Tel: 7676775624 | Mail: info@yellowandred.in

Language: EN KAN

    Follow us :


ಕೊರೋನಾ: ರಾಮನಗರ ಜಿಲ್ಲೆಯಲ್ಲಿ ಒಂದೇ ದಿನ ೧೧ ಮಂದಿ ಗುಣಮುಖ

Posted date: 26 Jun, 2020

Powered by:     Yellow and Red

ಕೊರೋನಾ: ರಾಮನಗರ ಜಿಲ್ಲೆಯಲ್ಲಿ ಒಂದೇ ದಿನ ೧೧ ಮಂದಿ ಗುಣಮುಖ

ರಾಮನಗರ:ಜೂ/೨೫/೨೦/ಗುರುವಾರ. ರಾಮನಗರ ಜಿಲ್ಲೆಯಲ್ಲಿ ಇಂದು ಒಂದೇದಿನ ೧೧ ಮಂದಿ ಕರೋನ ಸೋಂಕಿನಿಂದ ಗುಣಮುಖರಾಗಿ ಜಿಲ್ಲಾ ಕೋವಿಡ್-೧೯ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.


ಇಂದು ರಾಮನಗರ ತಾಲ್ಲೂಕಿನ ೪ ಮಂದಿ ಹಾಗೂ ಚನ್ನಪಟ್ಟಣ ತಾಲ್ಲೂಕಿನ ೭ ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು ೧೭ ಮಂದಿ ಕರೋನಾದಿಂದ ಗುಣಮುಖರಾಗಿದ್ದಾರೆ. ಇಂದು ಆಸ್ಪತ್ರೆಯಿಂದ ಬಿಡುಗಡೆಯಾದವರಿಗೆ ಜಿಲ್ಲಾಡಳಿತದ ವತಿಯಿಂದ 'ಹೂಮಳೆ' ಸುರಿಸಿ ಶುಭಕೋರಿ ಕಳುಹಿಸಿಕೊಡಲಾಯಿತು. 


ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಉಲ್ಲಾ ಷರೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಇಂದು ಬಿಡುಗಡೆಯಾದವರನ್ನು ಹೃತ್ಪೂರ್ವಕವಾಗಿ ಬೀಳ್ಕೊಟ್ಟರು.


*ಚನ್ನಪಟ್ಟಣದಲ್ಲಿ ಎರಡು ಪ್ರಕರಣ ದೃಢ:* ಜಿಲ್ಲೆಯಲ್ಲಿ ಇಂದು ಮತ್ತೆರಡು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಚನ್ನಪಟ್ಟಣದಲ್ಲಿ ಪ್ರಾಥಮಿಕ ಸಂಪರ್ಕ ಹೊಂದಿದ್ದ ಇಬ್ಬರಲ್ಲಿ ಕರೋನಾ ಕಾಣಿಸಿಕೊಂಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ೧೪೭ ಪ್ರಕರಣಗಳು ದಾಖಲಾಗಿವೆ. 


ಜೂನ್ ೨೪ ರಂದು (ಬುಧವಾರ) ಜಿಲ್ಲೆಯಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ ೧೪೮ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದ ವರದಿಯಲ್ಲಿ ನಮೂದಿಸಲಾಗಿತ್ತು. ಈ ಪೈಕಿ ಮೂರು ಪ್ರಕರಣಗಳು ಇಂದು ಬೇರೆ ಜಿಲ್ಲೆಗೆ ವರ್ಗಾವಣೆಗೊಂಡಿದೆ. ಇದರೊಂದಿಗೆ ಇಂದಿನ ಎರಡು ಪ್ರಕರಣಗಳು ಸೇರಿ ಜಿಲ್ಲೆಯ ಒಟ್ಟು ಪ್ರಕರಣಗಳು ೧೪೭ ಕ್ಕೆ ಏರಿಗೆ ಗೊಂಡಿದೆ. 


ಇದುವರೆಗೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ೫೫, ಮಾಗಡಿ ತಾಲೂಕಿನಲ್ಲಿ ೩೯, ಚನ್ನಪಟ್ಟಣದಲ್ಲಿ ೨೯ ಮತ್ತು ರಾಮನಗರದಲ್ಲಿ ೨೬ ಪ್ರಕರಣಗಳು ದಾಖಲಾಗಿದೆ.


ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಗುರುವಾರ (ಜೂನ್ ೨೫) ವರದಿಯಲ್ಲಿ ಜಿಲ್ಲೆಯಲ್ಲಿ ಒಟ್ಟಾರೆ ೧೪೭ ಪ್ರಕರಣಗಳು ದಾಖಲಾಗಿದ್ದು ಈ ಪೈಕಿ ೧೭ ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರೆ, ನಾಲ್ಕು ಮಂದಿ ಮೃತಪಟ್ಟಿದ್ದಾರೆ. ೧೨೬ ಮಂದಿ

ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.


ಪಿಡುಗು ತಡೆ ಕುರಿತ ಪ್ರಕರಣಗಳಿಗೆ ಸಂಬಧಪಟ್ಟಂತೆ ಗುರುವಾರದ ಇನ್ನುಳಿದ ಅಂಕಿ - ಅಂಶಗಳು ಹೀಗಿವೆ. ಇದುವರೆಗೆ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೮,೦೨೫ (ಹೊಸದಾಗಿ ಇಂದಿನ ೨೩೮ ಸೇರಿ). ೨೮ ದಿನಗಳ ನಿಗಾ ಅವಧಿ ಪೂರೈಸಿದವರು ೨,೯೭೮ ಜನರಿದ್ದಾರೆ. ೧೪ ದಿನಗಳ ನಿಗಾ ಅವಧಿ ಪೂರೈಸಿದವರು ೨,೧೨೫ ಜನರಾಗಿದ್ದಾರೆ. ಮನೆಯಲ್ಲಿಯೇ ಪ್ರತ್ಯೇಕ  ನಿಗಾದಲ್ಲಿರುವವರು ೨,೨೪೮ ಜನರಾಗಿದ್ದಾರೆ. (ಹೊಸದಾಗಿ ಇಂದಿನ ೭೬ ಜನ ಸೇರಿ).


ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು ೭೨ ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ ೨,೬೧೮ ಮಂದಿ ತಪಾಸಣೆ ಮಾಡಿಸಿ ಕೊಂಡಿದ್ದಾರೆ. ಒಟ್ಟು ೪ ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು ೧೫೯ ಜನ ಸೇರ್ಪಡೆಯಾಗುವುದರೊಂದಿಗೆ ಒಟ್ಟಾರೆ ಸಂಖ್ಯೆ ೪೨೧ ಕ್ಕೆ ಏರಿಕೆಯಾಗಿದೆ.


ಇಂದು ಹೊಸದಾಗಿ ೨೩೮ ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು ೮,೩೩೦ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದಿನ ೧೭೬ ಮಾದರಿಗಳು ನಕಾರಾತ್ಮಕವಾಗಿವೆ. ಇದುವರೆಗೆ ಒಟ್ಟು ೭,೧೪೮ ಪರೀಕ್ಷಾ ಫಲಿತಾಂಶಗಳು ನಕಾರಾತ್ಮಕವಾಗಿರುತ್ತದೆ.  ಇಂದಿನ ೧೫೧ ಬಾಕಿ ವರದಿ ಸೇರಿ ಒಟ್ಟು

೩,೦೬೩ ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑