದ್ದು ಬಹುತೇಕ ಅವನ ವಯೋಮಾನದ ಗೆಳೆಯರ ಜೊತೆ ಓಡಾಡಿದ್ದಾನೆ. ಮೊನ್ನೆ ಗ್ರಾಮದಲ್ಲಿ ನಡೆದ ವೃದ್ದೆಯೊಬ್ಬರ ಸಾವಿನಲ್ಲಿ ಭಾಗವಹಿಸಿದ್ದು, ಪ್ರತಿ ಮನೆಯ ಮುಂಭಾಗದಲ್ಲಿ ಸೌದೆಯನ್ನು ಸಂಗ್ರಹಿಸಿದ್ದಾನೆ. ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದಿದ್ದು, ತನ್ನ ಬೆರಳಚ್ಚು ನೀಡಿದ್ದಾನೆ. ಅವನ ಹಿಂದೆ ಅನೇಕರು ಸಹ ಬೆರಳಚ್ಚು ನೀಡಿರುವುದರಿಂದ ಅವರನ್ನೆಲ್ಲಾ ಪ್ರಥಮ ಸಂಪರ್ಕ ಎಂದು ಪರಿಗಣಿಸಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಬೇಕೆಂದು ಗ್ರಾಮದ ಪ್ರಭಾ ಎಂಬುವವರು ತಾಲ್ಲೂಕು ಆಡಳಿತಕ್ಕೆ ಪತ್ರಿಕೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.


ಈ ಸಂಬಂಧ ತಹಶಿಲ್ದಾರ್ ಸುದರ್ಶನ್ ರವರು ಮಾಹಿತಿ ನೀಡಿದ್ದು ನಿನ್ನೆ ದಿನವೇ ಪ್ರಥಮ ಸಂಪರ್ಕದ ಕೆಲ‌ ಮಂದಿಯನ್ನು ಈಗಾಗಲೇ ಕ್ವಾರಂಟೈನ್ ಮಾಡಲಾಗಿದ್ದು, ತಾಲ್ಲೂಕು ವೈದ್ಯಾಧಿಕಾರಿ ಡಾ ರಾಜು ರವರ ಸಮಾಲೋಚಿಸಿ ಈದಿನ ಮತ್ತೊಮ್ಮೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑