Tel: 7676775624 | Mail: info@yellowandred.in

Language: EN KAN

    Follow us :


ಮಹದೇಶ್ವರ ನಗರ ಹಾಸ್ಟೆಲ್ ಗೆ ಕ್ವಾರಂಟೈನ್, ಸ್ಥಳೀಯರಿಂದ ವಿರೋಧ

Posted date: 19 Jun, 2020

Powered by:     Yellow and Red

ಮಹದೇಶ್ವರ ನಗರ ಹಾಸ್ಟೆಲ್ ಗೆ ಕ್ವಾರಂಟೈನ್, ಸ್ಥಳೀಯರಿಂದ ವಿರೋಧ

ಚನ್ನಪಟ್ಟಣ:ಜೂ/೧೯/೨೦/ಶುಕ್ರವಾರ. ನಗರದಲ್ಲಿ ಸೋಂಕು ದೃಢ ಪಟ್ಟಿರುವ ಮಹಿಳೆ ಹಾಗೂ ಭೈರಾಪಟ್ಟಣ ದ ಸೋಂಕಿತ ಯುವಕನ ಪ್ರಥಮ ಸಂಪರ್ಕ ಕ್ಕೆ ಬಂದಿರುವವರನ್ನು ಕ್ವಾರಂಟೈನ್ ಮಾಡಲು ಸಾತನೂರು ರಸ್ತೆಯ ಮಹದೇಶ್ವರ ನಗರದಲ್ಲಿ ಇರುವ ಶ್ರೀ ಮಹದೇಶ್ವರ ದೇವಾಲಯದ ಬಳಿ ಇರುವ ವಸತಿ ಪ್ರದೇಶದಲ್ಲಿ ಕ್ವಾರಂಟೈನ್ ಮಾಡುತ್ತಾರಂತೆ ಎಂಬ ವಿಷಯ ತಿಳಿದು ಆಸುಪಾಸಿನ ನಿವಾಸಿಗಳು ರಾತ್ರಿ ಸಮಯವನ್ನು ಲೆಕ್ಕಿಸದೇ ಹಾಸ್ಟೆಲ್ ಮುಂದೆ ಜಮಾಯಿಸಿ ವಿರೋಧ ವ್ಯಕ್ತಪಡಿಸಿದರು.


ಹೌಸಿಂಗ್ ಬೋರ್ಡ್, ಮಹದೇಶ್ವರ ನಗರ, ಹಲಸಿನಮರದದೊಡ್ಡಿ (ಕನಕನಗರ) ಯ ನಿವಾಸಿಗಳು ಹಾಸ್ಟೆಲ್ ಮುಂದೆ ಜಮಾಯಿಸಿ ಅಧಿಕಾರಿಗಳು ಬಂದು ಪರಿಶೀಲಿಸುವ ಮೊದಲೇ ಜಮಾಯಿಸಿ ಪ್ರತಿರೋಧ ವ್ಯಕ್ತಪಡಿಸಿದರು..

ವಿಷಯ ಒಬ್ಬರಿಂದೊಬ್ಬರಿಗೆ ಹರಡುತ್ತಿದ್ದಂತೆ ಹೆಚ್ಚು ಜನರು ಜಮಾಯಿಸಿ ಮಹದೇಶ್ವರ ದೇವಾಲಯದ ಹೆಬ್ಬಾಗಿಲಿಗೆ ಸಾರ್ವೇ ಮರಗಳನ್ನು ಕಟ್ಟಿ ಅಧಿಕಾರಿಗಳನ್ನು ಬರದಂತೆ ತಡೆಯುವ ಪ್ರಯತ್ನ ಮಾಡಿದರು.


ನಾವು ಕ್ವಾರಂಟೈನ್ ಮಾಡುವುದು ಬೇಡಾ ಎಂದು ಹೇಳುವುದಿಲ್ಲ. ವಸತಿ ರಹಿತ, ಊರಾಚೆ ಇರುವ ಹಾಸ್ಟೆಲ್ ಗಳಲ್ಲಿ ಕ್ವಾರಂಟೈನ್ ಮಾಡಲಿ, ಈ ಹಾಸ್ಟೆಲ್ ನ ಕಾಂಪೌಂಡ್ ಗೆ ಹೊಂದಿಕೊಂಡಂತೆ ಐದಾರು ಮನೆಗಳಿವೆ. ಅನೇಕ ಮಂದಿ ದೇವಾಲಯಕ್ಕೆ ಬಂದು ಹೋಗುತ್ತಾರೆ. ನಾಲ್ಕು ಜನ ರಕ್ಷಿಸುವ ಸಲುವಾಗಿ ನಾಲ್ಕು ನೂರು ಮಂದಿಗೆ ರೋಗ ತರುವುದು ತರವಲ್ಲ. ಅಧಿಕಾರಿಗಳು ಯೋಚಿಸಿ ನಿರ್ಧಾರ ತೆಗೆದುಕೊಳ್ಳಲಿ ಎಂದು ಮಾಜಿ ಮಂತ್ರಿ ಸಿ ಪಿ ಯೋಗೇಶ್ವರ್ ಆಪ್ತ ಸಹಾಯಕ ತಿಮ್ಮೇಶಪ್ರಭು ತಿಳಿಸಿದರು.


ವಕೀಲರಾದ ಶಿವಶಂಕರ್, ಸ್ಥಳೀಯರಾದ ರಾಮಣ್ಣ, ಶರತ್, ಸತೀಶ್, ಯೋಗೇಶ್, ಪ್ರಸನ್ನ, ರಾಮಚಂದ್ರ ಸೇರಿದಂತೆ ಸ್ಥಳೀಯರು ಕ್ವಾರಂಟೈನ್ ವಿರೋಧಿಸಿ ಸ್ಥಳದಲ್ಲಿ ಜಮಾಯಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑